Homeಮುಖಪುಟರಂಜನ್ ಗೊಗೊಯ್‌ಗೆ 'ಅತ್ಯುನ್ನತ ನಾಗರಿಕ ಪ್ರಶಸ್ತಿ': 'ರಾಮ ಮಂದಿರ' ಸ್ಥಾಪನೆಯಾಗಿದ್ದರೆ.....

ರಂಜನ್ ಗೊಗೊಯ್‌ಗೆ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’: ‘ರಾಮ ಮಂದಿರ’ ಸ್ಥಾಪನೆಯಾಗಿದ್ದರೆ…..

- Advertisement -
- Advertisement -

ರಾಮಮಂದಿರ ಉದ್ಘಾಟನೆ ಜ.22ರಂದು ಅಯೋಧ್ಯೆಯಲ್ಲಿ ನಡೆಯಲಿದೆ. ಇದೇ ವೇಳೆ ಅಯೋಧ್ಯೆ ಬಾಬರಿ ಮಸೀದಿ-ರಾಮಮಂದಿರದ ದಶಕಗಳ ವಿವಾದದ ಬಗ್ಗೆ ಅಂತಿಮ ತೀರ್ಪು ನೀಡಿದ್ದ ಭಾರತದ ಸುಪ್ರೀಂಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಮತ್ತು ರಾಜ್ಯಸಭಾ ಸಂಸದ ರಂಜನ್ ಗೊಗೊಯ್ ಅವರನ್ನು ಅಸ್ಸಾಂನ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ರಂಜನ್‌ ಗೊಗಯ್‌ ನೇತೃತ್ವದ ಸುಪ್ರೀಂಕೋರ್ಟ್‌ ಪೀಠ ದಶಕಗಳಷ್ಟು ಹಳೆಯದಾದ ರಾಮ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದ ಬಗ್ಗೆ ತೀರ್ಪು ನೀಡಿತ್ತು. ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಸ್‌.ಎ ಬೊಬ್ಡೆ, ಡಿ.ವೈ.ಚಂದ್ರಚೂಡ್‌, ಅಶೋಕ್‌ ಭೂಷಣ್‌ ಹಾಗೂ ಅಬ್ದುಲ್ ನಜೀರ್‌ ಅವರಿದ್ದರು. ಪೀಠವು ಅಯೋಧ್ಯೆ-ಬಾಬರಿ ಮಸೀದಿ ಜಮೀನಿನ ಒಡೆತನದ ಬಗ್ಗೆ ನ. 9, 2019ರಂದು ತೀರ್ಪು ನೀಡಿತ್ತು. ವಿವಾದಿತ 2.77 ಎಕರೆ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿತ್ತು. ಜಮೀನನ್ನು ಸಂಪೂರ್ಣವಾಗಿ ಟ್ರಸ್ಟ್​​ ವಶಕ್ಕೆ ನೀಡಬೇಕು. ಇದರ ಹೊಣೆ ಸರ್ಕಾರದ್ದು ಎಂದು ಸೂಚಿಸಿತ್ತು. ಇದೇ ವೇಳೆ ಮಸೀದಿ ನಿರ್ಮಾಣಕ್ಕೆ ಸುನ್ನಿ ವಕ್ಫ್ ಬೋರ್ಡ್‌ಗೆ 5 ಎಕರೆ ಪರ್ಯಾಯ ಭೂಮಿ ನೀಡಲು ಸೂಚಿಸಿತ್ತು. ಇದಲ್ಲದೆ 2010ರಲ್ಲಿ ಇದೇ ವಿವಾದದಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯವು  ರದ್ದುಪಡಿಸಿತ್ತು. ರಾಮ್ ಲಲ್ಲಾ, ನಿರ್ಮೋಹಿ ಅಖಾಡಾ ಮತ್ತು ಸುನ್ನಿ ವಕ್ಫ್ ಬೋರ್ಡ್‌ಗೆ ವಿವಾದಿತ ಜಾಗವನ್ನು ಅಲಹಾಬಾದ್ ಹೈಕೋರ್ಟ್ ಸಮನಾಗಿ ಹಂಚಿಕೆ ಮಾಡಿರುವುದನ್ನು ರದ್ದುಪಡಿಸಿತ್ತು.

ರಾಮ ಅಲ್ಲಿಯೇ ಜನಿಸಿದ ಎಂಬುದು ಹಿಂದುಗಳ ನಂಬಿಕೆ. ನಂಬಿಕೆಯು ವೈಯಕ್ತಿಕ ವಿಷಯ, ಹಿಂದೂಗಳು ಅಯೋಧ್ಯೆಯನ್ನು ರಾಮನ ಜನ್ಮಸ್ಥಾನ ಅಂತ ನಂಬಿದ್ದಾರೆ. ಈ ವಿಚಾರದಲ್ಲಿ ಅವರಿಗೆ ಧಾರ್ಮಿಕ ಭಾವನೆಗಳಿವೆ. ಮುಸ್ಲಿಮರು ಆ ಜಾಗ ಬಾಬ್ರಿ ಮಸೀದಿಯದ್ದು ಅಂತಾರೆ. ಆದರೆ ರಾಮ ಅಲ್ಲಿ ಜನಿಸಿದ್ದ ಎಂಬ ಹಿಂದುಗಳ ನಂಬಿಕೆ ವಿವಾದರಹಿತವಾದದ್ದು. ಆದರೆ ಈ ಭೂಮಿ ಯಾರಿಗೆ ಸೇರಿದ್ದೆಂಬ ವ್ಯಾಜ್ಯವು ಸಂಪೂರ್ಣವಾಗಿ ಕಾನೂನಿಗೆ ಸಂಬಂಧಿಸಿದ್ದು. ಮಸೀದಿಗೆ ಹಾನಿ ಮಾಡಿದ್ದು, ಕಾನೂನು ಕೈಗೆ ತೆಗೆದುಕೊಂಡಿದ್ದೂ ಸರಿಯಲ್ಲ. ವಿವಾದಿತ ಜಾಗವನ್ನು ಮೂರು ಭಾಗ ಮಾಡಿದ್ದಕ್ಕೆ ಎಲ್ಲೆಡೆಯಿಂದಲೂ ವಿರೋಧವಿದೆ ಎಂದು ನ್ಯಾಯಪೀಠ ತೀರ್ಪಿನಲ್ಲಿ ಉಲ್ಲೇಖಿಸಿತ್ತು. ಸುಪ್ರೀಂಕೋರ್ಟ್‌ನ ಈ ತೀರ್ಪಿನ ವಿರುದ್ಧ ಅಸಮಾಧಾನ ವ್ಯಕ್ತವಾಗಿತ್ತು. ಅಯೋಧ್ಯೆ ತೀರ್ಪು ನೀಡಲು ಗೊಗೊಯ್ ತನ್ನನ್ನು ತಾನು ಮಾರಾಟ ಮಾಡಿಕೊಂಡಿದ್ದಾರೆ ಎಂದು ಖ್ಯಾತ ಉರ್ದು ಕವಿ ಮುನವ್ವರ್ ರಾಣಾ ಅವರು ಟೀಕಿಸಿದ್ದರು. ಭಾರತದ ನ್ಯಾಯಾಂಗದ ವ್ಯವಸ್ಥೆ ಬಗ್ಗೆ ಮುಸ್ಲಿಮರ ನಂಬಿಕೆಗೆ ಧಕ್ಕೆ ಉಂಟಾಗಿತ್ತು.

ಬಾಬರಿ ಮಸೀದಿ- ರಾಮಮಂದಿರ ಭೂ ವಿವಾದದ ಬಗ್ಗೆ ಅಂತಿಮ ತೀರ್ಪು ನೀಡಿದ್ದ ಪೀಠದಲ್ಲಿದ್ದ ಎಲ್ಲಾ ಜಡ್ಜ್‌ಗಳು ಕೂಡ ಉನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ. ಅಂದಿನ ಸಿಜೆಐ ರಂಜನ್‌ ಗೊಗಯ್‌ ಅವರನ್ನು ರಾಜ್ಯಸಭೆಗೆ ಬಿಜೆಪಿ ನಾಮನಿರ್ದೇಶನ ಮಾಡಿತ್ತು. ಎಸ್‌ಎ ಬೋಬ್ಡೆ ಅವರು ನವೆಂಬರ್ 2019ರಿಂದ ಏಪ್ರಿಲ್ 2021ರ ನಡುವೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. ಡಿವೈ ಚಂದ್ರಚೂಡ್ ಅವರು ಭಾರತದ ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಪೀಠದಲ್ಲಿದ್ದ ಇನ್ನೋರ್ವ ಜಡ್ಜ್‌ ಅಬ್ದುಲ್ ನಜೀರ್‌ ಅವರು ಆಂಧ್ರಪ್ರದೇಶದ ರಾಜ್ಯಪಾಲರಾಗಿದ್ದಾರೆ.

ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ರಂಜನ್‌ ಗೊಗಯ್‌ ಅವರಿಗೆ  ‘ಅಸ್ಸಾಂ ಬೈಭವ’ ಪ್ರಶಸ್ತಿಯನ್ನು ಫೆಬ್ರವರಿ 10ರಂದು ನೀಡಲಾಗುವುದು ಎಂದು ಘೋಷಿಸಿದ್ದಾರೆ. ‘ಅಸ್ಸಾಂ ಬೈಭವ’ ಪ್ರಶಸ್ತಿಯನ್ನು ಮೂರು ವರ್ಷಗಳಿಂದ ನೀಡಲಾಗುತ್ತಿದೆ. ಮೊದಲ ವರ್ಷದಲ್ಲಿ ನಾವು ಅಸ್ಸಾಂ ಬೈಭವ ಪ್ರಶಸ್ತಿಯನ್ನು ರತನ್ ಟಾಟಾ ಅವರಿಗೆ ನೀಡಿದ್ದೇವೆ. ಕಳೆದ ವರ್ಷ ನಾವು ತಪನ್ ಸೈಕಿಯಾ ಅವರಿಗೆ ಈ ಪ್ರಶಸ್ತಿಯನ್ನು ನೀಡಿದ್ದೇವೆ. ಈ ಬಾರಿ ಅಸ್ಸಾಂ ಸರ್ಕಾರವು ಸುಪ್ರೀಂಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ‘ಅಸ್ಸಾಂ ಬೈಭವ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹಿಮಂತ ಬಿಸ್ವ ಶರ್ಮಾ ಅವರು ಹೇಳಿದ್ದಾರೆ.

ರಂಜನ್‌ ಗೊಗಯ್‌ ‘ಭಾರತದ ಮುಖ್ಯ ನ್ಯಾಯಮೂರ್ತಿಯಂತಹ’ ಅತ್ಯುನ್ನತ ಹುದ್ದೆ ಅಲಂಕರಿಸಿದ ಈಶಾನ್ಯದ ಮೊದಲ ನ್ಯಾಯಾಧೀಶರಾಗಿದ್ದಾರೆ. ಈ ಪ್ರಶಸ್ತಿಯು ನ್ಯಾಯದ ವಿತರಣೆಯನ್ನು ವಿಸ್ತರಿಸಲು ಮತ್ತು ನಮ್ಮ ನ್ಯಾಯಶಾಸ್ತ್ರವನ್ನು ಶ್ರೀಮಂತಗೊಳಿಸಲು ಅವರ ಅಸಾಧಾರಣ ಪ್ರಯತ್ನಗಳನ್ನು ಗುರುತಿಸಿ ನೀಡಲಾಗುತ್ತಿದೆ.  ಇಂದು ಮತ್ತೊಮ್ಮೆ ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಸ್ಥಾಪಿಸಿದ್ದರೆ…., ಅದರ ಸ್ವಲ್ಪ ಕ್ರೆಡಿಟ್ ಅಸ್ಸಾಂಗೆ ಸಲ್ಲುತ್ತದೆ ಎಂದು ಕೂಡ ಶರ್ಮಾ ಹೇಳಿರುವ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ಉಲ್ಲೇಖಿಸಿದೆ.

ರಂಜನ್ ಗೊಗೊಯ್ ರಾಜ್ಯಸಭೆಗೆ ನಾಮನಿರ್ದೇಶನ:

ಮುಖ್ಯ ನ್ಯಾಯಮೂರ್ತಿಯಾಗಿ ನಿವೃತ್ತರಾದ ಕೆಲವೇ ದಿನಗಳಲ್ಲಿ ಗೊಗೊಯ್ ಅವರನ್ನು ಬಿಜೆಪಿ ರಾಜ್ಯಸಭೆಗೆ ನಾಮನಿರ್ದೇಶಗೊಳಿಸಿತ್ತು. ಈ ವೇಳೆ ಗೊಗೊಯ್ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿತ್ತು. ಯೋಗೇಂದ್ರ ಯಾದವ್ ಅವರು, “ತಮ್ಮ ಮಾಲೀಕರಿಂದ ರಂಜನ್ ಗೋಗಾಯಿ ಅವರಿಗೆ ಯಾಕೆ ರಾಜ್ಯಸಭಾ ಸದಸ್ಯತ್ವದ ಭಕ್ಷೀಸು ಸಂದಾಯವಾಗಿದೆ ಎಂಬುದನ್ನು ತಿಳಿಯಬೇಕಾದರೆ ಇದನ್ನು ಗಮನಿಸಿ.. ತೀರಾ ನಾಚಿಕೆಗೇಡು” ಎಂದು ‘ದ ಕ್ಯಾರವಾನ್’ ಪತ್ರಿಕೆಯಲ್ಲಿ ಗೋಗಾಯಿ ಸರ್ಕಾರದ ಪರ ನೀಡಿದ್ದ ತೀರ್ಪುಗಳ ಪಟ್ಟಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದರು.

ಸ್ವತಃ ಸುಪ್ರೀಂಕೋರ್ಟ್ ವಕೀಲರಾಗಿದ್ದ ಕಪಿಲ್ ಸಿಬಲ್ ಕೂಡ ಈ ಬಗ್ಗೆ  ಪ್ರತಿಕ್ರಿಯಿಸಿ, ನ್ಯಾ. ಎಚ್ ಆರ್ ಖನ್ನಾ ಅವರನ್ನು, ಅವರ ವ್ಯಕ್ತಿತ್ವದ ಬದ್ಧತೆ, ಸರ್ಕಾರದ ವಿರುದ್ಧದ ಗಟ್ಟಿ ನಿಲುವು, ನ್ಯಾಯವನ್ನು ಎತ್ತಿಹಿಡಿದ ದೃಢತೆಗಾಗಿ ನೆನಪಿಸಿಕೊಳ್ಳುತ್ತೇವೆ. ಹಾಗೇ ರಂಜನ್ ಗೋಗಾಯಿ ಅವರನ್ನು ಸರ್ಕಾರದಿಂದ ಬಚಾವಾದದ್ದಕ್ಕಾಗಿ, ಆ ಕೃತಜ್ಞತೆಗಾಗಿ ಸರ್ಕಾರದ ಸೇವೆಗೆ ನಿಂತದ್ದಕ್ಕಾಗಿ, ತನ್ನ ವೈಯಕ್ತಿಕ ಮತ್ತು ಒಟ್ಟಾರೆ ನ್ಯಾಯಾಂಗದ ಘನತೆಯ ವಿಷಯದಲ್ಲಿ ರಾಜಿ ಮಾಡಿಕೊಂಡದ್ದಕ್ಕಾಗಿ ನಾವು ರಾಜ್ಯಸಭಾ ಸದಸ್ಯತ್ವವನ್ನು ಬುಟ್ಟಿಗೆ ಹಾಕಿಕೊಂಡರು ಎಂದು ಸ್ಮರಿಸುತ್ತೇವೆ ಎಂದು ಟ್ವೀಟ್ ಮಾಡಿದ್ದರು.

ರಂಜನ್ ಗೊಗೊಯ್ ವಿರುದ್ಧ ಕೇಳಿ ಬಂದಿದ್ದ ಲೈಂಗಿಕ ಕಿರುಕುಳ ಆರೋಪ:

ರಂಜನ್ ಗೊಗೊಯ್ ಅವರು ಭಾರತದ ಸುಪ್ರೀಂಕೋರ್ಟ್‌ನ 46ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. ಅವರ ಸಿಜೆಐ ಆಗಿರುವ ವೇಳೆ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿತ್ತು. ಸುಪ್ರೀಂಕೋರ್ಟ್‌ ಇತಿಹಾಸದಲ್ಲೇ ಸಿಜೆಐ ಓರ್ವರ ವಿರುದ್ಧ ಇದೇ ಮೊದಲ ಬಾರಿಗೆ ಲೈಂಗಿಕ ಕಿರುಕುಳದಂತಹ ಆರೋಪ ಕೇಳಿ ಬಂದಿತ್ತು.

ನ್ಯಾಯಾಲಯದ ಮಾಜಿ ಉದ್ಯೋಗಿ ತಾನು ಬರೆದ ಅಫಿಡವಿಟ್‌ ಪ್ರತಿಗಳನ್ನು ಸುಪ್ರೀಂಕೋರ್ಟ್‌ನ 22 ನ್ಯಾಯಮೂರ್ತಿಗಳ ನಿವಾಸಕ್ಕೆ ತಲುಪಿಸಿದ್ದರು. ಇದರಲ್ಲಿ ಆಕೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ರಂಜನ್‌ ಗೊಗೋಯಿ ತಮಗೆ ಲೈಂಗಿಕ ಶೋ‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍ಷಣೆ ಮತ್ತು ಕಿರುಕುಳ ನೀಡಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದರು. 2018ರ ಅಕ್ಟೋಬರ್‌ನಲ್ಲಿ ಗೊಗೋಯಿ ಸಿಜೆಐ ಆಗಿ ನೇಮಕಗೊಂಡ ಕೆಲವೇ ದಿನಗಳ ಬಳಿಕ ನಡೆದ ಘಟನೆಗಳು ಇವಾಗಿತ್ತು. ಮುಖ್ಯ ನ್ಯಾಯಮೂರ್ತಿಗಳ ಲೈಂಗಿಕ ಬೇಡಿಕೆಯನ್ನು ನಿರಾಕರಿಸಿದ್ದಕ್ಕಾಗಿ ಕೆಲಸ ಕಳೆದುಕೊಳ್ಳುವುದು, ಬಂಧನ, ಪೊಲೀಸರಿಂದ ಹಿಂಸೆಯಂತಹ ನಿರಂತರ ಕಿರುಕುಳದ ಘಟನೆಗಳನ್ನು ನನ್ನ ಕುಟುಂಬ ಅನುಭವಿಸಬೇಕಾಯಿತು ಎಂದು ಆಕೆ ದೂರಿದ್ದರು. ಸಿಜೆಐ ತಮ್ಮ ಸ್ಥಾನವನ್ನು, ಕಚೇರಿ ಮತ್ತು ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಮತ್ತು ಪೋಲಿಸರ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಅವರು ಆರೋಪಿಸಿದ್ದರು. 2019ರಲ್ಲಿ ದಾಖಲಿಸಲಾಗಿದ್ದ ಈ ಕುರಿತ ಸುಮೋಟೋ ಕೇಸ್‌ 2021ರಲ್ಲಿ  ಮುಕ್ತಾಯಗೊಂಡಿತ್ತು.

ಇದನ್ನು ಓದಿ: ದಲಿತ ಯುವಕನಿಗೆ ಥಳಿಸಿ ಮುಖದ ಮೇಲೆ ಮೂತ್ರ ವಿಸರ್ಜನೆ: ಅಮಾನವೀಯ ಘಟನೆ ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...