Homeಮುಖಪುಟ'ಕಾಂಗ್ರೆಸ್ ಗೆದ್ದರೆ ಒಂದು ಇಟ್ಟಿಗೆ ಕೂಡಾ ನೀಡಲ್ಲ' | ಜನರನ್ನು ಬೆದರಿಸಿದ ಕೇಂದ್ರ ಸಚಿವ ಶಿವರಾಜ್...

‘ಕಾಂಗ್ರೆಸ್ ಗೆದ್ದರೆ ಒಂದು ಇಟ್ಟಿಗೆ ಕೂಡಾ ನೀಡಲ್ಲ’ | ಜನರನ್ನು ಬೆದರಿಸಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಪುತ್ರ

- Advertisement -
- Advertisement -

“ಉಪ ಚನಾವಣೆಯಲ್ಲಿ ಕಾಂಗ್ರೆಸ್ ಶಾಸಕ ಗೆದ್ದರೆ, ಈ ಹಳ್ಳಿಗೆ ಒಂದೇ ಒಂದು ಇಟ್ಟಿಗೆ ಕೂಡಾ ನೀಡುವುದಿಲ್ಲ” ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸರ್ಕಾರದ ಹಾಲಿ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಮಗ ಕಾರ್ತಿಕೇ ಸಿಂಗ್ ಚೌಹಾಣ್ ಬೆದರಿಸಿದ್ದು ಇದೀಗ ತೀವ್ರ ವಿವಾದವಾಗಿದೆ. ಅವರು ಮಧ್ಯಪ್ರದೇಶದ ಬುಧ್ನಿ ಉಪ ಚುನಾವಣೆಗೆ ಮುನ್ನ ನಡೆಸಿದ ಪ್ರಚಾರ ಭಾಷಣಲ್ಲಿ ಕ್ಷೇತ್ರದ ಜನರನ್ನು ಬೆದರಿಸಿದ್ದಾರೆ. ಕಾಂಗ್ರೆಸ್ ಗೆದ್ದರೆ

ಬಹುಕಾಲದಿಂದ ಶಿವರಾಜ್ ಸಿಂಗ್ ಚೌಹಾಣ್ ಪ್ರತಿನಿಧಿಸುತ್ತಿದ್ದ ಕ್ಷೇತ್ರವಾದ ಬುಧ್ನಿಯಲ್ಲಿ ಕಾರ್ತಿಕೇ ಬಿಜೆಪಿ ಪ್ರಚಾರದ ಸಾರಥ್ಯವನ್ನು ವಹಿಸಿಕೊಂಡಿದ್ದಾರೆ. ಉಪಚುನಾವಣೆ ಮೂಲಕ ಅವರು ರಾಜಕೀಯಕ್ಕೆ ಪ್ರವೇಶ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬುಧ್ನಿಯಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕಾರ್ತಿಕೇ ಅವರು ಚುನಾವಣಾ ಫಲಿತಾಂಶದ ನಂತರ ನಮ್ಮ ಕೆಲಸ ಮಾಡಿಕೊಡಿ ಎಂದು ಹೇಗೆ ಕೇಳುತ್ತೇವೆ? ಎಂದು ಅವರು ಹೇಳಿದ್ದಾರೆ.

“ಒಂದು ವೇಳೆ ಇಲ್ಲಿ ಕಾಂಗ್ರೆಸ್ ಶಾಸಕರು ಗೆದ್ದರೆ, ಇಲ್ಲಿ ತೊಂದರೆ ಯಾರಿಗೆ ಎಂದು ನಿಮಗೆ ಅರ್ಥವಾಗಬೇಕು. ನಮಗೆ ನಾವೇ ಯಾಕೆ ಹಾನಿ ಮಾಡಿಕೊಳ್ಳಬೇಕು? ಮತದಾನದಲ್ಲಿ ಅಕ್ರಮ ಮಾಡುವ ಮೂಲಕ ನಾವು ನಮ್ಮ ಖ್ಯಾತಿಯನ್ನು ಏಕೆ ಹಾಳು ಮಾಡಿಕೊಳ್ಳಬೇಕು? ಕೆಲಸ ಮಾಡಿಸಲು ನಮ್ಮ ಮುಖ್ಯಮಂತ್ರಿ ಬಳಿ ಹೋಗಬೇಕಲ್ಲವೇ? ನಮ್ಮ ಕೆಲಸಕ್ಕಾಗಿ ನಾವು ನಮ್ಮ ಗೌರವಾನ್ವಿತ ಕೃಷಿ ಸಚಿವರನ್ನು ಸಂಪರ್ಕಿಸಬೇಕಲ್ಲವೇ?” ಎಂದು ಕಾರ್ತಿಕೇಯ ಕೇಳಿದ್ದಾರೆ.

ಸರಪಂಚರನ್ನು ಉದ್ದೇಶಿಸಿ ಮಾತನಾಡಿದ ಅವರು, “ಹೇಳಿ, ಸರಪಂಚ್ ಅವರೆ. ನೀವು ಹೇಗೆ ಕೆಲಸ ಮಾಡಿಕೊಳ್ಳುತ್ತಿರಿ? ಒಂದು ವೇಳೆ ನಾವು ಸೋತರೆ, ಕೆಲಸಗಳನ್ನು ಮಾಡಲು ನೀವು ನಮ್ಮ ನಾಯಕರ ಬಳಿ ಹೇಗೆ ಹೋಗುತ್ತೀರಿ? ಅದಕ್ಕಾಗಿ ನೀವು ಯಾವ ದಾರಿ ಆಯ್ಕೆ ಮಾಡುತ್ತೀರಿ? ತಪ್ಪಿಯಾದರೂ ಕಾಂಗ್ರೆಸ್ ಶಾಸಕ ಗೆದ್ದರೆ ಈ ಹಳ್ಳಿಯಲ್ಲಿ ಒಂದು ಇಟ್ಟಿಗೆ ಕೂಡಾ ಇಡುವುದಿಲ್ಲ, ಇದನ್ನು ನೀವು ಅರ್ಥಮಾಡಿಕೊಳ್ಳಬೇಕು.” ಎಂದು ಹೇಳಿದ್ದಾರೆ.

ಅವರು ವಿವಾದಿತ ವೀಡಿಯೊ ವೈರಲ್ ಆಗುತ್ತಿದ್ದಂತೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ದಿಗ್ವಿಜಯ ಅವರು, “ರಾಜಕೀಯದ ಬಗ್ಗೆ ತಮ್ಮ ತಂದೆಯಿಂದ ಕಲಿಯಿರಿ” ಎಂದು ಕಾರ್ತಿಕೇ ಅವರಿಗೆ ಸಲಹೆ ನೀಡಿದ್ದಾರೆ. ಕಾಂಗ್ರೆಸ್ ಗೆದ್ದರೆ

“ಪ್ರಜಾಪ್ರಭುತ್ವದಲ್ಲಿ, ಸರ್ಕಾರ ಮತ್ತು ವಿರೋಧ ಪಕ್ಷಗಳೆರಡೂ ರಾಷ್ಟ್ರ ಕಟ್ಟಲು ಒಟ್ಟಾಗಿ ಕೆಲಸ ಮಾಡುತ್ತವೆ. ನಾನು 10 ವರ್ಷ ಮುಖ್ಯಮಂತ್ರಿಯಾಗಿದ್ದೆ, ಆದರೆ ಈ ರೀತಿಯ ಭಾಷೆ ಬಳಸಿಲ್ಲ. ಇದಕ್ಕೆ ನಿಮ್ಮ ತಂದೆಯೇ ಸಾಕ್ಷಿ… ನೀವು ನನಗೆ ಮೊಮ್ಮಗ ಇದ್ದಂತೆ. ಇದು ನನ್ನ ಅಭಿಪ್ರಾಯವಾಗಿದ್ದು, ಒಪ್ಪಿಕೊಳ್ಳುವುದು ಅಥವಾ ಬಿಡುವುದು ನಿಮಗೆ ಬಿಟ್ಟದ್ದು” ಎಂದು ದಿಗ್ವಿಜಯ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಠಾಣೆಯ ಎಲ್ಲ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಡ್ಡಾಯ; ಪೊಲೀಸ್ ಮಹಾನಿರ್ದೇಶಕರಿಗೆ ಹೈಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...