Homeಕರ್ನಾಟಕಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟುತ್ತಾರೆ ಹುಷಾರ್: ಸಿಎಂ ಸಿದ್ದರಾಮಯ್ಯ

ಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟುತ್ತಾರೆ ಹುಷಾರ್: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ, ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂತಹ ಕತೆಗಳನ್ನು ಕಟ್ಟಿ ಬಿಡುತ್ತಾರೆ ಹುಷಾರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ತುಮಕೂರಿನಲ್ಲಿ ಶನಿವಾರ (ಏ.19) ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ‌ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ‘ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ’ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು ಎಂದರು.

ಬಸವಣ್ಣ 850 ವರ್ಷಗಳ ಹಿಂದೆಯೇ ಅನುಭವ ಮಂಟಪ ರಚಿಸಿ ಸಮ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು. ಪ್ರಗತಿಪರ ವಿಚಾರಗಳನ್ನು ಇಟ್ಟುಕೊಂಡವರಿಗೆ ನಿರಂತರವಾಗಿ ಸಮಸ್ಯೆ ಬರುತ್ತಲೇ ಇರುತ್ತವೆ. ಹೀಗಾಗಿ ಪ್ರಗತಿಪರ ವಿಚಾರಗಳ ಜೊತೆ ನೀವು ಸದಾ ಗಟ್ಟಿಯಾಗಿ ನಿಲ್ಲಬೇಕು. ಪ್ರಗತಿಪರ ವಿಚಾರಗಳ ಜೊತೆಗೆ ನಾವು ನಿಲ್ಲದೆ ಸಮ ಸಮಾಜ ಬರಬೇಕು ಎಂದರೆ ಸಾಧ್ಯವಿಲ್ಲ ಎಂದು ವಿವರಿಸಿದರು.

ಜಾತಿಗೆ ಚಲನ ಇಲ್ಲ, ವರ್ಗಕ್ಕೆ ಚಲನೆ ಇಲ್ಲ. ಜಾತಿ ವ್ಯವಸ್ಥೆ ನಿಂತ ನೀರು. ಆರ್ಥಿಕ ಚಲನೆ ಸಿಕ್ಕಾಗ ಮಾತ್ರ ಜಾತಿಯಲ್ಲೂ ಚಲನೆ ಸಿಗುತ್ತದೆ. ಈ ಚಲನೆ ಸಿಗಬೇಕಾದರೆ ಶಿಕ್ಷಣದ ಅಗತ್ಯ ಇದೆ. ಜಾತಿ ಮುಕ್ತ ಮಾನವೀಯ ಸಮಾಜ ನಿರ್ಮಾಣ ನಮ್ಮ ಸಂವಿಧಾನದ ಆಶಯ ಮತ್ತು ಬದ್ಧತೆ. ಆದರೆ, ಇವತ್ತಿಗೂ ಅಸ್ಪೃಶ್ಯತೆ ಹೋಗಿಲ್ಲದಿರುವುದು, ಶೈಕ್ಷಣಿಕ ಸಮಾನತೆ ಇಲ್ಲದಿರುವುದು ಬೇಸರದ ಸಂಗತಿ ಎಂದರು.

ನಾನು ಶಿಕ್ಷಣ ಪಡೆದಿರುವುದು ನನ್ನ ಸ್ವಾರ್ಥಕ್ಕೆ ಅಲ್ಲ. ಅವಕಾಶ ವಂಚಿತ ಸಮುದಾಯಗಳ ಬಿಡುಗಡೆಗಾಗಿ ವಿದ್ಯೆ ಸಂಪಾದನೆ ಮಾಡಿದ್ದೇನೆ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಬರದೇ ಇದ್ದರೆ ನಾವು, ನೀವು ಶಿಕ್ಷಣ ಪಡೆಯಲು ಸಾಧ್ಯವಿರಲಿಲ್ಲ. ಮನುಸ್ಮೃತಿ ಕಾರಣದಿಂದ ಜಾತಿ ಅಸಮಾನತೆ, ಜಾತಿ ಶೋಷಣೆ, ಜಾತಿ ದೌರ್ಜನ್ಯ ಹೆಚ್ಚಾಯಿತು ಎಂದು ಹೇಳಿದರು.

ಪಟ್ಟಭದ್ರರು ಹಿಂದಿನ ಜನ್ಮದ ಕರ್ಮ ಎಂದು ನಂಬಿಸಿ ಜನರನ್ನು ವಂಚಿಸುತ್ತಿದ್ದಾರೆ. ಅದಕ್ಕೇ ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದರು. ನಿಮ್ಮಲ್ಲಿ ಎಷ್ಟು ಜನ ಕರ್ಮ ಸಿದ್ಧಾಂತ ತಿರಸ್ಕರಿಸಿದ್ದೀರೋ ಗೊತ್ತಿಲ್ಲ. ಬ್ರಹ್ಮ ಒಬ್ಬರಿಗೆ ಶಿಕ್ಷಣ, ಮತ್ತೊಬ್ಬರಿಗೆ ಅನಕ್ಷರತೆ ಸಿಗಲಿ ಅಂತ ಬರೆದರಾ? ಒಬ್ಬನಿಗೆ ಬಡವನಾಗು, ಮತ್ತೊಬ್ಬನಿಗೆ ಶ್ರೀಮಂತನಾಗು ಅಂತ ಬ್ರಹ್ಮ ಬರೆದರಾ? ಒಬ್ಬ ಹೊಟ್ಟೆತುಂಬ ಉಣ್ಣಬೇಕು, ಉಳಿದವರು ಹಸಿವಿನಿಂದ ಬಿದ್ದಿರಬೇಕು ಎಂದು ಬ್ರಹ್ಮ ಬರೆದುಬಿಟ್ಟರಾ? ಎಂದು ಪ್ರಶ್ನಿಸಿದರು.

ಪಟ್ಟಭದ್ರರು ಬಸವಣ್ಣನವರ ಕ್ರಾಂತಿ ಮುಂದುವರೆಸಲು ಬಿಡಲಿಲ್ಲ. ಆದ್ದರಿಂದ ನಾವು ವೈಜ್ಞಾನಿಕವಾಗಿ, ವೈಚಾರಿಕವಾಗಿ ಚಿಂತಿಸುವುದು ಅಗತ್ಯ. ಅಹಿಂದ ಸಮಾಜ ಮತ್ತು ಎಲ್ಲಾ ಜಾತಿ, ಧರ್ಮಗಳ ಬಡತನ, ಹಸಿವು ನಿವಾರಣೆ ಆಗಬೇಕು. ಅನ್ನಕ್ಕಾಗಿ ಯಾರೂ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗಿ ನಿಲ್ಲಬಾರದು ಎನ್ನುವ ಕಾರಣದಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದೆ ಎಂದು ಸ್ಮರಿಸಿದರು.

ಕಾಯಕ, ದಾಸೋಹ ಬಸವಣ್ಣನವರ ತತ್ವ. ಇದನ್ನು ಎಲ್ಲರೂ ಪಾಲಿಸಬೇಕು. ಎಲ್ಲಾ ಶ್ರಮಿಕ ವರ್ಗಗಳ ಸಂಸ್ಕೃತಿ, ಆಚಾರ, ವಿಚಾರ ಹೊರಗೆ ಬರಬೇಕು. ಇದಕ್ಕಾಗಿ ಎಲ್ಲರೂ ಸಾಹಿತ್ಯ ರಚನೆಯಲ್ಲಿ ತೊಡಬೇಕು. ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ನಿಗದಿಯಾಗಿತ್ತು. ಆದರೆ, ಈಗ ಶಿಕ್ಷಣ ಸಿಕ್ಕಿದೆ, ನಿಮ್ಮ ನಿಮ್ಮ‌ ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ. ನಮ್ಮ ಜ್ಞಾನ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು ಎಂದು ಸಿಎಂ ಪುನರುಚ್ಚರಿಸಿದರು.

ಬೆಂಗಳೂರು| ಆಟೋ ಚಾಲಕನಿಗೆ ‘ಹಿಂದಿ ಮಾತನಾಡು’ ಎಂದು ಧಮ್ಕಿ ಹಾಕಿದ ಉತ್ತರ ಭಾರತೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...