Homeಕರ್ನಾಟಕಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ : ಅಧಿಕಾರಿಗಳ...

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ : ಅಧಿಕಾರಿಗಳ ವಿರುದ್ಧ ಗರಂ ಆದ ಸಿಎಂ

"ಪರಿಶಿಷ್ಟ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸಲ್ಲ"

- Advertisement -
- Advertisement -

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ, ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ಉದ್ದೇಶಿಸಿ ಹೇಳಿದರು.

ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ಮಂಗಳವಾರ (ಜ.28) ನಡೆದ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸಿಎಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ ಮೇಲ್ಮನವಿ ಹೋಗಿ, ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ? ಈ ಬಗ್ಗೆ ವಿವರ ಕೊಡಿ ಎಂದು ಸಭೆಯಲ್ಲಿ ಸಿಎಂ ಅಧಿಕಾರಿಗಳನ್ನು ಪ್ರಶ್ನಿಸಿದರು.

ಪೊಲೀಸ್ ಇಲಾಖೆಯಲ್ಲಿ ಹಿರಿತನ ಪಟ್ಟಿ ಉಲ್ಲಂಘನೆಯಾಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು, ನಾವು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ? ಎಂದು ಸಭೆಯಲ್ಲಿ ಸಿಎಂ ಅಧಿಕಾರಿಗಳನ್ನು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಈ. ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಎಡಿಜಿಪಿ ಅಡ್ಮಿನ್, ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಭೆಯ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಸಿಎಂ, ಈ ವಿಚಾರವನ್ನು ಮುಂದಿನ ಸಂಪುಟ ಸಭೆಯ ಮುಂದಿಡಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.

ಬ್ಯಾಕ್ ಲಾಗ್ ಮತ್ತು ಬಡ್ತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಸಬ್ ಕಮಿಟಿ ಪತ್ತೆ ಹಚ್ಚಿ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದರೂ, ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದೀರಿ. ಹಾಗಾದರೆ ಸಬ್ ಕಮಿಟಿ ಕೊಡುವ ವರದಿಗಳಿಗೆ ಬೆಲೆ ಇಲ್ಲವೇ ಎಂದು ವಿಧಾನಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಪ್ರಶ್ನಿಸಿದರು.

ಜಾತಿ ದೌರ್ಜನ್ಯ ದೂರು ಬಂದಾಗ ಪೊಲೀಸರೇ ಕೌಂಟರ್ ದೂರು ಪಡೆದು ಪ್ರಕರಣ ದುರ್ಬಲಗೊಳಿಸುವ ಬಗ್ಗೆ ದೂರುಗಳು ಬಂದರೆ ಅದನ್ನು ಸಹಿಸಲ್ಲ. ನಮ್ಮ ಗಮನಕ್ಕೆ ಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

ಎಲ್ಲಾ ಇಲಾಖೆಗಳು ಬಡ್ತಿಯಲ್ಲಿ ಮೀಸಲಾತಿಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಪರಿಶಿಷ್ಟ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸಲ್ಲ. ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ ಪರಿಶೀಲನೆ ಮೀಟಿಂಗ್ ಕರೆಯುವಂತೆ ಸಿಎಂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದರು.

ಪ್ರತೀ ಆರು ತಿಂಗಳಿಗೊಮ್ಮೆ ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಕರೆಯುತ್ತೇವೆ. ಈ ಸಭೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಎಂ ಎಚ್ಚರಿಸಿದರು.

ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಎಸ್‌ಪಿ-ಡಿಸಿ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಹೇಳಿದರು.

ರಾಯಚೂರಿನ‌ ಅಂಬೇಡ್ಕರ್ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳ ಕ್ರಿಯಾ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಮಹಿಳೆಯರ ಅಹೋರಾತ್ರಿ ಧರಣಿ ವಿಚಾರವನ್ನು ಸಿಎಂ ಸಭೆಯಲ್ಲಿ ಪ್ರಸ್ತಾಪಿಸಿದರು. ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವೈಜ್ಞಾನಿಕವಾಗಿ ದೇವದಾಸಿ ಮಹಿಳೆಯರ ಸ್ಥಿತಿಗತಿ ಬಗ್ಗೆ ಸಮೀಕ್ಷೆ ನಡೆಸಬೇಕು ಎನ್ನುವುದು ಪ್ರತಿಭಟನಾ ನಿರತರ ಬೇಡಿಕೆಯಾಗಿದೆ ಎಂದು ಉಲ್ಲೇಖಿಸಿದ ಸಿಎಂ, ದೇವದಾಸಿಯರ ಪುನರ್ವಸತಿ ಸಮಸ್ಯೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಕೇಳಿದರು. ಈ ಬಗ್ಗೆ ಕೆಲ ಹೊತ್ತು ಚರ್ಚೆ ನಡೆದ ಬಳಿಕ ದೇವದಾಸಿಯರ ಸಮಸ್ಯೆ ಮತ್ತು ಪುನರ್ವಸತಿ ಬಗ್ಗೆ ಸಮಗ್ರ ವರದಿ ಸಿದ್ದಪಡಿಸಲು ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದರು.

ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕು ಪತ್ರ ಸಮರ್ಪಕವಾಗಿ ನೀಡಬೇಕು. ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಸಿಎಂ ಸೂಚಿಸಿದರು. ಸಭೆಗೆ ಅಧಿಕಾರಿಗಳು ನೀಡಿರುವ ಅನುಪಾಲನಾ ವರದಿಯಲ್ಲಿ ಮುಂದಿನ ಬಾರಿ ಜಿಲ್ಲಾವಾರು ಅಂಕಿ ಅಂಶ ನಮೂದಿಸಲು ಆದೇಶಿಸಿದರು.

ಮೂಡಾ ಹಗರಣ | ಸಿದ್ದರಾಮಯ್ಯ ಪತ್ನಿ, ಭೈರತಿ ಸುರೇಶ್‌ಗೆ ಇಡಿ ನೀಡಿದ್ದ ನೋಟಿಸ್‌ಗೆ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...