Homeರಾಜಕೀಯನೋಟಿನ ಮೇಲೆ ಲಕ್ಷ್ಮಿ-ಗಣೇಶನ ಚಿತ್ರ ಮುದ್ರಿಸಿದರೆ ರೂಪಾಯಿ ಕುಸಿತ ಸುಧಾರಿಸುತ್ತದೆ: ಅರವಿಂದ್ ಕೇಜ್ರಿವಾಲ್

ನೋಟಿನ ಮೇಲೆ ಲಕ್ಷ್ಮಿ-ಗಣೇಶನ ಚಿತ್ರ ಮುದ್ರಿಸಿದರೆ ರೂಪಾಯಿ ಕುಸಿತ ಸುಧಾರಿಸುತ್ತದೆ: ಅರವಿಂದ್ ಕೇಜ್ರಿವಾಲ್

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಹಾತ್ಮಾ ಗಾಂಧಿಯವರ ಭಾವಚಿತ್ರದೊಂದಿಗೆ ಗಣೇಶ ಮತ್ತು ಲಕ್ಷ್ಮಿ ದೇವಿಯ ಫೋಟೋಗಳನ್ನು ನೋಟುಗಳಲ್ಲಿ ಮುದ್ರಿಸುವಂತೆ ಒಕ್ಕೂಟ ಸರ್ಕಾರಕ್ಕೆ ಬುಧವಾರ ಮನವಿ ಮಾಡಿದರು. ನೋಟಿಗಳ ಮೇಲೆ ದೇವರುಗಳ ಫೋಟೋಗಳನ್ನು ಮುದ್ರಿಸುವುದರಿಂದ ದೇಶದ ಜನರು ಆರ್ಥಿಕತೆಯನ್ನು ಸುಧಾರಿಸುವ ಪ್ರಯತ್ನದಲ್ಲಿ ಆಶೀರ್ವದ ಪಡೆಯುತ್ತಾರೆ ಎಂದು ಅವರು ಹೇಳಿದರು.

“ಲಕ್ಷ್ಮಿ ಸಮೃದ್ಧಿಯ ದೇವತೆ ಮತ್ತು ಗಣೇಶನು ತೊಂದರೆಗಳನ್ನು ದೂರವಿಡುವ ದೇವರಾಗಿದ್ದು, ಈ ದೇವರುಗಳ ಚಿತ್ರ ನೋಟುಗಳ ಮೇಲೆ ಇದ್ದರೆ, ಇಡೀ ದೇಶವು ಅವರ ಆಶೀರ್ವಾದವನ್ನು ಪಡೆಯುತ್ತದೆ” ಎಂದು ಕೇಜ್ರಿವಾಲ್ ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೂಪಾಯಿ ಮೌಲ್ಯ ನಿರಂತರವಾಗಿ ಕುಸಿಯುತ್ತಿರುವುದರಿಂದ ಭಾರತದ ಆರ್ಥಿಕತೆಯು ಬಿಕ್ಕಟ್ಟಿನಲ್ಲಿದೆ ಎಂದು ತಮ್ಮ ಭಾಷಣವನ್ನು ಪ್ರಾರಂಭಿಸಿದ ಅವರು,“ಆರ್ಥಿಕತೆ ಸುಧಾರಿಸುವುದನ್ನು ಖಚಿತಪಡಿಸಿಕೊಳ್ಳಲು ಹಲವಾರು ಹಂತಗಳಿವೆ. ಇದರಲ್ಲಿ ಹೆಚ್ಚಿನ ಶಾಲೆಗಳು ಮತ್ತು ಆಸ್ಪತ್ರೆಗಳನ್ನು ನಿರ್ಮಿಸುವುದು ಮತ್ತು ದೇಶದಲ್ಲಿ ಮೂಲಸೌಕರ್ಯವನ್ನು ಸುಧಾರಿಸುವುದು ಸೇರಿವೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಲೆಫ್ಟಿನೆಂಟ್ ಗವರ್ನರ್‌‌‌ ಸಾಹೇಬ್‌‌ ನಿಮ್ಮ ‘ಸೂಪರ್‌ ಬಾಸ್‌’‌ಗೆ ಸ್ವಲ್ಪ ಚಿಲ್ ಮಾಡಲು ಹೇಳಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಆದರೆ, ನಾವು ಎಷ್ಟೇ ಪ್ರಯತ್ನ ಪಟ್ಟರೂ ಕೆಲವೊಮ್ಮೆ ಉತ್ತಮ ಫಲಿತಾಂಶ ದೊರೆಯುವುದಿಲ್ಲ, ಅದಕ್ಕಾಗಿ ನಮಗೆ ದೇವರ ಆಶೀರ್ವಾದ ಬೇಕು. ಉದ್ಯಮಿಗಳು ತಮ್ಮ ಕೆಲಸದ ಸ್ಥಳದಲ್ಲಿ ಗಣೇಶ ಮತ್ತು ಲಕ್ಷ್ಮಿ ವಿಗ್ರಹಗಳನ್ನು ಇಟ್ಟುಕೊಂಡು, ದಿನದ ಕೆಲಸವನ್ನು ಪ್ರಾರಂಭಿಸುವ ಮೊದಲು ಪ್ರತಿದಿನ ಪೂಜೆ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಹೇಳಿದರು.

ಅದೇ ರೀತಿ ಕರೆನ್ಸಿ ನೋಟುಗಳಲ್ಲಿ ದೇವರ ಫೋಟೋ ಹಾಕಿದರೆ ದೇಶದ ಆರ್ಥಿಕತೆ ಸುಧಾರಣೆಗೆ ಕೈಗೊಂಡಿರುವ ಪ್ರಯತ್ನ ಫಲ ನೀಡುವುದು ಖಚಿತ.

ಪ್ರತಿ ತಿಂಗಳು ಮುದ್ರಿಸುವ ತಾಜಾ ಕರೆನ್ಸಿಗಳಿಗೆ ವಿಗ್ರಹಗಳ ಫೋಟೋಗಳನ್ನು ಸೇರಿಸಬಹುದು ಮತ್ತು ಪ್ರಸ್ತುತ ಇರುವ ಕರೆನ್ಸಿ ನೋಟುಗಳ ವಾಪಾಸಾತಿ ಅಗತ್ಯವಿಲ್ಲ ಎಂದು ಅವರು ಹೇಳಿದರು. ಇದು ಕ್ರಮೇಣ ಜನರ ನಡುವೆ ಹರಡುತ್ತದೆ ಎಂದರು.

ಇದನ್ನೂ ಓದಿ: ‘ಆಫರೇಷನ್‌ ಕಮಲ ವಿಫಲ’: ದೆಹಲಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಿರುವ ಸಿಎಂ ಕೇಜ್ರಿವಾಲ್‌

ಇಂಡೋನೇಷ್ಯಾದ ಉದಾಹರಣೆಯನ್ನು ತೆಗೆದುಕೊಂಡ ಕೇಜ್ರಿವಾಲ್, ಇಡೀ ಜನಸಂಖ್ಯೆಯ ಶೇಕಡಾ 2 ಕ್ಕಿಂತ ಕಡಿಮೆ ಹಿಂದೂ ಜನಸಂಖ್ಯೆಯನ್ನು ಹೊಂದಿದ್ದರೂ, ಅವರ ಕರೆನ್ಸಿ ನೋಟುಗಳಲ್ಲಿ ಗಣೇಶನನ್ನು ಮುದ್ರಿಸಲಾಗುತ್ತದೆ ಎಂದು ಹೇಳಿದರು. “ಇದು ಒಕ್ಕೂಟ ಸರ್ಕಾರ ತೆಗೆದುಕೊಳ್ಳಬೇಕಾದ ಮಹತ್ತರವಾದ ಹೆಜ್ಜೆ ಎಂದು ನಾನು ಭಾವಿಸುತ್ತೇನೆ” ಎಂದು ಕೇಜ್ರಿವಾಲ್ ಹೇಳಿದರು.

ವಾಸ್ತವದಲ್ಲಿ ಭಾರತದ ಒಂದು ರುಪಾಯಿ ಅಂದರೆ ಇಂಡೋನೇಷ್ಯಾದಲ್ಲಿ 189.54 ಇಂಡೋನೇಷಿಯನ್ ರೂಪಿಯಾ ಆಗಿದೆ.

ಇದನ್ನೂ ಓದಿ: AAP ರಾಷ್ಟ್ರೀಯ ಪಕ್ಷವಾಗಲು ಇನ್ನೊಂದು ಹೆಜ್ಜೆ ಬಾಕಿ: ಅರವಿಂದ್ ಕೇಜ್ರಿವಾಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...