Homeಕರ್ನಾಟಕನನ್ನ ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಹೊಳೆನರಸೀಪುರ ಟಿಕೆಟ್‌ ಬೇಡ: ಹೊಸ ದಾಳ ಉರುಳಿಸಿದ ರೇವಣ್ಣ

ನನ್ನ ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಹೊಳೆನರಸೀಪುರ ಟಿಕೆಟ್‌ ಬೇಡ: ಹೊಸ ದಾಳ ಉರುಳಿಸಿದ ರೇವಣ್ಣ

- Advertisement -
- Advertisement -

”ನನ್ನ ಪತ್ನಿ ಭವಾನಿಗೆ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ನೀಡದಿದ್ದರೆ, ಹೊಳೆನರಸೀಪುರದಿಂದ ನನಗೂ ಟಿಕೆಟ್‌ ಬೇಡ” ಎಂದು ಶಾಸಕ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಏ. 7ರ ರಾತ್ರಿ, ತಮ್ಮ ಆಪ್ತರೊಡನೆ ಎಚ್.ಡಿ. ರೇವಣ್ಣನವರು ಸಮಾಲೋಚನೆ ಮಾಡುವ ವೇಳೆ, ಹಾಸನ ಟಿಕೆಟ್ ಗೊಂದಲ ಕಗ್ಗಂಟಾಗಿರುವ ಬಗ್ಗೆ ತೀವ್ರ ಬೇಸರ ಪಟ್ಟುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಾಸನದಲ್ಲಿ ಭವಾನಿಯವರಿಗೆ ಟಿಕೆಟ್ ಕೊಡಬೇಕು ಎಂದು ನಾನು ಪಟ್ಟು ಹಿಡಿದು ಕೇಳುವಂಥ ಪರಿಸ್ಥಿತಿ ಬಂದೊಂದಗಿದೆ. ಒಂದು ವೇಳೆ, ಹಾಸನದಲ್ಲಿ ಭವಾನಿಯವರಿಗೆ ಟಿಕೆಟ್ ನೀಡದೇ ಹೋದರೆ, ನನಗೂ ಟಿಕೆಟ್ ಬೇಡ. ನಾನೂ ಸಹ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

”ಹಾಸನ ಕ್ಷೇತ್ರದಲ್ಲಿ ಬಿಜೆಪಿಯನ್ನು ಎದುರಿಸಲು ಪ್ರಬಲ ಅಭ್ಯರ್ಥಿ ಅಗತ್ಯ. ಸಾಮಾನ್ಯ ಕಾರ್ಯಕರ್ತರನ್ನು ಕಣಕ್ಕಿಳಿ ಸಿದರೆ ಗೆಲುವು ಸಾಧ್ಯವಿಲ್ಲ. ಮತ್ತೆ ಕ್ಷೇತ್ರ ಕೈತಪ್ಪಿದರೆ, ಕಾರ್ಯಕರ್ತರು ಅನಾಥಪ್ರಜ್ಞೆ ಅನುಭವಿಸಬೇಕಾಗುತ್ತದೆ. ಈ ಬಾರಿ ಏನಾದರೂ ಆಗಲಿ, ಪಕ್ಷ ಗೆಲ್ಲಬೇಕು” ಎಂದು ಮುಖಂಡರು ಪ್ರತಿಪಾದಿಸಿದ್ದಾರೆ.

”ಕ್ಷೇತ್ರವನ್ನು ಉಳಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಹೊಳೆನರಸೀಪುರದಲ್ಲಿ ಗೆದ್ದು ಏನು ಮಾಡುವುದು? ನನಗೂ ಅಲ್ಲಿನ ಟಿಕೆಟ್ ಬೇಡ. ಈ ಬಗ್ಗೆ ದೇವೇಗೌಡರಿಗೆ ಸಂದೇಶ ರವಾನಿಸುವೆ”  ಎಂದು ಮುಖಂಡರಿಗೆ ರೇವಣ್ಣ ತಿಳಿಸಿದ್ದಾರೆ.

”ಹಿರಿಯ ಸಹೋದರ ಬಾಲಕೃಷ್ಣೇ ಗೌಡ ಸೇರಿದಂತೆ ದೇವೇಗೌಡರ ಆಪ್ತರ ಮೂಲಕ ಈ ಸಂದೇಶವನ್ನು ದೇವೇಗೌಡರಿಗೆ ರವಾನಿಸಿದ್ದಾರೆ” ಎಂದು ಹೇಳಲಾಗುತ್ತಿದೆ.

ಈ ಕುರಿತು ದೇವೇಗೌಡರೂ ರೇವಣ್ಣ ಜೊತೆಗೆ ಚರ್ಚಿಸಿದ್ದು, ಗೊಂದಲಕ್ಕೆ ಅವಕಾಶ ವಿಲ್ಲದಂತೆ ಚರ್ಚಿಸಿ ತೀರ್ಮಾನಿಸಲಾಗುವುದು. ಆತುರದ ನಿರ್ಧಾರ ಕೈಗೊಳ್ಳ ಬಾರದೆಂದು ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ‘ನಾನು ಚುನಾವಣೆಗೆ ಸ್ಪರ್ಧಿಸಲ್ಲ’: ವದಂತಿಗಳಿಗೆ ಅನಿತಾ ಕುಮಾರಸ್ವಾಮಿ ಸ್ಪಷ್ಟನೆ

ಭವಾನಿ ಅವರು ಪಟ್ಟು ಸಡಿಲಿಸುತ್ತಿಲ್ಲ. ಪುತ್ರರು ಕೂಡ ತಾಯಿಯನ್ನು ಹಾಸನದಿಂದ ಕಣಕ್ಕಿಳಿಸಲೇಬೇಕೆಂದು ಹಟ ತೊಟ್ಟಿದ್ದಾರೆ. ಇದೇ ಹಿನ್ನೆಲೆಯಲ್ಲಿ ಕೊನೆಯ ಅಸ್ತ್ರವಾಗಿ ”ನನಗೆ ಹೊಳೆನರಸೀಪುರ ಟಿಕೆಟ್‌ ಬೇಡ” ಎಂಬ ದಾಳವನ್ನು ರೇವಣ್ಣ ಉರುಳಿಸಿದ್ದಾರೆ ಎನ್ನಲಾಗುತ್ತಿದೆ.

ಯಶವಂತಪುರದಲ್ಲಿ ಶನಿವಾರ ನಡೆದ ಪಂಚರತ್ನ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ”ಯಾರು ಏನೇ ಹೇಳಿದರೂ ಹಾಸನದಲ್ಲಿ ಕಾರ್ಯಕರ್ತರ ಆಶಯದಂತೆ ಜೆಡಿಎಸ್ ಯುವ ನಾಯಕ ಸ್ವರೂಪ್ ಪ್ರಕಾಶ್ ಅವರಿಗೇ ಟಿಕೆಟ್ ನೀಡಲಾಗುತ್ತದೆ” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

”ಪಂಚರತ್ನ ಕಾರ್ಯಕ್ರಮದಲ್ಲಿ ತಮ್ಮನ್ನು ಭೇಟಿ ಮಾಡಿದ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಸ್ವರೂಪ್ ಅವರಿಗೇ ಮನವಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ಮನವಿಯನ್ನು ಸ್ವೀಕರಿಸಿದ ಕುಮಾರಸ್ವಾಮಿ, ನೀವು ಹೇಳಿದವರಿಗೇ ಟಿಕೆಟ್ ನೀಡಲಾಗುತ್ತದೆ” ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ”ಬ್ಲಾಕ್ ಮೇಲ್ ಮಾಡುವುದು ದೇವೇಗೌಡರ ಹತ್ತಿರ ನಡೆಯಬಹುದು. ಆದರೆ, ನನ್ನ ಹತ್ರ ನಡೆಯಲ್ಲ. ಹಾಸನ ಟಿಕೆಟ್ ವಿಚಾರದಲ್ಲಿ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ” ಎಂದಿದ್ದಾರೆ.

ಸಂಧಾನ ಸಭೆಯಲ್ಲೂ ಷರತ್ತು ಹಾಕಿದ್ದ ರೇವಣ್ಣ

ಈ ಹಿಂದೆ ಹಾಸನ ಟಿಕೆಟ್ ವಿಚಾರವಾಗಿ, ದೇವೇಗೌಡರ ಮನೆಯಲ್ಲೇ ರೇವಣ್ಣ ಹಾಗೂ ಕುಮಾರಸ್ವಾಮಿ ನಡುವೆ ಸಂಧಾನ ಸಭೆ ನಡೆಸಲಾಗಿತ್ತು. ಆ ಸಮಯದಲ್ಲಿ, ರೇವಣ್ಣನವರು ಭವಾನಿಯವರಿಗೇ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದರು. ಅತ್ತ, ಕುಮಾರಸ್ವಾಮಿಯವರು ಸ್ವರೂಪ್ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ದೇವೇಗೌಡರು ನಡೆಸಿದ ಸಂಧಾನ ಸಭೆ ವಿಫಲಾವಾಗಿತ್ತು.

ಇದೀಗ ಹೊಸ ಅಸ್ತ್ರ ಪ್ರಯೋಗಿಸಿರುವ ರೇವಣ್ಣ, ”ನನ್ನ ಪತ್ನಿ ಭವಾನಿಗೆ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ನೀಡದಿದ್ದರೆ, ಹೊಳೆನರಸೀಪುರದಿಂದ ನನಗೂ ಟಿಕೆಟ್‌ ಬೇಡ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...