Homeಕರ್ನಾಟಕಪ್ರಜಾಪ್ರಭುತ್ವ ನಾಶವಾದರೆ ಮೊದಲ ದಾಳಿ ದಲಿತ, ಕಾರ್ಮಿಕ, ಬಡವರ ಮೇಲೆ ನಡೆಯುತ್ತದೆ– ಸಿಪಿಐ(ಎಂ) ನಾಯಕ ಬಿ.ವಿ....

ಪ್ರಜಾಪ್ರಭುತ್ವ ನಾಶವಾದರೆ ಮೊದಲ ದಾಳಿ ದಲಿತ, ಕಾರ್ಮಿಕ, ಬಡವರ ಮೇಲೆ ನಡೆಯುತ್ತದೆ– ಸಿಪಿಐ(ಎಂ) ನಾಯಕ ಬಿ.ವಿ. ರಾಘವಲು

- Advertisement -
- Advertisement -

ಪ್ರಜಾಪ್ರಭುತ್ವ ನಾಶವಾದರೆ ಮೊದಲ ದಾಳಿ ನಡೆಯುವುದು ಬಡವರು, ದಲಿತರು ಮತ್ತು ಕಾರ್ಮಿಕರ ಮೇಲೆಯಾಗಿದೆ ಎಂದು ಸಿಪಿಐ(ಎಂ) ಪೊಲೀಟ್‌ ಬ್ಯೋರೋ ಸದಸ್ಯ ಬಿ.ವಿ ರಾಘವಲು ಸೋಮವಾರ ತಿಳಿಸಿದ್ದಾರೆ. ಸಿಪಿಐ(ಎಂ) 24 ನೇ ರಾಜ್ಯ ಸಮ್ಮಳೇನದ ಪ್ರತಿನಿಧಿ ಅಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸಂಸತ್ತಿನಲ್ಲಿ ಸಂವಿಧಾನದ 75 ವರ್ಷದ ಸಂದರ್ಭದಲ್ಲಿ ವಿಶೇಷ ಚರ್ಚೆ ನಡೆಯುತ್ತಿದೆ. ಸಂವಿಧಾನದ ಮಹತ್ವವನ್ನು ಅರಿಯದ ಕಾಂಗ್ರೆಸ್‌ ಮತ್ತು ಬಿಜೆಪಿ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದನ್ನು ದೇಶದ ಜನ ಗಮನಿಸಿದ್ದಾರೆ. ಸಂವಿಧಾನವನ್ನು ಅರ್ಥ ಮಾಡಿಕೊಂಡು, ಮೂಲಭೂತ ತತ್ವಗಳನ್ನು ಅರಿಯಬೇಕಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಾ. ಬಿ.ಆರ್.‌ ಅಂಬೇಡ್ಕರ್‌ ಮತ್ತು ಸಂವಿಧಾನದ ನಿರ್ಮಾತ್ರುಗಳು ಪ್ರತಿಪಾದಿಸಿದ ಆಧಾರದಲ್ಲಿ 5 ಮೂಲಭೂತ ತತ್ವಗಳನ್ನು ಸಂವಿಧಾನವು ನಿರೂಪಿಸಿದೆ. ಪ್ರಜಾಪ್ರಭುತ್ವ, ಜಾತ್ಯಾತೀತತೆ, ಸಾಮಾಜಿಕ ನ್ಯಾಯ, ಒಕ್ಕೂಟ ತತ್ವ ಮತ್ತು ಸಮಾಜವಾದ ಇವುಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ದಾಳಿಯನ್ನು ನಾವು ತಡೆಗಟ್ಟಬೇಕಿದೆ ಎಂದು ಅವರು ಹೇಳಿದ್ದಾರೆ.

“ಪ್ರಜಾಪ್ರಭುತ್ವ ನಾಶವಾದರೆ ಅದರ ಮೊದಲ ದಾಳಿ ಬಡವರು, ದುರ್ಬಲರು, ಕಾರ್ಮಿಕರು, ದಲಿತರ ಮೇಲೆ ನಡೆಯುತ್ತದೆ. ಉದಾಹರಣೆಗೆ ಕಾರ್ಮಿಕ ಸಂಹಿತೆಗಳನ್ನು ಬಿಜೆಪಿ ತಂದಿದೆ. ಈ ಹಿಂದೆ ಕಾಂಗ್ರೆಸ್‌ ಕೂಡಾ ಜಾರಿಗೆ ಪ್ರಯತ್ನಿಸಿತ್ತು. ಈ ನೀತಿಗಳು ಸಂಘ ಕಟ್ಟುವ ಹಕ್ಕು, ಕೆಲಸದ ಅವಧಿ, ಗುತ್ತಿಗೆ ಪದ್ದತಿ, ಬೇಕೆಂದಾಗ ಕೆಲಸಕ್ಕೆ ತೆಗೆದುಕೊಳ್ಳುವುದು, ತೆಗೆದು ಹಾಕುವುದನ್ನು ಬೆಂಬಲಿಸುತ್ತದೆ. ಇಂತಹ ಕಾರ್ಮಿಕ ವಿರೋಧಿ ನೀತಿಗಳನ್ನು ಸಂಹಿತೆಗಳು ಹೇಳುತ್ತಿವೆ. ಇದ್ದಕ್ಕೆ ನಿಯಮಗಳನ್ನು ರೂಪಿಸಲು ಮುಂದಾಗಿದೆ. ಇವೆಲ್ಲವೂ ಪ್ರಜಾಪ್ರಬುತ್ಬದ ಮೌಲ್ಯಗಳಾಗಿವೆ, ಇವೆಲ್ಲ ನಾಶವಾದರೆ ಪ್ರಜಾಪ್ರಭುತ್ವದಕ್ಕೆ ದಕ್ಕೆಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಒಂದು ದೇಶ ಒಂದು ಚುನಾವಣೆ ಪ್ರಜಾಪ್ರಭುತ್ವ ನಾಶಮಾಡಿ ಫ್ಯಾಸಿಸಂ ಜಾರಿ ಮಾಡುವ ಹುನ್ನಾರವಾಗಿದೆ. ಇದು ಏಕ ವ್ಯಕ್ತಿಯ ಆಡಳಿತ ಸರ್ವಾಧಿಕಾರಕ್ಕೆ ದಾರಿ ಮಾಡಿಕೊಡಲಿದೆ. ಆರ್‌ಎಸ್‌ಎಸ್‌ ಫ್ಯಾಸಿಸಂನ್ನು ಬೆಂಬಲಿಸುತ್ತಿರುವ ಕಾರಣ ಈ ದಾಳಿ ನಡೆಸುತ್ತಿದೆ. ಇಂತಹ ದಾಳಿಗಳ ವಿರುದ್ದ ಹೋರಾಟಗಳನ್ನು ಸಂಘಟಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

“ಜಾತ್ಯಾತೀತಯನ್ನು ನಾಶ ಮಾಡುವುದಕ್ಕಾಗಿ ಬಿಜೆಪಿ ಮತೀಯ ಕೋಮುಗಲಭೆಗಳನ್ನು ಹೆಚ್ಚಿಸುತ್ತಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್‌ 1991ರ ಪೂಜಾ ಸಂರಕ್ಷಣಾ ಕಾಯ್ದೆಯು ದೇಶದಲ್ಲಿರುವ ಎಲ್ಲಾ ಪೂಜಾ ಸ್ಥಳಗಳನ್ನು 1947ರ ಆಗಸ್ಟ್‌ 15ರ ಸ್ಥಿತಿಯಲ್ಲಿ ಕಾಪಾಡಬೇಕೆಂದುನ್ನು ಎತ್ತಿ ಹಿಡಿದಿದೆ. ಆರ್‌ಎಸ್‌ಎಸ್‌ ಚಾರಿತ್ರಿಕ ತಪ್ಪುಗಳನ್ನು ಸರಿಪಡಿಸುವ ನೆಪದಲ್ಲಿ ಮಸೀದಿಗಳ ಕೆಳಗ ದೇವಸ್ಥಾನ ಇದೆ ಎಂದು ಗುಲ್ಲೆಬ್ಬಿಸಿ ಪೂಜಾಕಾಯ್ದೆಯನ್ನು ಉಲ್ಲಂಘಿಸುತ್ತದೆ. ಇದೇ ವಾದವನ್ನು ದಲಿತ ವಿಭಾಗಗಳು ಪ್ರತಿಪಾದಿಸಿದರೆ 3 ಸಾವಿರ ವರ್ಷಗಳಿಂದ ಅಸ್ಪೃಶ್ಯತೆ, ಜಾತಿ ತಾರತಮ್ಯವನ್ನು ಅನುಸರಿಸಿರುವ ಜಾತಿಗಳ ವಿರುದ್ಧ ಅಂತಹದ್ದೇ ದೌರ್ಜನ್ಯಗಳನ್ನು ನಡೆಸುವಂತಾಗಬಹುದು” ಎಂದು ಅವರು ಹೇಳಿದ್ದಾರೆ.

ಆದ್ದರಿಂದ ಚಾರಿತ್ರಿಕ ತಪ್ಪುಗಳನ್ನು ಸರಿಪಡಿಸುವ ಬದಲಿಗೆ ಅದರಿಂದ ಪಾಠಗಳನ್ನು ಕಲಿತು ಸಮಾನತೆಯ ಆಧಾರದಲ್ಲಿ ಜಾತ್ಯಾತೀತ ತತ್ವವನ್ನು ಅಳವಡಿಸಿಕೊಳ್ಳುವುದನ್ನು ಸಂವಿಧಾನ ಪ್ರತಿಪಾದಿಸುತ್ತದೆ. ಇದಕ್ಕಾಗಿ ನಾವು ಹೋರಾಟ ಮಾಡಬೇಕಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...