Homeಕರ್ನಾಟಕತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ಇವತ್ತು ಮನುಷ್ಯರು ಧರ್ಮ ಹಾಗೂ ದೇವರಿಗೆ ತಮ್ಮ ರೋಗವನ್ನು ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮ ಜಾಡ್ಯ ಎನ್ನುತ್ತಾರೆ: ದೇಮ

- Advertisement -
- Advertisement -

“ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನೂ ತೊಂದರೆ? ಯೂನಿಫಾರ್ಮ್ ಜೊತೆಯಲ್ಲಿ ಹಿಜಾಬ್‌ ಧರಿಸಿದರೆ ತಪ್ಪೇನು? ಮುಖವನ್ನೇನು ಮುಚ್ಚುವುದಿಲ್ಲವಲ್ಲ?” ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಪ್ರಶ್ನಿಸಿದ್ದಾರೆ.

ಟಿ.ವಿ.9 ವಾಹಿನಿಯೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿನ ಬೆಳವಣಿಗೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಜಾಬ್‌ ವಿವಾದದ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಯೂನಿಫಾರ್ಮ್‌ ಜೊತೆ ಹಿಜಾಬ್‌ ಹಾಕಿಕೊಂಡರೆ ಯೂನಿಫಾರ್ಮ್‌ಗೆ ಯಾವುದೇ ತೊಂದರೆ ಆಗಲ್ಲ. ಯೂನಿಫರ್ಮ್‌ನೂ ಹಾಕಿಕೊಳ್ಳಿ, ಹಿಜಾಬ್‌ನೂ ಹಾಕಿಕೊಳ್ಳಲಿ. ಹಿಜಾಬ್- ಹೆಚ್ಚಿಗೆ ಅಲಂಕಾರವೇ ಆಗಿಬಿಡಬಹುದು. ಇದನ್ನು ವಿವಾದ ಮಾಡಿಕೊಳ್ಳುವುದು ಬೇಡ” ಎಂದು ಆಶಿಸಿದ್ದಾರೆ.

ಇಲ್ಲಿ ಏನಾಗಿದೆ ಎಂದರೆ- ಅಹಂಕಾರದ ಸಮಸ್ಯೆ ಬಂದಿದೆ. ದ್ವೇಷದ ಸಮಸ್ಯೆ ಇದೆ. ಪಟ್ಟಭದ್ರ ಹಿತಾಸಕ್ತಿಗಳ ರಾಜಕಾರಣ ಇದೆ. ಆದರೆ ಹಿಜಾಬ್ ಹಾಕಿಕೊಂಡರೆ ಏನು ತಪ್ಪಾಗುತ್ತದೆ? ಬೇರೆ ಬೇರೆ ಹುಡುಗಿಯರು ವೇಲ್‌ ಹಾಕಿಕೊಳ್ಳುವಂತೆ ತಲೆಯ ಮೇಲೆ ಹಾಕಿಕೊಳ್ಳುತ್ತಾರಪ್ಪ. ಯೂನಿಫಾರ್ಮ್‌ ಜೊತೆ ಹಿಜಾಬ್‌ ಬರಲೆಂದು ಆಪೇಕ್ಷೆ ಪಡುತ್ತೇನೆ ಎಂದು ತಿಳಿಸಿದ್ದಾರೆ.

ನ್ಯಾಯಾಲಯದ ಮುಂದೆ ಈ ಪ್ರಕರಣವಿದೆ. ಇದಕ್ಕೆ ಒಂದು ಪರಿಹಾರ ಕೊಡಬೇಕು. ಅಲ್ಲಿಯವರೆಗೂ ತೂಗುಗತ್ತಿ ಆಡುತ್ತಲೇ ಇರುತ್ತದೆ ಎಂದು ತಿಳಿಸಿದ್ದಾರೆ.

ಇವತ್ತು ಮನುಷ್ಯರು ಧರ್ಮ ಹಾಗೂ ದೇವರಿಗೆ ತಮ್ಮ ರೋಗವನ್ನು ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮ ಜಾಡ್ಯ ಎನ್ನುತ್ತಾರೆ. ವಿದ್ಯಾರ್ಥಿಗಳು ಇನ್ನೂ ಎಳೆಯವರು, ಯಾವುದೇ ರಾಗ ದ್ವೇಷ ಇಲ್ಲದೆ ಇರುವವರು. ಈ ಧರ್ಮ ಜಾಡ್ಯದಿಂದ ಬಿಡುಗಡೆ ಪಡೆಯಲಿ ಎಂದು ಆಶಿಸಿದ್ದಾರೆ.

ಇದನ್ನೂ ಓದಿರಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

“ತರಗತಿ ಒಳಗಡೆ ಹಿಜಾಬ್‌ ಇರಬಾರದೆಂಬುದು ಸದ್ಯದ ಆಕ್ಷೇಪ” ಎಂದು ಮಾಧ್ಯಮ ಪ್ರತಿನಿಧಿ ಕೇಳಿದಾಗ, “ಕೂದಲು ಹಾರಾಡಬಾರದು ಅಂತ ತಾನೇ ಹಿಜಾಬ್ ಹಾಕೋದು? ಬಿಟ್ಟು ಬಿಡಿ, ಇದನ್ನೇಕೆ ದೊಡ್ಡದು ಮಾಡ್ತಾ ಇದ್ದೀರಿ. ಅದು ತನ್ನಷ್ಟಕ್ಕೆ ತಾನೇ ಕಡಿಮೆಯಾಗುತ್ತಾ ಹೋಗುತ್ತದೆ. ನೀವು ನಿಷೇಧ ಮಾಡಿದರೆ, ಪ್ರತಿಭಟನಾತ್ಮಕವಾಗಿ ಬೇರೆಯವರೂ ಹಿಜಾಬ್ ಹಾಕುತ್ತಾರೆ. ಅದು ಹೆಚ್ಚಿಗೆ ಆಗುತ್ತಾ ಹೋಗುತ್ತದೆ” ಎಂದು ಎಚ್ಚರಿಸಿದ್ದಾರೆ.

ವಿದ್ಯಾರ್ಥಿಗಳ ಮುಂದೆ ದೇಶದ ಸಮಸ್ಯೆಗಳನ್ನು ಬಿಚ್ಚಿಟ್ಟಿರುವ ಅವರು, “ಗಮನಿಸಿ, ಮಧ್ಯಮ ವರ್ಗ ಬಡತನದ ಕಡೆಗೆ ಹೋಗುತ್ತಿದೆ. ಬಡವರು ಹಸಿವಿನ ಕಡೆಗೆ ಹೋಗುತ್ತಿದ್ದಾರೆ. ಈ ಸಮಸ್ಯೆಯನ್ನು ವಿದ್ಯಾರ್ಥಿಗಳಲ್ಲವೇ ಕೈಗೆ ತೆಗೆದುಕೊಳ್ಳಬೇಕಾದದ್ದು?” ಎಂದು ಕೇಳಿದ್ದಾರೆ.

ಮತ್ತೊಂದು ಕಡೆ ಬಂಡವಾಳಶಾಹಿಗಳ ಕೈಗೆ ಸಂಪತ್ತು ಹೋಗುತ್ತಿದೆ. ದೇಶದ ಸಂಪತ್ತಿನ ಅರ್ಧ ಭಾಗ ಹತ್ತು ಜನರ ಕೈಲಿ ಇದೆ. ಅಂಥವರ ಸಂಪತ್ತು ಕೊರೊನಾ ಇದ್ದಾಗ, ಜಿಎಸ್‌ಟಿ ಇದ್ದಾಗ, ನೋಟ್ ಬ್ಯಾನ್‌ ಆಗಿ ಜನರು ತತ್ತರಿಸುವಾಗ ಹೆಚ್ಚಾಯಿತ್ತಲ್ಲಪ್ಪ? ಇದಕ್ಕೆ ಕಾರಣವೇನು? ಲೂಟಿ ಎಲ್ಲಾಗುತ್ತಿದೆ? ಇದನ್ನು ಎಚ್ಚೆತ್ತ ವಿದ್ಯಾರ್ಥಿಗಳು ಸಮಾಜಕ್ಕೆ ಹೇಳಬೇಕು. ನಾವು ಅವರಿಗೆ ಹೇಳೋದಲ್ಲ, ಅವರೇ ಸಮಾಜಕ್ಕೆ ಹೇಳಬೇಕು. ಈ ಜವಾಬ್ದಾರಿ ಯುವಜನಾಂಗದ ಮೇಲಿದೆ ಎಂದು ಕಿವಿಮಾತು ಹೇಳಿದ್ದಾರೆ.

ನೋಟ್ ಬ್ಯಾನ್‌ ಅವಾಂತರ, ಜಿಎಸ್‌ಟಿ ಅವಿವೇಕತನ- ದೇಶವನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿವೆ. ಆರ್ಥಿಕ ತಜ್ಞರು, ತಿಳಿದವರು ಹೇಳುತ್ತಿರುವುದು ಏನಂದರೆ ಈ ಬಂಡವಾಳಶಾಹಿಗಳ ಸಂಪತ್ತಿನ ಮೇಲೆ ಶೇ. 2ರಷ್ಟು ತೆರಿಗೆ ವಿಧಿಸಿದರೆ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಬಹುದು. ಪ್ರಾಥಮಿಕ ಆರೋಗ್ಯವನ್ನು ಅಭಿವೃದ್ಧಿಪಡಿಸಬಹುದು. ಶೇ. 2ಕ್ಕಿಂತ ಹೆಚ್ಚಿನ ತೆರಿಗೆಯನ್ನು ಕಾರ್ಪೋರೇಟ್‌ಗಳ ಮೇಲೆ ಕೇಂದ್ರ ಸರ್ಕಾರ ಹಾಕಲಿಲ್ಲ. ಬದಲಾಗಿ ಅವರ ಟ್ಯಾಕ್ಸ್‌ ಕಮ್ಮಿ ಮಾಡಿತು. ಇಲ್ಲದವರಿಗಲ್ಲ, ಉಳ್ಳವರಿಗೆ ಟ್ಯಾಕ್ಸ್‌ ಕಡಿಮೆ ಮಾಡಿತು. ಉಳ್ಳವರ ಸಾಲವನ್ನು ಮನ್ನಾ ಮಾಡುತ್ತೆ. ರೈತರು ಕೇಳಿದರೂ ಮಾಡಲ್ಲ. ಉಳ್ಳವರಿಗೆ ಭೂಮಿ ರಿಯಾಯಿತಿ, ನೀರಿನ ರಿಯಾಯಿತಿ, ವಿದ್ಯುತ್ ರಿಯಾರಿತಿ ನೀಡಲಾಗುತ್ತಿದೆ. ಇಲ್ಲದವರಿಗೆ ಯಾಕಿಲ್ಲ ಎಂದು ಸರ್ಕಾರವನ್ನು ಪ್ರಶ್ನಿಸಬೇಕಾದದ್ದು ವಿದ್ಯಾರ್ಥಿಗಳ ಜವಾಬ್ದಾರಿ ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...