Homeಕರ್ನಾಟಕಸಂಜೆ 5 ಗಂಟೆಯೊಳಗೆ ಸರ್ಕಾರ ರೈತಪರ ನಿರ್ಣಯ ತೆಗೆದುಕೊಳ್ಳದಿದ್ದರೆ ಹೋರಾಟದ ಸ್ವರೂಪ ಬದಲಾಗಲಿದೆ: ಬಡಗಲಪುರ ನಾಗೇಂದ್ರ

ಸಂಜೆ 5 ಗಂಟೆಯೊಳಗೆ ಸರ್ಕಾರ ರೈತಪರ ನಿರ್ಣಯ ತೆಗೆದುಕೊಳ್ಳದಿದ್ದರೆ ಹೋರಾಟದ ಸ್ವರೂಪ ಬದಲಾಗಲಿದೆ: ಬಡಗಲಪುರ ನಾಗೇಂದ್ರ

- Advertisement -
- Advertisement -

ಭೂಮಿ ತಂಟೆಗೆ ಬಂದರೆ ಯಾವ ಸರ್ಕಾರವೂ ಉಳಿಯುವುದಿಲ್ಲ. ರಾಜ್ಯ ಸರ್ಕಾರಕ್ಕೆ ಇಂದು ಸಂಜೆ 5 ಗಂಟೆಯವರೆಗೆ ಗುಡುವು ನೀಡುತ್ತೇವೆ. ಈ ಹಿಂದೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಇದ್ದರೆ, ನಮ್ಮ ಹೋರಾಟದ ಸ್ವರೂಪರ ಬದಲಾಗಲಿದೆ. ಎಂಬಿ ಪಾಟೀಲರ ಕುರ್ಚಿ ಮುರಿಯಲಿದೆ ಎಂದು ರಾಜ್ಯ ರೈತ ಸಂಘದ ನಾಯಕ ಬಡಗಲಪುರ ನಾಗೇಂದ್ರ ಹೇಳಿದರು.

ರೈತರ ಭೂ ಸ್ವಾಧೀನ ವಿರೋಧಿಸಿ ದೇವನಹಳ್ಳಿ ಹಳೆ ಬಸ್‌ ನಿಲ್ದಾಣದ ಬಳಿ ಹಮ್ಮಿಕೊಂಡಿರುವ ‘ದೇವನಹಳ್ಳಿ ಚಲೋ’ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, “13 ಹಳ್ಳಿಗಳ ಜನರು ಈ ಸರ್ಕಾರದ ಒಡೆದಾಳುವ ನೀತಿಯ ವಿರುದ್ಧ ತಮ್ಮ ಧೃಡತೆಯನ್ನು ಪ್ರತಿಜ್ಞೆ ಮೂಲಕ ಸ್ಪಷ್ಟ ಸಂದೇಶ ಕಳಿಸಿದ್ದೇವೆ” ಎಂದರು.

ಕಾರ್ಖಾನೆಗಳಿಗೆ ಭೂಮಿ ಬೇಕು ನಿಜ. ಇಲ್ಲಿರುವವರು ಅಭಿವೃದ್ಧಿ ವಿರೋಧಿಗಳಲ್ಲ. ಆದರೆ, ಯಾವ ರೀತಿಯ ಅಭಿವೃದ್ಧಿ ಎಂದು ಯೋಚಿಸಬೇಕಿದೆ. ಕೆಲವೇ ಕೆಲವು ವ್ಯಕ್ತಿಗಳನ್ನು ಶ್ರೀಮಂತರನ್ನಾಗಿ ಮಾಡುವ ನೀತಿ ವಿರುದ್ಧ ನಮ್ಮ ಹೋರಾಟ. ರೈತರ ಭೂ ಸ್ವಾಧೀನದ ವಿರುದ್ದ ಶೇ.77ರಷ್ಟು ಜನರು ತಮ್ಮ ಅಸಮ್ಮತಿಯನ್ನು ಸೂಚಿಸಿ ಸರ್ಕಾರಕ್ಕೆ ಮನವಿಪತ್ರ ನೀಡಿದ್ದಾರೆ ಎಂದು ಹೇಳಿದರು.

ವಿಶ್ವವಾಣಿಜ್ಯ ಒಪ್ಪಂದದ ಬಳಿಕ ಆಡಳಿತ ನಡೆಸುವವರ ಕಣ್ಣು ದುಡಿಯುವ ಜನರ ಮೇಲಿದೆ. ಶೇಕಡ 60ರಷ್ಟಿರುವ ರೈತರು ಶೇಕಡ 60ರಷ್ಟು ಉದ್ಯೋಗ ಸೃಷ್ಟಿಸಿದ್ದೇವೆ. ನಮ್ಮನ್ನು ಶೇಕಡ 20ಕ್ಕೆ ಇಳಿಸುವ ಹುನ್ನಾರವನ್ನು ಸರ್ಕಾರ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಶ್ವ ವಾಣಿಜ್ಯ ಒಪ್ಪಂದವನ್ನು ಆಗಿನ ಬಿಜೆಪಿ ನಾಯಕರಾಗಿದ್ದ ಮುರಳಿ ಮನೋಹರ್ ಜೋಶಿ ಮತ್ತು ಅಡ್ವಾಣಿ ವಿರೋಧಿಸಿದ್ದರು. ಕಾಂಗ್ರೆಸ್‌ ಸರ್ಕಾರದ ನೀತಿಯನ್ನು ಬಿಜೆಪಿ ವಿಮಾನಕ್ಕಿಂತ ಹೆಚ್ಚಿನ ವೇಗದಲ್ಲಿ ಜಾರಿ ಮಾಡಿತು. ಅದರ ಭಾಗವಾಗಿ ಬೆಂಗಳೂರು ಸುತ್ತಮುತ್ತಲಿನ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿದೆ. ಅದಕ್ಕೆ ಇಲ್ಲಿನ ಕಾಂಗ್ರೆಸ್ ಸರ್ಕಾರ  ಬೆಂಬಲ ನೀಡುತ್ತಿದೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ವಿಪಕ್ಷ ನಾಯಕರಾಗಿದ್ದಾಗ ನಿಮ್ಮ ಹೋರಾಟಕ್ಕೆ ನೂರಕ್ಕೆ ನೂರು ಬೆಂಬಲ ಎಂದು ಹೇಳಿ, ಬಲಾತ್ಕಾರದ ಭೂ ಸ್ವಾಧೀನ ವಿರೋಧಿಸಿದ್ದರು. ಸರ್ಕಾರ ಅಧಿಕಾರಕ್ಕೆ ಬಂದರೆ ಅಧಿಸೂಚನೆ ರದ್ದು ಮಾಡುವುದಾಗಿ ಹೇಳಿದ್ದರು. ಆದರೆ, ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ. ಸರ್ಕಾರ ರೈತರ ಬದುಕಿನ ಜೊತೆಗೆ ಚೆಲ್ಲಾಟ ಆಡುತ್ತಿದೆ ಎಂದು ಬೇಸರ ಕಿಡಿಕಾರಿದರು.

ಸಚಿವರಾದ ಎಂ.ಬಿ ಪಾಟೀಲ್ ಮತ್ತು ಕೆ.ಎಚ್ ಮುನಿಯಪ್ಪ ಸುದ್ದಿಗೋಷ್ಠಿ ನಡೆಸಿ 493 ಎಕರೆ ಭೂಮಿಯನ್ನು ಭೂ ಸ್ವಾಧೀನದಿಂದ ಕೈಬಿಟ್ಟು ಉಳಿದ ಭೂಮಿ ಸ್ವಾಧೀನ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಅವರು ಹೊಸತೇನೂ ಹೇಳಿಲ್ಲ. ರೈತರಿಗೆ ಅಭಿವೃದ್ಧಿಪಡಿಸಿದ ಭೂಮಿಯನ್ನೂ ಕೊಡುತ್ತೇವೆ ಎಂದು ಹೇಳಿದ್ದಾರೆ. ರೈತಕುಲವನ್ನು ನಿರ್ವಂಶ ಮಾಡಲು ಸರ್ಕಾರ ನಿರ್ಧರಿಸಿದಂತಿದೆ ಎಂದರು.

ಹೈಕೋರ್ಟ್‌ ಆದೇಶ ಇದೆ ಎಂದು ಹೇಳಿ ಪ್ರತಿಭಟಿಸದಂತೆ ಮನವೊಲಿಸಲು ಮುಂದಾದರು. ನಾವು ಜನವಿರೋಧಿ ಕಾನೂನು ಉಲ್ಲಂಘಿಸುತ್ತೇವೆ ಎಂದು ಹೇಳಿದ್ದೇವೆ. ನಮ್ಮ ಹೋರಾಟವನ್ನು ನಾವು ಗೆದ್ದೇ ಗೆಲ್ಲುತ್ತೇವೆ ಎಂದರು.

LIVE UPDATES ‘ದೇವನಹಳ್ಳಿ ಚಲೋ’ | ‘ಪ್ರಾಣ ಕೊಟ್ಟೇವು, ಭೂಮಿ ಬಿಡೆವು’ | ತಮ್ಮ ಭೂಮಿಯ ಮಣ್ಣಲ್ಲಿ ಗಿಡನೆಟ್ಟು ಸಂಕಲ್ಪ ಮಾಡಿದ ರೈತ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...