Homeಕರ್ನಾಟಕಯಡಿಯೂರಪ್ಪನವರು ಹೋದರೆ ಮುನಿರತ್ನ ಕಥೆ ಗೋವಿಂದ: ಡಿ.ಕೆ. ಶಿವಕುಮಾರ್‌

ಯಡಿಯೂರಪ್ಪನವರು ಹೋದರೆ ಮುನಿರತ್ನ ಕಥೆ ಗೋವಿಂದ: ಡಿ.ಕೆ. ಶಿವಕುಮಾರ್‌

ಕಳೆದ ಚುನಾವಣೆಯಲ್ಲಿ ನಿಮ್ಮ ಹಾಗೂ ನಮ್ಮ ಶ್ರಮವನ್ನು 50 ಕೋಟಿಗೆ ಮಾರಿಕೊಂಡಿದ್ದಾರೆ. ಮಾತೃ ಪಕ್ಷಕ್ಕೆ ದ್ರೋಹ ಮಾಡುವುದು ಹೆತ್ತ ತಾಯಿಗೆ ದ್ರೋಹ ಮಾಡಿದಂತೆ. ಇದಕ್ಕೆ ಸರಿಯಾಗಿ ಬುದ್ಧಿ ಕಲಿಸಲು ಅವಕಾಶ ಸಿಕ್ಕಿದೆ

- Advertisement -
- Advertisement -

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್ ಪರ ಪ್ರಚಾರದಲ್ಲಿ ಭಾಗವಹಿಸಿದ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್, “ಈ ಚುನಾವಣೆಯ ನಂತರ ಯಡಿಯೂರಪ್ಪನವರನ್ನು ಕೆಳಗಿಳಿಸುತ್ತಾರಂತೆ, ಯಡಿಯೂರಪ್ಪನವರು ಹೋದರೆ ಮುನಿರತ್ನ ಕಥೆ ಗೋವಿಂದ” ಎಂದು ಹೇಳಿದ್ದಾರೆ.

ಪ್ರಚಾರ ಸಬೆಯಲ್ಲಿ ಮಾತನಾಡಿದೆ ಅವರು, ”ಕಳೆದ ಚುನಾವಣೆಯಲ್ಲಿ ನಿಮ್ಮ ಹಾಗೂ ನಮ್ಮ ಶ್ರಮವನ್ನು 50 ಕೋಟಿಗೆ ಮಾರಿಕೊಂಡಿದ್ದಾರೆ. ಮಾತೃ ಪಕ್ಷಕ್ಕೆ ದ್ರೋಹ ಮಾಡುವುದು ಹೆತ್ತ ತಾಯಿಗೆ ದ್ರೋಹ ಮಾಡಿದಂತೆ. ಇದಕ್ಕೆ ಸರಿಯಾಗಿ ಬುದ್ಧಿ ಕಲಿಸಲು ಅವಕಾಶ ಸಿಕ್ಕಿದೆ. ಭವಿಷ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಎಲ್ಲವೂ ಒಳ್ಳೆಯದಾಗುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

“ಬಿಜೆಪಿಯವರೆ ಇದೊಂದು ಬಾರಿ ಅವಕಾಶ ಕೊಡುತ್ತೇವೆ ಎಂದಿದ್ದಾರೆ. ಮುಂದಿನ ಬಾರಿ ಇವರಿಗೆ ಅವಕಾಶ ಇರುವುದಿಲ್ಲ. ಹೀಗಾಗಿ ಇವರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಇವರನ್ನು ಖಾಲಿ ಮಾಡಿಸಿ ಕ್ಷೇತ್ರಕ್ಕೆ ಮುಕ್ತಿ ತಂದುಕೊಡಬೇಕು” ಎಂದು ಶಿವಕುಮಾರ್‌ ಹೇಳಿದರು.

“ಈ ಚುನಾವಣೆಗಾಗಿ 25 ಕೋಟಿ ಕೊಟ್ಟಿದ್ದಾರಂತೆ. ಅವರು ದುಡ್ಡು ಕೊಟ್ಟರೆ ಯಾರೊಬ್ಬರೂ ಬೇಡ ಅನ್ನ ಬೇಡಿ. ಎಲ್ಲರೂ ಹಣ ತೆಗೆದುಕೊಳ್ಳಿ. ಬಿಜೆಪಿ ನೋಟು, ಕಾಂಗ್ರೆಸ್ ಗೆ ಓಟು. ಮುನಿರತ್ನನ ನೋಟು ಕುಸುಮಾಗೆ ಓಟು ಇದನ್ನು ಗಮನದಲ್ಲಿಟ್ಟುಕೊಳ್ಳಿ” ಮತದಾರರಿಗೆ ಕರೆ ನೀಡಿದರು.

“ಎಲ್ಲ ಹೆಣ್ಣು ಮಕ್ಕಳು, ಯುವಕರು, ಎಲ್ಲ ವರ್ಗದವರು ಈ ಹೆಣ್ಣು ಮಗಳಿಗೆ ಆಶೀರ್ವಾದ ಮಾಡಿ, ನಿಮ್ಮ ಸೇವೆಗೆ ಅವಕಾಶ ಮಾಡಿಕೊಡಿ. ಈ ಕ್ಷೇತ್ರದಲ್ಲಿರುವ ಕೆಟ್ಟ ಹುಳುವನ್ನು ತೆಗಿಯಬೇಕು. ಬಿಜೆಪಿ ಅಭ್ಯರ್ಥಿ ಸೋತರೆ ಪೊಲೀಸಿನವರಿಗೂ ಖುಷಿಯಾಗುತ್ತದೆ. ಅವರು ಒಳಗೊಳಗೇ ಕಾಯುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...