Homeಮುಖಪುಟಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣದಲ್ಲಿ ಕ್ರಮ ಕೈಗೊಳ್ಳದಿದ್ರೆ ನಾವೇ ಕೈಗೆತ್ತಿಕೊಳ್ಳಬೇಕಾಗುತ್ತದೆ: ಕೇಂದ್ರ, ರಾಜ್ಯಕ್ಕೆ ಸಿಜೆಐ ಎಚ್ಚರಿಕೆ

ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣದಲ್ಲಿ ಕ್ರಮ ಕೈಗೊಳ್ಳದಿದ್ರೆ ನಾವೇ ಕೈಗೆತ್ತಿಕೊಳ್ಳಬೇಕಾಗುತ್ತದೆ: ಕೇಂದ್ರ, ರಾಜ್ಯಕ್ಕೆ ಸಿಜೆಐ ಎಚ್ಚರಿಕೆ

- Advertisement -
- Advertisement -

ಮಣಿಪುರದ ಕಾಂಗಪೂರ ಜಿಲ್ಲೆಯಲ್ಲಿ ಮೇ 4ರಂದು ನಡೆದಿದ್ದ ಹಿಂಸಾಚಾರದ ವೇಳೆ ಪುರುಷರ ಗುಂಪೊಂದು ಕುಕಿ-ಜೋ ಬುಡಕಟ್ಟು ಜನಾಂಗಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ರಸ್ತೆಯಲ್ಲಿ ಮೆರವಣಿಗೆ ಮಾಡಿದ ವಿಡಿಯೋ ಬುಧವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಘಟನೆಯಿಂದ ”ತೀವ್ರವಾಗಿ ವಿಚಲಿತರಾಗಿದ್ದೇವೆ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಗುರುವಾರ ಹೇಳಿದೆ. ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಈ ಬಗ್ಗೆ ಮಾತನಾಡಿದ ನ್ಯಾಯಮುರ್ತಿಗಳು ಗಂಭೀರವಾಗಿ ಪರಿಗಣಿಸಬೇಕಾದ ಘಟನೆಯಾಗಿದೆ. ಇದು  ”ಸಾಂವಿಧಾನಿಕ ನಿಂದನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ” ಎಂದು ಬಣ್ಣಿಸಿದ್ದಾರೆ.

ಈ ವಿಷಯವನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿದ ಪೀಠ, ಈ ವಿಷಯದ ಬಗ್ಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ವರದಿ ನೀಡುವಂತೆ ಕೇಂದ್ರ ಮತ್ತು ರಾಜ್ಯವನ್ನು ಕೇಳಿದೆ.

ಮಣಿಪುರದ ಹೇಯ ಕೃತ್ಯದ ಕುರಿತು ಸಿಜೆಐ ಚಂದ್ರಚೂಡ್ ಅವರ ಪ್ರಮುಖ ಉಲ್ಲೇಖಗಳು:

1. ”ಬುಧವಾರ ವೈರಲ್‌ ಆದ ವೀಡಿಯೋಗಳ ಬಗ್ಗೆ ನಾವು ಬಹಳ ವಿಚಲಿತರಾಗಿದ್ದೇವೆ. ನಾವು ತೀವ್ರ ಕಳವಳ ವ್ಯಕ್ತಪಡಿಸುತ್ತಿದ್ದೇವೆ. ಸರ್ಕಾರ ಕ್ರಮಕೈಗೊಳ್ಳಲು ಮತ್ತು ಕ್ರಮ ಕೈಗೊಳ್ಳಲು ಇದು ಸಕಾಲ” ಎಂದು ಹೇಳಿದ್ದಾರೆ.

2. ”ಈ ಘಟನೆ ಸ್ವೀಕಾರಾರ್ಹವಲ್ಲ. ಕೋಮು ಕಲಹದ ಪ್ರದೇಶದಲ್ಲಿ ಮಹಿಳೆಯರನ್ನು ಅಸ್ತ್ರವಾಗಿ ಬಳಸಿಕೊಂಡು ಹಿಂಸಾಚಾರವನ್ನು ಉಂಟುಮಾಡಿರುವುದು ಬಹಳ ಕಳವಳಕಾರಿಯಾಗಿದೆ. ಇದು ಸಾಂವಿಧಾನಿಕ ದುರುಪಯೋಗ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗಳಲ್ಲಿ ಅತ್ಯಂತ ಘೋರ ಘಟನೆಯಾಗಿದೆ.”

3. ”ಈ ವೀಡಿಯೊಗಳಿಂದ ನಾವು ತೀವ್ರವಾಗಿ ವಿಚಲಿತರಾಗಿದ್ದೇವೆ. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ, ನಾವು ಕೈಗೆತ್ತಿಕೊಳ್ಳಬೇಕಾಗುತ್ತದೆ” ಎಂದು ಹೇಳಿದ್ದಾರೆ.

4. ”ಈ ಘಟನೆಯಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ಮೇಲೆ ಸರ್ಕಾರವು ತೆಗೆದುಕೊಂಡ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ನಾವು ಅಭಿಪ್ರಾಯಪಡುತ್ತೇವೆ.”

5. ”ಈ ವಿಡಿಯೋವನ್ನು ಮಾಧ್ಯಮಗಳು ಮತ್ತು ದೃಶ್ಯಗಳಲ್ಲಿ ಬಿಂಬಿಸಲಾಗಿರುವುದು ಸಾಂವಿಧಾನಿಕ ಉಲ್ಲಂಘನೆಯಾಗಿದೆ. ಮಹಿಳೆಯರನ್ನು ದೌರ್ಜನ್ಯದ ಸಾಧನಗಳನ್ನಾಗಿ ಬಳಸಿಕೊಂಡು ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಸಾಂವಿಧಾನಿಕ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಹಾಗಾಗಿ ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆಗೆದುಕೊಂಡ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿ ಹೇಯ ಕೃತ್ಯ: ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

0
2008ರ ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹತ್ಯೆಗೈದಿದ್ದು ಭಯೋತ್ಪಾದಕ ಅಜ್ಮಲ್ ಅಮೀರ್ ಕಸಬ್ ಅಲ್ಲ, ಆರೆಸ್ಸೆಸ್‌ ಜೊತೆ ನಂಟು ಹೊಂದಿದ್ದ...