Homeಮುಖಪುಟಹೊಸ ಐಟಿ ನಿಯಮ ತಡೆ ಹಿಡಿಯದಿದ್ದರೆ ಟ್ವಿಟರ್‌‌ ಅದನ್ನು ಪಾಲಿಸಬೇಕು: ದೆಹಲಿ ಹೈಕೋರ್ಟ್

ಹೊಸ ಐಟಿ ನಿಯಮ ತಡೆ ಹಿಡಿಯದಿದ್ದರೆ ಟ್ವಿಟರ್‌‌ ಅದನ್ನು ಪಾಲಿಸಬೇಕು: ದೆಹಲಿ ಹೈಕೋರ್ಟ್

- Advertisement -
- Advertisement -

ಡಿಜಿಟಲ್‌ ಮಾಧ್ಯಮಗಳಿಗೆ ಪರಿಚಯಿಸಿದ ಹೊಸ ಮಾಹಿತಿ ತಂತ್ರಜ್ಞಾನ ನಿಯಮವನ್ನು ತಡೆ ಹಿಡಿಯದಿದ್ದರೆ ಟ್ವಿಟರ್‌ ಕಂಪೆನಿಯು ಆ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದು ದೆಹಲಿ ಹೈಕೋರ್ಟ್ ಸೋಮವಾರ ತಿಳಿಸಿದೆ.

ಟ್ವಿಟರ್‌ ನಿಯಮಗಳನ್ನು ಪಾಲಿಸಲಿಲ್ಲ ಎಂದು ಆರೋಪಿಸಿ ಅಮಿತ್ ಆಚಾರ್ಯ ಎಂಬ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಅಲ್ಲಿಸಿದ್ದರು. ನ್ಯಾಯಮೂರ್ತಿ ರೇಖಾ ಪಲ್ಲಿ ಅವರು ತಮ್ಮ ನಿಲುವುಗಳನ್ನು ತಿಳಿಸುವಂತೆ ಕೇಂದ್ರ ಸರ್ಕಾರ ಮತ್ತು ಸೋಷಿಯಲ್ ಮೀಡಿಯಾ ವೇದಿಕೆಯಾದ ಟ್ವಿಟರ್‌ಗೆ ನೋಟಿಸ್ ಜಾರಿಮಾಡಿದ್ದಾರೆ.

ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ತಾನು ನಿಯಮಗಳನ್ನು ಪಾಲಿಸಿದ್ದು, ಸ್ಥಳೀಯ ಅಧಿಕಾರಿಯನ್ನು ನೇಮಿಸಿದ್ದೇನೆ ಎಂದು ನ್ಯಾಯಾಲಯದ ಮುಂದೆ ಟ್ವಿಟರ್‌ ಹೇಳಿದೆ. ಆದರೆ ಕೇಂದ್ರ ಸರ್ಕಾರವು ಟ್ವಿಟರ್‌ನ ಈ ಪ್ರತಿಪಾದನೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ. ವಿಚಾರಣೆಯ ವೇಳೆ ಕೇಂದ್ರ ಸರ್ಕಾರದ ಸ್ಥಾಯಿ ಸಲಹೆಗಾರ ರಿಪುದಮನ್ ಸಿಂಗ್ ಭರದ್ವಾಜ್ ಅವರು ಟ್ವಿಟರ್ ನಿಯಮಗಳನ್ನು ಪಾಲಿಸಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ಹೊಸ ನಿಯಮಗಳನ್ನು ತಡೆಹಿಡಿಯಲಾಗದಿದ್ದರೆ ಟ್ವಿಟರ್‌ ನಿಯಮಗಳನ್ನು ಅನುಸರಿಸಬೇಕು” ಎಂದು ನ್ಯಾಯಾಲಯವು ಹೇಳಿದೆ.

ವಕೀಲ ಆಕಾಶ್ ವಾಜಪೇಯಿ ಮತ್ತು ಮನೀಶ್ ಕುಮಾರ್ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ, ಅಮಿತ್‌ ಆಚಾರ್ಯ ಅವರು ಒಂದೆರಡು ಟ್ವೀಟ್‌ಗಳ ವಿರುದ್ಧ ನಾವು ದೂರು ನೀಡಲು ಪ್ರಯತ್ನಿಸಿದೆವು. ಆಗ ನಮಗೆ ಟ್ವಿಟರ್‌ ಹೊಸ ನಿಯಮವನ್ನು ಪಾಲಿಸದ ಆರೋಪ ಕೇಳಿ ಬಂದಿದೆ ಎಂದು ಹೇಳಿದ್ದಾರೆ.

ಹೊಸ ಐಟಿ ನಿಯಮಗಳು ಫೆಬ್ರವರಿ 25 ರಿಂದ ಜಾರಿಗೆ ಬಂದವು ಮತ್ತು ಅವುಗಳನ್ನು ಅನುಸರಿಸಲು ಕೇಂದ್ರವು ಟ್ವಿಟರ್ ಸೇರಿದಂತೆ ಪ್ರತಿಯೊಂದು ಸಾಮಾಜಿಕ ಜಾಲತಾಣಗಳಿಗೆ ಮೂರು ತಿಂಗಳು ಕಾಲಾವಕಾಶ ನೀಡಿತ್ತು. ಮೇ 25 ರಂದು ಮೂರು ತಿಂಗಳ ಅವಧಿ ಮುಗಿದಿದೆ. ಆದರೆ ಟ್ವಿಟ್ಟರ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿನ ಟ್ವೀಟ್‌ಗಳಿಗೆ ಸಂಬಂಧಿಸಿದ ದೂರುಗಳನ್ನು ಎದುರಿಸಲು ಯಾವುದೇ ಸ್ಥಳೀಯ ಕುಂದುಕೊರತೆ ಅಧಿಕಾರಿಯನ್ನು ನೇಮಿಸಲಿಲ್ಲ ಎಂದು ಅಮಿತ್‌ ಆಚಾರ್ಯ ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಒಕ್ಕೂಟ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಟ್ವಿಟರ್ ಅಭಿಯಾನಕ್ಕೆ ಕರೆವೇ ಕರೆ

ವಿಳಂಬ ಮಾಡದೆ ಸ್ಥಳೀಯ ಕುಂದುಕೊರತೆ ಅಧಿಕಾರಿಯನ್ನು ನೇಮಿಸುವಂತೆ ಟ್ವಿಟರ್‌ಗೆ ನಿರ್ದೇಶನ ನೀಡುವಂತೆ ಅವರು ಮನವಿಯಲ್ಲಿ ಕೋರಿದ್ದು, ಜೊತೆಗೆ ಐಟಿ ನಿಯಮಗಳನ್ನು ಪಾಲಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆಯು ಕೋರಿದ್ದಾರೆ.

ಟ್ವಿಟರ್ ಇತ್ತೀಚೆಗೆ ಭಾರತದ ನಿಯಮಕ್ಕೆ ಬದ್ಧವಾಗಿದ್ದೇವೆ ಎಂದು ಹೇಳಿತ್ತು, ಆದರೆ ಹೊಸ ಐಟಿ ನಿಯಮಗಳು ಮತ್ತು ನಿಬಂಧನೆಗಳನ್ನು ಅದು ಟೀಕಿಸಿದ್ದು, “ಭಾರತವು ಮುಕ್ತ ಸಾರ್ವಜನಿಕ ಅಭಿವ್ಯಕ್ತಿಯನ್ನು ತಡೆಯುತ್ತಿದೆ” ಎಂದು ಹೇಳಿತ್ತು. ಆದರೆ ಟ್ವಿಟರ್‌ನ ಈ ಮಾತಿಗೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರವು ಆಧಾರರಹಿತ ಮತ್ತು ಸುಳ್ಳು ಆರೋಪಗಳನ್ನು ಮಾಡುತ್ತಿದೆ ಎಂದು ಹೇಳಿದೆ.

‘ಸೂಚಿಸಿದ’ ಸಂದೇಶದ ಮೂಲವನ್ನು ಗುರುತಿಸುವ ಮತ್ತು ಕುಂದುಕೊರತೆಯ ಪರಿಶೀಲಿಸುವ ಅಧಿಕಾರಿಗಳನ್ನು ನೇಮಿಸಲು ಹೇಳುವ ಹೊಸ ಡಿಜಿಟಲ್ ನಿಯಮಗಳನ್ನು ಅನುಸರಿಸಲು ಟ್ವಿಟರ್ ನಿರಾಕರಿಸಿದೆ ಎಂದು ಕೇಂದ್ರ ಆರೋಪಿಸಿದೆ.

ಹೊಸ ಡಿಜಿಟಲ್ ನಿಯಮಗಳ ಪ್ರಕಾರ, ಸಾಮಾಜಿಕ ಮಾಧ್ಯಮ ಕಂಪೆನಿಗಳಾದ ಫೇಸ್‌ಬುಕ್, ವಾಟ್ಸಾಪ್ ಮತ್ತು ಟ್ವಿಟರ್‌ಗಳನ್ನು ‘ಸೂಚಿಸಿದ’ ಸಂದೇಶದ ಮೂಲವನ್ನು 36 ಗಂಟೆಗಳಲ್ಲಿ ಗುರುತಿಸುವುದು ಮತ್ತು ಹೆಚ್ಚುವರಿ ಕ್ರಮಗಳನ್ನು ತಗೆದುಕೊಳ್ಳುವುದು ಮಾಡಬೇಕಾಗುತ್ತದೆ. ಮುಖ್ಯ ಪಾಲನೆ ಅಧಿಕಾರಿ, ನೋಡಲ್ ಸಂಪರ್ಕ ವ್ಯಕ್ತಿ ಮತ್ತು ಸ್ಥಳೀಯ ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕು ಎಂದು ನಿಯಮವು ಹೇಳುತ್ತದೆ.

ಇದನ್ನೂ ಓದಿ: ಸುಳ್ಳನ್ನು ಎತ್ತಿ ತೋರಿಸಿದ್ದಕ್ಕೆ ಟ್ವಿಟರ್‌ ಅನ್ನು ಬೆದರಿಸುತ್ತಿರುವ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...