Homeಚಳವಳಿದೆಹಲಿಯಲ್ಲಿ ವಿದ್ಯುತ್ ಉಚಿತ v/s ಕರ್ನಾಟಕದಲ್ಲಿ ದರ ಹೆಚ್ಚಳ!: ಆಪ್ ಪ್ರತಿಭಟನೆ

ದೆಹಲಿಯಲ್ಲಿ ವಿದ್ಯುತ್ ಉಚಿತ v/s ಕರ್ನಾಟಕದಲ್ಲಿ ದರ ಹೆಚ್ಚಳ!: ಆಪ್ ಪ್ರತಿಭಟನೆ

ಕೇಜ್ರಿವಾಲ್‌ ಮಾದರಿ ನೀತಿ ಕರ್ನಾಟಕದಲ್ಲಿ ಅಳವಡಿಸಿ 200 ಯುನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ತಾಕತ್ತು ಯಡಿಯೂರಪ್ಪನವರ ಸರ್ಕಾರಕ್ಕೆ ಇದೇಯೇ?

- Advertisement -
- Advertisement -

ದೆಹಲಿಯಲ್ಲಿ ಲಕ್ಷಾಂತರ ಕುಟುಂಬಗಳಿಗೆ 200 ಯೂನಿಟ್‌ವರೆಗೂ ವಿದ್ಯುತ್ ಉಚಿತವಾಗಿ ದೊರೆಯುತ್ತಿದೆ. ಆದರೆ ಕರ್ನಾಟಕದಲ್ಲಿ 200 ಯೂನಿಟ್ ವಿದ್ಯುತ್ ಬಳಕೆಗೆ 1523ರೂ ಪಾವತಿಸಬೇಕಾಗಿದೆ. ಒಂದು ವೇಳೆ ನೀವು 400 ಯೂನಿಟ್ ಬಳಸಿದರೆ ದೆಹಲಿಯಲ್ಲಿ 1000 ರೂ ದರ ಪಾವತಿಸಬೇಕು. ಆದರೆ ಕರ್ನಾಟಕದಲ್ಲಿ ಮಾತ್ರ 3360 ರೂ ಪಾವತಿಸಬೇಕು? ಈ ಅಗಾಧ ತಾರತಮ್ಯ ಖಂಡಿಸಿ, ವಿದ್ಯುತ್ ದರ ಹೆಚ್ಚಿಸಿರುವ ಕರ್ನಾಟಕ ಸರ್ಕಾರದ ಕ್ರಮ ಖಂಡಿಸಿ ಆಮ್‌ ಆದ್ಮಿ ಪಕ್ಷ ಪ್ರತಿಭಟನೆ ಆರಂಭಿಸಿದೆ.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿಯ ಕಾವೇರಿ ಭವನದ ಎದುರು ನಡೆದ ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಮಾತನಾಡಿ “ಇಡೀ ದೇಶಕ್ಕೆ ಮಾದರಿಯಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ಮಾದರಿ ವಿದ್ಯುಚ್ಛಕ್ತಿ ನೀತಿಯನ್ನು ಕರ್ನಾಟಕ ರಾಜ್ಯದಲ್ಲಿ ಅಳವಡಿಸಿ 200 ಯುನಿಟ್‌ ವಿದ್ಯುತ್ಛಕ್ತಿಯನ್ನು ಉಚಿತವಾಗಿ ನೀಡುವ ತಾಕತ್ತು ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇದೇಯೇ” ಎಂದು ಪ್ರಶ್ನಿಸಿದ್ದಾರೆ.

ದೆಹಲಿ ರಾಜ್ಯ ಕಿಂಚಿತ್ತೂ ವಿದ್ಯುತ್‌ ಉತ್ಪಾದನೆ ಮಾಡುವುದಿಲ್ಲ. ಎಲ್ಲವನ್ನೂ ಖಾಸಗಿ ಕಂಪೆನಿಗಳಿಂದ ಖರೀದಿಸಿ ವಿತರಿಸುತ್ತದೆ. ಆದರೂ ತನ್ನ ರಾಜ್ಯದ ಜನರಿಗೆ ಉಚಿತವಾಗಿ ವಿದ್ಯುತ್ ನೀಡುತ್ತಿದೆ. ಆದರೆ ವಿದ್ಯುತ್ ಉತ್ಪಾದನೆಯಲ್ಲಿ ಶೇ 100 ರಷ್ಟು ಸ್ವಾವಲಂಭಿಯಾಗಿರುವ ನಮ್ಮ ಕರ್ನಾಟಕ ರಾಜ್ಯ ಶೇ 6 ರಷ್ಟು ದರ ಹೆಚ್ಚಳ ಮಾಡಿ ಜನಸಾಮಾನ್ಯರಿಗೆ ಹೊರೆಯಾಗಿದೆ ಎಂದು ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.

ತಮ್ಮ ಅಧಿಕಾರದ ಅವಧಿಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ವಿದ್ಯುತ್ ಖರೀದಿಯಲ್ಲಿ ಸಾಕಷ್ಟು ಹಗರಣ ನಡೆಸಿವೆ. ಅದರಿಂದಾದ ನಷ್ಟ ತುಂಬಿಕೊಳ್ಳಲು ದರ ಏರಿಸಿ ಜನ ಸಾಮಾನ್ಯರ ಮೇಲೆ ಹಾಕುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಈ ಕೂಡಲೇ ಈ ದರ ಹೆಚ್ಚಳದ ಆದೇಶವನ್ನು ಸರ್ಕಾರ ಹಿಂಪಡೆಯದೇ ಇದ್ದರೆ ಇಡೀ ರಾಜ್ಯದಾದ್ಯಂತ ಆಮ್ ಆದ್ಮಿ ಪಕ್ಷ ಸರಣಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಹಾಗೂ ನಾಳೆಯಿಂದ ನಮ್ಮ ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು ಬೆಂಗಳೂರಿನ ಪ್ರತಿ ಮನೆ ಮನೆಗೆ ತೆರಳಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಕೆಟ್ಟ ಆಡಳಿತದ ಬಗ್ಗೆ ಜನರಿಗೆ ತಿಳಿಸಲಾಗುವುದು ಎಂದರು.

ಕಳೆದ ಶುಕ್ರವಾರ ಎಎಪಿ “ಶಾಕ್ ಬೇಡ” ಎನ್ನುವ ನೂತನ ಅಪ್ಲಿಕೇಶನ್‌ ಅಭಿವೃದ್ಧಿ ಪಡಿಸಿ ಬಿಡುಗಡೆ ಮಾಡಿತ್ತು. ಇದರಲ್ಲಿ ಕಳೆದ ತಿಂಗಳು ಬೆಂಗಳೂರಿನ ಜನರು ಪಾವತಿಸಿದ ವಿದ್ಯುತ್ ಬಿಲ್ ಮೊತ್ತವನ್ನು ನಮೂದಿಸಿ ನವೆಂಬರ್ ತಿಂಗಳು ಎಷ್ಟು ವಿದ್ಯುತ್‌ ಬಿಲ್‌ ಬರುತ್ತದೆ ಎಂದು ನೋಡಬಹುದು ಮತ್ತು ಅಷ್ಟೇ ಪ್ರಮಾಣದ ವಿದ್ಯುತ್‌ ಉಪಯೋಗಿಸುವ ದೆಹಲಿಯ ನಿವಾಸಿಗಳು ಎಷ್ಟು ಬಿಲ್‌ ಪಾವತಿಸುತ್ತಾರೆ ಎನ್ನುವುದನ್ನು ತುಲನೆ ಮಾಡಿ ನೋಡಬಹುದು ಎಂದು ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಹೇಳಿದ್ದರು.


ಇದನ್ನೂ ಓದಿ: ಕೊರೊನಾ ಸಂಕಷ್ಟದ ನಡುವೆ ’ವಿದ್ಯುತ್ ಬರೆ’ ಎಳೆಯುತ್ತಿರುವ ರಾಜ್ಯ ಸರ್ಕಾರ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ಭಾಷಣ: ಮೋದಿಗೆ ನೊಟೀಸ್‌ ಕಳುಹಿಸುವ ಬದಲು ‘ಜೆ.ಪಿ.ನಡ್ಡಾ’ಗೆ ನೊಟೀಸ್‌ ನೀಡಿದ ಚುನಾವಣಾ ಆಯೋಗ!

0
ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ದೂರುಗಳ ಆಧಾರದ ಮೇಲೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ ನೋಟಿಸ್ ನೀಡಿದೆ. ಆದರೆ, ಈ ನೊಟೀಸ್‌ನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಕಳುಹಿಸಲಾಗಿದ್ದು,...