Homeಮುಖಪುಟಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ಕವಿತಾ ಕೃಷ್ಣನ್, ರವಿ ನಾಯರ್, ಅಶೋಕ್ ಸ್ವೈನ್ ಸೇರಿದಂತೆ ನೂರಾರು ಹೋರಾಟಗಾರರು ಕುನಾಲ್ ಕಮ್ರರವರ ಆ ಟ್ವೀಟ್‌ಗಳನ್ನು ರೀಟ್ವೀಟ್ ಮಾಡುವ ಮೂಲಕ ಅವರಿಗೆ ಬೆಂಬಲ ಸೂಚಿಸಿದ್ದಾರೆ.

- Advertisement -
- Advertisement -

ವಂಚನೆ ಮತ್ತು ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಈ ಸಂದರ್ಭದಲ್ಲಿ ದೇಶದಲ್ಲಿ ನೂರಾರು ಹೋರಾಟಗಾರರು ಹಲವಾರು ವರ್ಷಗಳಿಂದ ರಾಜಕೀಯ ಖೈದಿಗಳಾಗಿ ಜೈಲಿನಲ್ಲಿದ್ದರೂ ಅವರಿಗೆ ಏಕೆ ಜಾಮೀನು ನೀಡಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಖ್ಯಾತ ಸ್ಟಾಂಡಪ್ ಕಮಿಡಿಯನ್ ಕುನಾಲ್ ಕಮ್ರ ಸುಪ್ರೀಂ ತೀರ್ಪನ್ನು ಟ್ರೋಲ್ ಮಾಡಿದ್ದರು. ಅದನ್ನು ಖಂಡಿಸಿ ಅವರ ವಿರುದ್ದ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸಲು ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅನುಮತಿ ನೀಡಿರುವುದು ಸರಿಯಷ್ಟೆ. ಈಗ ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್‌ಗಳು ಆರಂಭವಾಗಿವೆ.

ಅರ್ನಾಬ್ ಗೋಸ್ವಾಮಿಗೆ ಜಾಮೀನು ನೀಡುವಾಗ ನ್ಯಾಯಮೂರ್ತಿ ಚಂದ್ರಚೂಡ್‌ರವರು “ನಾನು ಆತನ ಚಾನೆಲ್ ನೋಡುವುದೇ ಇಲ್ಲ. ನಿಮಗೆ ಕಷ್ಟವಾದರೆ ನೀವು ಆತನ ಚಾನೆಲ್ ನೋಡಬೇಡಿ, ನಿರ್ಲಕ್ಷ್ಯ ಮಾಡಿ” ಎಂದು ಹೇಳಿದ್ದರು. ಈಗ ಅದೇ ಮಾತುಗಳನ್ನು ಪುನರುಚ್ಚರಿಸುತ್ತಿರುವ ನೆಟ್ಟಿಗರು “ಕುನಾಲ್ ಕಮ್ರ ಟ್ವೀಟ್ ನಿಮಗೆ ಇಷ್ಟವಾಗದಿದ್ದರೆ ಅದನ್ನು ಓದಬೇಡಿ ಅಷ್ಟೇ” ಅವರ ಮೇಲೆಕೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸುತ್ತೀರಿ ಎಂದು ಟ್ವೀಟ್ ಮಾಡುವ ಮೂಲಕ ಪ್ರಶ್ನಿಸುತ್ತಿದ್ದಾರೆ.

ಅರ್ನಾಬ್ ಗೋಸ್ವಾಮಿಗೆ ನವೆಂಬರ್ 9 ರಂದು ಬಾಂಬೆ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿತ್ತು. ಆಗ ಶೆಫಾಲಿ ವೈದ್ಯೆ ಎಂಬುವವರು “ಭಾರತವು ಸರಿಯಾದ ನ್ಯಾಯಾಂಗ ವ್ಯವಸ್ಥೆಯನ್ನು ಹೊಂದಿಲ್ಲ. ನಾವು ಇದುವರೆಗೂ ಹೊಂದಿರುವುದು ಕೇವಲ ಜೋಕ್ ಅಷ್ಟೇ” ಎಂದು ಟ್ವೀಟ್‌ ಮಾಡಿದ್ದರು.

ನವೆಂಬರ್ 11 ರಂದು ಸುಪ್ರೀಂ ಕೋರ್ಟ್ ಅರ್ನಾಬ್‌ಗೆ ಜಾಮೀನು ನೀಡಿತ್ತು. ಆ ಸಂದರ್ಭದಲ್ಲಿ ಕುನಾಲ್ ಕಮ್ರ “ಈ ದೇಶದ ಸುಪ್ರೀಂ ಕೋರ್ಟ್ ಎನ್ನುವುದು, ಈ ದೇಶದ ಸುಪ್ರೀಂ ಜೋಕ್” ಎಂದು ಟ್ರೋಲ್ ಮಾಡಿದ್ದರು. ಅಲ್ಲದೇ ನ್ಯಾಯಾಂಗ ನಿಂದನೆ ಎನ್ನುವುದು ಹೀಗೆ ತೋರುತ್ತದೆ ಎಂದು ಸುಪ್ರೀಂ ಕೋರ್ಟಿಗೆ ಕೇಸರಿ ಬಣ್ಣ ಬಳಿದು, ಬಿಜೆಪಿ ಬಾವುಟ ಹಾರಿಸಿರುವ ಚಿತ್ರವೊಂದನ್ನು ಅವರು ಟ್ವೀಟ್ ಮಾಡಿದ್ದರು.

“ಇದನ್ನು ನ್ಯಾಯಾಂಗ ನಿಂದನೆ ಎಂದು ಕರೆಯಬೇಡಿ, ಇದನ್ನು ಭವಿಷ್ಯದ ರಾಜ್ಯಸಭೆ ಸ್ಥಾನದ ನಿಂದನೆ ಎಂದು ಕರೆಯಿರಿ” ಎಂಬುದಾಗಿ ನೇರವಾಗಿ ಚಂದ್ರಚೂಡ್‌ರವರನ್ನು ಟೀಕಿಸಿದ್ದ ಕುನಾಲ್ ಕಮ್ರರವರ ನಾಲ್ಕು ಟ್ವೀಟ್‌ಗಳ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಗೆ ಗುರುವಾರ ಅನುಮತಿ ನೀಡಲಾಯಿತು. ಇದನ್ನು ವಿರೋಧಿಸಿ ಪ್ರತಿರೋಧದ ಭಾಗವಾಗಿ ಕವಿತಾ ಕೃಷ್ಣನ್, ರವಿ ನಾಯರ್, ಅಶೋಕ್ ಸ್ವೈನ್ ಸೇರಿದಂತೆ ನೂರಾರು ಹೋರಾಟಗಾರರು ಕುನಾಲ್ ಕಮ್ರರವರ ಆ ಟ್ವೀಟ್‌ಗಳನ್ನು ರೀಟ್ವೀಟ್ ಮಾಡುವ ಮೂಲಕ ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಅಲ್ಲದೇ ನೀವು ನ್ಯಾಯಾಂಗ ನಿಂದನೆ ವಿಚಾರಣೆ ನಡೆಸುವುದಾದರೆ ಈ ದೇಶದ ನ್ಯಾಯಾಂಗದಲ್ಲಿ ನಂಬಿಕೆಯಿಲ್ಲ ಎಂದು ನವೆಂಬರ್ 9 ರಂದು ಟ್ವೀಟ್ ಮಾಡಿದ್ದ ಶೆಫಾಲಿ ವೈದ್ಯೆಯ ವಿರುದ್ಧ ಮೊದಲು ವಿಚಾರಣೆ ನಡೆಸಿ. ನಂತರ ಕುನಾಲ್ ಮೇಲೆ. ನೀವು ಕ್ಯು ವ್ಯವಸ್ಥೆಯನ್ನು ಪಾಲಿಸಬೇಕು ಎಂದು ಟ್ರೋಲ್ ಮಾಡಿದ್ದಾರೆ.

ರಿಲ್ಯಾಕ್ಸ್, ಹುಡುಗರೇ. ಕುನಾಲ್ ಕಮ್ರಾ ಅವರಿಗೆ ಏನೂ ಆಗುವುದಿಲ್ಲ. ವ್ಯಕ್ತಿಗಳ ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ಇದೆ ಎಂದು ಪನ್‌ಸ್ಟಾರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಜಸ್ಟಿಸ್ ಚಂದ್ರಚೂಡ್ ಅವರ ತೀರ್ಪು ಸರಿಯಾಗಿತ್ತು. ಅದರ ಟೀಕೆ ಸರಿಯಾದುದಲ್ಲ. ಇನ್ನೊಂದು ಕೇಸಿನಲ್ಲಿ ಅನ್ಯಾಯವಾಗಿದೆಯೆಂದು ಹೇಳುವುದಕ್ಕೆ ಈ ಜಡ್ಮೆಂಟನ್ನು ದೂರವುದು ತಪ್ಪಾಗುತ್ತದೆ. ನಾವೇ ಘನತೆಯಿತ್ತು ಕಟ್ಟಿಕೊಂಡ ಸಂಸ್ಥೆಯೊಂದನ್ನು ಟೀಕಿಸುವಾಗ ನಾವು ಸ್ವಲ್ಪ ಜವಾಬ್ದಾರಿಯಿಂದ ವರ್ತಿಸಬೇಕು . ಇಷ್ಟಾಗಿಯೂ ಕುನಾಲ್ ಅವರನ್ನು ಕೋರ್ಟ್ ಮನ್ನಿಸುತ್ತದೆಂದು ನಾನು ಭಾವಿಸಿದ್ದೇನೆ. ಇನ್ನು ವ್ಯವಸ್ಥೆಯಲ್ಲಿನ ಪಕ್ಷಪಾತದ ಬಗ್ಗೆ. ಒಕ್ಕೂಟ ಸರ್ಕಾರ ತನಗೆ ಬೇಕಾದಂತೆ ನಿಯಂತ್ರಿಸುತ್ತಿರುವುದರ ಬಗ್ಗೆ. ಆ ಬಗ್ಗೆ ಯಾವುದೇ ಸಂಶಯ ಬೇಡ. ಸುಧಾ ಭಾರದ್ವಾಜ್, ತೇಲ್ತುಂಬೆ ಕೇಸ್ ನ್ಯಾಯಮೂರ್ತಿ ಚಂದ್ರಚೂಡ್ ಪೀಠದ ಮುಂದೆ ಬಂದರೆ ನಿನ್ನೆ ಕೊಟ್ಟ ಕಾರಣ ನೀಡಿ ಚಂದ್ರಚೂಡ್ ಸರ್ಕಾರಕ್ಕೊಂದಿಷ್ಟು, ಪೊಲೀಸರಿಗೊಂದಿಷ್ಟು ಉಗಿದು ಬೇಲ್ ಕೊಡುತ್ತಾರೆ. ಆದರೆ ತನಗಾಗದ ಈ ಸಾಮಾಜಿಕ ಕಾರ್ಯಕರ್ತರ ಬೇಲ್ ಅರ್ಜಿ ಚಂದ್ರಚೂಡ್ ಪೀಠದ ಮುಂದೆ ಬರದಂತೆ ಈ ಸರ್ಕಾರ ನೋಡುಕೊಳ್ಳುತ್ತದೆ ಎನ್ನುವುದರಲ್ಲಿ ಯಾವುದೇ ಸಂದೇಹ ಬೇಡ. ಇಷ್ಟರವರೆಗೆ ಆಗಿರುವುದೂ ಅದೇ. ನಿನ್ನೆ ಆರ್ನಬ್ ಗೆ ಬೇಲ್ ಸಿಕ್ಕಿದೊಡನೆ ಗಾಳಿಯಲ್ಲಿ ಹಾರಿದವರಿಗೆ ಈ ಕಟು ಸತ್ಯ ಗೊತ್ತಿದ್ದರೆ ಈ ಅನ್ಯಾಯದ ವ್ಯವಸ್ಥೆಯಲ್ಲಿ ನಿಮ್ಮ ಪಾಲೂ ಇದೆ ಎಂಬ ಅರಿವು ಮೂಡಲಿ ಎಂದು ಕುಂಟಾಡಿ ನಿತೇಶ್ ಎಂಬುವವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಆತನ ಚಾನೆಲ್ ನೋಡುವುದೇ ಇಲ್ಲ: ಅರ್ನಾಬ್‌ಗೆ ಜಾಮೀನು ನೀಡಿದ ನ್ಯಾಯಮೂರ್ತಿ ಹೇಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...