Homeಕರ್ನಾಟಕಬಿಜೆಪಿ ಜೊತೆ ಕೈ ಜೋಡಿಸದ ಒಂದು ಪಕ್ಷವಿದ್ದರೆ ತೋರಿಸಿ: ಎಚ್‌.ಡಿ.ದೇವೇಗೌಡರ ಪ್ರತಿಕ್ರಿಯೆ

ಬಿಜೆಪಿ ಜೊತೆ ಕೈ ಜೋಡಿಸದ ಒಂದು ಪಕ್ಷವಿದ್ದರೆ ತೋರಿಸಿ: ಎಚ್‌.ಡಿ.ದೇವೇಗೌಡರ ಪ್ರತಿಕ್ರಿಯೆ

- Advertisement -
- Advertisement -

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲಿವೆ ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಅವರು ಪ್ರತಿಕ್ರಿಯಿಸಿದ್ದು, “ದೇಶದಲ್ಲಿ ಬಿಜೆಪಿ ಜತೆ ಕೈಜೋಡಿಸದೇ ಇರುವ ಯಾವುದಾದರೂ ಒಂದು ಪಕ್ಷವಿದ್ದರೆ ತೋರಿಸಿ. ಆ ನಂತರ ವಿಪಕ್ಷಗಳ ಒಗ್ಗಟ್ಟಿನ ಬಗ್ಗೆ ಮಾತನಾಡುವೆ” ಎಂದು ಸವಾಲು ಹಾಕಿದ್ದಾರೆ.

ಜೆಡಿಎಸ್‌ ಪ್ರಧಾನ ಕಚೇರಿ ಜೆ.ಪಿ. ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ. “ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿದ್ದು, ಜೆಡಿಎಸ್‌ ಇದನ್ನು ಬೆಂಬಲಿಸಲಿದೆಯೇ?” ಎಂದು ಕೇಳಲಾದ ಪ್ರಶ್ನೆಗೆ ದೇವೇಗೌಡರು ಹೀಗೆ ಪ್ರತಿಕ್ರಿಯಿಸಿದ್ದಾರೆ.

“ಎಲ್ಲ ಪಕ್ಷಗಳೂ ಬಿಜೆಪಿ ಜತೆ ನೇರವಾಗಿ ಅಥವಾ ಪರೋಕ್ಷವಾಗಿ ಕೈಜೋಡಿಸಿವೆ. ಕಾಂಗ್ರೆಸ್ ಪಕ್ಷದ‌ ಕೆಲವು ನಾಯಕರೂ ಅವರಲ್ಲಿ ಸೇರಿದ್ದಾರೆ” ಎಂದು ತಿಳಿಸಿದ್ದಾರೆ.

ಜೆಡಿಎಸ್ ಪಕ್ಷವು ಮುಂದಿನ ಲೋಕಸಭಾ ಚುನಾವಣೆ ಬಗ್ಗೆ ಚಿಂತಿಸುವುದಿಲ್ಲ. ಈಗ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆಗಳು ಬರಲಿವೆ. ಈ ಚುನಾವಣೆಗಳಲ್ಲಿ ಪಕ್ಷ ಪಡೆಯುವ ಜನಬೆಂಬಲ ಆಧರಿಸಿ ಲೋಕಸಭಾ ಚುನಾವಣೆಯಲ್ಲಿ ಎಷ್ಟು ಕ್ಷೇತ್ರಗಳಲ್ಲಿ, ಯಾವ ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕು ಎಂಬುದನ್ನು ನಿರ್ಧರಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

“ನನಗೆ ಈಗ 91 ವರ್ಷ ವಯಸ್ಸು. ಈಗ‌ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆ ಉದ್ಭವಿಸುವುದಿಲ್ಲ. ಯಾರು ಅಭ್ಯರ್ಥಿ ಆಗಬೇಕು ಎಂಬುದನ್ನು ಪಕ್ಷ ನಿರ್ಧಾರ ಮಾಡುತ್ತದೆ. ವಿಧಾನಸಭಾ ಚುನಾವಣೆಯ ಸೋಲಿನಿಂದ ಕಾರ್ಯಕರ್ತರು ಹತಾಶರಾಗಬೇಕಿಲ್ಲ. ಎಲ್ಲ ಹಂತಗಳಲ್ಲಿ ಪಕ್ಷದ ಸಂಘಟನೆಯಲ್ಲಿ ಬದಲಾವಣೆಗಳನ್ನು ಮಾಡಲಾಗುವುದು. ಪಕ್ಷವನ್ನು ಮತ್ತೆ ಬಲವಾಗಿ ಕಟ್ಟುವುದು ತಮ್ಮ ಮುಂದಿನ ಗುರಿ” ಎಂದಿದ್ದಾರೆ.

ಇದರ ನಡುವೆ 2024ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಜೊತೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತು ಬಿಜೆಪಿ ಚಿಂತಿಸುತ್ತಿರುವುದಾಗಿ ವರದಿಗಳಾಗಿವೆ. ಬಿಜೆಪಿ ಗೆಲ್ಲಬಹುದಾದ 15 ರಿಂದ 18 ಕ್ಷೇತ್ರಗಳತ್ತ ಗಮನ ಹರಿಸಿ, 5-6 ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ನಿಟ್ಟಿನಲ್ಲಿಯೂ ಕಸರತ್ತುಗಳು ನಡೆಯುತ್ತಿವೆ.

ಇದನ್ನೂ ಓದಿರಿ: ಶಾಸಕಿ ಕರೆಮ್ಮ ನಾಯಕರಿಗೆ ನಿಂದನೆ; ಬಿಜೆಪಿ ಮಾಜಿ ಎಂಎಲ್‌ಎಯ ಸಹೋದರ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್‌

ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ಐದು ಗ್ಯಾರಂಟಿಗಳನ್ನು ಹಂತಹಂತವಾಗಿ ಜಾರಿಗೆ ತರುತ್ತಿದೆ. ಇದು ಮುಂದಿನ ಲೋಕಸಭಾ ಚುನಾವಣೆಯ ಮೇಲೆ ಪ್ರಭಾವಿಸುವ ಸಾಧ್ಯತೆ ಇದೆ. 2019ರ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, ಮುಂದಿನ ಚುನಾವಣೆಯಲ್ಲಿಯೂ ಅಷ್ಟೇ ಸ್ಥಾನಗಳನ್ನು ಗೆಲ್ಲುತ್ತದೆ ಎಂಬುದಕ್ಕೆ ಯಾವುದೇ ಖಾತ್ರಿ ಇಲ್ಲ. ಹೀಗಾಗಿ ಮೈತ್ರಿ ಚರ್ಚೆಗಳು ಮುನ್ನೆಲೆಗೆ ಬರುತ್ತಿವೆ.

28 ಕ್ಷೇತ್ರಗಳ ಪೈಕಿ ಬಿಜೆಪಿ 20 ರಿಂದ 22 ಸ್ಥಾನಗಳನ್ನು ಗೆದ್ದು, ಜೆಡಿಎಸ್‌ಗೆ 8 ಸ್ಥಾನಗಳನ್ನು ಬಿಟ್ಟುಕೊಡಬಹುದು. ಹೀಗಾಗಿ ಜೆಡಿಎಸ್‌ ಒಪ್ಪಿದರೆ ಮೈತ್ರಿ ಲೇಸು ಎಂಬ ಲೆಕ್ಕಾಚಾರ ಬಿಜೆಪಿಯಲ್ಲಿ ನಡೆದಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ 2024: ರಾಹುಲ್ ಗಾಂಧಿ ಸ್ಪರ್ಧೆಗೆ ಒತ್ತಾಯಿಸಿ ಅಮೇಠಿ ಕಾಂಗ್ರೆಸ್ ಕಾರ್ಯಕರ್ತರಿಂದ ಧರಣಿ

0
ಅಮೇಠಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಘೋಷಣೆಯಲ್ಲಿ ಅನಗತ್ಯ ವಿಳಂಬ ಮಾಡುತ್ತಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಇಲ್ಲಿನ ಪಕ್ಷದ ಜಿಲ್ಲಾ ಸಮಿತಿ ಕಚೇರಿ ಎದುರು ಧರಣಿ ನಡೆಸಿ, ರಾಹುಲ್ ಗಾಂಧಿ ಅವರನ್ನು ಕಣಕ್ಕಿಳಿಸಬೇಕು...