Homeಕರ್ನಾಟಕಕನ್ನಡ ಧ್ವಜ ಇಳಿಸದಿದ್ದರೆ ಗಲ್ಲಿ-ಗಲ್ಲಿಯಲ್ಲಿ ಭಗವಾಧ್ವಜ ಹಾರಾಡುತ್ತದೆ: ಎಚ್ಚರಿಕೆ ನೀಡಿದ ಮಹಾರಾಷ್ಟ್ರ ಏಕೀಕರಣ ಸಮಿತಿ

ಕನ್ನಡ ಧ್ವಜ ಇಳಿಸದಿದ್ದರೆ ಗಲ್ಲಿ-ಗಲ್ಲಿಯಲ್ಲಿ ಭಗವಾಧ್ವಜ ಹಾರಾಡುತ್ತದೆ: ಎಚ್ಚರಿಕೆ ನೀಡಿದ ಮಹಾರಾಷ್ಟ್ರ ಏಕೀಕರಣ ಸಮಿತಿ

ಕನ್ನಡ ಧ್ವಜ ವಿವಾದವನ್ನು ಹುಟ್ಟು ಹಾಕುವ ಮೂಲಕ ನಗರದಲ್ಲಿ ಶಾಂತಿ ಕದಡಲು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ಪಾಲಿಕೆ ಆವರಣದಲ್ಲಿ ಕನ್ನಡ ಧ್ವಜ ಹಾರಿಸಿರುವುದು ಕಾನೂನು ಬಾಹಿರವಾಗಿದೆ. ಇದೆಲ್ಲ ಗೊತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ- MES

- Advertisement -
- Advertisement -

ಬೆಳಗಾವಿಯ ಮಹಾನಗರ ಪಾಲಿಕೆ ಕಛೇರಿ ಎದುರು ಹಾರಿಸಿರುವ ಕನ್ನಡ ಬಾವುಟವನ್ನು ಡಿಸಂಬರ್ 31 ರೊಳಗೆ ತೆರವುಗೊಳಿಸಬೇಕು ಎಂದು ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯು (MES) ಎಚ್ಚರಿಕೆ ನೀಡಿತ್ತು. ಈ ಬೆನ್ನಲ್ಲೇ ಮತ್ತೊಂದು ಎಚ್ಚರಿಕೆಯನ್ನೂ ನೀಡಿದ್ದು, “ಹಾರಿಸಿರುವ ಕನ್ನಡ ಧ್ವಜವನ್ನು ಕೂಡಲೇ ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಗರದ ಗಲ್ಲಿ ಗಲ್ಲಿಗಳಲ್ಲಿ ಭಗವಾಧ್ವಜಗಳು ಹಾರಾಡಲಿವೆ. ಜೊತೆಗೆ ಗಡಿ ವಿವಾದಕ್ಕೆ ಸಂಬಂಧಿಸಿದ ಘೋಷಣೆಗಳು ಮೊಳಗಲಿವೆ” ಎಂದು ಜಿಲ್ಲಾಡಳಿತಕ್ಕೆ ಸವಾಲು ಹಾಕಿದೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ಹೋರಾಟದಲ್ಲಿ ಸಾವನ್ನಪ್ಪಿದ್ದ MES ಕಾರ್ಯಕರ್ತರ ನೆನಪಿಗಾಗಿ ಜನವರಿ 17 ರಂದು ಹುತಾತ್ಮ ದಿನಾಚರಣೆ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಲು ಮರಾಠಾ ಮಂದಿರದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಇದನ್ನೂ ಓದಿ: ಕನ್ನಡ ಧ್ವಜ ವಿವಾದ; ಕನ್ನಡಿಗರಿಗೇ ಎಚ್ಚರಿಕೆ ನೀಡುವವರಿಗೆ ತಕ್ಕ ಶಾಸ್ತಿಯಾಗಬೇಕು- ಎಚ್‌.ಡಿ.ಕೆ

MES ಅಧ್ಯಕ್ಷ ದೀಪಕ ದಳವಿ ಮಾತನಾಡಿ, “ಕನ್ನಡ ಧ್ವಜ ವಿವಾದವನ್ನು ಹುಟ್ಟು ಹಾಕುವ ಮೂಲಕ ನಗರದಲ್ಲಿ ಶಾಂತಿ ಕದಡಲು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ಪಾಲಿಕೆ ಆವರಣದಲ್ಲಿ ಕನ್ನಡ ಧ್ವಜ ಹಾರಿಸಿರುವುದು ಕಾನೂನು ಬಾಹಿರವಾಗಿದೆ. ಇದೆಲ್ಲ ಗೊತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಇದರಿಂದ ಮರಾಠಾ ಜನರ ಆತಂಕ ಮತ್ತು ವೇದನೆ ಹೆಚ್ಚಾಗಿದೆ” ಎಂದು ಆರೋಪಿಸಿದರು.

ಹಲವು ವರ್ಷಗಳ ಹೋರಾಟದ ನಂತರ, ಪಾಲಿಕೆ ಕಚೇರಿ ಎದುರು ಇತ್ತೀಚೆಗೆ ಕನ್ನಡಪರ ಹೋರಾಟಗಾರರು ಕಂಬ ನೆಟ್ಟು, ಕನ್ನಡ ಬಾವುಟ ಹಾರಿಸಿದ್ದರು.

ಇದನ್ನೂ ಓದಿ: ಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? – ಸಿದ್ದರಾಮಯ್ಯ ಪ್ರಶ್ನೆ

ಈ ಹಿಂದೆಯೂ, ಅಲ್ಲಿ ಕನ್ನಡ ಬಾವುಟ ಹಾರಿಸಿದ ಬೆನ್ನಲ್ಲೇ ಪೊಲೀಸರು ಅದನ್ನು ತೆರವುಗೊಳಿಸಿದ್ದರು. ಇದೇ ರೀತಿ ಈಗಲೂ ತೆರವುಗೊಳಿಸಬಹುದೆಂಬ ಕಾರಣಕ್ಕೆ ಕನ್ನಡಪರ ಹೋರಾಟಗಾರರು ಕಂಬ ಹಾಗೂ ಬಾವುಟವನ್ನು ಕಾವಲು ಕಾಯುತ್ತಿದ್ದಾರೆ. ಕೊರೆವ ಚಳಿಯಲ್ಲೂ ರಾತ್ರಿಯಿಡೀ ಅಲ್ಲಿಯೇ ಮಲಗಿ, ಧ್ವಜಸ್ತಂಭ ತೆರವುಗೊಳಿಸಬಾರದು ಎಂದು ಒತ್ತಾಯಿಸುತ್ತಿದ್ದಾರೆ.

“ಮಹಾನಗರ ಪಾಲಿಕೆ ಕಛೇರಿ ಸೇರಿದಂತೆ, ನಗರದ ರೈಲು ನಿಲ್ದಾಣ, ಪ್ರಾದೇಶಿಕ ಆಯುಕ್ತರ ಕಛೇರಿಯ ಬಳಿ ಕಾನೂನುಬಾಹಿರವಾಗಿ ಹಳದಿ–ಕೆಂಪು ಬಣ್ಣದ ಧ್ವಜ ಹಾರಿಸಲಾಗಿದೆ. ಈ ಧ್ವಜಕ್ಕೆ ಮಾನ್ಯತೆ ಸಿಕ್ಕಿಲ್ಲ. ರಾಷ್ಟ್ರಧ್ವಜದ ಎದುರು ಈ ಧ್ವಜ ಹಾರಿಸಿ, ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರಲಾಗಿದೆ. ಬಾವುಟ ಹಾರಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು MES ಸದಸ್ಯರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.


ಇದನ್ನೂ ಓದಿ: ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ದೇವಾಲಯ ಪ್ರವೇಶಿಸಿದ ದಲಿತ ಯುವಕನಿಗೆ ಡಿಎಂಕೆ ಮುಖಂಡನಿಂದ ಬೆದರಿಕೆ; ವಿಡಿಯೊ ವೈರಲ್‌

0
ಹಿಂದೂ ಮತ್ತು ಧಾರ್ಮಿಕ ದತ್ತಿ ಇಲಾಖೆ (ಎಚ್‌ಆರ್ ಮತ್ತು ಸಿಇ) ನಿರ್ವಹಿಸುತ್ತಿರುವ ದೇವಸ್ಥಾನಕ್ಕೆ ಪ್ರವೇಶಿಸಿದ್ದಕ್ಕಾಗಿ ದಲಿತ ಯುವಕನನ್ನು ಡಿಎಂಕೆ ಒಕ್ಕೂಟದ ಕಾರ್ಯದರ್ಶಿಯೊಬ್ಬರು ನಿಂದಿಸಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಪೊಲೀಸರ ಪ್ರಕಾರ, ತಮಿಳುನಾಡಿನ ತಿರುಮಲೈಗಿರಿ (ಸೇಲಂ ಜಿಲ್ಲೆ)ಯಲ್ಲಿರುವ...