Homeಕರ್ನಾಟಕಹಾಸನ ಚಲೋ| ದೇವೇಗೌಡರೆ ನೈತಿಕತೆ ಇದ್ರೆ ರಾಜಕೀಯ ನಿವೃತ್ತಿ ಘೋಷಿಸಿ..: ಸಿದ್ದನಗೌಡ ಪಾಟೀಲ್

ಹಾಸನ ಚಲೋ| ದೇವೇಗೌಡರೆ ನೈತಿಕತೆ ಇದ್ರೆ ರಾಜಕೀಯ ನಿವೃತ್ತಿ ಘೋಷಿಸಿ..: ಸಿದ್ದನಗೌಡ ಪಾಟೀಲ್

- Advertisement -
- Advertisement -

‘ದೇವೇಗೌಡರೆ ನಿಮಗೆ ನೈತಿಕತೆ ಇದ್ರೆ ಈ ಪ್ರಕರಣದ ಹೊಣೆ ಹೊತ್ತು ರಾಜಕೀಯ ನಿವೃತ್ತಿ ಘೋಷಿಸಿ, ಈ ನಾಡಿದ ಹೆಮ್ಮೆಯ ಪ್ರಧಾನಿ ಅನ್ನೋ ಹೆಸರನ್ನು ಪಡೆದಿದ್ದಿರಲ್ಲ ಅದನ್ನ ಉಳಿಸಿಕೊಳ್ಳಿ’ ಎಂದು ಹಿರಿಯ ಹೋರಾಟಗಾರ ಸಿದ್ದನಗೌಡ ಪಾಟೀಲ್ ಸವಾಲು ಹಾಕಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ನಾವಿಲ್ಲಿ ಸೇರಿರುವುದು ಹೆಮ್ಮೆಯ ಸಂಗತಿಯಲ್ಲವಾದರೂ ಇಂತಹ ಪರಿಸ್ಥಿತಿಯನ್ನು ಈ ಜಿಲ್ಲೆಯ ರಾಜಕೀಯ ಪರಿಸ್ಥಿತಿ ತಂದುಕೊಟ್ಟಿದೆ. ಜಾತಿಯ ಬಲದಿದಂದ, ಹಣದ ಬಲದಿಂದ ತಾನು ಇರುವ ಪ್ರದೇಶದಲ್ಲಿ ಅಲ್ಲಿನ ಪರಿಸ್ಥಿತಿಯನ್ನು ನಿಯಂತ್ರಿಸುವ ಪರಿಸ್ಥಿತಿ ಇಂದುನೆನ್ನೆಯದಲ್ಲ. ಹಾಸನದಲ್ಲಿ ನಡೆದಿರುವ ಈ ದೌರ್ಜನ್ಯವನ್ನು ಸರ್ಕಾರದ ಹೆಗಲಿಗೆ ಬಿಡದೆ, ಈ ರಾಜ್ಯದ ಜನಪರ ಚಳುವಳಿಗಳು ಜವಾಬ್ದಾರಿವಹಿಸಿ ಮಾಡುತ್ತಿರುವ ಹೋರಾಟ, ಈ ರಾಜ್ಯದಲ್ಲಿ ಯಾವುದೇ ಪ್ರಭಾವಿ ವ್ಯಕ್ತಿ ದೌರ್ಜನ್ಯ ಎಸಗಿದರೆ ನಾವು ಸುಮ್ಮನಿರುವುದಿಲ್ಲ ಎಂಬ ಎಚ್ಚರಿಕೆಯನ್ನು ನೀಡುತ್ತಿದ್ದೇವೆ” ಎಂದರು.

“ಕ್ರಿಮಿಲ್‌ಗಳು, ಅತ್ಯಾಚಾರಿಗಳು, ಭ್ರಷ್ಟಾಚಾರಿಗಳು ಈ ದೇಶದಲ್ಲಿ ರಾಜಕಾರಣಿಗಳು ಆಗ್ತಾ ಇರುವ ಸಂದರ್ಭದಲ್ಲಿ, ಜನಪರ ಸಂಘಟನೆಗಳು ವಾಚ್‌ಡಾಗ್ ರೀತಿ ಕೆಲಸ ಮಾಡಬೇಕಿದೆ” ಎಂದರು.

“ಹಾಸನದಲ್ಲಿ ಹಲವು ದಶಕಗಳ ಹಿಂದೆ ನಡೆದ ನುಗ್ಗೆಹಳ್ಳಿ ನೀರಿನ ಹೋರಾಟದ ಸಂದರ್ಭದಲ್ಲಿ ಅಲ್ಲಿನ ಹಳ್ಳಿಯ ಮಹಿಳೆಯರ ಮೇಲೂ ಪೊಲೀಸರು ದೌರ್ಜನ್ಯ ಎಸಗಿಸುವಂತಹ, ಜೈಲಿಗಟ್ಟುವ ಕೆಲಸ ಮಾಡಿದ್ದ ದೇವೇಗೌಡರಿಗೆ ಇಲ್ಲಿನ ಜನ ಅಂದೇ ಸರಿಯಾದ ಪಾಠ ಕಲಿಸಿದ್ದಿದ್ದರೆ, ಇಂದು ಈ ಸ್ಥಿತಿ ಬರುತ್ತಿರಲಿಲ್ಲ” ಎಂದು ಹೇಳಿದರು.

“ದೇವೇಗೌಡರು ಮೊಮ್ಮಗನಿಗೆ ಒಂದು ಎಚ್ಚರಿಕೆ ಪತ್ರ ಬರೆದಿದ್ದರು.., ಎಲ್ಲಿದ್ದರೂ ಬಂದು ಶರಣಾಗು ಅಂತ. ಆದ್ರೆ, ನಾನು ನಿಮಗೆ ನೇರವಾಗಿ ಒಂದು ಮಾತನ್ನು ಹೇಳ್ತೇನೆ, ನಿಮಗೆ ನೈತಿಕತೆ ಇದ್ರೆ ಈ ಪ್ರಕರಣದ ಹೊಣೆ ಹೊತ್ತು ರಾಜಕೀಯ ನಿವೃತ್ತಿ ಘೋಷಿಸಿ, ಈ ನಾಡಿದ ಹೆಮ್ಮೆಯ ಪ್ರಧಾನಿ ಅನ್ನೋ ಹೆಸರನ್ನು ಪಡೆದಿದ್ದಿರಲ್ಲ ಅದನ್ನ ಉಳಿಸಿಕೊಳ್ಳಿ. 4ರಂದು ಫಲಿತಾಂಶ ಬಂದ ನಂತರ ದೇವೇಗೌಡರ ಕುಟುಂಬದ ದನಿಗಳು ಎನಾಗುತ್ತವೋ ಗೊತ್ತಿಲ್ಲ. ಆದರೆ, ನಾವಂತೂ ನಿಮ್ಮ ಕೃತ್ಯವನ್ನು ಖಂಡಿಸದೆ, ತಕ್ಕ ಪಾಠವನ್ನು ಕಲಿಸುತ್ತೇವೆ ಎಂಬ ಎಚ್ಚರಿಕೆಯನ್ನು ಕೊಟ್ಟು ಹೋಗುತ್ತಿದ್ದೇವೆ. ಪ್ರಜ್ವಲನಂತಹ ಅತ್ಯಾಚಾರಿಗಳನ್ನು ಶಿಕ್ಷೆಗೆ ಗುರಿಪಡಿಸಲು ಒಗ್ಗಟ್ಟಿನ ಹೋರಾಟ ಮಾಡುತ್ತೇವೆ” ಎಂದರು.

ಇದನ್ನೂ ಓದಿ; ಪ್ರಜ್ವಲ್ ಅಟ್ಟಹಾಸಕ್ಕೆ ಕೊನೆಯಿದೆ, ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಕೆ. ನೀಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...