Homeಕರ್ನಾಟಕದಮ್ಮು, ತಾಕತ್ ಇದ್ದರೆ ದಲಿತ ಗೋವಿಂದ ಕಾರಜೋಳ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿ: ವಿಜಯೇಂದ್ರಗೆ ಸಿದ್ದರಾಮಯ್ಯ...

ದಮ್ಮು, ತಾಕತ್ ಇದ್ದರೆ ದಲಿತ ಗೋವಿಂದ ಕಾರಜೋಳ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿ: ವಿಜಯೇಂದ್ರಗೆ ಸಿದ್ದರಾಮಯ್ಯ ಸವಾಲು

ಛಲವಾದಿ ನಾರಾಯಣ ಸ್ವಾಮಿ ಅವರ ತಲೆ ಮೇಲೆ ಚಡ್ಡಿತುಂಬಿದ ಬುಟ್ಟಿಹೊರಿಸಿ ಕಳಿಸುವ ಬದಲಿಗೆ ನೀವು ಮತ್ತು ನಿಮ್ಮ ತಂದೆಯವರು ಯಾಕೆ ಅದನ್ನು ಹೊತ್ತುಕೊಂಡು ಹೋಗಿಲ್ಲ?

- Advertisement -
- Advertisement -

ನೆಹರೂ ಕುಟುಂಬ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡಗಳನ್ನು ಮತ್ತು ಅಲ್ಪಸಂಖ್ಯಾತರನ್ನು ತಮ್ಮ ಮನೆಯಾಳುಗಳ ರೀತಿ ನೋಡಿಕೊಂಡು ಬಂದಿದೆ ಎಂದಿರುವ ಬಿಜೆಪಿ ರಾಜಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ಮಾಧ್ಯಮ ಪ್ರಕಟನೆ ಹೊರಡಿಸಿರುವ ಸಿದ್ದರಾಮಯ್ಯ, “ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರಾಗಬೇಕೆಂದು ಸಲಹೆ ನೀಡುತ್ತಿರುವುದು ಅವರ ಅಜ್ಞಾನ ಮತ್ತು ಅತ್ಮವಂಚನೆಯನ್ನು ಮಾತ್ರವಲ್ಲ, ದುರಹಂಕಾರವನ್ನೂ ಸೂಚಿಸುತ್ತದೆ ಎಂದಿದ್ದಾರೆ.

ವಿಜಯೇಂದ್ರ ಅವರಿಗೆ ಓದುವ ಅಭ್ಯಾಸ ಇದ್ದರೆ, ಈ ದೇಶದ ಹಿಂದುಳಿದ ಜಾತಿಗಳು, ದಲಿತರು ಮತ್ತು ಅಲ್ಪಸಂಖ್ಯಾತರನ್ನು ಭಾರತೀಯ ಜನತಾ ಪಕ್ಷ ಯಾವ ಯಾವ ಕಾಲದಲ್ಲಿ ಹೇಗೆಲ್ಲಾ ನಡೆಸಿಕೊಂಡಿದೆ ಎಂಬ ಇತಿಹಾಸವನ್ನು ಓದಿ ತಿಳಿದುಕೊಳ್ಳಲಿ ಎಂದು ಹೇಳಿದ್ದಾರೆ.

ಬಂಡಾರುಲಕ್ಷ್ಮಣ ಎಂಬ ಅಮಾಯಕ ದಲಿತ ನಾಯಕನನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಜೈಲಿಗೆ ತಳ್ಳಿದ್ದು ಮಾತ್ರವಲ್ಲ, ಅದೇ ಕೊರಗಿನಲ್ಲಿ ಅವರು ಸಾಯುವಂತೆ ಮಾಡಿದವರು ಯಾರು? ಮಾತೆತ್ತಿದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಸರನ್ನು ಮೆರೆಸುವ ಬಿಜೆಪಿ, ಅವರನ್ನೇ ಪ್ರಧಾನಮಂತ್ರಿ ಯಾಕೆ ಮಾಡಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಎ.ಪಿ.ಜೆ ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿ ಮಾಡಿದ್ದೇ ಸಾಧನೆ ಎಂದು ಹೇಳಿಕೊಳ್ಳುವವರು, ಪ್ರಸಕ್ತ ಲೋಕಸಭೆಯಲ್ಲಿ ಬಿಜೆಪಿಗೆ ಸೇರಿರುವ ಒಬ್ಬನೇ ಒಬ್ಬ ಮುಸ್ಲಿಂ ಸಂಸದ ಯಾಕೆ ಇಲ್ಲ? ಕಳೆದ ಲೋಕಸಭಾ ಚುನಾವಣೆಯಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ ಎನ್ನುವ ಪ್ರಶ್ನೆಗಳಿಗೆ ಉತ್ತರ ಕೊಡಲು ಸಾಧ್ಯವೇ? ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

ಹಿಂದುಳಿದ ನಾಯಕರನ್ನು ಬಿಜೆಪಿ ಹೇಗೆ ನಡೆಸಿಕೊಳ್ಳುತ್ತಾ ಬಂದಿದೆ ಎನ್ನುವುದಕ್ಕೆ ರಾಜ್ಯದ ಹಿಂದುಳಿದ ಜಾತಿಗಳ ನಾಯಕ ಎಸ್.ಬಂಗಾರಪ್ಪನವರೇ ಸಾಕ್ಷಿ. ಬಂಗಾರಪ್ಪನವರನ್ನು ನಿಮ್ಮ ತಂದೆ ಬಿ.ಎಸ್ ಯಡಿಯೂರಪ್ಪನವರು ಮುಗಿಸಿದರೆ, ಅವರ ಮಗ ಕುಮಾರ್ ಬಂಗಾರಪ್ಪನವರ ರಾಜಕೀಯವನ್ನು ನೀವು ಮುಗಿಸಲು ಹೊರಟಿದ್ದೀರಿ. ಇದರ ವಿವರವನ್ನು ಅವರು ನೀಡುತ್ತಲೇ ಇದ್ದಾರೆ. ಬಂಗಾರಪ್ಪನವರಿರಲಿ, ನರೇಂದ್ರ ಮೋದಿ ಅವರೇ ಇರಲಿ, ಎಲ್ಲಿಯ ವರೆಗೆ ಇವರು ವರ್ಣವ್ಯವಸ್ಥೆ ಆಧಾರಿತ ಹಿಂದುತ್ವದ ಅಜೆಂಡಾಕ್ಕೆ ತಲೆ ಬಗ್ಗಿಸುತ್ತಾ ಇರುತ್ತಾರೋ ಅಲ್ಲಿಯ ವರೆಗೆ ಮಾತ್ರ ಅವರ ತಲೆಗಳು ಸುರಕ್ಷಿತ. ಇದು ಮೋದಿಯವರಿಗೂ ತಿಳಿದಿರಲಿ ಎಂದಿದ್ದಾರೆ.

ವಿಜಯೇಂದ್ರ ಅವರೇ, ದಲಿತ ಮತ್ತು ಹಿಂದುಳಿದ ಜಾತಿಗಳ ಬಗ್ಗೆ ನಿಮಗೆ ಅಷ್ಟೊಂದು ಅಕ್ಕರೆ, ಕಾಳಜಿಗಳಿದ್ದರೆ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಒಬ್ಬ ದಲಿತ ನಾಯಕನಿಗೆ ಬಿಟ್ಟುಬಿಡಿ. ನಿಮಗೆ ಅನುಕೂಲವಾಗಲೆಂದು ಆ ಹೆಸರನ್ನು ನಾನೇ ಸೂಚಿಸುತ್ತೇನೆ. ದಲಿತ ನಾಯಕ ಗೋವಿಂದ ಕಾರಜೋಳ ಅವರು ಇತ್ತೀಚೆಗೆ ನಿಮ್ಮ ಸಂಗಕ್ಕೆಬಿದ್ದು ಇತ್ತೀಚೆಗೆ ಏನೇನೋ ಮಾತನಾಡುತ್ತಿದ್ದಾರೆ. ಆದರೆ ನನ್ನ ಸಹದ್ಯೋಗಿಯಾಗಿದ್ದ ಅವರು ಮೂಲತ: ಸಜ್ಜನ ವ್ಯಕ್ತಿ. ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ದಮ್ಮು ತಾಕತ್ ಇದ್ದರೆ ಕಾರಜೋಳ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಅವರನ್ನೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿಬಿಡಿ ಎಂದು ಸವಾಲ್ ಹಾಕಿದ್ದಾರೆ.

ಇಂತಹ ಒಳ್ಳೆಯ ಕೆಲಸವನ್ನು ನೀವು ಮಾಡುವುದೇ ಇಲ್ಲ ಎನ್ನುವುದು ನನಗೆ ಗೊತ್ತು. ಬೇರೆ ಪಕ್ಷಗಳಲ್ಲಿನ ದಲಿತ ನಾಯಕರ ಚಾರಿತ್ರ್ಯಹನನ ಮಾಡಲಷ್ಟೇ ಬಿಜೆಪಿ ತನ್ನ ದಲಿತ ನಾಯಕರನ್ನು ಬಳಸಿಕೊಳ್ಳುತ್ತದೆಯೇ ಹೊರತು, ಅವರಿಗೆ ಯಾವುದೇ ಗೌರವದ ಮತ್ತು ಪ್ರಮುಖ ಸ್ಥಾನಮಾನ ನೀಡುವುದಿಲ್ಲ ಎಂದಿರುವ ಸಿದ್ದರಾಮಯ್ಯ,  ವಿಜಯೇಂದ್ರ ಅವರೇ, ಛಲವಾದಿ ನಾರಾಯಣ ಸ್ವಾಮಿ ಅವರ ತಲೆ ಮೇಲೆ ಚಡ್ಡಿತುಂಬಿದ ಬುಟ್ಟಿಹೊರಿಸಿ ಕಳಿಸುವ ಬದಲಿಗೆ ನೀವು ಮತ್ತು ನಿಮ್ಮ ತಂದೆಯವರು ಯಾಕೆ ಅದನ್ನು ಹೊತ್ತುಕೊಂಡು ಹೋಗಿಲ್ಲ? ಇದಕ್ಕೆ ಉತ್ತರ ಇದೆಯಾ ನಿಮ್ಮಲ್ಲಿ? ಎಂದು ಕೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರು ಮಾತ್ರವಲ್ಲ ದೇಶ ಮೆಚ್ಚುವ ಒಬ್ಬ ಮುತ್ಸದ್ದಿ ನಾಯಕ. ಶ್ರದ್ಧೆ, ಶ್ರಮ ಮತ್ತು ಜನಪಪರಕಾಳಜಿ ಮೂಲಕ ಅವರು ನಾಯಕರಾಗಿ ಬೆಳೆದಿದ್ದಾರೆಯೇ ಹೊರತು, ಎಂದೂ ದಲಿತ ಕಾರ್ಡ್ ಪ್ರದರ್ಶಿಸಿ ರಾಜಕೀಯ ಮಾಡಿಲ್ಲ. ಅವರ ಬೆಳವಣಿಗೆಗೆ ಯಾರ ಶಿಫಾರಸುಗಳ ಅಗತ್ಯವೂ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಮಂತ್ರಿ ಯಾರು ಆಗಬೇಕೆನ್ನುವುದನ್ನು ನಮ್ಮ ಪಕ್ಷ ನಿರ್ಧರಿಸುತ್ತದೆ. ಅದರ ಬಗ್ಗೆ ಬಿಜೆಪಿ ತಲೆಕೆಡಿಸಿಕೊಳ‍್ಳುವ ಅಗತ್ಯ ಇಲ್ಲ ಎಂದಿದ್ದಾರೆ.

ವಿಜಯೇಂದ್ರ ಅವರೇ ನೀವು ಯೋಚಿಸಬೇಕಾಗಿರುವುದು ನಿಮ್ಮ ಪಕ್ಷದ ಬಗ್ಗೆ. ಎಪ್ಪತ್ತೈದು ವರ್ಷ ತುಂಬಿರುವ ನರೇಂದ್ರ ಮೋದಿ ಅವರ ಪದಚ್ಯುತಿಯ ಸೂಚನೆಯನ್ನು ಆರ್‌ಎಸ್‌ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ನೀಡಿದ್ದಾರೆ. ದಲಿತ ಪ್ರಧಾನಮಂತ್ರಿಯನ್ನು ಮಾಡಲು ಬಿಜೆಪಿಗೆ ಇದೊಂದು ಸದಾವಕಾಶ. ಆ ಪ್ರಯತ್ನ ನಿಮ್ಮಿಂದಲೇ ಶುರುವಾಗಲಿ. ಬೇರೆಯವರಿಗೆ ಬೋಧನೆ ಮಾಡುವ ಬದಲಿಗೆ ಬಿಜೆಪಿಯ ಪ್ರಧಾನಮಂತ್ರಿ ಸ್ಥಾನಕ್ಕೆ ಒಬ್ಬ ದಲಿತ ನಾಯಕನನ್ನು ನೀವೇ ಮೊದಲೇ ಸೂಚಿಸಿ ನಿಮ್ಮ ದಲಿತ ಪ್ರೇಮವನ್ನು ಸಾಬೀತುಪಡಿಸಿ. ಆ ಹೆಸರುಗಳು ಗೋವಿಂದಪ್ಪ ಕಾರಜೋಳ ಅವರೋ, ಛಲವಾದಿ ನಾರಾಯಾಣ ಸ್ವಾಮಿ ಅವರದ್ದಾಗಿದ್ದರೆ ಅವರನ್ನು ಅಭಿನಂದಿಸುವರಲ್ಲಿ ನಾನು ಮೊದಲಿಗನಾಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಎಐಸಿಸಿ ಒಬಿಸಿ ಸಲಹಾ ಮಂಡಳಿ ಸಭೆ: ಮೂರು ಪ್ರಮುಖ ನಿರ್ಣಯಗಳ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...