Homeಮುಖಪುಟರಾಜ್ಯದ ಬಾಕಿ ಮೊತ್ತ ಬಿಡುಗಡೆ ಮಾಡದಿದ್ದರೆ, ಕೇಂದ್ರಕ್ಕೆ ಜಿಎಸ್‌ಟಿ ಪಾವತಿ ನಿಲ್ಲಿಸುತ್ತೇವೆ: ಮಮತಾ ಬ್ಯಾನರ್ಜಿ

ರಾಜ್ಯದ ಬಾಕಿ ಮೊತ್ತ ಬಿಡುಗಡೆ ಮಾಡದಿದ್ದರೆ, ಕೇಂದ್ರಕ್ಕೆ ಜಿಎಸ್‌ಟಿ ಪಾವತಿ ನಿಲ್ಲಿಸುತ್ತೇವೆ: ಮಮತಾ ಬ್ಯಾನರ್ಜಿ

- Advertisement -
- Advertisement -

ಕೇಂದ್ರವು ರಾಜ್ಯಕ್ಕೆ ನೀಡಬೇಕಾದ ಬಾಕಿ ಹಣವನ್ನು ಬಿಡುಗಡೆ ಮಾಡದಿದ್ದರೆ, ನಾವು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪಾವತಿಸುವುದನ್ನು ನಿಲ್ಲಿಸಬೇಕಾಗುತ್ತದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರಾದ ಮಮತಾ ಬ್ಯಾನರ್ಜಿಯವರು ಜಾರ್‌ಗ್ರಾಮ್‌ನಲ್ಲಿ ನಡೆದ ಬುಡಕಟ್ಟು ಸಮುದಾಯದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇಂದ್ರವು ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ’ (ನರೇಗಾ) ಅಡಿ ನೀಡಬೇಕಾದ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲ. ಅದರ ವಿರುದ್ಧ ರಾಜ್ಯದ ಆದಿವಾಸಿಗಳು ಪ್ರತಿಭಟನೆ ನಡೆಸಬೇಕು ಎಂದು ಕರೆ ನೀಡಿದ್ದಾರೆ.

ನರೇಗಾ  ಕಾನೂನಿನ ಪ್ರಕಾರ, “ಗ್ರಾಮೀಣ ಭಾಗದ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಕನಿಷ್ಠ 100 ದಿನಗಳ ಕೌಶಲರಹಿತ ಉದ್ಯೋಗವನ್ನು ಖಾತರಿ ನೀಡಲಾಗಿದೆ. ಕೆಲಸ ಮುಗಿದ 15 ದಿನಗಳಲ್ಲಿ ಕಾರ್ಮಿಕರ ಬ್ಯಾಂಕ್ ಖಾತೆಗೆ ನಿಗದಿತ ಕೂಲಿ ಹಣವನ್ನು ಜಮಾ ಮಾಡಬೇಕು.”

“100 ದಿನಗಳ ಉದ್ಯೋಗ ಖಾತರಿ ಯೋಜನೆ ಅನುದಾನ ಕಡ್ಡಾಯವಾಗಿದೆ” ಎಂದಿರುವ ಬ್ಯಾನರ್ಜಿ, “ಇದರ ನಡುವೆಯೂ, ಒಂದು ವರ್ಷದ ಹಿಂದೆ, ನಾನು ಈ ಬಗ್ಗೆ ಮಾತನಾಡಲು ಪ್ರಧಾನಿಯವರನ್ನು ಭೇಟಿ ಮಾಡಿದ್ದೆ. ನಾನು ನಿಮ್ಮ ಕಾಲಿಗೆ ಬಿದ್ದು ಬೇಡಿಕೊಳ್ಳಬೇಕೇ?” ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

ನರೇಗಾ ಯೋಜನೆಯಡಿ ನೀಡಬೇಕಾದ ಬಾಕಿ ಮೊತ್ತವನ್ನು ಪಶ್ಚಿಮ ಬಂಗಾಳ ರಾಜ್ಯಕ್ಕೆ ಕೇಂದ್ರ ಸರ್ಕಾರ ಪಾವತಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ಪಶ್ಚಿಮ ಬಂಗಾಳಕ್ಕೆ ನೀಡಬೇಕಾದ ಬಾಕಿ ಅನುದಾನವನ್ನು ನಿಲ್ಲಿಸುವುದಾಗಿ ಕೇಂದ್ರ ಸರ್ಕಾರ ಬೆದರಿಕೆ ಹಾಕುತ್ತಿದೆ. ನಾವು ಜಿಎಸ್ಟಿಯನ್ನು ಸಹ ನಿಲ್ಲಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

“ನೀವು ಇಲ್ಲಿ ತೆರಿಗೆಗಳನ್ನು ಸಂಗ್ರಹಿಸಲು ಸಾಧ್ಯವಿಲ್ಲ. ನಮಗೆ ಕಾನೂನುಬದ್ಧವಾಗಿ ಬರಬೇಕಾದ ಬಾಕಿ ಮೊತ್ತವನ್ನು ತಡೆಹಿಡಿಯಲು ಸಾಧ್ಯವಿಲ್ಲ. ಪಶ್ಚಿಮಬಂಗಾಳದ ಜನರಿಗೆ ನೀವು ಕೊಡಬೇಕಾದ ಅನುದಾನವನ್ನು ನಿರಾಕರಿಸುತ್ತಿದ್ದೀರಿ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿರಿ: EWS: ದಲಿತ-ಶೂದ್ರರ ಮೀಸಲಾತಿಯ ಕ್ರಾಂತಿಗೆ ಬ್ರಾಹ್ಮಣ್ಯದ ಪ್ರತಿಕ್ರಾಂತಿ

ಆಗಸ್ಟ್ 5ರಂದು ಬ್ಯಾನರ್ಜಿಯವರು ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದರು. ಪಶ್ಚಿಮ ಬಂಗಾಳಕ್ಕೆ ನೀಡಬೇಕಾದ ಹಣವನ್ನು ಬಿಡುಗಡೆ ಮಾಡುವಂತೆ ನೀವು ಮಧ್ಯಪ್ರವೇಶಿಸಬೇಕು ಎಂದು ಕೋರಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

“ಕೋರ್ ಸೆಕ್ಟರ್‌ಗಳ ಖಾತೆಯಲ್ಲಿ 1,00,968.44 ಕೋಟಿ ರೂ.ಗಳು ಬಾಕಿ ಉಳಿದಿರುವುದರಿಂದ, ರಾಜ್ಯ ಸರ್ಕಾರ ತನ್ನ ವ್ಯವಹಾರಗಳನ್ನು ನಡೆಸುವುದಕ್ಕೆ, ರಾಜ್ಯದ ಜನರನ್ನು ನೋಡಿಕೊಳ್ಳುವುದಕ್ಕೆ ಅತ್ಯಂತ ಕಷ್ಟಕರವಾಗುತ್ತಿದೆ ಎಂಬುದನ್ನು ನೀವು ಪ್ರಶಂಸಿಸುತ್ತೀರಿ” ಎಂದು ಪ್ರಧಾನಿಯವರಿಗೆ ಬರೆದ ಪತ್ರದಲ್ಲಿ ಮಮತಾ ಬ್ಯಾನರ್ಜಿಯವರು ಉಲ್ಲೇಖಿಸಿದ್ದರು.

ನರೇಗಾ, ಆವಾಸ್ ಯೋಜನೆ ಮತ್ತು ಗ್ರಾಮೀಣ ಸಡಕ್ ಯೋಜನೆಗಾಗಿ ಕೇಂದ್ರವು 17,996.32 ಕೋಟಿ ರೂಪಾಯಿ ಹಣವನ್ನು ನೀಡಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಸರಿಯಾದ ಕ್ರಮ,ಉಳಿದ ರಾಜ್ಯಗಳು ಇದನ್ನ ಬೆಂಬಲಿಸಿ ಅನುಸರಿಸಲಿ,ಮುಖ್ಯವಾಗಿ ಕರ್ನಾಟಕ ರಾಜ್ಯ ಈ ಕೆಲಸ ಮಾ ಡೀತೆ? ಕರ್ನಾಟಕದ ಪಾಲು ಒಕ್ಕೂಟ ಸರ್ಕಾರ ಬಿಡುಗಡೆ ಮಾಡಲಿ,ನಾವು ಸರ್ವಾಧಿಕಾರದ ಆಡಳಿತದಲ್ಲಿ ಇಲ್ಲಾ ಪ್ರಜಾಪ್ರಭುತ್ವದಲ್ಲಿ ಇದ್ದೇವೆ.

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...