Homeಕರೋನಾ ತಲ್ಲಣನಮ್ಮನ್ನು ನೋಡಿ ನಗುತ್ತಿದ್ದರೆ, ಮುಂಬೈ ಮಾದರಿಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

ನಮ್ಮನ್ನು ನೋಡಿ ನಗುತ್ತಿದ್ದರೆ, ಮುಂಬೈ ಮಾದರಿಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

ದೇಶದಲ್ಲೇ ಅತ್ಯಂತ ಹೆಚ್ಚು ಕೊರೊನಾ ಪೀಡಿತ ನಗರವಾಗಿದ್ದ ಮುಂಬೈಯಲ್ಲಿ ಈಗ ಪರಿಸ್ಥಿತಿ ಸುಧಾರಣೆಯಾಗುತ್ತಿದೆ.

- Advertisement -
- Advertisement -

ಕೊರೊನಾ ವೈರಸ್ ಸಮಸ್ಯೆಯ ತೀವ್ರತೆಯ ಬಗ್ಗೆ ಪ್ರಾಮಾಣಿಕತೆ ಇದ್ದಲ್ಲಿ ಮಾತ್ರ “ಮುಂಬೈ ಮಾದರಿ” ಇತರ ನಗರಗಳು ಮತ್ತು ರಾಜ್ಯಗಳಲ್ಲಿ ಕೆಲಸ ಮಾಡಬಹುದೆಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಆಯುಕ್ತ ಇಕ್ಬಾಲ್ ಸಿಂಗ್ ಚಾಹಲ್ ಹೇಳಿದ್ದಾರೆ.

“ಎರಡು ತಿಂಗಳ ಹಿಂದೆ ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳು ಮಹಾರಾಷ್ಟ್ರದಲ್ಲಿ ಮಾತ್ರ ಯಾಕೆ ಕೊರೊನಾ ಎಂದು ಕರೆ ಮಾಡಿ ಕೇಳುತ್ತಿದ್ದರು. ಅವರು ನಮ್ಮನ್ನು ನೋಡಿ ನಗುತ್ತಿದ್ದರು. ಹೀಗೆ ಮಾಡಿದರೆ ಕೊರೊನಾ ನಿರ್ವಹಣೆಗೆ ಬಳಸಿದ ಮಾದರಿಯನ್ನು ಅವರೊಂದಿಗೆ ಹೇಗೆ ಹಂಚಿಕೊಳ್ಳುವುದು?… ವಿಪತ್ತುಗಳು ಸಂಭವಿಸಿದಾಗ, ಕಲಿಯಲು ಸಮಯ ಇರುವುದಿಲ್ಲ, ಆ ಮಾದರಿಗಳನ್ನು ನಕಲಿ ಮಾಡಲು ಸಮಯ ಇರುವುದಿಲ್ಲ” ಎಂದು ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

“ಮುಂಬೈಯ ಅನುಭವದಿಂದ ತಿಳಿದುಕೊಳ್ಳಿ” ಎಂದು ಸುಪ್ರೀಂ ಕೋರ್ಟ್ ಹೇಳಿದ ಕೆಲವೇ ಗಂಟೆಗಳ ನಂತರ ಬುಧವಾರ ರಾತ್ರಿ ದೆಹಲಿ ಸರ್ಕಾರ ಮತ್ತು ಕೇಂದ್ರದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

ಮುಂಬಯಿಯಲ್ಲಿ ಈಗ ಆಮ್ಲಜನಕದ ಸಮಸ್ಯೆಗಳು ಇಲ್ಲ. ಲಭ್ಯವಿರುವ ಆಮ್ಲಜನಕದ ಅತ್ಯುತ್ತಮ ಬಳಕೆ, ತಡೆರಹಿತ ವಿತರಣೆ ಮತ್ತು ಬಫರ್ ಸ್ಟಾಕ್ ರಚನೆ ಮತ್ತು ಅದರ ಅಸ್ತಿತ್ವದಲ್ಲಿರುವ ಸಂಪನ್ಮೂಲಗಳನ್ನು BMC ಒಟ್ಟುಗೂಡಿಸುವ ಸಾಮರ್ಥ್ಯದ ಬಗ್ಗೆ ಅವರು ಹೇಳಿದ್ದಾರೆ. ಮುಂಬೈಯಲ್ಲಿ ಇದುವರೆಗೂ ಆಮ್ಲಜನಕದ ಕೊರತೆಯಿಂದ ಯಾವುದೆ ಸಾವುಗಳಾಗಿಲ್ಲ ಎಂದು ಅವರು ಹೇಳಿದ್ದಾರೆ.

ಏಪ್ರಿಲ್ 16-17 ರ ಮಧ್ಯದ ರಾತ್ರಿ, ಆರು ಆಸ್ಪತ್ರೆಗಳಿಂದ ಆಮ್ಲಜನಕ ಪೂರೈಕೆ ಕಡಿಮೆ ಇರುವುದರಿಂದ 168 ರೋಗಿಗಳನ್ನು ಸ್ಥಳಾಂತರಿಸಲಾಯಿತು. ಅಂದು 40 ರೋಗಿಗಳು ಗಂಭೀರವಾಗಿದ್ದರು. ಅಂತಿಮವಾಗಿ, ಎಲ್ಲರನ್ನು ಬೆಳಿಗ್ಗೆ 1 ರಿಂದ ಬೆಳಿಗ್ಗೆ 5 ರವರೆಗೆ ಸುರಕ್ಷಿತವಾಗಿ ಸೌಲಭ್ಯವಿರುವೆಡೆ ವರ್ಗಾಯಿಸಿ ಎಲ್ಲರ ಜೀವವನ್ನು ಉಳಿಸಿವಂತಾಗಿತ್ತು.

“ಈ ಘಟನೆಯ ನಂತರ, ಏಪ್ರಿಲ್ 17 ರಂದು, ಬಿಎಂಸಿಯು ರಾಜ್ಯ ಕಾರ್ಯಪಡೆಯೊಂದಿಗೆ ಆಮ್ಲಜನಕದ ಬಳಕೆಗೆ ಪ್ರೋಟೋಕಾಲ್ ಕೇಳಿದೆವು. ಆಮ್ಲಜನಕದ ಸ್ಯಾಚುರೇಷನ್‌‌ ಮಟ್ಟ 94% ಕಡಿವೆ ಇರುವವರಿಗೆ ಬೇಕಾಬಿಟ್ಟಿಯಾಗಿ ಬಳಸಬಾರದು. ಆಮ್ಲಜನಕದ ಬಳಕೆಯ ಲೆಕ್ಕಪರಿಶೋಧನೆ ಇರಬೇಕು, ಈ ಮಾಹಿತಿಯನ್ನು ನಗರದ ಎಲ್ಲಾ 176 ಆಸ್ಪತ್ರೆಗಳಿಗೆ ಪ್ರಸಾರ ಮಾಡಲಾಯಿತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೇ 10 ರಿಂದ ಲಾಕ್‌ಡೌನ್‌‌‌ – ‘ಜನ ಹೊಟ್ಟೆಗೆ ಏನು ತಿಂತಾರೆ?’; ಆಕ್ರೋಶ

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತನಗೆ ಮುಕ್ತ ಅಧಿಕಾರ ನೀಡಿದ್ದಾಗಿ ಬಿಎಂಸಿ ಮುಖ್ಯಸ್ಥ ಇಕ್ಬಾಲ್ ಸಿಂಗ್ ಚಾಹಲ್ ಹೇಳಿದ್ದಾರೆ. “ನಾನು ಅನೇಕ ವಿಧಗಳಲ್ಲಿ ತುಂಬಾ ಅದೃಷ್ಟಶಾಲಿ, ವಾಸ್ತವಿಕವಾಗಿ ನಾನು ಯಾವುದೇ ನಿರ್ಧಾರ ತೆಗೆದುಕೊಳ್ಳಬಹುದು. ಆ ರೀತಿಯ ಮುಕ್ತ ಅಧಿಕಾರ ಸಿಎಂ ನನಗೆ ನೀಡಿದ್ದಾರೆ. ಈ ಅಧಿಕಾರ ದೇಶದ ಅನೇಕ ನಗರಗಳ ನನ್ನ ಸಹೋದ್ಯೋಗಿಗಳಿಗೆ ಇಲ್ಲ” ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಮೇ ತಿಂಗಳಲ್ಲಿ ಮುಂಬೈಯಲ್ಲಿ ಕೊರೊನಾ ಪರಿಸ್ಥಿತಿ ಹದಗೆಡುತ್ತಿದ್ದಾಗ ಇಕ್ಬಾಲ್ ಸಿಂಗ್ ಚಾಹಲ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು. ಒಂದು ಸಮಯದಲ್ಲಿ ದೇಶದಲ್ಲೇ ಅತ್ಯಂತ ಹೆಚ್ಚು ಕೊರೊನಾ ಪೀಡಿತ ನಗರವಾಗಿದ್ದ ಮುಂಬೈಯಲ್ಲಿ ಪರಿಸ್ಥಿತಿ ಸುಧಾರಣೆಯಾಗುತ್ತಿದೆ.

ಮುಂಬೈ ಈಗಾಗಲೇ ಕೊರೊನಾ ಮೂರನೇ ಅಲೆಗೆ ತಯಾರಿ ನಡೆಸುತ್ತಿದೆ. ನಗರದಲ್ಲಿ ಬೃಹತ್‌ ಮಟ್ಟದ ಸೌಲಭ್ಯಗಳು ಮತ್ತು ಆಮ್ಲಜನಕ ಸ್ಥಾವರಗಳೊಂದಿಗೆ ಸುಮಾರು 5,500 ಹಾಸಿಗೆಗಳನ್ನು ಸೇರಿಸಲಾಗುತ್ತಿದೆ, ಇವುಗಳಲ್ಲಿ 70% ಆಮ್ಲಜನ ಇರುವ ಹಾಸಿಗೆಗಳಾಗಿದೆ.

ಇದನ್ನೂ ಓದಿ: ‘ಮೌಲ್ಯಗಳಿಗೆ ಸರಿ ಹೊಂದುತ್ತಿಲ್ಲ’: ಸುಪ್ರೀಂನಲ್ಲಿ ಚುನಾವಣಾ ಆಯೋಗವನ್ನು ಪ್ರತಿನಿಧಿಸುವ ವಕೀಲ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...