Homeಕರ್ನಾಟಕಆಶಾ ಕಾರ್ಯಕರ್ತರ ಬೇಡಿಕೆಗೆ ಸರ್ಕಾರ ಜಗ್ಗದಿದ್ದರೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ: ಡಿಕೆಶಿ

ಆಶಾ ಕಾರ್ಯಕರ್ತರ ಬೇಡಿಕೆಗೆ ಸರ್ಕಾರ ಜಗ್ಗದಿದ್ದರೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ: ಡಿಕೆಶಿ

ಇವರು ಕೂಡ ನಿಮ್ಮ ಅಕ್ಕ- ತಂಗಿಯರು ಮುಖ್ಯಮಂತ್ರಿಗಳೇ. ಕೂಡಲೇ ನಿಮ್ಮ ಸಚಿವರನ್ನು ಕರೆದು ಚರ್ಚಿಸಿ ಇವರ ಬೇಡಿಕೆ ಈಡೇರಿಸಿ ಎಂದು ಶಿವಕುಮಾರ್‌ ಹೇಳಿದ್ದಾರೆ.

- Advertisement -
- Advertisement -

ಬೆಂಗಳೂರಿನ ಹೊರವಲಯ ನೆಲಮಂಗಲದಲ್ಲಿ ಕಳೆದ 12 ದಿನಗಳಿಂದ ಪ್ರತಿಭಟನೆ ಮಾಡುತ್ತಿರುವ ಆಶಾ ಕಾರ್ಯಕರ್ತರ ಬೇಡಿಕೆಗೆ ಸರ್ಕಾರ ತಕ್ಷಣವೇ ಸ್ಪಂದಿಸದಿದ್ದರೆ ಪ್ರತಿಭಟನಾಗಾರರ ಜೊತೆಗೂಡಿ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರನ್ನು ಇಂದು ಭೇಟಿ ಮಾಡಿದ ಶಿವಕುಮಾರ್ ಅವರೊಂದಿಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹಾಗೂ ಶಾಸಕಿ ಸೌಮ್ಯ ರೆಡ್ಡಿ ಇದ್ದರು. ಈ ವೇಳೆ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.

ಹನ್ನೆರಡು ದಿನಗಳಿಂದ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಿದ್ದರೂ ಸರಕಾರದ ಯಾರೊಬ್ಬರೂ ಅವರ ಅಹವಾಲು ಆಲಿಸಿಲ್ಲ. ಸರಕಾರ ಈಗಲೂ ಸ್ಪಂದಿಸದಿದ್ದರೆ ಕಾಂಗ್ರೆಸ್ ಪರವಾಗಿ ನಾನು ಅವರ ಬೆಂಬಲಕ್ಕೆ ನಿಂತು ಬೆಂಗಳೂರು ಚಲೋ ಚಳವಳಿ ಮಾಡಿ, ಸಿಎಂ ಮನೆಗೆ ಮುತ್ತಿಗೆ ಹಾಕುವುದು ಅನಿವಾರ್ಯವಾಗುತ್ತದೆ.

“ಕೋವಿಡ್ ಸಂದರ್ಭದಲ್ಲಿ ಈ ಹೆಣ್ಣು ಮಕ್ಕಳು ತಮ್ಮ ಜೀವವನ್ನು ಪಣಕ್ಕಿಟ್ಟು, ಎರಡೆರಡು ಬಾರಿ ಪ್ರತಿ ಮನೆಗೆ ಭೇಟಿ ಮಾಡಿ ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ನೀಡಿದ್ದಾರೆ.

ಇವರು ಕೂಡ ನಿಮ್ಮ ಅಕ್ಕ- ತಂಗಿಯರು ಮುಖ್ಯಮಂತ್ರಿಗಳೇ. ಕೂಡಲೇ ನಿಮ್ಮ ಸಚಿವರನ್ನು ಕರೆದು ಚರ್ಚಿಸಿ ಇವರ ಬೇಡಿಕೆ ಈಡೇರಿಸಿ” ಎಂದು ಅವರು ಹೇಳಿದರು.

ಕಳೆದ 12 ವರ್ಷಗಳಿಂದ ಇವರು ದುಡಿಯುತ್ತಿದ್ದು, ಅವರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎರಡೂ ಸೇರಿ 6 ಸಾವಿರ ರುಪಾಯಿ ಗೌರವಧನ ನಿಗದಿ ಮಾಡಿವೆ. ಎರಡೂ ಸರಕಾರಗಳು ಸೇರಿ ಒಟ್ಟಿಗೆ 12 ಸಾವಿರ ರುಪಾಯಿ ವೇತನ ಕೊಡಬೇಕು ಎಂದು ಇವರು ಕೇಳುತ್ತಿದ್ದಾರೆ. ಇವರು ಕೇಳುತ್ತಿರುವುದು ನ್ಯಾಯಸಮ್ಮತವಾಗಿದೆ ಎಂದರು.


ಓದಿ: ಕೊರೊನಾದಿಂದ ದೇವರೆ ಕಾಪಾಡುವುದಾದರೆ ನೀವು ಯಾಕೆ ? ರಾಜಿನಾಮೆ ಕೊಟ್ಟು ಹೋಗಿ: ಡಿ. ಕೆ. ಶಿವಕುಮಾರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...