Homeಕರ್ನಾಟಕ2024ರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬಂದರೆ ದೇಶಕ್ಕೆ ಆಪತ್ತು: ನಿರ್ಮಲಾ ಸೀತಾರಾಮನ್ ಪತಿ ಡಾ. ಪರಕಾಲ...

2024ರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬಂದರೆ ದೇಶಕ್ಕೆ ಆಪತ್ತು: ನಿರ್ಮಲಾ ಸೀತಾರಾಮನ್ ಪತಿ ಡಾ. ಪರಕಾಲ ಪ್ರಭಾಕರ್ ಹೇಳಿಕೆ

- Advertisement -
- Advertisement -

ನರೇಂದ್ರ ಮೋದಿ ಅವರು ಆರ್ಥಿಕತೆಯನ್ನು ದಿಗ್ಭ್ರಮೆಗೊಳಿಸುವಷ್ಟು ಅಸಮರ್ಥರು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿಯೂ ಆಗಿರುವ ಅರ್ಥಶಾಸ್ತ್ರಜ್ಞ ಮತ್ತು ಸಾಮಾಜಿಕ ವಿಮರ್ಶಕ ಡಾ. ಪರಕಾಲ ಪ್ರಭಾಕರ್ ಎಂದು ಹೇಳಿದ್ದಾರೆ.

ಪ್ರಭಾಕರ್ ಅವರ ಹೊಸ ಪುಸ್ತಕ ‘ದಿ ಕ್ರೂಕ್ಡ್ ಟಿಂಬರ್ ಆಫ್ ನ್ಯೂ ಇಂಡಿಯಾ: ಎಸ್ಸೇಸ್ ಆನ್ ಎ ರಿಪಬ್ಲಿಕ್ ಇನ್ ಕ್ರೈಸಿಸ್’ಅನ್ನು (ಸ್ಪೀಕಿಂಗ್ ಟೈಗರ್ ಪ್ರಕಟಿಸಿದ) ಬೆಂಗಳೂರಿನಲ್ಲಿ ಭಾನುವಾರ ಔಪಚಾರಿಕವಾಗಿ ಬಿಡುಗಡೆ ಮಾಡಲಾಗಿದ್ದು, ಮೋದಿ ಸರ್ಕಾರದ ಸಮಸ್ಯೆಗಳು, ಆರ್ಥಿಕತೆ, ರಾಜಕೀಯ ಮತ್ತು ಇತರ ವಿಷಯಗಳ ಕುರಿತು ಪ್ರಬಂಧಗಳ ಸರಣಿಯನ್ನು ಒಳಗೊಂಡಿದೆ.

ಪ್ರಧಾನಿ ಮೋದಿ ಆಡಳಿತವು ಅರ್ಥಿಕತೆ ಮತ್ತು ಇತರ ಹಲವು ವಿಷಯಗಳ ನಿರ್ವಹಣೆಯಲ್ಲಿ ಅಸಮರ್ಥವಾಗಿದ್ದರೂ, ಜನರಲ್ಲಿ ಸುಪ್ತವಾಗಿರುವ ವಿಭಾ ಭಾವನೆಗಳನ್ನು ಹೊರ ತರಲು ಇದು ಅತ್ಯಂತ ಸಮರ್ಥವಾಗಿದೆ ಎಂದು ಡಾ, ಪರಕಾಲ ಅವರು, ಕರಣ್ ಥಾಪರ್ ಅವರೊಂದಿಗಿನ ಸಂದರ್ಶನದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಲಂಡನ್ ಸ್ಕೂಲ್ ಆಫ್ ಎಕನಾಮಿಕ್ ನಿಂದ ಪಿಎಚ್‌.ಡಿ ಪಡೆದಿರುವ ಡಾ.ಪ್ರಭಾಕರ್ ಅವರು ಹಣಕಾಸು ಸಚಿವೆ ನಿರ್ಮಲಾ ತಾರಾಮನ್ ಅವರ ಪತಿ.

”2014ರ ಚುನಾವಣೆಯಲ್ಲಿ ಗೆಲ್ಲಲು ಬಳಸಿದ ಅಭಿವೃದ್ಧಿಯ ಹಲಗೆಯ ಮೇಲೆ ಗೆದ್ದ ಬಿಜೆಪಿಯು ಹಿಂದುತ್ವವನ್ನು ಕುತಂತ್ರದಿಂದ ಹಳ್ಳ ಸಾಗಣೆ ಮಾಡಿದೆ ಎಂದು ಅವರು ಹೇಳಿದ್ದಾರೆ. 2024 ರಲ್ಲಿ ಮತ್ತೊಂದು ಬಾರಿ ಮೋದಿ ಸರ್ಕಾರ ಬಂದರೆ ಅದು ಆರ್ಥಿಕತೆಗೆ ಮಾತ್ರವಲ್ಲದೆ, ಒಟ್ಟಾರೆ ಇಡೀ ರಾಷ್ಟ್ರಕ್ಕೆ ಆಪತ್ತು ತರಲಿದೆ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ ಎಂದು ವರದಿಯಾಗಿದೆ

”ಹಿಂದುತ್ವದಿಂದ ಸೇರಿ ಸರಾಗ ಜನರನ್ನು ಒಟ್ಟುಗೂಡಿಸುವ ಮತ್ತು ಅವರ ಕೇಳು ಪ್ರವೃತ್ತಿಯನ್ನು ಉದ್ದೀಪಿಸುವ ಪ್ರಭಾವಿ ಮೋದಿ ಮತ್ತು ಬಿಜೆಪಿಯ ಸಾಮರ್ಥ್ಯದಿಂದಾಗಿ ಅವರು ಜನಪ್ರಿಯತೆ ಹೊಂದಿದ್ದಾರೆ” ಎಂದು ಡಾ. ಪ್ರಭಾಕರ್ ವಾದಿಸಿದ್ದಾರೆ.

”ಆದರೆ 2011 ರ ಚುನಾವಣೆಯ ಪೂರ್ವದಲ್ಲಿ ನಡೆದ ಹೋರಾಟವು ಹಿಂದೂ ಮತ್ತು ಮುಸ್ಲಿಮರ ನಡುವೆ ಆಗಿರಲಿಲ್ಲ ಎಂದು ಒತ್ತಿ ಹೇಳಿದ ಅವರು, ಆ ಹೋರಾಟವು, ಬಡತನ ಮತ್ತು ನಿರುದ್ಯೋಗದ ವಿರುದ್ಧ ಹಿಂದೂಗಳು ಮತ್ತು ಮುಸ್ಲಿಮರು ಒಟ್ಟಾಗಿ ನಡೆಸಿದ ಹೋರಾಟವಾಗಿತ್ತು” ಎಂದಿದ್ದಾರೆ.

ಇದನ್ನೂ ಓದಿ: ಮೋದಿ ಮೇಲಿನ ಅವಲಂಬನೆ ಕಡಿಮೆ ಮಾಡಬೇಕು; ಬಿಜೆಪಿ ವಕ್ತಾರ

”2014ರಲ್ಲಿ ನರೇಂದ್ರ ಮೋದಿ ಮತ್ತು ಬಿಜೆಪಿಯವರು, ಉತ್ತಮ ಆಡಳಿತ ಸ್ವಚ್ಛ ಮತ್ತು ಭ್ರಷ್ಟಾಚಾರ ಮುಕ್ತ ಸರ್ಕಾರ ಮತ್ತು ‘ಅಭಿವೃದ್ಧಿ’ ಭರವಸೆ ನೀಡಿ ಮತ ಕೇಳಿದ್ದರು” ಎಂದು ಡಾ. ಪರಕಾಲ ಪ್ರಭಾಕರ್ ನೆನಪಿಸಿಕೊಂಡರು.

ಹಿಂದೂ ರಾಷ್ಟ್ರ ಮತ್ತು ಹಿಂದುತ್ವದ ನಿಜವಾದ ಉದ್ದೇಶವನ್ನು ಮುಂದಿಟ್ಟು ನರೇಂದ್ರ ಮೋದಿ ಅವರು ಮೊದಲ ಬಾರಿಗೆ ದೇಶದ ಜನರ ವಿಶ್ವಾಸವನ್ನು ಗೆದ್ದಿರಲಿಲ್ಲ ಎಂದ ಅವರು, ಅಭಿವೃದ್ಧಿಯ ಹಸರಿನಲ್ಲಿ ಹಿಂದುತ್ವವನ್ನು ಕಳ್ಳಸಾಗಣೆ ಮಾಡಲಾಗಿದೆ. ಟ್ರೋಜನ್ ಕುದುರೆಯಂತೆ ಅಭಿವೃದ್ಧಿ ಯನ್ನು ಬಳಸಲಾಗಿದೆ” ಎಂದು ಅವರು ಹೇಳಿದ್ದಾರೆ.

”ನಾಯಕತ್ವದ ಗುರಿಯು ಬಿರುಕುಗಳನ್ನು ತೆಗೆದುಹಾಕುವುದು ಮತ್ತು ಸಾಮರಸ್ಯವನ್ನು ಉತ್ತೇರಿಸುವುದು, ಅದನ್ನು ಬಿಟ್ಟು, ಕೋಮು ಭಾವನೆಗಳಿಗೆ ದಕ್ಕೆ ತರುವುದು ನಾಯಕರ ಕೆಲಸವಲ್ಲ” ಎಂದು ಡಾ. ಪ್ರಭಾಕರ್ ಹೇಳಿದರು.

”ಬಿಜೆಪಿ ಮತ್ತು ಮೋದಿ ಅವರು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಬಯಸಿದರೆ ಅದನ್ನು ಅವರು 2014 ರ ಚುನಾವಣೆಯಲ್ಲಿ ಸ್ಪರ್ಧಿಸುವಾಗಲೇ ಹೇಳಬೇಕಿತ್ತು” ಎಂದು ಪ್ರಭಾಕರ್ ಹೇಳಿದ್ದಾರೆ

ವಿಭಜನೆಯ ಸಮಯದಲ್ಲಿ ಭಾರತದಲ್ಲಿ ಹಿಂದೂ ಬಹುಸಂಖ್ಯಾತವಾದವು ಸ್ವೀಕಾರಾರ್ಹತೆಯನ್ನು ಕಂಡಿರಲಿಲ್ಲ ಎಂದು ಗಮನಸೆಳೆದ ಅವರು, ವಿಭಜನೆಯ ನಂತರ ಹಿಂದುತ್ನ ರಾಷ್ಟ್ರೀಯವಾದಿ ರಾಜಕಾರಣಕ್ಕೆ ಭಾರತದಲ್ಲಿ ಹೆಚ್ಚಿನ ಸಾಧ್ಯತೆ ಇತ್ತು. ದೇಶ ವಿಭಜನೆ ವೇಳೆ ಎರಡೂ ಸಮುದಾಯಗಳ ಲಕ್ಷಾಂತರ ಜನರು ಸಾಮೂಹಿಕವಾಗಿ ವಲಸೆ ಹೋಗುತ್ತಿದ್ದರು. ಎರೆಡೂ ದೇಶಕ್ಕೂ ಸಾವಿರಾರು ಮೃತದೇಹಗಳು ಬರುತ್ತಿದ್ದವು. ಆ ಸಮಯದಲ್ಲಿ ಅಭದ್ರತೆ ಮತ್ತು ಭಯ ಹೆಚ್ಚಿತ್ತು, ಆಗ ಹಿಂದುತ್ವ ರಾಜಕಾರಣ ಬೆಳೆಯಲು ಅನುಕೂಲ ಸನ್ನಿವೇಶ ಇದ್ದರೂ ಆಗ ಬಹುಸಂಖ್ಯಾತವಾದಕ್ಕೆ ಭಾರತದಲ್ಲಿ ಮಾನ್ಯತೆ ಸಿಗಲಿಲ್ಲ” ಎನ್ನುವುದನ್ನು ಅವರು ಗಮನ ಸೆಳೆದರು.

”ಏಳು ದಶಕಗಳ ನಂತರ ಹಿಂದು ರಾಜಕಾರಣಕ್ಕೆ ಸ್ವೀಕಾರ ಸಿಗುತ್ತಿದೆ, ಬಹುಶಃ ವಿಭಜನೆಯ ಬಗ್ಗೆ ಯಾವುದೇ ಕಹಿ ನೆನಪಿಲ್ಲದ ಮತ್ತು ಅದರಿಂದ ಬಳಲದಿರುವ ಭಾರತೀಯರ ತಲೆಮಾರಿನಲ್ಲಿ ಅದಕ್ಕೆ ಮಾನ್ಯತೆ ಸಿಗುತ್ತಿದೆ” ಎಂದು ಪ್ರಭಾಸ‌ ಗಮನಿಸಿದರು.

”ಅರ್ಥಶಾಸ್ತ್ರದಲ್ಲಿ ಕೆಲವು ಮೂಲಭೂತ ತರಬೇತಿ ಹೊಂದಿರುವ ಯಾವುದೇ ಅರ್ಥಶಾಸ್ತ್ರಜ್ಞರು, ಇಷ್ಟು ದೊಡ್ಡ ಪ್ರಮಾಣದಲ್ಲಿ ನೋಟು ಅಮಾನೀಕರಣವನ್ನು ಶಿಫಾರಸು ಮಾಡುತ್ತಿರಲಿಲ್ಲ” ಎಂದು ಪ್ರಭಾಕರ್ ಹೇಳಿದ್ದಾರೆ. ”ನೋಟು ರದ್ದತಿಯನ್ನು ಒಂದು ದೊಡ್ಡ ಪ್ರಮಾದ ಎಂದು ಕರೆದ ಅವರು, ಈ ನಡೆಯು ಪ್ರಮಾದಗಳನ್ನು ಹೆಚ್ಚಿಸಿತು ಮತ್ತು ಬಿಕ್ಕಟ್ಟನ್ನು ಉಲ್ಬಣಗೊಳಿಸಿತು” ಎಂದು ಡಾ. ಪ್ರಭಾಕರ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...