Homeಕರ್ನಾಟಕಸಂವಿಧಾನ ಉಳಿದರೆ ನಾವೆಲ್ಲರೂ ಉಳಿಯುತ್ತೇವೆ; ಇಲ್ಲದಿದ್ದರೆ ಅಪಾಯಕ್ಕೆ ಸಿಲುಕುತ್ತೇವೆ: ಸಿಎಂ ಸಿದ್ದರಾಮಯ್ಯ

ಸಂವಿಧಾನ ಉಳಿದರೆ ನಾವೆಲ್ಲರೂ ಉಳಿಯುತ್ತೇವೆ; ಇಲ್ಲದಿದ್ದರೆ ಅಪಾಯಕ್ಕೆ ಸಿಲುಕುತ್ತೇವೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

‘ನಾವು ಸಂವಿಧಾನದ ಮಾಲೀಕರು’ ಸಂವಿಧಾನ ಕಿತ್ತು ಎಸೆಯುವುದರಲ್ಲಿ ನಮ್ಮ ಆಸಕ್ತಿಯಿಲ್ಲ, ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು’ ಎಂದು ಅಬ್ರಹಾಂ ಲಿಂಕನ್ ಹೇಳಿದ್ದರು. ಸಂವಿಧಾನದ ವಿರುದ್ಧ ಎರಡು ಅಪಪ್ರಚಾರಗಳು ನಡೆಯುತ್ತಿದೆ; ಸಂವಿಧಾನ ದಲಿತರ ಉದ್ದಾರಕ್ಕಾಗಿದೆ ಹಾಗೂ ಸಾಮಾಜಿಕ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಸ್ಪಷ್ಟವಾಗಿ ಹೇಳುವುದರಿಂದ ಸಂವಿಧಾನ ವಿರುದ್ಧ ಇರುವ ಜನರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅರಿಯಬೇಕು. 1950 ಜನವರಿ 26 ರಿಂದ ಜಾರಿಗೆ ಬಂದಾಗಿನಿಂದ ಈ ಅಪಪ್ರಚಾರ ನಡೆಯುತ್ತಿದೆ. ಇದನ್ನು ನಾವು ಯಾರೂ ಸಹಿಸಬಾರದು. ಸಂವಿಧಾನ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ. ಇಲ್ಲದಿದ್ದರೆ ಅಪಾಯಕ್ಕೆ ಸಿಲುಕುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

‘ದೇಶದಲ್ಲಿ ಅಸಮಾನತೆಯನ್ನು ತೊಲಗಿಸಬೇಕು; ನಾವು ವೈರುಧ್ಯ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಾಮಾಜಿಕ, ಆರ್ಥಿಕ ಅಸಮಾನತೆಯುಳ್ಳ ಸಮಾಜದಲ್ಲಿ ರಾಜಕೀಯ ಪ್ರಜಾಪ್ರಭುತ್ವವು ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಯಶಸ್ವಿಯಾಗುತ್ತದೆ. ಇಲ್ಲದಿದ್ದರೆ ಅಸಮಾನತೆಯಿಂದ ನರಳುವವರು ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್ ಹೇಳಿದ್ದರು. ಸಾಮಾಜಿಕ ಅಸಮಾನತೆಯನ್ನು ಅಳಿಸಿಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿ. ಸಂವಿಧಾನ ಯಶಸ್ವಿಯಾಗಲು ಇದು ಯಾರ ಕೈಯಲ್ಲಿ ಇದೆ ಎನ್ನುವುದು ಮುಖ್ಯ’ ಎಂದರು.

‘ಸಂವಿಧಾನ, ಸಮಾನತೆ, ಮಾನವ ಸಮಾಜದ ನಿರ್ಮಾಣದ ಪರವಾಗಿರುವವರ ಕೈಯಲ್ಲಿದ್ದರೆ ಸಂವಿಧಾನ ಯಶಸ್ವಿಯಾಗುತ್ತದೆ. ಸಂವಿಧಾನಕ್ಕೆ ವಿರುದ್ಧವಾಗಿರುವವರ ಕೈಯಲ್ಲಿದ್ದರೆ ನಮಗೆ ಉಳಿಗಾಲವಿಲ್ಲ. ಸಂವಿಧಾನದ ಆಶಯಗಳು ಈಡೇರಲು ಸಂವಿಧಾನದ ಪರವಾಗಿರುವವರ ಕೈಯಲ್ಲಿ ಅಧಿಕಾರವಿರಬೇಕು’ ಎಂದು ಹೇಳಿದರು.

‘ಸಂವಿಧಾನ ಜಾರಿಯಾದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಸಂವಿಧಾನದ ಪೀಠಿಕೆ, ಆಶಯಗಳನ್ನು ರಾಜ್ಯದ ಜನರು ಅರ್ಥ ಮಾಡಿಕೊಳ್ಳಬೇಕೆಂದು 2024 ಜನವರಿ 26 ರಿಂದ ರಾಜ್ಯದಲ್ಲಿ ಸಂವಿಧಾನ ಜಾಥಾ ಹಮ್ಮಿಕೊಳ್ಳಲಾಗಿದೆ. 31 ಜಿಲ್ಲೆಗಳಲ್ಲಿ ಸಂವಿಧಾನದ ಉದ್ದೇಶ, ಅಗತ್ಯ, ಅನಿವಾರ್ಯತೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಲಾಗಿದೆ. ಎರಡು ದಿನಗಳ ಕಾಲ ರಾಷ್ಟ್ರೀಯ ಏಕತೆ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ’ ಎಮದು ವಿವರಿಸಿದರು.

‘ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಅನೇಕ ದೇಶಗಳ ಸಂವಿಧಾನ ಓದಿ ಅರ್ಥ ಮಾಡಿಕೊಂಡು ದೇಶದ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ರೀತಿಯಲ್ಲಿ ಸಂವಿಧಾನ ರಚಿಸಿದ್ದಾರೆ. ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠ ಸಂವಿಧಾನ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಗೋಪಾಲಗೌಡರು, ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ನಾಗಮೋಹನ್ ದಾಸ್, ಸಚಿವರಾದ ಪ್ರಿಯಾಂಕ್ ಖರ್ಗೆ, ಶಾಸಕ ಸೋಮಶೇಖರ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಹಾಜರಿದ್ದರು.

ಇದನ್ನೂ ಓದಿ; ದಲಿತರ ಬಗ್ಗೆ ಕೇಂದ್ರ ಸರಕಾರ ಹಗೆತನದ ಧೋರಣೆ ಅನುಸರಿಸುತ್ತಿದೆ: ಪಿಣರಾಯ್‌ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...