Homeಮುಖಪುಟಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ಯಾವ ನಿಯಮಗಳ ಪುಸ್ತಕವನ್ನು ಉತ್ತರ ಪ್ರದೇಶ ಸರಕಾರ ಅನುಸರಿಸುತ್ತಿದೆ? ವೈಫಲ್ಯವನ್ನು ಮರೆಮಾಚುವ/ ಗಮನ ಬೇರೆಡೆ ಸೆಳೆಯುವ ಮೋದಿಯ ನಿಯಮ ಪುಸ್ತಕವನ್ನೆ?

- Advertisement -
- Advertisement -

ಹತ್ರಾಸ್ ದುರ್ಘಟನೆ ಖಂಡಿಸಿ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಸಾವಿರಾರು ಪ್ರತಿಭಟನೆಗಳು ಜರುಗುತ್ತಿವೆ. ಈ ನಡುವೆ ಚಿತ್ರನಟಿ, ಮಾಜಿ ಸಂಸದೆ ರಮ್ಯಾ ದಿವ್ಯಸ್ಪಂದನರವರು ಸಹ ದನಿಯೆತ್ತಿದ್ದು ವಿಶೇಷ ಮನವಿ ಮಾಡಿದ್ದಾರೆ. ಅದರ ಪೂರ್ಣಪಾಠ ಈ ಕೆಳಗಿನಂತಿದೆ.

ನಾನು ಹತ್ರಾಸ್ ಅತ್ಯಾಚಾರ ಪ್ರಕರಣದತ್ತ ತಮ್ಮ ಗಮನವನ್ನು ಸೆಳೆಯಲು ಇಚ್ಛಿಸುತ್ತೇನೆ- ನನ್ನಂತೆಯೇ ನೀವೂ ನಿಮ್ಮ ಮನೆಗಳ ಆರಾಮದಲ್ಲಿ ಇಂಟರ್ನೆಟ್ ಸಂದೇಶಗಳನ್ನು ನೋಡುತ್ತಿರುವಾಗ, ಒಂದು ಕುಟುಂಬವನ್ನು ಅವರ ಮನೆಯಲ್ಲೇ ಕೂಡಿಹಾಕಲಾಗಿದೆ ಮತ್ತು ಉತ್ತರ ಪ್ರದೇಶ ಸರಕಾರವು ಅವರನ್ನು ತೀವ್ರವಾದ ನೋವಿಗೆ ಒಳಪಡಿಸುತ್ತಿದೆ.

ಅವರು ಮಾಡಿರುವ ಅಪರಾಧ? ಅವರ ಮನೆಮಗಳನ್ನು ಅತ್ಯಾಚಾರ ಮಾಡಲಾಗಿದೆ. ಆ ದಲಿತ ಬಾಲಕಿಯನ್ನು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮೇಲ್ಜಾತಿಯ ನಾಲ್ವರು ಪುರುಷರು ಬರ್ಬರವಾಗಿ ಅತ್ಯಾಚಾರ ಮಾಡಿದ್ದಾರೆ. ಆ ಮಹಿಳೆ ಕೆಲವು ದಿನಗಳ ಬಳಿಕ ಮೃತಪಟ್ಟಿದ್ದಾರೆ. ಆಕೆಯ ಮೃತದೇಹವನ್ನು ಮನೆಗೆ ಕೊಂಡೊಯ್ಯಲು ಆ ಕುಟುಂಬಕ್ಕೆ ಅನುಮತಿ ನಿರಾಕರಿಸಲಾಗಿದೆ. ಪೊಲೀಸರು ಕುಟುಂಬದ ಅನುಮತಿ ಪಡೆಯದೆಯೇ, ಅಥವಾ ಅವರಿಗೆ ಗೊತ್ತಿಲ್ಲದೇ ರಾತ್ರಿ 2.30ರ ಹೊತ್ತಿಗೆ ಶವವನ್ನು ಸುಟ್ಟುಹಾಕಿದ್ದಾರೆ.

ಇಷ್ಟು ಕ್ರೌರ್ಯ ಸಾಕಾಗಲಿಲ್ಲವೋ ಎಂಬಂತೆ ಆಕೆಯ ಕುಟುಂಬವನ್ನು ಮನೆಯೊಳಗೆ ಕೂಡಿಹಾಕಿ, ಅವರ ಮೊಬೈಲ್ ಫೋನ್‌ಗಳನ್ನು ಕಿತ್ತುಕೊಳ್ಳಲಾಗಿದೆ. ಮಾಧ್ಯಮದವರಿಗಾಗಲೀ, ಪ್ರತಿಪಕ್ಷ ನಾಯಕರಿಗಾಗಲೀ ಅವರನ್ನು ಭೇಟಿಮಾಡಲು ಬಿಡಲಾಗುತ್ತಿಲ್ಲ. ಪೊಲೀಸರು ಅವರ ಮನೆಯ ಪ್ರವೇಶ, ಊರಿನ ಪ್ರವೇಶ ಮತ್ತು ಹೆದ್ದಾರಿಯಲ್ಲಿ ತಡೆಬೇಲಿ ಹಾಕಿದ್ದಾರೆ.

I want to draw your attention to the #HathrasRape incident- While you are scrolling your feed in the comfort of your…

Posted by Divya Spandana/Ramya on Saturday, October 3, 2020

ಈ ಕುಟುಂಬವನ್ನು ಭೇಟಿ ಮಾಡಲು ಯತ್ನಿಸಿದ ನಾಯಕರನ್ನು ಬಂಧಿಸಲಾಗಿದೆ, ಥಳಿಸಲಾಗಿದೆ ಮತ್ತು ಅವರ ವಿರುದ್ಧ ಕೇಸು ಜಡಿಯಲಾಗಿದೆ. ಆ ಕುಟುಂಬ ಮಾಡಿರುವ ತಪ್ಪಾದರೂ ಏನು? ತಮ್ಮ ಮನೆಮಗಳನ್ನು ಕಳೆದುಕೊಂಡಿರುವುದೇ ಸಾಕಷ್ಟು ನೋವಿನ ಸಂಗತಿ ಅಲ್ಲವೋ ಎಂಬಂತೆ ಏಕೆ ಅವರಿಗೆ ಕಿರುಕುಳ ನೀಡಿ ಇನ್ನಷ್ಟು ಪೀಡಿಸಲಾಗುತ್ತಿದೆ? ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ.

ಯಾವ ನಿಯಮಗಳ ಪುಸ್ತಕವನ್ನು ಉತ್ತರ ಪ್ರದೇಶ ಸರಕಾರ ಅನುಸರಿಸುತ್ತಿದೆ? ವೈಫಲ್ಯವನ್ನು ಮರೆಮಾಚುವ / ಗಮನ ಬೇರೆಡೆ ಸೆಳೆಯುವ ಮೋದಿಯ ನಿಯಮ ಪುಸ್ತಕವನ್ನೆ?

ಇದೆಲ್ಲಕ್ಕಿಂತ ಮೇಲಾಗಿ, ಪೊಲೀಸರು ಇವೆಲ್ಲವನ್ನೂ ನಿರಾಕರಿಸುತ್ತಿದ್ದಾರೆ ಮಾತ್ರವಲ್ಲ; ಅತ್ಯಾಚಾರವನ್ನೇ ನಿರಾಕರಿಸುತ್ತಿದ್ದಾರೆ. ಸಂತ್ರಸ್ತ ಮಹಿಳೆ ಸ್ವತಃ ತನ್ನನ್ನು ಅತ್ಯಾಚಾರ ಮಾಡಿರುವುದಾಗಿ ಪೊಲೀಸರಿಗೆ ಹೇಳಿದ್ದಾರೆ. ಪೊಲೀಸರೇ ಶವವನ್ನು ಸುಟ್ಟುಹಾಕುತ್ತಿರುವ ವಿಡಿಯೋಗಳಿವೆ. ಮೃತದೇಹವನ್ನು ಮನೆಗೆ ಕೊಂಡೊಯ್ಯಲು ಆಕೆಯ ಕುಟುಂಬದವರು ಅಂಗಲಾಚುತ್ತಿರುವ ವಿಡಿಯೋಗಳಿವೆ. ಈ ಕುಟುಂಬದವರನ್ನು ಅವರ ಮನೆಯಲ್ಲಿಯೇ ಕೂಡಿಹಾಕಿರುವ ವಿಡಿಯೋಗಳಿವೆ.

ಅವರು ಯಾರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ? ಇದೊಂದು ಪ್ರಜಾಪ್ರಭುತ್ವ ಎಂಬಂತೆ ನಿಮಗೆ ಅನಿಸುತ್ತಿದೆಯೆ? ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿದ ನಮ್ಮ ಪೂರ್ವಿಕ ತಂದೆ ತಾಯಿಯರು ಕಲ್ಪಿಸಿಕೊಂಡ ದೇಶ ಇದು ಅಲ್ಲವೇ ಅಲ್ಲ. ನಮ್ಮ ದೇಶದ ಸಾರ್ವಭೌಮತೆ, ಏಕತೆ ಮತ್ತು ಅಖಂಡತೆಯನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ.

ಆ ಕುಟುಂಬಕ್ಕೆ ನಿಮ್ಮ ಅಗತ್ಯವಿದೆ; ನೀವು ಧ್ವನಿಯೆತ್ತಿ ಮಾತನಾಡಬೇಕಾದ ಅಗತ್ಯವಿದೆ. ಈ ಕುರಿತು ಧ್ವನಿಯೆತ್ತದಿರುವುದರ ಮೂಲಕ ನೀವು ದೇಶಕ್ಕೆ ಬಹುದೊಡ್ಡ ಅಪಕಾರ ಮಾಡಿದಂತಾದೀತು.


ಇದನ್ನೂ ಓದಿ: ಅಯೋಧ್ಯೆ ಕುರಿತು ಪೋಸ್ಟ್‌: ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ ರಮ್ಯಾ ದಿವ್ಯಸ್ಪಂದನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....