Homeಮುಖಪುಟವರದಕ್ಷಿಣೆ ಕೇಳಿದರೆ 'ಪೋಡಾ' ಎಂದು ಹೇಳಿ ಮದುವೆ ತಿರಸ್ಕರಿಸಿ; ಪಿಣರಾಯಿ ವಿಜಯನ್

ವರದಕ್ಷಿಣೆ ಕೇಳಿದರೆ ‘ಪೋಡಾ’ ಎಂದು ಹೇಳಿ ಮದುವೆ ತಿರಸ್ಕರಿಸಿ; ಪಿಣರಾಯಿ ವಿಜಯನ್

- Advertisement -
- Advertisement -

‘ವರ ಅಥವಾ ಆತನ ಕುಟುಂಬದವರು ವರದಕ್ಷಿಣೆಗೆ ಬೇಡಿಕೆಯಿಟ್ಟರೆ, ಯುವತಿಯರು ಮದುವೆ ಪ್ರಸ್ತಾಪಗಳನ್ನು ತಿರಸ್ಕರಿಸುವ ಧೈರ್ಯ ತೋರಬೇಕು’ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಲಹೆ ನೀಡಿದರು. ಹೆಚ್ಚಿನ ವರದಕ್ಷಿಣೆ ನೀಡಲಾಗದೆ ಮದುವೆ ಮುರಿದುಬಿದ್ದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಡಾ. ಶಹಾನಾ ಪ್ರಕರಣದ ಕುರಿತು ಮಾತನಾಡುವಾಗ ಅವರು ಯುವತಿಯರಿಗೆ ಹಾಗೂ ಪೋಷಕರಿಗೆ ಕಿವಿಮಾತು ಹೇಳಿದರು.

ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವೈದ್ಯೆ ಆತ್ಮಹತ್ಯೆ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಮುಖ್ಯಮಂತ್ರಿಗಳು, ‘ಯಾರಾದರೂ ವರದಕ್ಷಿಣೆಗೆ ಬೇಡಿಕೆ ಇಟ್ಟರೆ, ಯುವತಿಯರು ಅಂತಹ ಪ್ರಸ್ತಾಪಗಳನ್ನು ಬಲವಾಗಿ ತಿರಸ್ಕರಿಸಬೇಕು. ನಮ್ಮ ಹುಡುಗಿಯರು ಆ ಹುಡುಗರಿಗೆ ‘ಪೋಡಾ’ (ಹೋಗೋ) ಎಂದು ಹೇಳಿ ಮದುವೆ ತಿರಸ್ಕರಿಸುವ ಧೈರ್ಯ ತೋರಿಸಬೇಕು. ಸಮಾಜ ಮತ್ತು ಕುಟುಂಬಗಳು ಇದಕ್ಕಾಗಿಯುವತಿಯರಿಗೆ ಬೆಂಬಲಿಸಬೇಕು’ ಎಂದು ಹೇಳಿದರು.

ವರದಕ್ಷಿಣೆ ಬೇಡಿಕೆಯನ್ನು ತಿರಸ್ಕರಿಸುವ ನಿದರ್ಶನಗಳನ್ನು ಸಮಾಜವು ಗಂಭೀರವಾಗಿ ಪರಿಗಣಿಸಬೇಕು. ಸರ್ಕಾರ ಕೂಡಾ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದೆ. ಇಂತಹ ಆಚರಣೆಗಳನ್ನು ತಡೆಗಟ್ಟುವುದು ಹೆಣ್ಣುಮಕ್ಕಳ ಮತ್ತು ಅವರ ಪೋಷಕರು ಹಾಗೂ ಕುಟುಂಬದ ಜವಾಬ್ದಾರಿ. ಸಮಾಜವನ್ನು ಬಲಪಡಿಸಸಬೇಕಾದರೆ ಯುವತಿಯರು ಹೆಚ್ಚೆಚ್ಚು ಆತ್ಮವಿಶ್ವಾಸ ಹೊಂದುವಂತೆ ನೋಡಿಕೊಳ್ಳಬೇಕು. ವರದಕ್ಷಿಣೆ ಕೇಳುವುದು ಮತ್ತು ಸ್ವೀಕರಿಸುವುದು ತಪ್ಪು ಎಂಬ ಸಾಮಾನ್ಯ ಅರಿವು ಜನರಿಗಿದೆ’ ಎಂದರು.

ಕೇರಳದ ಸರ್ಕಾರಿ ವೈದ್ಯಕೀಯ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿನಿ ಶಹಾನಾ (26) ತನ್ನ ಅಪಾರ್ಟ್ಮೆಂಟ್‌ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾಗ ಅವರು ಮಂಗಳವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಮದುವೆ ನಿಗದಿಯಾಗಿದ್ದ ವರನ ಮನೆಯವರು ಹೆಚ್ಚಿನ ವರದಕ್ಷಿಣೆ ಕೇಳಿದ್ದರಿಂದ ಖಿನ್ನತೆಗೆ ಒಳಗಾಗಿದ್ದ ಶಹಾನಾ ಈ ನಿರ್ಧಾರ ಮಾಡಿದ್ದಾರೆ ಎಂದು ಆಕೆಯ ಮನೆಯವರು ಆರೋಪಿಸಿದ್ದಾರೆ.

ಇದನ್ನೂ ಓದಿ; ಗೌರಿ ಹತ್ಯೆ ಪ್ರಕರಣ; ‘ಕೋಕಾ ಕಾಯ್ದೆ’ ಆರೋಪಿ ಮೋಹನ್ ನಾಯಕ್‌ಗೆ ಜಾಮೀನು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...