Homeಮುಖಪುಟಇನ್ನೂ ವಿಳಂಬವಾದರೆ ಇಡೀ ಪೀಳಿಗೆ ಜ್ಞಾನದ ಅಂತರ ಅನುಭವಿಸುತ್ತದೆ: ಶಾಲೆ ತೆರೆಯುವ ಬಗ್ಗೆ ದೆಹಲಿ ಡಿಸಿಎಂ

ಇನ್ನೂ ವಿಳಂಬವಾದರೆ ಇಡೀ ಪೀಳಿಗೆ ಜ್ಞಾನದ ಅಂತರ ಅನುಭವಿಸುತ್ತದೆ: ಶಾಲೆ ತೆರೆಯುವ ಬಗ್ಗೆ ದೆಹಲಿ ಡಿಸಿಎಂ

- Advertisement -
- Advertisement -

ಕೊರೊನಾದಿಂದಾಗಿ ಬಂದ್‌ ಆಗಿದ್ದ ದೆಹಲಿಯ ಶಾಲೆಗಳು ಸುಮಾರು 1.5 ವರ್ಷಗಳ ನಂತರ ಕಟ್ಟುನಿಟ್ಟಾದ ಸುರಕ್ಷತಾ ಪ್ರೋಟೋಕಾಲ್ ನಡುವೆ ಬುಧವಾರ(ಇಂದು)ದಿಂದ ತೆರೆಯುತ್ತಿದೆ. ಆದರೆ 9-12 ತರಗತಿಳಿಗೆ ಮಾತ್ರ ದೆಹಲಿ ಸರ್ಕಾರ ಅನುಮತಿ ನೀಡಿದೆ. ಶಾಲೆಗಳನ್ನು ಮತ್ತೆ ತೆರೆಯುವ ನಿರ್ಧಾರವನ್ನು ಇನ್ನು ಮುಂದೆ ವಿಳಂಬ ಮಾಡಲಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

“ಒಂದು ವೇಳೆ ಇನ್ನೂ ವಿಳಂಬ ಮಾಡಿದರೆ ಇಡೀ ಪೀಳಿಗೆಯು ಜ್ಞಾನದ ಅಂತರವನ್ನು ಅನುಭವಿಸುತ್ತದೆ” ಎಂದು ಸಿಸೋಡಿಯಾ ಅವರು ಪ್ರತಿಪಾದಿಸಿದ್ದಾರೆ. ಕಾಲೇಜುಗಳು, ವಿಶ್ವವಿದ್ಯಾನಿಲಯಗಳು ಮತ್ತು ಕೋಚಿಂಗ್ ಸಂಸ್ಥೆಗಳು ಕೊರೊನಾ ಮೂರನೇ ಅಲೆಯ ಆತಂಕದ ನಡುವೆ ಮತ್ತೆ ತೆರೆಯಲಾಗುತ್ತಿದೆ.

ಶಿಕ್ಷಕರಿಗೆ ವ್ಯಾಕ್ಸಿನೇಷನ್, ತರಗತಿಗಳಲ್ಲಿ 50% ರಷ್ಟು ಆಸನ ಸಾಮರ್ಥ್ಯ, ತೆರೆದ ಪ್ರದೇಶದಲ್ಲಿ ಊಟದ ವಿರಾಮಗಳು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರವು ಹೇಳಿದೆ.

ಇದನ್ನೂ ಓದಿ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಜಾಮೀನು ನಿರಾಕರಿಸಿದ ಸುಪ್ರೀಂ

“ಕಳೆದ 1.5 ವರ್ಷಗಳಿಂದ ಶಾಲೆಗಳನ್ನು ಮುಚ್ಚಲಾಗಿದೆ. ವಿದ್ಯಾರ್ಥಿಗಳು ತುಂಬಾ ತೊಂದರೆ ಅನುಭವಿಸಿದ್ದಾರೆ. ನಾವೆಲ್ಲರೂ ಅವರ ಆರೋಗ್ಯದ ಬಗ್ಗೆ ಕಾಳಜಿ ಹೊಂದಿದ್ದೇವೆ … ಜೊತೆಗೆ ಅವರ ಅಧ್ಯಯನದ ಬಗ್ಗೆಯು. ಶಾಲೆ ತೆರೆಯುವ ಬಗ್ಗೆ ನಾವು ಸಲಹೆಗಳನ್ನು ಕೇಳಿದಾಗ, 70% ದಷ್ಟು ಪೋಷಕರು ಶಾಲೆಗಳನ್ನು ತೆರೆಯಲು ಬಯಸಿದ್ದಾರೆ. ಹೆಚ್ಚಿನ ಪೋಷಕರು ಪ್ರೋಟೋಕಾಲ್ ಅನ್ನು ಅನುಸರಿಸುವಂತೆ ಒತ್ತಾಯಿಸಿದ್ದಾರೆ” ಎಂದು ಹೇಳಿದ್ದಾರೆ.

“ಚಿಕ್ಕ ಮಕ್ಕಳಿಗೆ ಕಡಿಮೆ ಅಪಾಯವಿರುವುದರಿಂದ ತಜ್ಞರು ಕೂಡಾ ಪ್ರಾಥಮಿಕ ಶಾಲೆಗಳನ್ನು ಪುನಃ ತೆರೆಯಬಹುದು ಎಂದು ಹೇಳಿದ್ದಾರೆ. ಆದ್ದರಿಂದ ನಾವು 9 ರಿಂದ 12 ನೇ ತರಗತಿಯ ಶಾಲೆಗಳನ್ನು ಆರಂಭಿಸಲು ಯೋಚಿಸಿದ್ದೇವೆ” ಎಂದು ಸಿಸೋಡಿಯಾ ಅವರು ತಿಳಿಸಿದ್ದಾರೆ.

ಸಾಂಕ್ರಾಮಿಕ ರೋಗದಿಂದಾಗಿ ನಿರ್ಣಾಯಕ ವರ್ಷವನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ, ದೆಹಲಿ ಸರ್ಕಾರವು ಸೇತು ಬಂಧ ಕೋರ್ಸ್‌ಗಳನ್ನು ನಡೆಸಲು ಯೋಜಿಸಿದೆ. “ಸಾಂಕ್ರಾಮಿಕ ರೋಗವು ನಮ್ಮ ದಾರಿಯಲ್ಲಿ ಸಾಕಷ್ಟು ಸವಾಲುಗಳನ್ನು ಒಡ್ಡಿದೆ. ವಿದ್ಯಾರ್ಥಿಗಳು ಈಗಾಗಲೇ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಇದನ್ನು ಅಪಾಯಕಾರಿ ನಿರ್ಧಾರ ಎಂದು ಕರೆಯಬಹುದು, ಆದರೆ ವಿದ್ಯಾರ್ಥಿಗಳು ಅವರಿಗೆ ಬೇಕಾಗದ ಸಾಕಷ್ಟು ಸಂಪನ್ಮೂಲಗಳನ್ನು ಪಡೆಯಲು ಸಾಧ್ಯವಾಗದೆ ಅಪಾಯದಲ್ಲಿದ್ದಾರೆ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಪ್ರಸ್ತುತ, ದೆಹಲಿಯಲ್ಲಿ ಪ್ರತಿದಿನ 30-35 ಕೊರೊನಾ ಪ್ರಕರಣಗಳು ವರದಿಯಾಗುತ್ತಿದೆ. ನಾವೀಗ ಮುಂದುವರೆಯಬೇಕು, ಈ ನಿರ್ಧಾರವು ಇನ್ನಷ್ಟು ವಿಳಂಬವಾದರೆ, ಇಡೀ ಪೀಳಿಗೆಯು ಜ್ಞಾನದ ಅಂತರವನ್ನು ಅನುಭವಿಸುತ್ತದೆ” ಎಂದು ಸಿಸೋಡಿಯಾ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪರವರ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಟ್ಟಾಗಿದೆ: ಸಿದ್ದರಾಮಯ್ಯ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...