Homeಮುಖಪುಟಯುಸಿಸಿ ಜಾರಿ ಮುನ್ನ ಮರುಚಿಂತಿಸದಿದ್ರೆ ಪ್ರತಿರೋಧ ಎದುರಿಸಬೇಕಾಗುತ್ತದೆ: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

ಯುಸಿಸಿ ಜಾರಿ ಮುನ್ನ ಮರುಚಿಂತಿಸದಿದ್ರೆ ಪ್ರತಿರೋಧ ಎದುರಿಸಬೇಕಾಗುತ್ತದೆ: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸುವ ಮೊದಲು ಕೇಂದ್ರ ಸರ್ಕಾರವು ಭಾರತವು ಧಾರ್ಮಿಕ ವೈವಿಧ್ಯತೆಯಿಂದ ಕೂಡಿದೆ ಎನ್ನುವುದು ನೆನಪಿರಲಿ. ಜಾರಿಗೊಳಿಸಿದರೆ ಎದುರಾಗುವ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸುವ ಬಗ್ಗೆ ಒಲವು ತೋರಿದ ಬೆನ್ನಲ್ಲೇ ಫಾರೂಕ್ ಅಬ್ದುಲ್ಲಾ ಪ್ರತಿಕ್ರಿಯಿಸಿ, ”ಮೋದಿ ಅವರು ಅದರ ಬಗ್ಗೆ ಮರುಚಿಂತನೆ ಮಾಡಬೇಕು. ಇದು ವೈವಿಧ್ಯಮಯ ರಾಷ್ಟ್ರವಾಗಿದೆ. ಇಲ್ಲಿ ವಿವಿಧ ಜನಾಂಗಗಳು ಮತ್ತು ಧರ್ಮಗಳ ಜನರು ಇಲ್ಲಿ ವಾಸಿಸುತ್ತಿದ್ದಾರೆ ಮತ್ತು ಮುಸ್ಲಿಮರು ತಮ್ಮದೇ ಆದ ಷರಿಯಾ ಕಾನೂನನ್ನು ಹೊಂದಿದ್ದಾರೆ” ಎಂದು  ಹೇಳಿದರು.

”ಏಕರೂಪ ನಾಗರಿಕ ಸಂಹಿತೆಯನ್ನು ಅನುಷ್ಠಾನಗೊಳಿಸುವುದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಸರ್ಕಾರ ಯೋಚಿಸಬೇಕು ಮತ್ತು ಮರುಚಿಂತನೆ ಮಾಡಬೇಕು. ಅವರು ಈ ಎಲ್ಲವನ್ನು ಪರಿಗಣನೆಯಲ್ಲಿ ಇಟ್ಟುಕೊಳ್ಳಬೇಕು ಮತ್ತು ಅದನ್ನು ಜಾರಿ ಮಾಡುವ ಬದಲು, ಪರಿಣಾಮಗಳ ಬಗ್ಗೆ ಯೋಚಿಸಬೇಕು. ಅವರು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಿದರೆ ಎದುರಾಗವು ಸಕಂಷ್ಟಗಳ ಬಗ್ಗೆ ಯೋಚಿಸಬೇಕು” ಎಂದರು.

ಇದನ್ನೂ ಓದಿ: ಮಣಿಪುರ ಹಿಂಸಾಚಾರದ ಗಮನ ಬೇರೆಡೆ ಸೆಳೆಯಲು ಏಕರೂಪ ನಾಗರಿಕ ಸಂಹಿತೆ ಹೇಳಿಕೆ ನೀಡಿದ ಮೋದಿ: ಪ್ರತಿಪಕ್ಷಗಳ ಟೀಕೆ

ವಿರೋಧ ಪಕ್ಷದ ನಾಯಕರಿಂದ ಟೀಕೆ

ಮೋದಿ ಹೇಳಿಕೆ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಅವರು ”ನಿಜವಾದ ಪ್ರಶ್ನೆಗಳಿಗೆ” ಮೋದಿ ಉತ್ತರಿಸಬೇಕು ಎಂದು ಹೇಳಿದರು.

”ಕಳೆದ 60 ದಿನಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದೆ. ಈ ಬಗ್ಗೆ ಪ್ರಧಾನಿ ಏಕೆ ಒಂದೇ ಒಂದು ಮಾತನ್ನೂ ಆಡಿಲ್ಲ? ಇವೆಲ್ಲವೂ ದಿಕ್ಕು ತಪ್ಪಿಸುವ ಸಮಸ್ಯೆಗಳು. ಅವರು ದೇಶದ ನಿಜವಾದ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು ಬಯಸುತ್ತಾರೆ, ಅದಕ್ಕಾಗಿಯೇ ಅವರು ಸಮಸ್ಯೆಗಳನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ” ಎಂದರು.

”ಏಕರೂಪ ನಾಗರಿಕ ಸಂಹಿತೆಯಂತಹ ಕಾನೂನು ಜಾರಿಗೆ ಬಂದರೆ ಬುಡಕಟ್ಟು ಜನಾಂಗದವರ ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೆ ಹೊಡೆತ ಬೀಳುತ್ತದೆ” ಎಂದು ಕಾಂಗ್ರೆಸ್ ನಾಯಕ ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.

”ನೀವು [ಬಿಜೆಪಿ] ಯಾವಾಗಲೂ ಹಿಂದೂ-ಮುಸ್ಲಿಂ ದೃಷ್ಟಿಕೋನದಿಂದ ಏಕೆ ಯೋಚಿಸುತ್ತೀರಿ?” ಎಂದು ಬಾಘೆಲ್ ಕೇಳಿದ್ದಾರೆ. ”ಛತ್ತೀಸ್‌ಗಢದಲ್ಲಿ ನಮ್ಮಲ್ಲಿ ಬುಡಕಟ್ಟು ಜನರಿದ್ದಾರೆ. ಅವರು ನಂಬಿಕೆಗಳು ಮತ್ತು ಸಾಂಪ್ರದಾಯಿಕ ನಿಯಮಗಳಿಗೆ ತೊಂದರೆಯಾಗುವುದಿಲ್ಲವೇ? ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದರೆ ಅವರ ಸಂಪ್ರದಾಯಕ್ಕೆ ಏನಾಗುಬಹುದು?” ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ ಸಂಸದ ಮನೋಜ್ ಝಾ ಅವರು, ”ಮಾತನಾಡುವ ಮೊದಲು, ಪ್ರಧಾನ ಮಂತ್ರಿಯವರು 21 ನೇ ಕಾನೂನು ಆಯೋಗವು ಏನು ಹೇಳಿದೆ ಎಂಬುದನ್ನು ಪರಿಶೀಲಿಸಬೇಕು ಮತ್ತುಸಂವಿಧಾನ ಸಭೆಯ ಚರ್ಚೆಗಳನ್ನು ಆಳವಾಗಿ ವಿಶ್ಲೇಷಿಸಬೇಕು. ಏಕೆಂದರೆ ನಿಮಗೆ ಸಹಾಯ ಮಾಡಲು ಹೊರಟವರು ನಿಮಗೆ ಹಾನಿಯನ್ನುಂಟುಮಾಡುತ್ತಾರೆ” ಎಂದು ಎಚ್ಚರಿಸಿದರು.

ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಟಿಕೆಎಸ್ ಇಳಂಗೋವನ್ ಅವರು ಮಾತನಾಡಿ, ”ಹಿಂದೂಗಳಿಗೆ ಈ ಏಕರೂಪ ನಾಗರಿಕ ಸಂಹಿತೆಯನ್ನು ಅನ್ವಯಿಸಬೇಕು. ಆಗ ”ಎಲ್ಲಾ ಜಾತಿಯ ಜನರಿಗೂ ದೇವಾಲಯಗಳಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಸಿಗುತ್ತದೆ” ಎಂದು ಹೇಳಿದ್ದಾರೆ.

”ದೇಶದ ಎಲ್ಲಾ ದೇವಸ್ಥಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿದಂತೆ ಪ್ರತಿಯೊಬ್ಬರಿಗೂ ಪೂಜೆ ಮಾಡಲು ಅವಕಾಶ ನೀಡಬೇಕು ಹಾಗಾಗಿ ಹಿಂದೂ ಧರ್ಮದಲ್ಲಿ ಮೊದಲು ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬೇಕು. ನಮಗೆ ಏಕರೂಪ ನಾಗರಿಕ ಸಂಹಿತೆ ಬೇಡ ಏಕೆಂದರೆ ಸಂವಿಧಾನವು ಪ್ರತಿಯೊಂದು ಧರ್ಮಕ್ಕೂ ರಕ್ಷಣೆ ನೀಡಿದೆ” ಎಂದರು.

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು, ಈ ಮೂಲಕ ದೇಶದ ಬಹುತ್ವ ಮತ್ತು ವೈವಿಧ್ಯತೆಯನ್ನು ”ಕಿತ್ತುಕೊಳ್ಳುತ್ತಾರೆಯೇ?” ಎಂದು ಕೇಳುವ ಮೂಲಕ ಮೋದಿಯವರ ಹೇಳಿಕೆಯನ್ನು ಟೀಕಿಸಿದ್ದಾರೆ.

”ಮೋದಿ ಜಿ ಪಾಕಿಸ್ತಾನದ ಕಾನೂನಿನಿಂದ ಏಕೆ ಸ್ಫೂರ್ತಿ ಪಡೆಯುತ್ತಿದ್ದಾರೆ?” ಎಂದು ಓವೈಸಿ ಕೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ”ಅವರು [ಮೋದಿ] ಇಲ್ಲಿ ತ್ರಿವಳಿ ತಲಾಖ್ ವಿರುದ್ಧ ಕಾನೂನನ್ನು ಸಹ ಮಾಡಿದರು, ಆದರೆ ನೆಲದ ಮಟ್ಟದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡಲಿಲ್ಲ” ಎಂದು ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪನ್ನೂನ್‌ ಹತ್ಯೆಗೆ ಸಂಚು: ವಾಷಿಂಗ್‌ ಟನ್‌ ಪೋಸ್ಟ್‌ ವರದಿ ತಿರಸ್ಕರಿಸಿದ ಭಾರತ

0
ಭಾರತದ ಮಾಜಿ ಗುಪ್ತಚರ ಅಧಿಕಾರಿಯೊಬ್ಬರು ಅಮೆರಿಕದ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನೂನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂಬ ವಾಷಿಂಗ್ಟನ್ ಪೋಸ್ಟ್‌ನ ವರದಿಯನ್ನು ಭಾರತ ಇಂದು ಬಲವಾಗಿ ತಿರಸ್ಕರಿಸಿದೆ. ಭಾರತದ ರಿಸರ್ಚ್...