Homeಕರ್ನಾಟಕಐದು ದಿನಗಳೊಳಗಾಗಿ ಕನ್ನಡ ವಿವಿ ಸಮಸ್ಯೆ ಬಗೆಹರಿಸದಿದ್ದರೆ, ಮುಂದಿನ ಪರಿಣಾಮಗಳಿಗೆ ಸರ್ಕಾರವೆ ಹೊಣೆ: ಕರವೇ ಖಡಕ್...

ಐದು ದಿನಗಳೊಳಗಾಗಿ ಕನ್ನಡ ವಿವಿ ಸಮಸ್ಯೆ ಬಗೆಹರಿಸದಿದ್ದರೆ, ಮುಂದಿನ ಪರಿಣಾಮಗಳಿಗೆ ಸರ್ಕಾರವೆ ಹೊಣೆ: ಕರವೇ ಖಡಕ್ ಎಚ್ಚರಿಕೆ

ಡಿಸೆಂಬರ್‌ 18 ರಿಂದ ಕರವೇ #ಕನ್ನಡವಿವಿಉಳಿಸಿ ಅಭಿಯಾನ ನಡೆಸುತ್ತಿದೆ.

- Advertisement -
- Advertisement -

ಕಳೆದ ಎರಡು ವಾರದಿಂದ #ಕನ್ನಡವಿವಿಉಳಿಸಿ ಅಭಿಯಾನದ ಮೂಲಕ ಹಂಪಿ ಕನ್ನಡ ವಿಶ್ವವಿದ್ಯಾಲಯ ಉಳಿಸಿ ಚಳವಳಿಯನ್ನು ನಡೆಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಇದೀಗ ತನ್ನ ಹೋರಾಟವನ್ನು ತೀವ್ರಗೊಳಿಸುವುದಾಗಿ ತಿಳಿಸಿದೆ. ಸರ್ಕಾರ ಕನ್ನಡಿಗರ ಒಕ್ಕೊರಲ ಆಗ್ರಹಕ್ಕೆ ಕಿವುಡಾಗಿ ಕುಳಿತಿರುವುದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಸರ್ಕಾರವು ಐದು ದಿನಗಳೊಳಗೆ ಆಗ್ರಹಕ್ಕೆ ಕಿವಿಗೊಡದೇ ಇದ್ದರೆ,‌ ಕರವೇ ನಡೆಸುವ ಚಳವಳಿ‌ ಮತ್ತು ಅದರ ಪರಿಣಾಮಗಳ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಡಿಸೆಂಬರ್‌ 18 ರಂದು ಕರವೇ #ಕನ್ನಡವಿವಿಉಳಿಸಿ ಟ್ವಿಟ್ಟರ್‌ ಅಭಿಯಾನ ಪ್ರಾರಂಭಿಸಿತ್ತು. ಇದರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಿ ರಾಜ್ಯ ಸರ್ಕಾರದ ಗಮನ ಸೆಳೆದಿತ್ತು.‌ ಅದರ ನಂತರ ಕರವೇ ತನ್ನ ಅಭಿಯಾನದ ಹಕ್ಕೊತ್ತಾಯಗಳನ್ನು ಉನ್ನತ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿಯು ಆಗಿರುವ ಅಶ್ವತ್ಥ್ ನಾರಾಯಣ್ ಅವರಿಗೆ ಸಲ್ಲಿಸಿತ್ತು. ಸಚಿವರು ಇದಕ್ಕೆ ಸಕಾರಾತ್ಮಕವಾಗಿಯೆ ಪ್ರತಿಕ್ರಿಯಸಿದ್ದರು.

ಇದನ್ನೂ ಓದಿ: #ಕನ್ನಡವಿವಿಉಳಿಸಿ ಟ್ವಿಟ್ಟರ್‌‌ ಅಭಿಯಾನ; ಸಿದ್ದರಾಮಯ್ಯ ಸೇರಿದಂತೆ ಹಲವರ ಬೆಂಬಲ

ಸೋಮವಾರ ತನ್ನ ಫೇಸ್‌ಬುಕ್ ಖಾತೆಯಲ್ಲಿ ರಾಜ್ಯ ಸರ್ಕಾರದ ಧೋರಣೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಟಿ.ಎ. ನಾರಾಯಣ ಗೌಡ, “ಕನ್ನಡಿಗರ ಅಸ್ಮಿತೆಯ ಪ್ರತೀಕವಾಗಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯ ಉಳಿಸಿಕೊಳ್ಳುವ ಚಳವಳಿಯನ್ನು ತೀವ್ರಗೊಳಿಸಲಾಗುವುದು. ಸರ್ಕಾರ ಕನ್ನಡಿಗರ ಒಕ್ಕೊರಲ ಆಗ್ರಹಕ್ಕೆ ಕಿವುಡಾಗಿ ಕುಳಿತಿದೆ. ಇದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಕರ್ನಾಟಕ ರಕ್ಷಣಾ ವೇದಿಕೆ ತನ್ನದೇ ಆದ ವಿಧಾನದಲ್ಲಿ ಪ್ರತಿಭಟನೆ ನಡೆಸಲಿದೆ. ಇನ್ನು ಐದು ದಿನಗಳೊಳಗೆ ರಾಜ್ಯ ಸರ್ಕಾರ ಕನ್ನಡ ವಿಶ್ವವಿದ್ಯಾಲಯಕ್ಕೆ ಅನುದಾನ ಬಿಡುಗಡೆ ಮಾಡುವುದರ ಜತೆಗೆ ಅದರ ಪ್ರತ್ಯೇಕ ಅಸ್ತಿತ್ವವನ್ನು ಹಾಗೇ ಉಳಿಸಿಕೊಳ್ಳುವ ಘೋಷಣೆಯನ್ನು ಮಾಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಕರವೇ ಕಾರ್ಯಕರ್ತರು ಬೀದಿಗೆ ಬಂದು ಪ್ರತಿಭಟಿಸಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.

“ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪದೇ ಪದೇ ಚಳವಳಿ‌ ಮಾಡಬೇಡಿ, ಮಾತುಕತೆಗೆ ಬನ್ನಿ, ಚಳವಳಿಗಳಿಂದ ಸಾಮಾನ್ಯ ಜನರಿಗೆ ತೊಂದರೆಯಾಗುತ್ತದೆ ಎನ್ನುತ್ತಾರೆ. ಆದರೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಮೇಲೂ ಮೌನವಾಗಿದ್ದಾರೆ. ಉನ್ನತ ಶಿಕ್ಷಣ ಸಚಿವರು ನೀಡಿದ ಭರವಸೆ ಹುಸಿಯಾಗಿದೆ. ರಾಜ್ಯ ಸರ್ಕಾರ ಸಂವೇದನಾಶೀಲತೆಯನ್ನು ಕಳೆದುಕೊಂಡಿದೆ. ದಪ್ಪಚರ್ಮದ ರಾಜಕಾರಣಿಗಳು, ಅಧಿಕಾರಿಗಳು ರಾಜ್ಯದ ಜನರ ಕೂಗಿಗೆ ಬೆಲೆಕೊಡುತ್ತಿಲ್ಲ. ಹೀಗಾದಲ್ಲಿ ಸಾಮಾನ್ಯ ಜನರ ಸಿಟ್ಟು ಕಟ್ಟೆಯೊಡೆದು, ಅದರ ಪರಿಣಾಮವನ್ನು ಸರ್ಕಾರವೇ ಎದುರಿಸಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

“ಕರವೇ ನಿಯೋಗದ ಆಗ್ರಹಕ್ಕೆ ಸಚಿವ ಅಶ್ವತ್ಥ್ ನಾರಾಯಣ್ ಸಕಾರಾತ್ಮಕವಾಗಿ ಸ್ಪಂದಿಸಿ,‌ ಕೂಡಲೇ ಹಂಪಿ ಕನ್ನಡ ವಿವಿಗೆ ಅನುದಾನ‌ ಬಿಡುಗಡೆ‌ ಮಾಡುವುದಾಗಿ ಆಶ್ವಾಸನೆ ನೀಡಿದ್ದರು. ಆದರೆ ಸರ್ಕಾರ ತನ್ನ ಮಾತು ನಡೆಸಿಕೊಳ್ಳಲಿಲ್ಲ” ಎಂದು ಅವರು ಹೇಳಿದ್ದಾರೆ.

“ಅಲ್ಲದೆ ಕರವೇ ನಾಡಿನ ವಿದ್ವಜ್ಜನರ ಹೇಳಿಕೆಗಳನ್ನು ಪಡೆದು ಸಾಮಾಜಿಕ‌ ಜಾಲತಾಣಗಳಲ್ಲಿ ‘ಭಿತ್ತಿಪತ್ರ ಚಳವಳಿ’ ನಡೆಸುತ್ತಿದೆ. ಇಷ್ಟಾದರೂ ಸರ್ಕಾರ ಬೇಜವಾಬ್ದಾರಿ ಮತ್ತು ಉದಾಸೀನ‌ ಪ್ರವೃತ್ತಿಯನ್ನು ಮುಂದುವರೆಸಿದೆ. ಇಂಥ ಸಮಯದಲ್ಲಿ‌ ನಮಗೆ ತೀವ್ರ ಸ್ವರೂಪದ‌ ಚಳವಳಿ ನಡೆಸದೇ ಬೇರೆ ದಾರಿ‌ ಉಳಿದಿಲ್ಲ. ಐದು ದಿನಗಳೊಳಗೆ ಸರ್ಕಾರ ಕಿವಿಗೊಡದೇ ಇದ್ದರೆ,‌ ಕರವೇ ನಡೆಸುವ ಚಳವಳಿ‌ ಮತ್ತು ಅದರ ಪರಿಣಾಮಗಳಿಗೆ ಸರ್ಕಾರವೇ ಹೊಣೆ ಹೊರಬೇಕು” ಎಂದು ಟಿ.ಎ. ನಾರಾಯಣ ಗೌಡರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಯುವಜನೋತ್ಸವ: ಕನ್ನಡ ಬೇಡ -ಇಂಗ್ಲಿಷ್, ಹಿಂದಿಗೆ ಅವಕಾಶ ಎಂದ ಸರ್ಕಾರ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್, ಕೆ. ಕವಿತಾಗೆ ನೋ ರಿಲೀಫ್‌: ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

0
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು...