Homeಕರ್ನಾಟಕಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ಮುತಾಲಿಕ್ ವಿವಾದಾತ್ಮಕ...

ಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ಮುತಾಲಿಕ್ ವಿವಾದಾತ್ಮಕ ಹೇಳಿಕೆ

- Advertisement -
- Advertisement -

”ಛತ್ರಪತಿ ಶಿವಾಜಿ ಮಹಾರಾಜ್​ ಕೀ ಜೈ ಎನ್ನುತ್ತೀರಿ. ಆದರೆ ಮನೆಯಲ್ಲಿ ಒಂದು ಬಡಿಗೆ ಇಲ್ಲ, ಚಾಕು ಸಹ ಇಲ್ಲ. ಎಲ್ಲ ಹಿಂದೂಗಳು ಮನೆಯಲ್ಲಿ ಒಂದು ತಲವಾರ್ ಇಟ್ಟುಕೊಳ್ಳಿ” ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕರೆ ಕೊಟ್ಟಿದ್ದಾರೆ. ಅಲ್ಲದೇ ಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ ಎಂದು ಜಿಹಾದ್ ವಿಚಾರವಾಗಿ ನಾಲಿಗೆ ಹರಿಬಿಟ್ಟಿದ್ದಾರೆ.

ಫೆಬ್ರುವರಿ 19ರಂದು ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಮುತಾಲಿಕ್, ”ಆಯುಧ ಪೂಜೆ ಅಂದ್ರೆ ನಟ್, ಸ್ಕ್ರೂ ಡ್ರೈವರ್, ಕಂಪಾಸು, ಸ್ಪಾನರು, ಸುಡುಗಾಡು, ಸಂತಿ ಪೂಜಾ ಮಾಡುತ್ತೀರಿ. ಶಸ್ತ್ರ ಅಂದರೆ ತಲವಾರ್, ಕತ್ತಿ, ಕುರುಪಿ, ಕೊಡಲಿ, ಚಾಕು. ಇವನ್ನೆಲ್ಲ ಇಟ್ರೆ ಪೊಲೀಸ್​ ಬಿಡ್ತಾರೇನ್ರೀ ಅಂತೀರಿ. ಪೊಲೀಸರು ಅರೆಸ್ಟ್ ಮಾಡೋದಾದರೆ ದುರ್ಗಾಮಾತೆ ಕೈಯಲ್ಲಿ ಹತ್ತು ಶಸ್ತ್ರಗಳಿವೆ, ಮೊದಲು ದುರ್ಗೆಯನ್ನು ಅರೆಸ್ಟ್ ಮಾಡಲಿ. ಹನುಮನ ಕೈಯಲ್ಲಿ ಗದೆ ಇದೆ, ಮೊದಲು ಹನಮಂತನ ಅರೆಸ್ಟ್ ಮಾಡಲಿ, ಈಶ್ವರನ ಕೈಯಲ್ಲಿ ತ್ರಿಶೂಲ ಇದೆ, ಈಶ್ವರನನ್ನು ಅರೆಸ್ಟ್ ಮಾಡಲಿ.. ಪ್ರತಿ ಹಿಂದೂ ಮನೆಯಲ್ಲಿ ತಲವಾರ್ ಇಟ್ಟುಕೊಳ್ಳಬೇಕು. ಆ ಖಡ್ಗ ತಲವಾರ್ ಹೊಡೆಯೋದಕ್ಕಲ್ಲ, ಗೋರಕ್ಷಣೆಗಾಗಿ, ನಮ್ಮ ಅಕ್ಕ-ತಂಗಿಯರ ರಕ್ಷಣೆಗಾಗಿ, ರಾಷ್ಟ್ರ ರಕ್ಷಣೆಗಾಗಿ, ಮಠಮಂದಿರಗಳ ರಕ್ಷಣೆಗಾಗಿ” ಎಂದು ಪ್ರಚೋದನಕಾರಿ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: ಕಾರ್ಕಳದಲ್ಲಿ ಸ್ಪರ್ಧಿಸುವುದಾಗಿ ಪ್ರಮೋದ್‌ ಮುತಾಲಿಕ್‌ ಘೋಷಣೆ: ಕ್ಷೇತ್ರದ ರಾಜಕೀಯ ಚಿತ್ರಣ ಹೀಗಿದೆ…

ಇದೇ ವೇಳೆ ಲವ್ ಜಿಹಾದ್ ವಿಚಾರ ಪ್ರಸ್ತಾಪಿಸಿ, ”ಕರ್ನಾಟಕದಲ್ಲಿ ಏನು ನಡೆಯುತ್ತಿದೆ ಎಂದು ನಮಗೆ ಸ್ಪಷ್ಟವಾಗಿ ಗೊತ್ತಿದೆ. ಇದಕ್ಕೆ ಒಂದು ಉಪಾಯ ನಮ್ಮ ಬಳಿ ಇದೆ. ಲವ್ ಜಿಹಾದ್ ನಲ್ಲಿ ಒಂದು ಹಿಂದೂ ಹುಡುಗಿ ಹೋದರೆ, ಇದಕ್ಕೆ ಪ್ರತಿಯಾಗಿ 10 ಮುಸ್ಲಿಂ ಹುಡುಗಿಯರನ್ನು ಹಾರಿಸಬೇಕು” ಎಂದು ಮುತಾಲಿಕ್ ಕರೆ ನೀಡಿದ್ದಾರೆ.

ಲವ್ ಜಿಹಾದ್‌ಗೆ ಕೌಂಟರ್ ಕೊಡಲು ಮುಸ್ಲಿಂ ಯುವತಿಯರನ್ನು ಹಾರಿಸಿಕೊಂಡು ಹೋಗಿ. ನಾವು ನಿಮಗೆ ರಕ್ಷಣೆ ಕೊಡುತ್ತೇವೆ ಎಂದು ಹೇಳುವ ಮೂಲಕ ಪ್ರಮೋದ್ ಮುತಾಲಿಕ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

”ಅವರಿಗೆ (ಮುಸ್ಲಿಂ ಸಮುದಾಯ) ಎಚ್ಚರಿಕೆ ಕೊಡಬೇಕಾಗಿದೆ. ನಮಗೂ ಲೈನ್ ಹೊಡೆಯೋದು ಗೊತ್ತು. ನಾನಲ್ಲ, ಇಲ್ಲಿ ಸೇರಿರುವ ಎಲ್ಲರಿಗೂ ನಾನು ಆಹ್ವಾನ ಕೊಡುತ್ತಿದ್ದೇನೆ. ಒಂದು ಹಿಂದೂ ಹುಡುಗಿ ಹೋದರೆ 10 ಮುಸ್ಲಿಂ ಹುಡುಗಿಯರನ್ನು ಹಾರಿಸಬೇಕು. ನಿಮಗೆ ಎಲ್ಲಾ ರೀತಿಯ ರಕ್ಷಣೆ ಕೊಡುವ ಜವಾಬ್ದಾರಿ ನಮ್ಮದು” ಎಂದು ಹೇಳಿದ್ದಾರೆ.

”ಹಿಂದೂ ಹೆಣ್ಣುಮಕ್ಕಳಿಗೆ ಲವ್ ಜಿಹಾದ್ ಬಗ್ಗೆ ಎಚ್ಚರಿಕೆ ನೀಡುವುದು ಶ್ರೀರಾಮ ಸೇನೆಯ ಕರ್ತವ್ಯವಾಗಿದೆ. ‘ಲವ್ ಜಿಹಾದ್’ನಿಂದ ಶೋಷಣೆಗೆ ಒಳಗಾಗಿ ದೇಶಾದ್ಯಂತ ನೂರಾರು ಹೆಣ್ಣು ಮಕ್ಕಳನ್ನು ನಾವು ಕಳೆದುಕೊಳ್ಳುತ್ತಿದ್ದೇವೆ. ಈ ಬಗ್ಗೆ ಹುಡುಗಿಯರನ್ನು ಎಚ್ಚರಿಸುವ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳಬೇಕು” ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಹಿಂದೂ ಸಂಘಟನೆಗಳ ಒಕ್ಕೂಟದಿಂದ ಬಿಜೆಪಿ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಬಿಜೆಪಿಯಿಂದ ಹಿಂದೂ ಹೋರಾಟಗಾರರಿಗೆ 25 ಸೀಟು ಕೊಡುವಂತೆ ಆಗ್ರಹ ಮಾಡಿದ್ದೇವೆ. ನಮ್ಮ ಮನವಿಗೆ ಬಿಜೆಪಿ ನಮಗೆ ಸ್ಪಂದಿಸಲಿಲ್ಲ ಎಂದು ಹೇಳಿದ್ದಾರೆ.

”ರಾಜ್ಯದ 25 ಕಡೆಗೆ ಹಿಂದೂ ಸಂಘಟನೆಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ನನಗೆ ಬಾಗಲಕೋಟೆಯ ತೇರದಾಳ ಹಾಗೂ ಕಾರ್ಕಳ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಒತ್ತಾಯ ಬಂತು. ಆದರೆ ಕಾರ್ಕಳ ವಿಧಾನಸಭೆ ಕ್ಷೇತ್ರ ಫೈನಲ್ ಆಗಿದೆ. ನೂರಕ್ಕೆ ನೂರು ಗೆದ್ದು ಹಿಂದುತ್ವದ ಪತಾಕೆಯನ್ನು ಕಾರ್ಕಳದ ಮೂಲಕ ಹಾರಿಸುತ್ತೇನೆ” ಎಂದು ಪ್ರಮೋದ್​ ಮುತಾಲಿಕ್​ ಹೇಳಿದರು.

”ಇತ್ತೀಚೆಗೆ ಒಬ್ಬ ರಾಷ್ಟ್ರಮಟ್ಟದ ನಾಯಕರು ಒಂದು ಮಾತನ್ನು ಹೇಳಿದರು. ಅದರಿಂದ ನನಗೆ ಬಹಳ ದುಃಖವಾಯಿತು. ನೋವಿನ ಜೊತೆಗೆ ಸಿಟ್ಟು ಕೂಡ ಬಂತು. ಏಕೆಂದರೆ ಹಿಂದೂ ಸಮಾಜ ಮುಸ್ಲಿಂರ ಜೊತೆ ಹೊಂದಿಕೊಂಡು ಹೋಗಬೇಕು ಎಂದು ಹೇಳಿದ್ದಾರೆ. ಅವರು ನಾವು ಅಣ್ಣತಮ್ಮಂದಿರ ತರಹ ಇರಬೇಕು ಅಂದ್ರು. ಇದೇ ಮಾತನ್ನು ಜೀಜಾಮಾತಾ ತನ್ನ ಮಗನಿಗೆ ಹೇಳಿದ್ರೆ ಏನಾಗ್ತಿತ್ತು? ನಾನು ಆ ರಾಷ್ಟ್ರೀಯ ಚಿಂತಕರಿಗೆ ಹೇಳುತ್ತೇನೆ. ನೀವು ತಪ್ಪು ಹೆಜ್ಜೆ ಇಡುತ್ತಿದ್ದೀರಾ. ಗೋಹಂತಕರ ಜೊತೆ ಹೊಂದಿಕೊಂಡು ಹೋಗಬೇಕಾ? ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಮಾಡಿ ಮಸೀದಿ‌ ಮೇಲೆ‌ ಮೈಕ್ ಹಾಕೊಂಡು ಅಲ್ಲಾ ಎನ್ನುವವರ ಜೊತೆ ಹೊಂದಿಕೊಂಡು ಹೋಗಬೇಕಾ” ಎಂದು ಪರೋಕ್ಷವಾಗಿ ಹೆಸರು ಹೇಳದೇ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ ವಿರುದ್ಧ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...