Homeಮುಖಪುಟ‘ಅಕ್ಟೋಬರ್‌ 2 ರೊಳಗೆ ದೇಶವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸದಿದ್ದರೆ ಜಲಸಮಾಧಿ ಆಗುತ್ತೇನೆ’: ಪರಮಹಂಸ ಆಚಾರ್ಯ

‘ಅಕ್ಟೋಬರ್‌ 2 ರೊಳಗೆ ದೇಶವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸದಿದ್ದರೆ ಜಲಸಮಾಧಿ ಆಗುತ್ತೇನೆ’: ಪರಮಹಂಸ ಆಚಾರ್ಯ

- Advertisement -
- Advertisement -

ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆಯ ದಿನವಾದ ಅಕ್ಟೋಬರ್ 2 ರೊಳಗೆ ಭಾರತವನ್ನು ‘ಹಿಂದೂ ರಾಷ್ಟ್ರ’ ಎಂದು ಘೋಷಿಸುವಂತೆ, ಜಗದ್ಗುರು ಪರಮಹಂಸ ಆಚಾರ್ಯ ಮಹಾರಾಜ್ ಅವರು ಒಕ್ಕೂಟ ಸರ್ಕಾರವನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಮಂಗಳವಾರ ಒತ್ತಾಯಿಸಿದ್ದಾರೆ.

ಒಂದು ವೇಳೆ ಒಕ್ಕೂಟ ಸರ್ಕಾರ ಅವರ ಬೇಡಿಕೆಗಳನ್ನು ಈಡೇರಿಸದಿದ್ದರೆ ಸರಯೂ ನದಿಯಲ್ಲಿ ‘ಜಲ ಸಮಾಧಿ’ ಆಗುವುದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. “ಅಕ್ಟೋಬರ್ 2 ರೊಳಗೆ ಭಾರತವನ್ನು ‘ಹಿಂದೂ ರಾಷ್ಟ್ರ’ ಎಂದು ಘೋಷಿಸಬೇಕು. ಇಲ್ಲವಾದಲ್ಲಿ ನಾನು ಸರಯು ನದಿಯಲ್ಲಿ ಜಲ ಸಮಾಧಿ ಆಗುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಹಿಂದೂ ರಾಷ್ಟ್ರದಲ್ಲಿ ದಲಿತ-ಶೂದ್ರರಿಗೆ ಮತದಾನದ ಹಕ್ಕಿರುತ್ತದೆಯೇ?’

ಇಷ್ಟೆ ಅಲ್ಲದೆ, ಭಾರತದಲ್ಲಿ ವಾಸಿಸುತ್ತಿರುವ ಎಲ್ಲಾ ಮುಸ್ಲಿಂ ಮತ್ತು ಕ್ರಿಶ್ಚಿಯನ್ನರ ರಾಷ್ಟ್ರೀಯತೆಯನ್ನು ಅಧೀಕೃತವಾಗಿ ಕೊನೆಗೊಳಿಸಬೇಕು ಎಂದು ಅವರು ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪರಮಹಂಸ ಆಚಾರ್ಯ ಅವರ ಬೇಡಿಕೆಯನ್ನು ಬೆಂಬಲಿಸಿ, ‘ಹಿಂದೂ ಸನಾತನ ಧರ್ಮ ಸಂಸದ್’ ಅನ್ನು ಸಂಘಟಿಸುವುದಾಗಿ ಅಯೋಧ್ಯೆಯ ಸ್ವಾಮೀಜಿಗಳ ಸಮುದಾಯ ಹೇಳಿದೆ. ಪರಮಹಂಸ ಆಚಾರ್ಯ ಅವರು ಈ ಹಿಂದೆ ಕೂಡಾ 15 ದಿನಗಳ ಕಾಲ ಆಮರಣಾಂತ ಉಪವಾಸವನ್ನು ಕೈಗೊಂಡಿದ್ದರು. ನಂತರ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ತೆರಳಿ ಅವರಿಗೆ ಭರವಸೆ ನೀಡಿದ ನಂತರ ಉಪವಾಸವನ್ನು ಕೊನೆಗೊಳಿಸಿದ್ದರು.

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೆ ರಾಜಕೀಯ ಪಕ್ಷಗಳು ಅದಕ್ಕಾಗಿ ಸಜ್ಜಾಗುತ್ತಿದ್ದು, ಈ ಸಮಯದಲ್ಲಿ ಪರಮಹಂಸ ಆಚಾರ್ಯ ಅವರ ಹೇಳಿಕೆಗಳು ಹೊರ ಬಿದ್ದಿದೆ.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...