Homeಕರ್ನಾಟಕ‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

- Advertisement -
- Advertisement -

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ. ಇಂದು ಅಂತಿಮ ಘಟ್ಟದ ನಿರ್ಣಾಯಕ ಹೋರಾಟ ನಡೆಯುತ್ತಿದೆ. ಆದರೂ, ಮಾದಿಗ ಸಮುದಾಯಗಳಿಗೆ ದೊರೆಯಬೇಕಾದ ಹಕ್ಕುಗಳು ಇನ್ನೂ ದೊರೆತಿಲ್ಲ. 

ಇಂದು (ಗುರುವಾರ) ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಸರಿಯಾದ ನಿರ್ಧಾರ ಕೈಗೊಳ್ಳದಿದ್ದರೆ, ಹೋರಾಟವು ಫ್ರೀಡಂ ಪಾರ್ಕಿನಿಂದ  ವಿಧಾನಸೌಧಕ್ಕೆ ಸ್ಥಳಾಂತರಗೊಳ್ಳುತ್ತದೆ ಎಂದು ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ‘ಒಳಮೀಸಲಾತಿ ಹೋರಾಟ ಸಮಿತಿ’ ನೇತೃತ್ವದಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ‘ಪಕ್ಕದ ಕೇರಳ, ಪಂಜಾಬ್ ನಲ್ಲಿ ಒಳಮೀಸಲಾತಿ ಜಾರಿಯಾಗಿದೆ. ಈ ರಾಜ್ಯಗಳಲ್ಲಿ ತೊಡಕಾಗದ ಕಾನೂನುಗಳು ಕರ್ನಾಟಕದಲ್ಲಿ ಹೇಗೆ ಅಡ್ಡಿಯಾಗುತ್ತವೆ ಎಂದು ನಾವು ಸರ್ಕಾರವನ್ನು ಕೇಳಬೇಕಿದೆ. ಎಲ್ಲ ಸಮಯದಾಯಗಳಿಗೂ ಸಾಮಾಜಿಕ ನ್ಯಾಯ ಸಿಗಬೇಕೆಂದು ಒಳಮೀಸಲಾತಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದರೂ, ಒಳಮೀಸಲಾತಿಯನ್ನು ಪರಿಪೂರ್ಣವಾಗಿ ಅನುಷ್ಠಾನಕ್ಕೆ ತರಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿಂದೇಟು ಹಾಕುತ್ತಿದೆ’ ಎಂದು ಆರೋಪಿಸಿದರು. 

ಎಡಗೈ ಸಮುದಾಯಗಳನ್ನು ಸಭೆಗೆ ಕರೆಯುತ್ತಾರೆ, ನಮ್ಮ ಬೇಡಿಕೆಗಳನ್ನು ಈಡೇರಿಸುತ್ತಾರೆಂದು ನಿರೀಕ್ಷಿಸಿದ್ದೆವು. ಆದರೆ, ಸರ್ಕಾರ ತಮ್ಮ ಕ್ಯಾಬಿನೆಟ್ ಸಭೆಯಲ್ಲಿ ಎರಡು ವಾರಗಳ ಕಾಲ ಮುಂದೂಡಿತು. ಸಮುದಾಯಗಳನ್ನು ವಂಚಿಸಿತು. ಈಗ, ಸರ್ಕಾರವು 50,000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಆದೇಶಿಸಿದೆ. ಆದರೆ, ಒಳಮೀಸಲಾತಿಯನ್ನು ತಪ್ಪಿಸಿದೆ. ನಾನು ನೇಮಕಾತಿಯನ್ನು ನಿಲ್ಲಿಸಿ ಎಂದು ಕೇಳುತ್ತಿಲ್ಲ. ಬದಲಾಗಿ, ಎಲ್ಲ ಸಮುದಾಯದ ಯುವಜನರಿಗೂ ಉದ್ಯೋಗಳ ಅಗತ್ಯವಿದೆ ಎಂಬುದನ್ನು ಅರಿತು, ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಕೆ ಆಗಬೇಕೆಂದು ಆಗ್ರಹಿಸುತ್ತಿದ್ದೇವೆ. ಸರ್ಕಾರವು ಇದೇ ರೀತಿ ನಿರ್ಲಕ್ಷ್ಯ ಧೋರಣೆ ತಳೆದರೆ, ಈ ಹೋರಾಟವು ಫ್ರೀಡಂ ಪಾರ್ಕಿನಿಂದ ವಿಧಾನಸೌಧಕ್ಕೆ ಸ್ಥಳಾಂತರಗೊಳ್ಳುತ್ತದೆ ಎಂದು ಎಚ್ಚರಿಸಿದ್ದಾರೆ. 

“ನಾಗಮೋಹನ್ ದಾಸ್ ಕಮಿಟಿಯನ್ನು ರಚಿಸಿದಿರಿ, ಕೋಟ್ಯಂತರ ಹಣ ವ್ಯಯ ಮಾಡಿದಿರಿ. ಆದರೆ, ಆ ವರದಿಯನ್ನ ಮೂಲೆಗೊತ್ತಿದ್ದೀರಿ. ನಿಮಗೆ ಬೇಕಾದಂತೆ ನೀವು ಮಾಡುವುದಾದರೆ, ಕಮಿಟಿಗಳನ್ನು ಯಾಕೆ ರಚಿಸಿದಿರಿ. ಹಣವನ್ನೇಕೆ ವ್ಯಯಿಸಿದಿರಿ. ನಿಮ್ಮಿಚ್ಚೆಯಂತೆ ನೀವು ಒಳಮೀಸಲಾತಿಯನ್ನು ಬರೆದು, ಜಾರಿಗೊಳಿಸಿದ್ದರೆ, ನಾವು ಅದಕ್ಕೆ ಸರಿಯಾಗಿ ಉತ್ತರ ಕೊಡುತ್ತಿದ್ದೆವು ಎಂದು ಕಿಡಿಕಾರಿದರು.

“ಗುರುವಾರ, (ಮಾರ್ಚ್ 12) ಸಂಪುಟ ಸಭೆ ನಡೆಯಲಿದೆ. ಸಿದ್ದರಾಮಯ್ಯನವರು ಇಂದಿನ ಸಭೆಯಲ್ಲಿಯೇ ಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ, ಸಮುದಾಯದ ಹೋರಾಟಗಾರರು ಯಾವ ಕ್ರಮಕ್ಕೆ ಮುಂದಾಗುತ್ತಾರೆಯೋ, ಅದರಂತೆ ಇಡೀ ಸಮುದಾಯ ಮುನ್ನಡೆಯುತ್ತದೆ ಎಂದು ಎಚ್ಚರಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಒಳಮೀಸಲಾತಿ ಹೋರಾಟದ ಮುಖಂಡ ಮಾರಸಂದ್ರ ಮುನಿಯಪ್ಪ ಅವರು ‘ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ. ಆದರೆ, ಒಳಮೀಸಲಾತಿ ವಿಚಾರದಲ್ಲಿ ಅವರು ನುಡಿದಂತೆ ನಡೆದಿಲ್ಲ. ಯಾರು ಅವರನ್ನು ತಡೆದಿದ್ದಾರೆ? ಸರ್ಕಾರವು 56,000 ಹುದ್ದೆಗಳನ್ನು ಭರ್ತಿಮಾಡಲು ಹೊರಡಿಸಿರುವ ಅಧಿಸೂಚನೆಯನ್ನು ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

ದೇಶಾದ್ಯಂತ 35 ಕೋಟಿಗೂ ಹೆಚ್ಚು ಮಂದಿ ಎಸ್ಸಿ/ಎಸ್ಟಿ ಸಮುದಾಯದ ಜನರಿದ್ದೇವೆ. ಎಲ್ಲ ಸಮುದಾಯಗಳು ಮತ್ತು ಒಳ ಪಂಗಡಗಳಿಗೂ ಸಮಾನ ಅವಕಾಶ ಸಿಗಬೇಕೆಂದು ಹೋರಾಟಗಳು ನಡೆದಿವೆ. ಒಳಮೀಸಲಾತಿಗಾಗಿ ಸದಾಶಿವ ಆಯೋಗದ ಶಿಫಾರಸುಗಳನ್ನು ಕಾಂಗ್ರೆಸ್ ಸರ್ಕಾರ ಕಡೆಗಣಿಸಿತು. ನಾಗಮೋಹನ್ ದಾಸ್ ನೇತೃತ್ವದಲ್ಲಿ ಹೊಸ ಆಯೋಗ ರಚಿಸಿತು. ಈಗ, ದಾಸ್ ಆಯೋಗದ ಶಿಫಾರಸುಗಳನ್ನೂ ಕಡೆಗಣಿಸಿ, ಒಳಮೀಸಲಾತಿ ಹಂಚಿಕೆ ಮಾಡಲಾಗಿದೆ. ಆದರೂ, ಜಾರಿಗೊಳಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಹೈಕಮಾಂಡ್ ದಲಿತ ಸಮುದಾಯದವರನ್ನು ಮುಖ್ಯಮಂತ್ರಿ ಮಾಡುತ್ತೇವೆಂದು ಕಾಂಗ್ರೆಸ್ ಹೈಕಮಾಂಡ್ ನಿರಂತರವಾಗಿ ಹೇಳಿಕೊಂಡು ಬಂದಿದೆ. ಆದರೆ, ನಿರಂತರವಾಗಿ ಎಸ್ಸಿ/ಎಸ್ಟಿ ಸಮುದಾಯವನ್ನು ವಂಚಿಸಿದೆ. ಒಳಮೀಸಲಾತಿ ಜಾರಿಮಾಡುತ್ತೇವೆಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಸಮುದಾಯವನ್ನು ವಂಚಿಸುತ್ತಿದೆ. 

ಫೆಬ್ರವರಿ 27ರಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆಯಲ್ಲಿ ಇಂದಿಗೆ ಮುಂದೂಡಲಾಗಿತ್ತು. ಈಗ, ಈ ತಿಂಗಳ ಕೊನೆಗೆ ಮುಂದೂಡಲಾಗಿದೆ ಎನ್ನಲಾಗುತ್ತಿದೆ. ಇದು ಅನ್ಯಾಯ. ಸರ್ಕಾರವು ಎಚ್ಚೆತ್ತುಕೊಂಡು ಒಳಮೀಸಲಾತಿ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು. ನೇಮಕಾತಿಯ ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...