Homeಕರ್ನಾಟಕOBC ಮಹಿಳೆಯರಿಗೆ ಒಳ ಮೀಸಲಾತಿ ನೀಡದಿದ್ರೆ ಮೀಸಲಾತಿ ಉದ್ದೇಶವೇ ವಿಫಲ: ಸಿಎಂ ಸಿದ್ದರಾಮಯ್ಯ

OBC ಮಹಿಳೆಯರಿಗೆ ಒಳ ಮೀಸಲಾತಿ ನೀಡದಿದ್ರೆ ಮೀಸಲಾತಿ ಉದ್ದೇಶವೇ ವಿಫಲ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಕೂಡ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳ ಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ವಿಚಾರವಾಗಿ ಪತ್ರಿಕಾ ಪ್ರಕಟನೆ ಹೊರಡಿಸಿರು ಅವರು, ”ಲಿಂಗ ಅಸಮಾನತೆಯ ಜೊತೆಯಲ್ಲಿ ಜಾತಿ ಅಸಮಾನತೆಯನ್ನೂ ಒಳಗೊಂಡಿರುವ ಭಾರತೀಯ ಸಮಾಜದಲ್ಲಿ ಹಿಂದುಳಿದ ಜಾತಿಗಳಿಗೆ ಸೇರಿದ ಮಹಿಳೆಯರು ರಾಜಕೀಯವಾಗಿ ಉಳಿದವರ ಜೊತೆ ಪೈಪೋಟಿ ನಡೆಸಿ ಪ್ರಾತಿನಿಧ್ಯ ಪಡೆಯುವಂತಹ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಾಮರ್ಥ್ಯ ಇಲ್ಲದಿರುವುದನ್ನು ನಾವು ಗಮನಿಸಬೇಕಾಗಿದೆ” ಎಂದು ಹೇಳಿದ್ದಾರೆ.

”ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಈಗಾಗಲೇ ರಾಜಕೀಯ ಮೀಸಲಾತಿ ಇರುವುದರಿಂದ ಆ ಸಮುದಾಯಗಳ ಮಹಿಳೆಯರಿಗೆ ಮೀಸಲಾತಿ ನೀಡುವುದು ಸಮಸ್ಯೆಯಾಗಲಾರದು. ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿಯ ಮಸೂದೆಯನ್ನು ವಿವರವಾಗಿ ಪರಿಶೀಲಿಸಿದರೆ ಮಹಿಳೆಯರಿಗೆ ರಾಜಕೀಯ ನ್ಯಾಯಕೊಡಿಸುವುದಕ್ಕಿಂತಲೂ ಹೆಚ್ಚಾಗಿ ರಾಜಕೀಯ ಲಾಭ ಪಡೆಯುವ ಸ್ವಾರ್ಥವೇ ಕಾಣುತ್ತಿದೆ. ಈಗಿನ ಮಸೂದೆಯನ್ನು ಇದೇ ರೂಪದಲ್ಲಿ ಜಾರಿಗೆ ತರಲು ಹೊರಟರೆ ಮಹಿಳೆಯರು ರಾಜಕೀಯ ಮೀಸಲಾತಿ ಪಡೆಯಲು ಇನ್ನೆರಡು ದಶಕಗಳ ಕಾಲ ಕಾಯಬೇಕಾಗಬಹುದುʼʼ ಎಂದು ಅಭಿಪ್ರಾಯ ಪಟ್ಟಿದ್ದಾರೆ.

”ಮಹಿಳೆಯರಿಗೆ ರಾಜಕೀಯ ಮೀಸಲಾತಿ ನೀಡಬೇಕೆಂಬ ಪ್ರಾಮಾಣಿಕ ಉದ್ದೇಶವನ್ನು ಪ್ರಧಾನಿ ನರೇಂದ್ರ ಮೋದಿಯವರು ಹೊಂದಿದ್ದರೆ 2010ರಲ್ಲಿನ ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ರಾಜ್ಯ ಸಭೆಯಲ್ಲಿ ಅಂಗೀಕಾರ ಪಡೆದಿರುವ ಮಸೂದೆಯನ್ನೇ ಲೋಕಸಭೆಯಲ್ಲಿ ಮಂಡಿಸಬೇಕಾಗಿತ್ತು. 2010ರಲ್ಲಿ ಮಸೂದೆಗೆ ರಾಜ್ಯಸಭೆ ನೀಡಿರುವ ಅಂಗೀಕಾರ ಇನ್ನೂ ಚಾಲ್ತಿಯಲ್ಲಿರುವ ಕಾರಣ ಲೋಕಸಭೆಯಲ್ಲಿ ಅಂಗೀಕಾರ ಪಡೆದ ಕೂಡಲೇ ಮಸೂದೆ ಕಾಯ್ದೆಯಾಗಿ ರೂಪುಗೊಳ್ಳುವ ಪ್ರಕ್ರಿಯೆ ಪ್ರಾರಂಭವಾಗುತ್ತಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಉದ್ದೇಶಪೂರ್ವಕವಾಗಿ ಮಸೂದೆಯಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಿರುವುದರಿಂದ ಅದನ್ನು ಮತ್ತೆ ರಾಜ್ಯಸಭೆಯಲ್ಲಿ ಮಂಡಿಸಬೇಕಾಗಿದೆ” ಎಂದರು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಬಿಲ್‌: ಒಬಿಸಿಗಳನ್ನು ಸೇರ್ಪಡೆಗೆ ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಆಗ್ರಹ

”ಮುಂದಿನ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ನಡೆದ ನಂತರವಷ್ಟೇ ಮಹಿಳಾ ಮೀಸಲಾತಿ ಜಾರಿಗೆ ಬರಲಿದೆ ಎಂದು ಮಸೂದೆಯಲ್ಲಿಯೇ ಹೇಳಿರುವುದರಿಂದ ಈ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲು ಕನಿಷ್ಠ 20 ವರ್ಷ ಬೇಕಾಗಬಹುದು. ಮುಂದಿನ ಜನಗಣತಿ 2026ರಲ್ಲಿ ಮತ್ತು ಕ್ಷೇತ್ರ ಮರುವಿಂಗಡಣೆ 2031ರಲ್ಲಿ ನಡೆಯುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

”ಮಹಿಳೆಯರಿಗೆ ಶೇಕಡಾ 33ರಷ್ಟು ರಾಜಕೀಯ ಮೀಸಲಾತಿ ನೀಡುವ ಮಸೂದೆ ಮೂಲತ: ಕಾಂಗ್ರೆಸ್ ಪಕ್ಷದ ಕನಸಿನ ಕೂಸು. ಈ ಕನಸನ್ನು ನನಸು ಮಾಡಲು ಪ್ರಾಮಾಣಿಕವಾದ ಪ್ರಯತ್ನ ಮಾಡಿದವರು ನಮ್ಮ ಹೆಮ್ಮೆಯ ನಾಯಕರಾದ ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಎನ್ನುವುದನ್ನು ನಾವೆಲ್ಲರೂ ನೆನಪು ಮಾಡಿಕೊಳ್ಳಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

”ನಗರ ಮತ್ತು ಗ್ರಾಮೀಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ರಾಜಕೀಯ ಮೀಸಲಾತಿ ನೀಡುವ ಮಸೂದೆಯನ್ನು ಮೊದಲ ಬಾರಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು 1989ರಲ್ಲಿಯೇ ಲೋಕಸಭೆಯಲ್ಲಿ ಮಂಡಿಸಿದ್ದರು. ಆದರೆ ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯಲು ಸಾಧ್ಯವಾಗಿರಲಿಲ್ಲ. ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರ ಸ್ಥಾನಗಳಲ್ಲಿ ಶೇಕಡಾ 33ರಷ್ಟನ್ನು ಮಹಿಳೆಯರಿಗೆ ಮೀಸಲಾತಿ ನೀಡುವ ಐತಿಹಾಸಿಕ ಮಸೂದೆ 1993ರಲ್ಲಿ ಆಗಿನ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಕಾಲದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಅನುಮೋದನೆಗೊಂಡು ಅನುಷ್ಠಾನಗೊಂಡಿದೆ. ಈ ಕ್ರಾಂತಿಕಾರಿ ಬದಲಾವಣೆಗೆ ಕಾಂಗ್ರೆಸ್ ಪಕ್ಷ ಕಾರಣ ಎನ್ನುವುದು ಕೂಡಾ ಇತಿಹಾಸದ ಪುಟದಲ್ಲಿ ದಾಖಲಾಗಿದೆ” ಎಂದು ಹೇಳಿದರು.

”2004ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತನ್ನ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳಲ್ಲಿ ಮಹಿಳಾ ಮೀಸಲಾತಿಯನ್ನೂ ಸೇರಿಸಿಕೊಂಡಿತ್ತು. 2010ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ್ದ ಕಾಂಗ್ರೆಸ್ ಸರ್ಕಾರ ಅದಕ್ಕೆ ಅಂಗೀಕಾರ ಪಡೆಯಲು ಯಶಸ್ವಿಯಾಗಿತ್ತು. ಸಂಸತ್ ಮತ್ತು ವಿಧಾನಮಂಡಲಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಕಾಯ್ದೆಯನ್ನು ಜಾರಿಗೆ ತರುವಂತೆ ಕಾಂಗ್ರೆಸ್ ಪಕ್ಷ ನಿರಂತರವಾಗಿ ಪ್ರಯತ್ನ ಮಾಡುತ್ತಲೇ ಬಂದಿದೆ. ರಾಜಕೀಯ ಭಿನ್ನಮತಗಳನ್ನು ಮೀರಿ ಮಹಿಳಾ ಮೀಸಲಾತಿ ಮಸೂದೆ ಸಂಸತ್ ನಲ್ಲಿ ಅಂಗೀಕಾರವಾಗುವಂತೆ ಪ್ರಯತ್ನ ಮಾಡಿ ಎಂದು 2018ರಲ್ಲಿ ರಾಹುಲ್ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಲೋಕಸಭೆಯಲ್ಲಿಯೇ ಮನವಿ ಮಾಡಿದ್ದರು” ಎಂದು ವಿವರಿಸಿದ್ದಾರೆ.

”2019ರ ಲೋಕಸಭಾ ಚುನಾವಣೆಯ ಕಾಲದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೂ ಮಹಿಳೆಯರ ರಾಜಕೀಯ ಮೀಸಲಾತಿಯನ್ನು ಸೇರಿಸಲಾಗಿದ್ದು ಅದಕ್ಕೆ ನಾವು ಸದಾ ಬದ್ದರಾಗಿದ್ದೇವೆ. ಮಹಿಳಾ ಮೀಸಲಾತಿ ವಿಧೇಯಕದ ವಿಚಾರದಲ್ಲಿ ಬಿಜೆಪಿ ಆಡಳಿತವಿರುವ, ದೇಶದ ಅತ್ಯಂತ ಹೆಚ್ಚು ಜನಸಂಖ್ಯೆಯುಳ್ಳ ಉತ್ತರ ಪ್ರದೇಶದ ಮುಖ್ಯಮಂತ್ರಿಯ ಯೋಗಿ ಆದಿತ್ಯನಾಥ್‌ ಅವರ ಅಭಿಪ್ರಾಯವೇನಿತ್ತು ಎನ್ನುವುದು ಇಡೀ ದೇಶಕ್ಕೇ ಗೊತ್ತಿರುವ ವಿಚಾರವಾಗಿದೆ. ಸಂಸದರಾಗಿದ್ದ ವೇಳೆ ಆದಿತ್ಯನಾತ್‌ ಅವರು ಈ ವಿಚಾರವಾಗಿ ಅಭಿಪ್ರಾಯಭೇದ ವ್ಯಕ್ತಪಡಿಸಿದ್ದರು. ಮೊದಲು ಈ ವಿಷಯದಲ್ಲಿ ಪಕ್ಷದಲ್ಲಿ ಆಂತರಿಕವಾಗಿ ಚರ್ಚೆಯಾಗಿ ಸಹಮತ ಮೂಡಬೇಕು ಎಂದಿದ್ದರು. “ಕಾಂಗ್ರೆಸ್‌ ನ ಪಾಪವನ್ನು ನಾವೇಕೆ ತಲೆಯ ಮೇಲೆ ಹೊರಬೇಕು” ಎಂದು ಹೀಗಳೆದಿದ್ದರು. ಈಗಲೂ ಅವರ ಅಭಿಪ್ರಾಯ ಇದೇ ಇದೆಯೋ ಅಥವಾ ಬದಲಾಗಿದೆಯೋ ಎಂದು ಈ ವೇಳೆ ಕೇಳಬಯಸುತ್ತೇನೆ” ಎಂದು ಸಿದ್ದರಾಮಯ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮೀಸಲಾತಿ ಮಸೂದೆಯು ಮಹಿಳೆಯರ ಓಲೈಕೆಯ ಪ್ರಯತ್ನವಾಗಿದೆ: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...