Homeಕರ್ನಾಟಕಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ಜಾರಿಗೊಳಿಸುತ್ತೇವೆ: ಸಿದ್ದರಾಮಯ್ಯ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ಜಾರಿಗೊಳಿಸುತ್ತೇವೆ: ಸಿದ್ದರಾಮಯ್ಯ

ಒಳಮೀಸಲಾತಿ ಹೋರಾಟಗಾರರನ್ನು ಪೊಲೀಸರು ಬಂಧಿಸಿರುವುದನ್ನು ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ, ಎಚ್.ಸಿ.ಮಹದೇವಪ್ಪ ಖಂಡಿಸಿದ್ದಾರೆ.

- Advertisement -
- Advertisement -

“ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ” ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ತಿಳಿಸಿದ್ದಾರೆ.

ಒಳಮೀಸಲಾತಿ ಜಾರಿಗಾಗಿ ಹೋರಾಟ ತೀವ್ರಗೊಂಡ ಬೆನ್ನಲ್ಲೇ ಹೋರಾಟಗಾರರನ್ನು ಬಂಧಿಸಿರುವುದನ್ನು ಖಂಡಿಸಿ ಸರಣಿ ಟ್ವೀಟ್ ಮಾಡಿರುವ ಅವರು, “ಬೆಂಗಳೂರಿನಲ್ಲಿ ಒಳ ಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿರುವವರನ್ನು ರಾಜ್ಯ ಬಿಜೆಪಿ ಸರ್ಕಾರ ಬಂಧಿಸಿರುವುದು ಅತ್ಯಂತ ಖಂಡನೀಯ” ಎಂದಿದ್ದಾರೆ.

“ತಕ್ಷಣ ಅವರನ್ನು ಬಿಡುಗಡೆಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ. ರಾಜ್ಯ ಸರ್ಕಾರ ಒಂದೋ ಹೋರಾಟಗಾರರ ನ್ಯಾಯಬದ್ದ ಬೇಡಿಕೆಯನ್ನು ಈಡೇರಿಸಬೇಕು, ಇಲ್ಲವಾದರೆ ಕನಿಷ್ಠ ಅವರನ್ನು ಮಾತುಕತೆಗಾದರೂ ಆಹ್ಹಾನಿಸಬೇಕಾಗಿತ್ತು. ಇದ್ಯಾವುದನ್ನು ಮಾಡದೆ ಹೋರಾಟಗಾರರನ್ನು ಪೊಲೀಸರ ಮೂಲಕ ಹಣಿಯಲು ನಡೆಸಿದ ಪ್ರಯತ್ನ ಪ್ರಜಾಪ್ರಭುತ್ವ ವಿರೋಧಿಯಾದುದು” ಎಂದು ಟೀಕಿಸಿದ್ದಾರೆ.

“ಒಳಮೀಸಲಾತಿ ಜಾರಿಗೆ ಶಿಫಾರಸು ಮಾಡಿರುವ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಅಧಿಕಾರಕ್ಕೆ ಬಂದಿರುವ ರಾಜ್ಯದ ಬಿಜೆಪಿ‌ ಸರ್ಕಾರ ಈಗ ಹೋರಾಟಗಾರರನ್ನೇ ಬಂಧಿಸಲು ಹೊರಟಿರುವುದು ವಿಷಾದನೀಯ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಲಾಠಿಚಾರ್ಜ್: ಪ್ರಿಯಾಂಕ್ ಖರ್ಗೆ ಖಂಡನೆ

ಒಳಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿರುವ ಆರೋಪ ಬಂದಿದ್ದು ಕಾಂಗ್ರೆಸ್ ಯುವ ನಾಯಕ ಪ್ರಿಯಾಂಕ್ ಖರ್ಗೆ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ.

“ಒಳ ಮೀಸಲಾತಿಯ ಸದಾಶಿವ ಆಯೋಗ ವರದಿ ಜಾರಿಗಾಗಿ ಪ್ರತಿಭಟಿಸುತ್ತಿದ್ದವರ ಮೇಲೆ ಲಾಠಿ ಚಾರ್ಜ್ ನಡೆಸಿ ದೌರ್ಜನ್ಯವೆಸಗಿದೆ ಬಿಜೆಪಿ ಸರ್ಕಾರ. ಕೇಸರಿ ಶಾಲು ಧರಿಸಿ ದಾಂಧಲೆ ಮಾಡುವ ಪುಂಡರಿಗೆ ರಾಜಮರ್ಯಾದೆ ಕೊಡುವ ಸರ್ಕಾರ ಶಾಂತ ರೀತಿಯಲ್ಲಿ ಪ್ರತಿಭಟಿಸುತ್ತಿದ್ದ ದಲಿತರೆಂದರೆ ಬಿಜೆಪಿಯ ಲಾಠಿಗಳಿಗೆ ಅಷ್ಟೊಂದು ತಾತ್ಸಾರವೇ?” ಎಂದು ಪ್ರಶ್ನಿಸಿದ್ದಾರೆ.

ಮಾಜಿ ಸಚಿವ ಎಚ್‌.ಸಿ.ಮಹದೇವಪ್ಪ ಅವರು ಘಟನೆಯ ಕುರಿತು ಪೋಸ್ಟ್ ಮಾಡಿದ್ದು, “ಒಳ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿ, ಅವರನ್ನು ಬಂಧಿಸಿರುವ ಕ್ರಮವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ” ಎಂದು ತಿಳಿಸಿದ್ದಾರೆ.

“ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಹೋರಾಟ ನಡೆಸುವವರ ವಿರುದ್ಧ ದೌರ್ಜನ್ಯ ನಡೆಸುವ ರಾಜ್ಯ ಸರ್ಕಾರವು ತನ್ನ ಸರ್ವಾಧಿಕಾರಿ ಧೋರಣೆಯನ್ನು ಪ್ರದರ್ಶಿಸಿದೆ. ಸರ್ಕಾರ ಕೂಡಲೇ ಅಂಬಣ್ಣ ಅರೋಲಿಕರ್ ಹಾಗೂ ಇನ್ನಿತರೆ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

“ಪ್ರಜಾಸತ್ತಾತ್ಮಕ ಹೋರಾಟಗಳು ಗೆಲ್ಲಲಿ. ಹೋರಾಟಗಳು ಚಿರಾಯುವಾಗಲಿ” ಎಂದು ಅವರು ಆಶಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಮಹಿಳೆಯೊಬ್ಬರ ಅಪಹರಣ ಪ್ರತ್ಯೇಕ ಪ್ರಕರಣದಲ್ಲಿ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ...