Homeಕರ್ನಾಟಕಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

ಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

- Advertisement -
- Advertisement -

“ನಾನು ಅಂಗಿ ಧರಿಸಿರುವುದು ಸಂವಿಧಾನ ಕಾರಣದಿಂದ. ಸಂವಿಧಾನ ಇಲ್ಲದಿದ್ದರೆ, ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ. ಇದು ನಮಗೆ ಅರ್ಥ ಆದರೆ, ನಾವು ಮತ್ತೆ ಬಿಜೆಪಿಗೆ ಮತ ಹಾಕುವುದಿಲ್ಲ. ಕರ್ನಾಟಕದ ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕಿದೆ” ಎಂದು ಮಾಜಿ ಐಎಎಸ್‌ ಅಧಿಕಾರಿ, ಸಂಸದ ಸಸಿಕಾಂತ್ ಸೆಂಥಿಲ್ ಹೇಳಿದರು.

ಬೆಂಗಳೂರಿನಲ್ಲಿ ಜಾಗೃತ ಕರ್ನಾಟಕ ಸಂಘಟನೆ ಆಯೋಜಿಸಿದ್ದ ‘ಜನಾದೇಶ 2024 : ಸಂವಿಧಾನ ಕಲ್ಪಿಸಿದ ಭಾರತಕ್ಕಾಗಿ ಹೊಸ ರಾಜಕಾರಣ ಹೇಗೆ?’ ಎಂಬ ವಿಷಯ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಬಿಜೆಪಿಗೆ ಸಮಾನತೆ ಬೇಕಿಲ್ಲ. ಅದು ಸಂವಿಧಾನವನ್ನು ಬದಲಿಸಬೇಕೆಂದು ಬಯಸುತ್ತದೆ. ಬಿಜೆಪಿ ಸಿದ್ದಾಂತ ಹಿಂದುತ್ವ. ಹಿಂದುತ್ವದ ಮೇಲೆ ಜನರನ್ನು ಕ್ರೋಢಿಕರಿಸಿ, ವಿಷ ಬಿತ್ತುತ್ತಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸದ್ದರೆ, ಜನಪರವಾಗಿ ನಿಲ್ಲದಿದ್ದರೆ ಅದು ರಾಜಕಾರಣವಲ್ಲ” ಎಂದು ಸೆಂಥಿಲ್ ತಿಳಿಸಿದರು.

“ಎಲ್ಲಾ ಸಮಾಜದಲ್ಲಿಯೂ ಏರುಪೇರುಗಳು ಇರುತ್ತವೆ. ಆದರೆ, ಭಾರತದಲ್ಲಿ ಒಂದು ಭಯಾನಕ ವ್ಯವಸ್ಥೆ ಇದೆ. ಅದು ಜಾತಿ ವ್ಯವಸ್ಥೆ. ಇಲ್ಲಿ ನಮ್ಮ ಹೋರಾಟ ಜಾತಿ ವ್ಯವಸ್ಥೆ ವಿರುದ್ದ ಇರಬೇಕು. ಜಾತಿ ವ್ಯವಸ್ಥೆಯಲ್ಲಿ ದಲಿತರು ಹೆಚ್ಚಾಗಿ ದೌರ್ಜನ್ಯಕ್ಕೆ ತುತ್ತಾಗುತ್ತಾರೆ. ಅದೇ ರೀತಿ, ಮಹಿಳೆಯರನ್ನು ಶೋಷಣೆ ಮಾಡುವ ವ್ಯವಸ್ಥೆಯೂ ಇದೆ” ಎಂದರು.

“ಬಾಬಾ ಸಾಹೇಬರು ವಿರೋಧ ಮಾಡಿದ್ದು ಜಾತಿ ವ್ಯವಸ್ಥೆಯನ್ನು. ನಾವು ದೇಶ ಕಟ್ಟಬೇಕೆಂಬುವುದನ್ನು ಮರೆತಿದ್ದೇವೆ. ದೇಶ ಕಟ್ಟುವ ಕೆಲಸವನ್ನು ಪಕ್ಷ ಅಷ್ಟೇ ಅಲ್ಲದೇ ಪ್ರತಿಯೊಬ್ಬ ನಾಗರಿಕರು ಕೂಡ ಮಾಡಬೇಕು. ಈ ಪ್ರಕ್ರಿಯೆಯನ್ನು ಪಕ್ಷ ಮುನ್ನಡೆಸಬೇಕಾಗುತ್ತದೆ. ದೇಶ ಕಟ್ಟೋದು ಮುಖ್ಯ. ಅದನ್ನು ನಾವೆಲ್ಲರೂ ಸೇರಿ ಮಾಡಬೇಕಿದೆ” ಎಂದು ಹೇಳಿದರು.

“ನಾವು ಸಂವಿಧಾನವನ್ನು ಸಂಭ್ರಮಿಸುವುದನ್ನೇ ಬಿಟ್ಟಿದ್ದೇವೆ. ನಾವು ಸಂವಿಧಾನವನ್ನು ಸಂಭ್ರಮಿಸಬೇಕು. ಪ್ರೀತಿ, ಸಮಾನತೆಯನ್ನು ಹರಡಬೇಕು. ಯುದ್ಧ ಎಂಬುವುದು ಭಾರತದ ತತ್ವವಲ್ಲ. ಈ ಯುದ್ದ ಎರಡು ಮೈಂಡ್‌ಸೆಟ್‌ಗಳ ನಡುವೆ ಇದೆ. ಒಂದು ಶ್ರೇಣೀಕರಣ, ಇನ್ನೊಂದು ಸಮಾನತೆ. ಕಾಂಗ್ರೆಸ್ ಅಂದರೆ ಸಮಾನತೆ, ಪ್ರೀತಿ, ಬಿಜೆಪಿ/ಆರ್‌ಎಸ್‌ಎಸ್‌ ಎಂದರ ಶೇಣಿ ವ್ಯವಸ್ಥೆ” ಎಂದು ವಿವರಿಸಿದರು.

“ಬಿಜೆಪಿ ಮತ್ತು ಆರ್‌ಎಸ್‌ಎಸ್‌ 70ರ ದಶಕದಲ್ಲಿ ಒಂದು ಫಾರ್ಮೂಲವನ್ನು ಕಂಡುಕೊಂಡವು. ಅದು, ಮುಸ್ಲಿಮರನ್ನು ವಿಲನ್‌ಗಳಾಗಿ ಬಿಂಬಿಸುವುದು. ಶೇ. 20ಕ್ಕಿಂತ ಕಡಿಮೆ ಇರುವ ಮುಸ್ಲಿಮರು ಶೇ. 80ರಷ್ಟು ಇರುವ ಹಿಂದುಗಳನ್ನು ಹೆದರಿಸುತ್ತಾರೆ, ದಬ್ಬಾಳಿಕೆ ಮಾಡುತ್ತಾರೆ ಎಂಬ ವಾದವನ್ನು ಮುಂದಿಟ್ಟವು. ಹಿಂದುಗಳೆಲ್ಲರೂ ಒಂದಾಗಬೇಕೆಂದು ಜನರನ್ನು ಕ್ರೋಢೀಕರಿಸಲು ಮುಂದಾದವು. ಬಿಜೆಪಿ/ಆರ್‌ಎಸ್‌ಎಸ್‌ನ ಅಜೆಂಡಾವನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಕೋಮುವಾದವನ್ನು ಮಣಿಸಬೇಕು” ಎಂದು ಕರೆ ಕೊಟ್ಟರು.

ನಾನು ಕಾಲೇಜು ವಿದ್ಯಾರ್ಥಿಯಾಗಿದ್ದಾಗ ರಾಜಕೀಯವನ್ನು ಅರ್ಥ ಮಾಡಿಕೊಳ್ಳಲು ಆರಂಭಿಸಿದೆ. ಗುಜರಾತ್‌ನ ರಾಜಕೀಯ ವ್ಯವಸ್ಥೆಯು ದೇಶದ ರಾಜಕೀಯದ ಬಗ್ಗೆ ಹೆಚ್ಚು ಅರ್ಥ ಮಾಡಿಸಿತು. 2014ರಿಂದ ರಾಜಕೀಯ ವ್ಯವಸ್ಥೆಯ ಮೇಲೆ ಕೋಪ ಶುರುವಾಯಿತು. ಅದರೆ, ಕೋಪದಿಂದ ಬಿಜೆಪಿ, ಆರ್‌ಎಸ್‌ಎಸ್‌ಅನ್ನು ಮಣಿಸಲು ಸಾಧ್ಯವಿಲ್ಲ ಎಂಬುವುದನ್ನು ಗ್ರಹಿಸಿದೆ ಎಂದು ತಿಳಿಸಿದರು.

“ಕಾಂಗ್ರೆಸ್ ಮತ್ತು ಬಿಜೆಪಿಯ ಸಿದ್ದಾಂತಗಳು ಏನೆಂದು ತಿಳಿದುಕೊಳ್ಳಬಹುದು. ಕಾಂಗ್ರೆಸ್‌ನಲ್ಲಿ ಸಮಾನತೆ ಇದೆ. ಜನಪರ ಸಿದ್ದಾಂತ, ದೃಷ್ಟಿಕೋನ ಇದೆ. ಆದರೆ, ಬಿಜೆಪಿಯಲ್ಲಿ ಹಿಂದುತ್ವವಿದೆ, ಸಮಾನತೆ ಇಲ್ಲ. ಕಾಂಗ್ರೆಸ್ ಅಂದರೆ ಅದು ಒಂದು ಪಕ್ಷ ಅಲ್ಲ, ಅದೊಂದು ಚಳುವಳಿ. ಕಾಂಗ್ರೆಸ್ ಎಂಬ ಪದದ ಅರ್ಥವೇ ಒಳಗೊಳ್ಳುವಿಕೆ. ಚುನಾವಣೆ ಗೆಲ್ಲಲು ಬಿಜೆಪಿ ಮುಸ್ಲಿಮರನ್ನು ದ್ವೇಷ ಮಾಡುತ್ತದೆ. ಆದರೆ, ಬಿಜೆಪಿಯ ಪ್ರಮುಖ ಟಾರ್ಗೆಟ್ ಇರುವುದು ದಲಿತರು, ಸಂವಿಧಾನ” ಎಂದು ಹೇಳಿದರು.

ಇದನ್ನೂ ಓದಿ : ಲೋಕಸಭಾ ಚುನಾವಣೆಯ ಗೆಲವು ಸೋಲಿನಲ್ಲಿ ದಲಿತರು ಮತ್ತು ಹಿಂದುಳಿದವರ ಪಾತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...