Homeಮುಖಪುಟನಿರ್ಭಯ ಪ್ರಕರಣ: ಕ್ಷಮಾಪಣಾ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಅಸ್ತು

ನಿರ್ಭಯ ಪ್ರಕರಣ: ಕ್ಷಮಾಪಣಾ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಅಸ್ತು

- Advertisement -
- Advertisement -

ದೆಹಲಿಯ ನಿರ್ಭಯ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದ ಅಪರಾಧಿ ಮುಖೇಶ್ ಕುಮಾರ್ ಸಿಂಗ್ ಸಲ್ಲಿಸಿರುವ ಕ್ಷಮಾದಾನ ಅರ್ಜಿಯನ್ನು ತುರ್ತಾಗಿ ವಿಚಾರಣೆ ಮಾಡಬೇಕಾಗಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್.ಎ.ಬಾಬ್ಡೆ ಹೇಳಿದ್ದಾರೆ.

ಮುಖೇಶ್ ಸಲ್ಲಿಸಿದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಮುಖೇಶ್  ಸಲ್ಲಿಸಿದ ಕುರೇಟೀವ್ ಅರ್ಜಿಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಯಾರನ್ನಾದರೂ ಗಲ್ಲಿಗೇರಿಸಲಾಗುವುದು ಎಂದರೆ ಇದಕ್ಕಿತ ಹೆಚ್ಚು ತುರ್ತು ಬೇರೆ ಇರುವುದಿಲ್ಲ ಎಂದು ಹೇಳಿದೆ.

ಫೆಬ್ರವರಿ 1ರಂದು ಯಾರನ್ನಾದರೂ ಗಲ್ಲಿಗೇರಿಸಬೇಕಾದರೆ ಅದು ಮೊದಲ ಆದ್ಯತೆಯ ವಿಷಯವಾಗಿದೆ ಮತ್ತು ಪೆಬ್ರವರಿ 1ರಂದು ಗಲ್ಲಿಗೇರಿಸಲು ನಿಗದಿಯಾಗಿರುವುದರಿಂದ ಉಲ್ಲೇಖಿತ ಅಧಿಕಾರಿಯನ್ನು ಸಂಪರ್ಕಿಸುವಂತೆ ಮುಖೇಶ್ ಅವರ ಸಲಹೆಗಾರರನ್ನು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಮತ್ತು ಸೂರ್ಯಕಾಂತ್‌ರವರಿಗೆ ಕೋರ್ಟ್‌ ಸೂಚಿಸಿದೆ.

ಜನವರಿ 17ರಂದು ರಾಷ್ಟ್ರಪತಿಗಳು ಮುಖೇಶ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದರು. ಇದಕ್ಕೂ ಮೊದಲು ಅಕ್ಷಯ್ ಕುಮಾರ್ ಕುರೇಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ. ಈ ಅರ್ಜಿಯನ್ನು ತಿರಸ್ಕರಿಸಿತ್ತು.

ನಿರ್ಭಯ ಗ್ಯಾಂಗ್ ರೇಪ್ ಮತ್ತು ಕೊಲೆ ಅಪರಾಧಿಗಳಾದ ಪವನ್ ಕುಮಾರ್ ಮತ್ತು ವಿನಯ್ ಕುಮಾರ್ ಶರ್ಮಾ ಇದುವರೆಗೂ ಸುಪ್ರೀಂಕೋರ್ಟ್ ಗೆ ಕ್ಷಮಾಧಾನ ಅರ್ಜಿಯನ್ನು ಸಲ್ಲಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...