Homeಮುಖಪುಟಕೊರೋನಾ ಪಾಲಿಟಿಕ್ಸ್: ‘ಕೊರೋನಾ ಸಿಕ್ರೆ ಅದನ್ನ ಫಡ್ನವೀಸ್ ಬಾಯೊಳಗೆ ತುರುಕುತ್ತೇನೆ' ಎಂದ ಸೇನಾ ಶಾಸಕ

ಕೊರೋನಾ ಪಾಲಿಟಿಕ್ಸ್: ‘ಕೊರೋನಾ ಸಿಕ್ರೆ ಅದನ್ನ ಫಡ್ನವೀಸ್ ಬಾಯೊಳಗೆ ತುರುಕುತ್ತೇನೆ’ ಎಂದ ಸೇನಾ ಶಾಸಕ

- Advertisement -
- Advertisement -

ರೆಮ್‌ಡಿಸಿವಿರ್ ಪೂರೈಕೆಯ ಕುರಿತ ವಿವಾದವೀಗ ಮಹಾರಾಷ್ಟ್ರದಲ್ಲಿ ಸಾಕಷ್ಟು ಸಂಚಲನ ಮೂಡಿಸಿದ್ದು, ‘ಕೊರೋನಾ ವೈರಸ್ ಏನಾದ್ರೂ ನನ್ ಕೈಗೆ ಸಿಕ್ರೆ ಅದನ್ನ ದೇವೇಂದ್ರ ಫಢ್ನವೀಸ್ ಬಾಯೊಳಗೆ ತುರುಕುತ್ತೇನೆ’ ಎಂದು ಶಿವಸೇನಾದ ಶಾಸಕ ಸಂಜಯ್ ಗಾಯಕವಾಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದು ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷದ ಪ್ರತಿಭಟನೆಗೆ ನಾಂದಿ ಹಾಡಿದೆ.
ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಹೆಚ್ಚಿನ ಬೇಡಿಕೆಯಿರುವ ರೆಮ್‌ಡೆಸಿವಿರ್‌ನ ಬಾಟಲುಗಳನ್ನು ದಾಸ್ತಾನು ಮಾಡಲಾಗಿದೆಯೆಂದು ಆರೋಪಿಸಿ ಫಾರ್ಮಾ ಕಂಪನಿಯ ಉನ್ನತ ಕಾರ್ಯನಿರ್ವಾಹಕ ಒಬ್ಬರನ್ನು ಮುಂಬೈ ಪೊಲೀಸರು ವಿಚಾರಣೆ ಮಾಡಿದ್ದನ್ನು ಆಕ್ಷೇಪಿಸಿದ್ದಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿಜೆಪಿಯ ಫಡ್ನವೀಸ್ ಅವರನ್ನು ಗುರಿಯಾಗಿಸಿಕೊಂಡು ಮಹಾರಾಷ್ಟ್ರದ ಆಡಳಿತ ಪಕ್ಷಗಳು ಟೀಕೆ ಮಾಡುತ್ತಿವೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬುಲ್ಖಾನಾ ಶಾಸಕರಾದ ಸಂಜಯ್ ಗಾಯಕವಾಡ್, ಸಾಂಕ್ರಾಮಿಕ ರೋಗದ ಈ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದರೆ ಫಡ್ನವೀಸ್ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಸಚಿವರನ್ನು ಬೆಂಬಲಿಸುವ ಬದಲು, ಬಿಜೆಪಿ ನಾಯಕರು ಅವರನ್ನು ಅಪಹಾಸ್ಯ ಮಾಡುತ್ತಿದ್ದಾರೆ ಮತ್ತು ಈ ಸರ್ಕಾರ (ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಅನ್ನು ಒಳಗೊಂಡಿರುವ) ಹೇಗೆ ವಿಫಲಗೊಳ್ಳುತ್ತದೆ ಎಂಬುದನ್ನು ನೋಡುತ್ತಿದ್ದಾರೆ ಎಂದು ಅವರು ಹೇಳಿದರು.

“ಆದ್ದರಿಂದ, ಆಕಸ್ಮಾತ್ ಕೊರೊನಾ ವೈರಸ್ ನನ್ನ ಕೈಗೆ ಸಿಕ್ಕರೆ ನಾನು ಅದನ್ನು ದೇವೇಂದ್ರ ಫಡ್ನವೀಸ್ ಅವರ ಬಾಯಿಗೆ ಹಾಕುತ್ತಿದ್ದೆ” ಎಂದು ಅವರು ಹೇಳಿದರು.

ಫಡ್ನವಿಸ್ ಮತ್ತು ಬಿಜೆಪಿ ನಾಯಕರಾದ ಪ್ರವೀಣ್ ದಾರೇಕರ್ ಮತ್ತು ಚಂದ್ರಕಾಂತ್ ಪಾಟೀಲ್ ಅವರು ರೆಮ್‌ಡಿಸಿವಿರ್ ಚುಚ್ಚುಮದ್ದಿನ ವಿತರಣೆಯ ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ಗಾಯಕವಾಡ್ ಆರೋಪಿಸಿದ್ದಾರೆ.

ಮಹಾರಾಷ್ಟ್ರದ ರೆಮ್‌ಡೆಸಿವಿರ್ ಉತ್ಪಾದನಾ ಕಂಪನಿಗಳಿಗೆ ರಾಜ್ಯಕ್ಕೆ ಔಷಧಿ ಸರಬರಾಜು ಮಾಡದಂತೆ ಕೇಂದ್ರ ಹೇಳಿದೆ. ಅವರು ಮಹಾರಾಷ್ಟ್ರಕ್ಕೆ ಅಗತ್ಯವಾದ ವೈದ್ಯಕೀಯ ಆಮ್ಲಜನಕವನ್ನು ಸಹ ನೀಡುತ್ತಿಲ್ಲ ಎಂದು ಶಾಸಕ ಗಾಯಕವಾಡ್ ಹೇಳಿದ್ದಾರೆ.

ಅವರು ಗುಜರಾತ್‌ಗೆ ರೆಮ್‌ಡೆಸಿವಿರ್ ಚುಚ್ಚುಮದ್ದನ್ನು ನೀಡುತ್ತಿದ್ದಾರೆ ಮತ್ತು ಮಹಾರಾಷ್ಟ್ರದ ಬಿಜೆಪಿ ಕಚೇರಿಯಿಂದ 50,000 ಔಷಧದ ಬಾಟಲುಗಳನ್ನು ಆ ರಾಜ್ಯಕ್ಕೆ ಉಚಿತವಾಗಿ ಪೂರೈಸುತ್ತಿದ್ದಾರೆ, ಆದರೆ ಮಹಾರಾಷ್ಟ್ರದಲ್ಲಿ ಜನರು ಸಾಯುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ರಾಜಕೀಯ ಮಾಡಲು ಇದು ಸಮಯವೇ? ಕೇಂದ್ರ ಮತ್ತು ಫಡ್ನವೀಸ್ ಅವರ ಕೃತ್ಯಗಳಿಗೆ ನಾಚಿಕೆಪಡಬೇಕು ಎಂದು ಅವರು ಹೇಳಿದರು. ಗಾಯಕವಾಡ್ ಅವರ ಟೀಕೆಗಳ ನಂತರ, ಬಿಜೆಪಿ ಕಾರ್ಯಕರ್ತರು ಭಾನುವಾರ ಬುಲ್ಖಾನಾದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದರು ಮತ್ತು ಶಾಸಕರ ಪ್ರತಿಕೃತಿಗಳನ್ನು ಸುಟ್ಟುಹಾಕಿದರು.

ತಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ತನ್ನ ವಿರುದ್ಧ ಯಾವುದೇ ವಿಚಾರಣೆಗೆ ಹೆದರುವುದಿಲ್ಲ ಎಂದು ಫಡ್ನವೀಸ್ ಭಾನುವಾರ ಹೇಳಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರ ಕೊರೋನಾ ಪಾಲಿಟಿಕ್ಸ್: ಬಿಜೆಪಿ ಮುಖಂಡರಿಂದ 4.75 ಕೋಟಿ ರೂ. ಮೌಲ್ಯದ ರೆಮ್‌ಡಿಸಿವಿರ್ ಅಕ್ರಮ ಸಂಗ್ರಹ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...