Homeಕರ್ನಾಟಕ‘ಮೊಟ್ಟೆ ಎಸೆದವ ಕಾಂಗ್ರೆಸ್ ಆಗಿದ್ದರೆ ಜೈಲಿಗೆ ಕಳಿಸಿ’: ಬಿಜೆಪಿ ಶಾಸಕನೊಂದಿಗಿನ ಆರೋಪಿಯ ಚಿತ್ರ ಬಿಡುಗಡೆ ಮಾಡಿದ...

‘ಮೊಟ್ಟೆ ಎಸೆದವ ಕಾಂಗ್ರೆಸ್ ಆಗಿದ್ದರೆ ಜೈಲಿಗೆ ಕಳಿಸಿ’: ಬಿಜೆಪಿ ಶಾಸಕನೊಂದಿಗಿನ ಆರೋಪಿಯ ಚಿತ್ರ ಬಿಡುಗಡೆ ಮಾಡಿದ ಸಿದ್ದರಾಮಯ್ಯ

- Advertisement -
- Advertisement -

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊಡಗಿಗೆ ಭೇಟಿ ನೀಡಿದ್ದಾಗ ಅವರ ಕಾರಿಗೆ ಮೊಟ್ಟೆ ಎಸೆದಿದ್ದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಸಿದ್ದರಾಮಯ್ಯ ಅವರೇ ಪ್ರತಿಕ್ರಿಯೆ ನೀಡಿದ್ದು, “ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ” ಎಂದು ಶನಿವಾರ ಹೇಳಿದ್ದಾರೆ.

ಮೊಟ್ಟೆ ಎಸೆದ ದುಷ್ಕರ್ಮಿಯನ್ನು ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಅವರು ಠಾಣೆಯಿಂದ ಬಿಡುಗಡೆ ಮಾಡಿಸಿಕೊಂಡು ಬಂದಿದ್ದಾರೆ ಎಂಬ ಮಾಧ್ಯಮ ವರದಿಯ ಸ್ಕ್ರೀನ್ ಶಾರ್ಟ್‌ಗಳನ್ನು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, “ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ BJP ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು?” ಎಂದು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊಟ್ಟೆ ಎಸೆದಿರುವ ಆರೋಪಿಯ ಜೊತೆಗೆ ಅಪ್ಪಚ್ಚು ರಂಜನ್ ಇರುವ ಚಿತ್ರವನ್ನು ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದಾರೆ. “ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ?” ಎಂದು ಅವರು ಕೇಳಿದ್ದಾರೆ.

“’ಆಪರೇಷನ್ ಕಮಲ’ ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ ‘ಆಪರೇಷನ್ ಕಮಲ’ ಕೂಡಾ ಬಿಜೆಪಿ ನಡೆಸುತ್ತಿದೆ ಎಂದು‌ ಮಡಿಕೇರಿಯಲ್ಲಿ ಸಾಬೀತಾಗಿದೆ” ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ಆಗಸ್ಟ್‌ 26 ರಂದು ಕೊಡಗು ಎಸ್‌ಪಿ ಕಚೇರಿ ಮುತ್ತಿಗೆ ಘೋಷಿಸಿದ ಸಿದ್ದರಾಮಯ್ಯ

“ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ?” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...