Homeಮುಖಪುಟಮಾತುಕತೆ ನಡೆಸದಿದ್ದರೆ ಭವಿಷ್ಯದಲ್ಲಿ ಕಾಶ್ಮೀರಕ್ಕೂ ಗಾಜಾ ಪರಿಸ್ಥಿತಿ: ಫಾರೂಕ್ ಅಬ್ದುಲ್ಲಾ

ಮಾತುಕತೆ ನಡೆಸದಿದ್ದರೆ ಭವಿಷ್ಯದಲ್ಲಿ ಕಾಶ್ಮೀರಕ್ಕೂ ಗಾಜಾ ಪರಿಸ್ಥಿತಿ: ಫಾರೂಕ್ ಅಬ್ದುಲ್ಲಾ

- Advertisement -
- Advertisement -

‘ವಿವಾದಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪಾಕಿಸ್ತಾನದೊಂದಿಗೆ ಮಾತನಾಡುತ್ತಿಲ್ಲ’ ಎಂದು ನರೇಂದ್ರ ಮೋದಿ ಸರ್ಕಾರವನ್ನು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಟೀಕಿಸಿದ್ದಾರೆ. ‘ನಾವು ಮಾತುಕತೆ ಪ್ರಾರಂಭಿಸದಿದ್ದರೆ, ಭವಿಷ್ಯದಲ್ಲಿ ನಾವೂ ಸಹ ಗಾಜಾದ ಪರಿಸ್ಥಿತಿ ಎದುರಿಸುಬೇಕಾಗುತ್ತದೆ’ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ದೆಹಲಿಯಲ್ಲಿ ಮಾತನಾಡಿದ ಅವರು, ‘ನಾವು ನಮ್ಮ ಸ್ನೇಹಿತರನ್ನು ಬದಲಾಯಿಸಬಹುದು. ಆದರೆ, ನಮ್ಮ ನೆರೆಹೊರೆಯವರನ್ನಲ್ಲ’ ಎಂಬ ಭಾರತ-ಪಾಕಿಸ್ತಾನ ಸಂಬಂಧಗಳ ಕುರಿತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೇಳಿಕೆಯನ್ನು ಉಲ್ಲೇಖಿಸಿದರು. ‘ಪ್ರಧಾನಿ ಮೋದಿಯವರು ಕೂಡ ಯುದ್ಧವು ಈಗ ಆಯ್ಕೆಯಾಗಿಲ್ಲ ಮತ್ತು ಮಾತುಕತೆ ಮೂಲಕ ವಿವಾದಗಳನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ. ಆದರೆ, ಮಾತುಕತೆ ಎಲ್ಲಿದೆ? ನವಾಜ್ ಷರೀಫ್ ಅವರು (ಪಾಕಿಸ್ತಾನದ) ಪ್ರಧಾನಿಯಾಗಿದ್ದಾಗ ನಾವು ಮಾತನಾಡಲು ಸಿದ್ಧ ಎಂದು ಅವರು ಹೇಳುತ್ತಿದ್ದರು. ಆದರೆ, ನಾವು ಮಾತನಾಡಲು ಸಿದ್ಧವಾಗಿಲ್ಲದಿರುವುದಕ್ಕೆ ಕಾರಣವೇನು’ ಎಂದು ಅಬ್ದುಲ್ಲಾ ಪ್ರಶ್ನಿಸಿದ್ದಾರೆ.

‘ಪರಸ್ಪರ ಸಂವಾದದ ಮೂಲಕ ಪರಿಹಾರ ಕಂಡುಕೊಳ್ಳದಿದ್ದರೆ ಇಸ್ರೇಲ್‌ನಿಂದ ಬಾಂಬ್ ದಾಳಿಗೆ ಒಳಗಾಗಿರುವ ಗಾಜಾ ಮತ್ತು ಪ್ಯಾಲೆಸ್ತೀನ್‌ಗೂ ಆದ ಗತಿಯೆ ನಮಗೂ ಬರಲಿದೆ. ಇಸ್ರೇಲ್‌ನ ಮೇಲೆ ಹಮಾಸ್‌ನ ಅಕ್ಟೋಬರ್ 7 ರ ದಾಳಿಗಳು ಮತ್ತು ನಂತರದ ಕ್ರೂರ ಪ್ರತಿದಾಳಿಯು 21,000ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಗಾಜಾದ ಹೆಚ್ಚಿನ ಭಾಗಗಳನ್ನು ಭಗ್ನಾವಶೇಷ ಮಾಡಿದೆ’ ಎಂದು ಹೇಳಿದ್ದಾರೆ.

ಕಳೆದ ಒಂದು ವಾರದಿಂದ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ಕ್ಷಿಪ್ರ ಬೆಳವಣಿಗೆಗಳ ನಂತರ ಅವರು ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು, ಪೂಂಚ್‌ನಲ್ಲಿ ಉಗ್ರಗಾಮಿಗಳು ನಡೆಸಿದ ದಾಳಿಯಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದಾರೆ. ಬಾರಾಮುಲ್ಲಾ ಮಸೀದಿಯೊಳಗೆ ನಿವೃತ್ತ ಪೋಲೀಸ್‌ ಒಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿದ್ದು, ಅದರ ವಿಚಾರಣೆಗಾಗಿ ಪೊಲೀಸರು ಕೆಲವರನ್ನು ವಶಕ್ಕೆ ಪಡೆದುಕೊಂಡ ನಂತರ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ.

‘ಕಣಿವೆ ರಾಜ್ಯಕ್ಕೆ ಪ್ರವಾಸಿಗರ ಆಗಮನವನ್ನು ಶಾಂತಿ ಎಂದು ಪ್ರಚಾರ ಮಾಡುವುದು ಭಯೋತ್ಪಾದನೆಯನ್ನು ಕೊನೆಗೊಳಿಸುವುದಿಲ್ಲ. ಅವರು ಆರ್ಟಿಕಲ್ 370 ರದ್ದತಿಯೊಂದಿಗೆ ಭಯೋತ್ಪಾದನೆ ಮುಗಿದಿದೆ ಎಂದು ಪ್ರತಿಪಾದಿಸುತ್ತಿದ್ದಾರೆ. ಆದರೆ, ನಾಲ್ಕು ವರ್ಷಗಳ ನಂತರವೂ ಭಯೋತ್ಪಾದನೆ ಇನ್ನೂ ಇದೆ. ನಾವು ನಿರ್ಮೂಲನೆ ಮಾಡಲು ಪ್ರಯತ್ನಿಸುವವರೆಗೂ ಕೊನೆಗೊಳ್ಳುವುದಿಲ್ಲ. ಭಯೋತ್ಪಾದನೆಯ ಮೂಲ ಕಾರಣವನ್ನು ಅರ್ಥಮಾಡಿಕೊಳ್ಳಿ’ ಎಂದು ಕೇಂದ್ರಕ್ಕೆ ಸಲಹೆ ನೀಡಿದ್ದಾರೆ.

‘ಪೊಲೀಸ್ ಅಧಿಕಾರಿಯ ಹತ್ಯೆಗೆ ನಾನು ವಿಷಾದಿಸುತ್ತೇನೆ. ಕಾಶ್ಮೀರ ಸಹಜಸ್ಥಿತಿಯಲ್ಲಿದೆ ಎಂದು ಹೇಳುವವರು ಮೌನವಾಗಿದ್ದಾರೆ. ಅವರು ಇದರ ಮೂಲ ಕಾರಣವನ್ನು ಪರಿಹರಿಸುವ ಬದಲು ಮೇಲ್ನೋಟದ ಗಾಯಗಳನ್ನು ವಾಸಿಮಾಡಲು ಪ್ರಯತ್ನಿಸಿದರು. ನಾವು ನಮ್ಮ ಸೈನಿಕರನ್ನು, ಅಧಿಕಾರಿಗಳನ್ನು ಕಳೆದುಕೊಳ್ಳುತ್ತಿದ್ದೇವೆ ಎಂಬುದನ್ನು ಸಾಮಾನ್ಯರು ಅರ್ಥಮಾಡಿಕೊಳ್ಳಬೇಕು’ ಎಂದು ಅವರು ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ರಕ್ತಪಾತವನ್ನು ಕೊನೆಗೊಳಿಸಲು ಕೇಂದ್ರವು ‘ಸರಿಯಾದ ದೃಷ್ಟಿಕೋನ’ ವನ್ನು ಕಂಡುಹಿಡಿಯಬೇಕಾಗಿದೆ. ‘ನಾವು ಭಾರತದ ಭಾಗವಾಗಿದ್ದೇವೆ, ನಾವು ಭಾರತದ ಭಾಗವಾಗಿದ್ದೇವೆ ಮತ್ತು ನಾವು ಭಾರತದ ಭಾಗವಾಗಿಯೇ ಉಳಿಯುತ್ತೇವೆ. ನಾವು ಭಯೋತ್ಪಾದನೆಯನ್ನು ಕೊನೆಗೊಳಿಸಬೇಕಾದರೆ, ಅದರ ನಿರ್ಮೂಲನೆಗೆ ಮಾರ್ಗಗಳನ್ನು ಹುಡುಕಬೇಕಾಗಿದೆ’ ಎಂದು ಅವರು ಹೇಳಿದರು.

‘ಮಿಲಿಟರಿ ಅಥವಾ ಪೊಲೀಸರ ಬಳಕೆಯಿಂದ ಭಯೋತ್ಪಾದನೆಯನ್ನು ಕೊನೆಗಾಣಿಸಲು ಸಾಧ್ಯವಿಲ್ಲ. ನಾವು ಅದರ ಆಳವನ್ನು ಅರ್ಥಮಾಡಿಕೊಂಡು, ಮೂಲ ಕಾರಣವನ್ನು ಪರಿಹರಿಸಬೇಕು’ ಎಂದು ಅವರು ಹೇಳಿದರು.

‘ಭಯೋತ್ಪಾದಕರು ದಾಳಿ ಮಾಡಿದ್ದರಿಂದ ನಮ್ಮ ವೀರ ಸೈನಿಕರು ಹುತಾತ್ಮರಾದರು, ನಂತರ ಮೂವರು ಸ್ಥಳೀಯ ನಾಗರಿಕರನ್ನು ಚಿತ್ರಹಿಂಸೆಗೆ ಒಳಪಡಿಸಿರುವುದು ದುರಂತ. ಏಕೆಂದರೆ, ನಾವು ಭಯೋತ್ಪಾದನೆಯ ವಿರುದ್ಧ ಹೋರಾಡುತ್ತಿದ್ದೇವೆ; ನಮ್ಮ ಜನರ ವಿರುದ್ಧ ಅಲ್ಲ. ನಾವು ನಮ್ಮ ಜನರನ್ನು ಕಿರಿಕಿರಿಗೊಳಿಸಿದರೆ, ಎಂದಿಗೂ ಈ ಯುದ್ಧವನ್ನು ಗೆಲ್ಲುವುದಿಲ್ಲ’ ಎಂದು ಅವರು ಹೇಳಿದರು.

ಇದನ್ನೂ ಓದಿ; ‘ಹಿಂದೂ’ ಎಂಬುವುದು ಒಂದು ವಂಚನೆಯಾಗಿದೆ: ಸ್ವಾಮಿ ಪ್ರಸಾದ್ ಮೌರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...