Homeಮುಖಪುಟಜೂ.15ರೊಳಗೆ ನ್ಯಾಯ ಸಿಗದಿದ್ದರೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುತ್ತೇವೆ: ಸರ್ಕಾರಕ್ಕೆ ಕುಸ್ತಿಪಟುಗಳ ಎಚ್ಚರಿಕೆ

ಜೂ.15ರೊಳಗೆ ನ್ಯಾಯ ಸಿಗದಿದ್ದರೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುತ್ತೇವೆ: ಸರ್ಕಾರಕ್ಕೆ ಕುಸ್ತಿಪಟುಗಳ ಎಚ್ಚರಿಕೆ

- Advertisement -
- Advertisement -

ಜೂನ್ 15ರೊಳಗೆ ತಮಗೆ ನ್ಯಾಯ ಸಿಗದಿದ್ದರೆ, ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಮರುಪ್ರಾರಂಭಿಸುವುದಾಗಿ ಭಾರತೀಯ ಕುಸ್ತಿಪಟುಗಳು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕುಸ್ತಿಪಟು, ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಅವರು, ”ಜೂನ್ 15ರೊಳಗೆ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ, ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು  ಹೇಳಿದ್ದಾರೆ.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ (ಡಬ್ಲ್ಯುಎಫ್‌ಐ) ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಶೀಘ್ರ ತನಿಖೆ ನಡೆಸುವುದಾಗಿ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಭರವಸೆ ನೀಡಿದ ನಂತರ ಇದೀಗ ಭಾರತದ ಕುಸ್ತಿಪಟುಗಳು ಪ್ರತಿಭಟನೆಯನ್ನು ಸ್ಥಗಿತಗೊಳಿಸಿದ್ದಾರೆ.

ಕುಸ್ತಿಪಟುಗಳು ಏಪ್ರಿಲ್‌ನಿಂದ ಬ್ರಿಜ್ ಭೂಷಣ್ ಅವರ ಬಂಧನಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದರೂ, ಈ ವರೆಗೂ ಯಾವುದೇ ಕ್ರ ಆಗಿಲ್ಲ. ಬ್ರಿಜ್‌ಭೂಷಣ್ ಸಿಂಗ್ ಅವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ.

ಆರು ಬಾರಿ ಬಿಜೆಪಿ ಸಂಸದರಾಗಿರುವ ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸರು ಈಗಾಗಲೇ ಲೈಂಗಿಕ ಕಿರುಕುಳದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಕುಸ್ತಿಪಟುಗಳ ಹೋರಟಕ್ಕೆ ಖಾಪ್ ಪಂಚಾಯತ್, ರೈತರು ಮತ್ತು ಜಾವೆಲಿನ್ ಚಾಂಪಿಯನ್ ನೀರಜ್ ಚೋಪ್ರಾ ಮತ್ತು ಒಲಿಂಪಿಕ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ಅವರಂತಹ ಖ್ಯಾತ ಕ್ರೀಡಾಪಟುಗಳು ಬೆಂಬಲ ನೀಡಿದ್ದಾರೆ.

ಪುನಿಯಾ, ”ಆಟಗಾರರನ್ನು ಪಂಚಾಯ್ತಿ ಕರೆಯಲಾಗಿದೆ. ನಾವು ಸರ್ಕಾರದೊಂದಿಗೆ ಚರ್ಚಿಸಿದ್ದನ್ನು ನಾವು ಮುಂದಿಟ್ಟಿದ್ದೇವೆ. ಜೂನ್ 15ರೊಳಗೆ ಎಲ್ಲಾ ತನಿಖೆಗಳನ್ನು ನಡೆಸಲಾಗುವುದು ಎಂದು ಸರ್ಕಾರ ನಮಗೆ ಭರವಸೆ ನೀಡಿದೆ. ಜೂನ್ 15ರವರೆಗೆ ನಾವು ಕಾಯುತ್ತೇವೆ ಎಂದು ಪಂಚಾಯತ್ ಹೇಳಿದೆ. ಆದರೆ ಏನೂ ಆಗದಿದ್ದರೆ ನಾವು ಬೃಹತ್ ಪ್ರತಿಭಟನೆಗೆ ಕರೆ ನೀಡುತ್ತೇವೆ” ಎಂದು ತಿಳಿಸಿದ್ದಾರೆ.

”ಬ್ರಿಜ್ ಭೂಷಣ್ ಅವರ ಕುಟುಂಬದಿಂದ ಯಾರೂ ಡಬ್ಲ್ಯುಎಫ್‌ಐಗೆ ಆಯ್ಕೆಯಾಗುವುದಿಲ್ಲ ಎಂದು ಸರ್ಕಾರ ಕುಸ್ತಿಪಟುಗಳಿಗೆ ಭರವಸೆ ನೀಡಿದೆ” ಎಂದು ಪುನಿಯಾ ಹೇಳಿದರು.

ಇದನ್ನೂ ಓದಿ: ಈ ಭಯದ ವಾತಾವರಣದಲ್ಲಿ ನಮಗೆ ನ್ಯಾಯ ಸಿಗುವುದೇ?: ಕುಸ್ತಿಪಟು ವಿನೇಶ್ ಫೋಗಟ್ ಆತಂಕ

”ಜೂನ್ 15ರೊಳಗೆ ಪೊಲೀಸರು ಆರೋಪಪಟ್ಟಿ ಸಲ್ಲಿಸಬೇಕಾಗಿರುವುದರಿಂದ ನಾವೂ ತನಿಖೆಗೆ ಸಹಕರಿಸುತ್ತಿದ್ದೇವೆ. ನಮ್ಮ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ ಎಂದು ಬ್ರಿಜ್ ಭೂಷಣ್ ಹೇಳಿದ್ದಾರೆ.

ಸಿಂಗ್ ವಿರುದ್ಧ ಪ್ರತಿಭಟನಾ ನಿರತರಲ್ಲಿ ಮುಖ್ಯವಾದವರಲ್ಲಿ ಒಬ್ಬರಾದ ಕುಸ್ತಿಪಟು ವಿನೇಶ್ ಫೋಗಟ್ ಅವರು, ಈ ವಿಷಯದ ತನಿಖೆಯಲ್ಲಿ ಪೊಲೀಸರ ವಿಳಂಬವನ್ನು ಟೀಕಿಸಿದ್ದಾರೆ.

”ತರಬೇತಿ ಶಿಬಿರಗಳು ಮತ್ತು ಪಂದ್ಯಾವಳಿಗಳ ಸಮಯದಲ್ಲಿ, ಸಿಂಗ್ ಅಟವರು ಯುವ ಅಥ್ಲೀಟ್‌ಗಳನ್ನು ಪ್ರತ್ಯೇಕಿಸಲು ಮತ್ತು ಪದೇಪದೇ ಅವರನ್ನು ಮುಟ್ಟಲು ಸಾಧ್ಯವಿರುವ ಎಲ್ಲ ಮಾರ್ಗಗಳನ್ನು ಬಳಸುತ್ತಾರೆ” ಎಂದು ವಿನೇಶ್ ಫೋಗಟ್ ಹೇಳಿದ್ದಾರೆ.

”ಈ ರೀತಿ ಅಸಹ್ಯಕರ ಘಟನೆಗಳಲ್ಲಿ ನಾನು ಬಲಿಪಶುಗಳ ನಡುವೆ ಇದ್ದೇನೆ” ಎಂದು ಅವರು ಹೇಳಿಕೊಂಡರು.

ಈ ಕುಸ್ತಿಪಟುಗಳ ದೂರುಗಳಿಗೆ ಪ್ರಧಾನಿ ನರೇಂದ್ರ ಮೋದಿಯವರ ಮೌನಿಯಾಗಿರುವುದಕ್ಕೆ ಫೋಗಟ್ ನಿರಾಶೆ ವ್ಯಕ್ತಪಡಿಸಿದ್ದಾರೆ.

”ಇದು ಭಾವನಾತ್ಮಕವಾಗಿ ಬರಿದಾಗಿದೆ, ಈ ಪ್ರಕರಣದ ಬಗ್ಗೆ ಪ್ರಧಾನಿ ಏನನ್ನೂ ಹೇಳಿಲ್ಲ” ಎಂದು ಫೋಗಟ್ ಹೇಳಿದರು.

”ಯಾರೂ ನಮ್ಮ ಮಾತನ್ನು ಕೇಳುತ್ತಿಲ್ಲ ಎಂಬ ಅಂಶವನ್ನು ಸಾರ್ವಜನಿಕರಿಗೆ ತಿಳಿಸಲು ಪ್ರತಿಭಟನೆಯನ್ನು ಪ್ರಾರಂಭಿಸಿದೆವು. ಖ್ಯಾತ ಕ್ರೀಡಾಪಟುಗಳನ್ನು ಹೇಗೆ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ ಎಂಬುದನ್ನು ರಾಷ್ಟ್ರವು ತಿಳಿಯಬೇಕೆಂದು ನಾವು ಬಯಸುತ್ತೇವೆ” ಎಂದು ಫೋಗಟ್ ಹೇಳಿದರು.

ಜನವರಿಯಲ್ಲಿ, ನೊಂದ ಕುಸ್ತಿಪಟುಗಳಿಂದ ಸಂಕ್ಷಿಪ್ತ ಪ್ರತಿಭಟನೆಯನ್ನು ಪ್ರಾರಂಭಿಸಲಾಯಿತು. ಅವರು ಏಪ್ರಿಲ್ 23ರಂದು ತಮ್ಮ ಪ್ರತಿಭಟನೆಯನ್ನು ಪುನರಾರಂಭಿಸಿದರು ಮತ್ತು ಮೇ 28ರಂದು ದೆಹಲಿ ಪೊಲೀಸರು ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಿದರು.

ಕುಸ್ತಿಪಟುಗಳು ಗೃಹ ಸಚಿವ ಅಮಿತ್ ಶಾ ಮತ್ತು ನಂತರ ಕ್ರೀಡಾ ಸಚಿವರನ್ನು ಭೇಟಿ ಮಾಡಲು ಒಪ್ಪುವ ಮೊದಲು ತಮ್ಮ ಪದಕಗಳನ್ನು ಗಂಗೆಗೆ ಎಸೆಯುವುದಾಗಿ ಎಚ್ಚರಿಕೆ ನೀಡಿದರು.

ಜೂನ್ 15ರೊಳಗೆ ಪೊಲೀಸರು ತಮ್ಮ ತನಿಖೆಯನ್ನು ಪೂರ್ಣಗೊಳಿಸುತ್ತಾರೆ ಎಂದು ಠಾಕೂರ್ ಹೇಳಿದರು ಮತ್ತು ಅಲ್ಲಿಯವರೆಗೆ ಪ್ರದರ್ಶನ ನೀಡದಂತೆ ಕುಸ್ತಿಪಟುಗಳಿಗೆ ವಿನಂತಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...