Homeಮುಖಪುಟಮಣಿಪುರದಲ್ಲಿ ಶಾಂತಿ-ಭದ್ರತೆ ಸ್ಥಾಪಿಸಲು ಸಾಧ್ಯವಾಗದಿದ್ದರೆ, ಅಧಿಕಾರದಲ್ಲಿರಲು ಹಕ್ಕಿಲ್ಲ: ಮೋದಿ ಹಳೆಯ ಟ್ವೀಟ್ ವೈರಲ್

ಮಣಿಪುರದಲ್ಲಿ ಶಾಂತಿ-ಭದ್ರತೆ ಸ್ಥಾಪಿಸಲು ಸಾಧ್ಯವಾಗದಿದ್ದರೆ, ಅಧಿಕಾರದಲ್ಲಿರಲು ಹಕ್ಕಿಲ್ಲ: ಮೋದಿ ಹಳೆಯ ಟ್ವೀಟ್ ವೈರಲ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು 2017ರಲ್ಲಿ ಮಣಿಪುರ ಹಿಂಸಾಚಾರದ ಕುರಿತು ಮಾಡಿದ್ದ ಟ್ವೀಟ್‌ ಒಂದು ಇದೀಗ ಸಾಕಷ್ಟು ವೈರಲ್‌ ಆಗಿದ್ದು, ಆ ಟ್ವೀಟ್ ಅವರನ್ನು ಮತ್ತು ಅವರ ಪಕ್ಷವನ್ನು ಪೇಚಿಗೆ ಸಿಲುಕಿಸಿದೆ.

ಮಣಿಪುರದ ಕುರಿತು ಮೋದಿ ಅವರು, ”ಮಣಿಪುರದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಸ್ಥಾಪಿಸಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೆ, ಒಂದು ಕ್ಷಣವೂ ಅಧಿಕಾರದಲ್ಲಿರಲು ಸರ್ಕಾರಕ್ಕೆ ಹಕ್ಕಿಲ್ಲ” ಎಂದು ಟ್ವೀಟ್ ಮಾಡಿದ್ದರು.

ಮೋದಿಯವರ 2017ರಲ್ಲಿನ ಟ್ವೀಟ್‌ನ್ನು ನೆನಪಿಸಿರುವ ಆಮ್‌ ಆದ್ಮಿ ಪಕ್ಷ, ”ಮಣಿಪುರದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಸ್ಥಾಪಿಸಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೆ, ಒಂದು ಕ್ಷಣವೂ ಸರ್ಕಾರದಲ್ಲಿರಲು ಸರ್ಕಾರಕ್ಕೆ ಹಕ್ಕಿಲ್ಲ ಮತ್ತು ಆ ಸರ್ಕಾರವನ್ನು ವಜಾಗೊಳಿಸಬೇಕು. ಈಗ ಮಣಿಪುರ ಸರ್ಕಾರವನ್ನು ವಜಾ ಮಾಡುವ ಸಮಯ ಬಂದಿದೆ. ರಾಜ್ಯಗಳಲ್ಲಿ ಶಾಂತಿ ಸ್ಥಾಪಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯೂ ಆಗಿದೆ ಎಂದು ಸಂವಿಧಾನದ 355ನೇ ವಿಧಿ ಹೇಳುತ್ತದೆ” ಎಂದು ಹೇಳುವುದರ ಜೊತೆಗೆ ಸಂಸದ ರಾಘವ್‌ ಚಡ್ಡಾ ಅವರು ಮಾತನಾಡಿರುವ ವಿಡಿಯೋ ಕೂಡಾ ಶೇರ್‌ ಮಾಡಿದೆ.

ಅದೇ ರೀತಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಕೂಡ ಪ್ರಧಾನಿ ಮೋದಿಯವರ ಈ ಟ್ವೀಟಿಗೆ ಪ್ರತಿಕ್ರಿಯಿಸಿದ್ದು, ”78 ದಿನಗಳ ನಂತರ, ಪ್ರಧಾನಿ ಮೋದಿ ಮಣಿಪುರದ ಬಗ್ಗೆ ಮಾತನಾಡಲು 36 ಸೆಕೆಂಡುಗಳನ್ನು ನೀಡಿದ್ದಾರೆ. ಆದರೆ ಆ ಬಿಕ್ಕಟ್ಟನ್ನು ಪರಿಹರಿಸಲು ಅವರು ಏನು ಮಾಡುತ್ತಾರೆ ಎಂಬುದರ ಕುರಿತು ಒಂದೇ ಒಂದು ಪದವನ್ನು ಮಾತನಾಡಿಲ್ಲ. ಮಣಿಪುರ ಸಂಘರ್ಷದ ಬಗ್ಗೆ ಸಂಸತ್ತಿನೊಳಗೆ ಪೂರ್ಣ ದಿನ ಚರ್ಚೆ ನಡೆಯಬೇಕು. ಅವರು ಪ್ರತಿಯೊಬ್ಬ ಸಂಸದರ ಪ್ರಶ್ನೆಗಳಿಗೆ ಉತ್ತರಿಸಬೇಕು. ಸ್ಪಷ್ಟವಾಗಿ ಹೇಳೋಣ, ಪ್ರಧಾನಿ ಮೋದಿ ಮತ್ತು ಅವರ ಸರ್ಕಾರಕ್ಕೆ ರಾಜ್ಯದಲ್ಲಿ ಶಾಂತಿಯನ್ನು ಸ್ಥಾಪಿಸಲು ಸಾಧ್ಯವಿಲ್ಲ ಮತ್ತು ಅವರಿಗೆ ಮಣಿಪುರವನ್ನು ಆಳುವ ಹಕ್ಕಿಲ್ಲ” ಎಂದು ಕಿಡಿಕಾರಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...