Homeಅಂತರಾಷ್ಟ್ರೀಯಕೊರೊನಾ ಪ್ರಕರಣಗಳನ್ನು ಚೀನಾ ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದರೆ ಪರಿಣಾಮ ಎದುರಿಸಲಿದೆ: ಅಮೆರಿಕ

ಕೊರೊನಾ ಪ್ರಕರಣಗಳನ್ನು ಚೀನಾ ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದರೆ ಪರಿಣಾಮ ಎದುರಿಸಲಿದೆ: ಅಮೆರಿಕ

- Advertisement -
- Advertisement -

ಕೊರೊನಾ ವೈರಸ್‌ ಪ್ರಕರಣಗಳನ್ನು ಚೀನಾವು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿರುವುದು ಕಂಡುಬಂದಲ್ಲಿ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

“ಇದು ಪ್ರಾರಂಭವಾಗುವ ಮೊದಲೇ ಚೀನಾದಲ್ಲಿ ಅದನ್ನು ನಿಲ್ಲಿಸಬಹುದಿತ್ತು ಆದರೆ ಅದು ಆಗಲಿಲ್ಲ, ಇದರಿಂದಾಗಿ ಇಡೀ ಪ್ರಪಂಚ ಬಳಲುತ್ತಿದೆ” ಎಂದು ಟ್ರಂಪ್ ಹೇಳಿದ್ದಾರೆ.

“ಒಂದು ವೇಳೆ ತಪ್ಪಾಗಿದ್ದರೆ, ತಪ್ಪು ತಪ್ಪೇ ಆಗಿದೆ, ಆದರೆ ಅವರು ಉದ್ದೇಶಪೂರ್ವಕವಾಗಿ ಜವಾಬ್ದಾರರಾಗಿದ್ದರೆ, ಖಂಡಿತವಾಗಿಯೂ ಅದರ ಪರಿಣಾಮ ಎದುರಿಸಬೇಕಾಗುತ್ತದೆ ” ಎಂದು ಹೇಳಿದ್ದಾರೆ.

ಕೊರೊನಾ ವೈರಸನ್ನು “ಚೈನೀಸ್ ವೈರಸ್” ಎಂದು ಈ ಹಿಂದೆಯೆ ಚೀನಾವನ್ನು ಮೂದಲಿಸಿದ್ದರು, ಇದರಿಂದಾಗಿ ಅಮೆರಿಕದಾದ್ಯಂತ ಏಷ್ಯಾ ವಿರೋಧಿ ಭಾವನೆಗಳಿಗೆ ಉತ್ತೇಜನ ನೀಡಿತು. ಸಾಂಕ್ರಾಮಿಕ ರೋಗವು ವುಹಾನ್ ನಲ್ಲಿ ಪ್ರಾರಂಭವಾಯಿತು ಎಂದು ನಂಬಲಾದ ನಂತರ ಇತರ ಅಮೆರಿಕಾದ ಅಧಿಕಾರಿಗಳು ಇದನ್ನು “ವುಹಾನ್ ವೈರಸ್” ಎಂದು ಕರೆಯತೊಡಗಿದ್ದರು.


ಇದನ್ನೂ ಓದಿ: ಟ್ರಂಪ್‌ಗೆ WHO ಮಹಾಕಾರ್ಯದರ್ಶಿ ಎಚ್ಚರಿಕೆ


ಕೆಲವು ಅಮೆರಿಕಾ ಅಧಿಕಾರಿಗಳು ಮತ್ತು ರಿಪಬ್ಲಿಕನ್ ಪಕ್ಷದ ಸಂಸದರು ಗುಪ್ತಚರ ವರದಿಗಳನ್ನು ಉಲ್ಲೇಖಿಸಿ, ಚೀನಾ ನಿಜವಾದ ಅಂಕಿ ಅಂಶವನ್ನು ನೀಡುತ್ತಿಲ್ಲ ಎಂದು ಆರೋಪ ಮಾಡಿದ್ದರು. ಅಧ್ಯಕ್ಷ ಟ್ರಂಪ್ ಅಮೆರಿಕಾಕ್ಕಿಂತ ಚೀನಾದಲ್ಲೇ  ಹೆಚ್ಚು ಪ್ರಕರಣವಿದೆ ಎಂದು ಆರೋಪಿಸಿದ್ದರಾದರೂ ಅದಕ್ಕೆ ಯಾವುದೇ ಪುರಾವೆಯನ್ನು ಒದಗಿಸಿರಲಿಲ್ಲ.

ಅಮೆರಿಕಾ ಅಧ್ಯಕ್ಷ ಟ್ರಂಪ್ ತಮ್ಮ ಆಡಳಿತವೂ ಸಾಂಕ್ರಾಮಿಕದ ವಿರುದ್ದದ ಹೋರಾಟದಲ್ಲಿ ವಿಳಂಬ ಪ್ರತಿಕ್ರಿಯೆಗೆ ತೀವ್ರ ಟೀಕೆಗೆ ಗುರಿಯಾಗುತ್ತಿದ್ದಂತೆ, ಚೀನಾದ ಅಂಕಿ ಅಂಶ ಮರೆಮಾಚಲು ವಿಶ್ವ ಆರೋಗ್ಯ ಸಂಸ್ಥೆ ಸಹಾಯ ಮಾಡಿದೆ ಮತ್ತು ಬಿಕ್ಕಟ್ಟಿಗೆ ತನ್ನದೇ ಆದ ಪ್ರತಿಕ್ರಿಯೆಯನ್ನು ತಪ್ಪಾಗಿ ನಿರ್ವಹಿಸುತ್ತಿದೆ ಎಂದು ಆರೋಪಿಸಿದ್ದಾರೆ.  ಅಂದಿನಿಂದ ಚೀನಾ ತನ್ನ ಸಂಖ್ಯೆಯನ್ನು ವುಹಾನ್‌ನಲ್ಲಿ 50% ರಷ್ಟು ಪರಿಷ್ಕರಿಸಿದೆ ಎನ್ನಲಾಗಿದೆ.

ಕೊರೊನಾ ವೈರಸ್ ಸಾಂಕ್ರಾಮಿಕದಿಂದಾಗಿ ನಿನ್ನೆ ಸಂಜೆ ತನಕ ವಿಶ್ವದಾದ್ಯಂತ 1,59,510 ಜನರು ಸಾವಿಗೀಡಾಗಿರುವುದು ವರದಿಯಾಗಿದೆ. 23,17,759 ಜನರು ಈ ಸೋಂಕಿನಿಂದ ಬಳಳುತ್ತಿದ್ದಾರೆ. ಅಮೆರಿಕಾ ದಲ್ಲಿ 38,664 ಜನರ ಸಾವಿನೊಂದಿಗೆ 7,32,197 ಪ್ರಕರಣಗಳನ್ನು ವರದಿಯಾಗಿದೆ.

ಮಾಹಿತಿ: ಹಿಂದುಸ್ತಾನ್ ಟೈಂಮ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...