Homeಕರ್ನಾಟಕಪೆಟ್ರೋಲಿಯಂ ಉತ್ಪನ್ನಗಳು GSTಗೆ ಒಳಪಟ್ಟರೆ ರಾಜ್ಯಗಳ ಪಾಲಿಗೆ ಮರಣಶಾಸನ- ಎಚ್‌.ಡಿ.ಕುಮಾರಸ್ವಾಮಿ

ಪೆಟ್ರೋಲಿಯಂ ಉತ್ಪನ್ನಗಳು GSTಗೆ ಒಳಪಟ್ಟರೆ ರಾಜ್ಯಗಳ ಪಾಲಿಗೆ ಮರಣಶಾಸನ- ಎಚ್‌.ಡಿ.ಕುಮಾರಸ್ವಾಮಿ

’ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ..?’

- Advertisement -
- Advertisement -

’ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು GSTಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ. ಈ ಬಗೆಗಿನ ಚರ್ಚೆಗಳನ್ನು ಹುಟ್ಟುಹಾಕುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳೇನಾದರೂ GSTಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಇಂಧನ ಬೆಲೆಗಳು ಗಗನಕ್ಕೇರಿದ್ದು, ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಯುವಜನತೆ ಬೀದಿಗಿಳುದು ಹೋರಾಟ ನಡೆಸುತ್ತಿದ್ದಾರೆ. ಪ್ರತಿಪಕ್ಷಗಳು ಕೇಂದ್ರ ಸರ್ಕಾರವನ್ನು ಬೊಟ್ಟು ಮಾಡಿ ಆಕ್ರೋಶ ವ್ಯಕ್ತಪಡಿಸಿವೆ. ಈ ಬಗ್ಗೆ ಟ್ವೀಟ್‌ಗಳಲ್ಲಿ ಆತಂಕ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದು ಕೇಂದ್ರ ಸರ್ಕಾರದ ಹುನ್ನಾರ ಎಂದಿದ್ದಾರೆ.

’ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್‌ ರಾಜ್ಯಗಳ ಪ್ರಮುಖ ಆದಾಯದ ಮೂಲಗಳಲ್ಲೊಂದು. ಕೇಂದ್ರ ಸರ್ಕಾರ ಮಿತಿ ಮೀರಿದ ತೆರಿಗೆ ವಿಧಿಸುತ್ತದೆ ಮತ್ತು ರಾಜ್ಯಗಳಿಗಿಂತಲೂ ಅಧಿಕ ಆದಾಯವನ್ನು ಸಂಗ್ರಹಿಸುತ್ತದೆ. ಈಗ ಅದೂ ಸಾಲದು ಎಂಬಂತೆ ಪೆಟ್ರೋಲಿಯಂ ಅನ್ನು GSTಗೆ ತಂದು ರಾಜ್ಯಗಳು ಪಡೆಯುತ್ತಿರುವ ಆದಾಯವನ್ನೂ ಲಪಟಾಯಿಸುವ ತಂತ್ರವನ್ನು ಮಾಡಿದೆ’ ಎಂದು ಜೆಡಿಎಸ್ ಮುಖಂಡ ಆರೋಪಿಸಿದ್ದಾರೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ರಸ್ತೆಯಲ್ಲಿ ಅಡುಗೆ ಮಾಡಿದ ಡಿ.ಕೆ. ಶಿವಕುಮಾರ್‌

ರಾಜ್ಯಗಳು GST ವ್ಯವಸ್ಥೆಗೆ ಒಪ್ಪಿಗೆ ನೀಡಿದ ನಂತರ ನೀಡಬೇಕಿದ್ದ ಪಾಲು, ಪರಿಹಾರವನ್ನು ಕೇಂದ್ರ ಈವರೆಗೆ ಸರಿಯಾಗಿ ಕೊಟ್ಟೇ ಇಲ್ಲ. ಸಾವಿರಾರು ಕೋಟಿ ಬಾಕಿಯನ್ನು ಇನ್ನೂ ಉಳಿಸಿಕೊಂಡಿದೆ. ಬಾಕಿಗಾಗಿ ರಾಜ್ಯಗಳು ಕೇಂದ್ರವನ್ನು ಬೇಡಾಡಿ ಬಸವಳಿದಿವೆ. ಈಗ ಪೆಟ್ರೋಲಿಯಂ ಆದಾಯವನ್ನು ಕೇಂದ್ರಕ್ಕೆ ಒಪ್ಪಿಸಿದರೆ ರಾಜ್ಯಗಳ ಪಾಡು ಶೋಚನೀಯವಾಗಲಿದೆ ಎಂದಿದ್ದಾರೆ.

ರಾಜ್ಯಗಳು ಆದಾಯವಿಲ್ಲದೇ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನವಿಲ್ಲದೇ ಸಂಕಷ್ಟ ಅನುಭವಿಸಬೇಕಾಗುತ್ತದೆ. ಕೊನೆಗೆ ಕೊರತೆ ಬಜೆಟ್‌ ಮಂಡಿಸಬೇಕಾಗುತ್ತದೆ. ಅಥವಾ, ಬಜೆಟ್‌ ಗಾತ್ರವನ್ನೇ ಇಳಿಸಬೇಕಾದ ಸಂದರ್ಭ ಬರಲಿದೆ. ಇದು ಅಭಿವೃದ್ಧಿ ವಿಚಾರದಲ್ಲಿ ಹಿಂದಕ್ಕೆ ಓಡಿದಂತೆ. ಪ್ರತಿಯೊಬ್ಬ ಪ್ರಜೆಯೂ ಇದರ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಮುನ್ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ

’ತೈಲ ಬೆಲೆ ಇಳಿಸುವ ಕಾಳಜಿ ಕೇಂದ್ರಕ್ಕೆ ಇದ್ದಲ್ಲಿ ತಾನು ವಿಧಿಸುತ್ತಿರುವ ತೆರಿಗೆಯನ್ನು ಈ ಕೂಡಲೇ ತಗ್ಗಿಸಲಿ. ನಂತರ ರಾಜ್ಯಗಳಿಗೂ ತೆರಿಗೆ ತಗ್ಗಿಸಲು ಹೇಳಲಿ ಎಂದಿದ್ದಾರೆ. ಜೊತೆಗೆ ’ಅದು ಬಿಟ್ಟು ರಾಜ್ಯಗಳ ಪಾಲಿನ ಹಣಕ್ಕೂ ಕೇಂದ್ರ ಸರ್ಕಾರ ಕೈ ಇಡಬಾರದು. ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ..?’ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

’ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದಕ್ಕೆ ಹಲವು ರಾಜ್ಯಗಳು ಈಗಾಗಲೇ ವಿರೋಧ ವ್ಯಕ್ತಪಡಿಸಿವೆ. ರಾಜ್ಯದ ಮುಖ್ಯಮಂತ್ರಿಗಳೂ ಈ ವಿಚಾರದಲ್ಲಿ ಆಕ್ಷೇಪಣಾ ಮನೋಭಾವ ತಳೆಯಬೇಕು. ರಾಜ್ಯದ ಪ್ರಮುಖ ನಾಯಕರೂ ಈ ವಿಚಾರವಾಗಿ ಈಗಿನಿಂದಲೇ ಪ್ರತಿರೋಧ ವ್ಯಕ್ತಪಡಿಸಬೇಕು. ಇಲ್ಲವಾದರೆ, ಜಿಎಸ್‌ಟಿ ಕುಣಿಕೆ ನಮ್ಮನ್ನು ಕಾಡಲಿದೆ’ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕ ನೀಡಿದ್ದಾರೆ.

ತೈಲ ಬೆಲೆ ಹೆಚ್ಚಳಕ್ಕೆ ಹಿಂದಿನ ಸರ್ಕಾರ ಕಾರಣ ಎಂದು ಸಮಸ್ಯೆಯನ್ನು ಹಿಂದಿನ ಸರ್ಕಾರದ ಮೇಲೆ ಹೊರೆಸಲು ಹೊರಟಿದ್ದ ಕೇಂದ್ರ ಸರ್ಕಾರ ದೇಶದಲ್ಲಿ ಪ್ರತಿಭಟನೆಯನ್ನು ಎದುರಿಸುತ್ತಿದೆ. ಬೆಲೆ ಏರಿಕೆಯಲ್ಲಿ ಬಸವಳಿದಿರುವ ಜನಸಾಮಾನ್ಯರು ಸರ್ಕಾರಗಳಿಗೆ ಪ್ರತಿಭಟನೆಯ ಬಿಸಿ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಬಗ್ಗೆ ಹಲವಾರು ಪ್ರತಿಭಟನೆ ನಡೆಸಿದೆ. ಜನಧ್ವನಿ ಜಾಥಾ ಮೂಲಕ ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ಮತ್ತೆ 25 ರೂ ಹೆಚ್ಚಳ: ನಾಲ್ಕು ದಿನಗಳಲ್ಲಿ ಎರಡನೇ ಬಾರಿಗೆ ಗ್ಯಾಸ್ ಬೆಲೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...