Homeಮುಖಪುಟಕೊರೊನಾ ವಿಷಯದಲ್ಲಿ ರಾಹುಲ್‌ ಮಾತು ಕೇಳಿದ್ದರೆ ಭಾರತ ಇಟಲಿಯಾಗುತ್ತಿತ್ತು: ಯೋಗಿ ಆದಿತ್ಯನಾಥ್

ಕೊರೊನಾ ವಿಷಯದಲ್ಲಿ ರಾಹುಲ್‌ ಮಾತು ಕೇಳಿದ್ದರೆ ಭಾರತ ಇಟಲಿಯಾಗುತ್ತಿತ್ತು: ಯೋಗಿ ಆದಿತ್ಯನಾಥ್

- Advertisement -
- Advertisement -

ಕೊರೊನಾವೈರಸ್ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದ್ದಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಮೇಲೆ ತೀವ್ರ ಪ್ರತಿದಾಳಿ ನಡೆಸಿದ್ದಾರೆ. ಕೊರೊನಾ ವಿಷಯದಲ್ಲಿ ರಾಹುಲ್‌ ಮಾತು ಕೇಳಿದ್ದರೆ ಭಾರತ ಇಟಲಿಯಾಗುತ್ತಿತ್ತು, ನಾವು ಭಾರತವಾಗಿಯೇ ಇರೋಣ ಎಂದು ಅವರು ತಮ್ಮ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಹಿಂದೂಸ್ತಾನ್ ಪ್ರಧಾನ ಸಂಪಾದಕ ಶಶಿ ಶೇಖರ್ ಅವರೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಪರೋಕ್ಷವಾಗಿ ರಾಹುಲ್‌ ಮತ್ತು ಪ್ರಿಯಾಂಕ ಇಬ್ಬರನ್ನು ಇಟಲಿಯವರು ಎಂದು ಟೀಕಿಸಿದ್ದಾರೆ.

ಸಾಂಕ್ರಾಮಿಕ ರೋಗದ ಆರಂಭಿಕ ದಿನಗಳಲ್ಲಿ ಇಟಲಿ ತೀವ್ರ ಹೊಡೆತ ತಿಂದ ಮೊದಲ ಯುರೋಪಿಯನ್ ದೇಶವಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ, ಇಟಲಿಯು 2.33 ಲಕ್ಷ ಕೊರೊನಾ ಪ್ರಕರಣಗಳು ಮತ್ತು 33,000 ಕ್ಕೂ ಹೆಚ್ಚು ಸಾವುಗಳನ್ನು ವರದಿ ಮಾಡಿದೆ. ಇದಕ್ಕೆ ಪ್ರತಿಯಾಗಿ ಭಾರತವು 2.26 ಲಕ್ಷ ಪ್ರಕರಣಗಳು ಮತ್ತು 6,348 ಸಾವುಗಳನ್ನು ವರದಿ ಮಾಡಿದೆ.

ಫೆಬ್ರವರಿ 12 ರಂದೇ ರಾಹುಲ್‌ ಗಾಂಧಿಯವರು ಕೊರೊನಾ ವೈರಸ್‌ ಬಹಳ ಅಪಾಯಕಾರಿ. ಇದರ ಬಗ್ಗೆ ಸರ್ಕಾರ ಮುನ್ನೆಚ್ಚರಿಕೆ ತೆಗೆದುಕೊಂಡು ಎದುರಿಸಬೇಕು ಎಂದು ಟ್ವೀಟ್‌ ಮಾಡಿದ್ದರು. ಅಲ್ಲದೇ ಮಾರ್ಚ್‌ 05 ರಂದು ಅದರ ಬಗ್ಗೆ ಜ್ಞಾಪಿಸಿದ್ದರು. ನಂತರ ಮಾರ್ಚ್‌ 12 ರಂದು ಮತ್ತೊಮ್ಮೆ ತಮ್ಮ ಫೆಬ್ರವರಿ 12 ರ ಟ್ವೀಟ್‌ ಅನ್ನು ರೀಟ್ವೀಟ್‌ ಮಾಡಿ ಸರ್ಕಾರ ಏನು ಮಾಡುತ್ತಿಲ್ಲ ಎಂದು ಟೀಕಿಸಿದ್ದರು. ಮಾರ್ಚ್‌ 24 ರಂದು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಲಾಕ್‌ಡೌನ್‌ ಘೋಷಿಸಿತ್ತು.

ಲಾಕ್‌ಡೌನ್‌ ವೇಳೆಯಲ್ಲಿ ವಲಸೆ ಕಾರ್ಮಿಕರನ್ನು ಕೇಂದ್ರ ಸರ್ಕಾರ ಮತ್ತು ಯುಪಿ ಸರ್ಕಾರ ನಡೆಸಿಕೊಂಡ ರೀತಿಗೆ ಕಾಂಗ್ರೆಸ್ ಪಕ್ಷ ಮೋದಿ ಸರ್ಕಾರದ ಮೇಲೆ ಟೀಕೆಯ ಸುರಿಮಳೆ ಸುರಿಸಿತ್ತು. ಯುಪಿಗೆ ಬಸ್‌ ಕರೆತರುವ ವಿಚಾರದಲ್ಲಿ ಪ್ರಿಯಾಂಕ ಗಾಂಧಿ ಮತ್ತು ಯೋಗಿ ಆದಿತ್ಯನಾಥ್‌ ನಡುವೆ ವಾಗ್ವಾದ ನಡೆದಿತ್ತು. ಇತ್ತೀಚಿನ ದಿನಗಳಲ್ಲಿ ಮೋದಿಯವರ ಮುಂದಾಲೋಚನೆ ಮತ್ತು ಯೋಜನೆಗಳಿಲ್ಲ ಲಾಕ್‌ಡೌನ್‌ನಿಂದಾಗಿ ನಿರುದ್ಯೋಗ ಅಧಿಕವಾಗಿದೆ, ಸಣ್ಣ ಮತ್ತು ಮದ್ಯಮ ಉದ್ಯಮಗಳು ನೆಲಕಚ್ಚಿವೆ ಎಂದು ರಾಹುಲ್‌ ಟೀಕಿಸಿದ್ದರು.

ಇದಕ್ಕೆ ಪ್ರತಿಯಾಗಿ ಯೋಗಿ ಆದಿತ್ಯನಾಥ್‌ ನಿಮ್ಮ ಮಾತು ಕೇಳಿದ್ದರೆ ಭಾರತ ಇಟಲಿಯಾಗುತ್ತಿತ್ತು ಎಂದು ತಿರುಗೇಟು ನೀಡಿದ್ದಾರೆ.


ಇದನ್ನೂ ಓದಿ: ಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್‌ ಅಂಟಿಸಿ, ದಯವಿಟ್ಟು ಬಸ್‌ಗಳಿಗೆ ಅನುಮತಿಸಿ – ಪ್ರಿಯಾಂಕ ಗಾಂಧಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...