Homeಮುಖಪುಟಕರೂರು ಕಾಲ್ತುಳಿತ | "ಸಿಎಂ ಸರ್, ನಿಮಗೆ ಸೇಡು ಇದ್ದರೆ ನನ್ನೊಂದಿಗೆ ತೀರಿಸಿಕೊಳ್ಳಿ": ವಿಡಿಯೋ ಮೂಲಕ...

ಕರೂರು ಕಾಲ್ತುಳಿತ | “ಸಿಎಂ ಸರ್, ನಿಮಗೆ ಸೇಡು ಇದ್ದರೆ ನನ್ನೊಂದಿಗೆ ತೀರಿಸಿಕೊಳ್ಳಿ”: ವಿಡಿಯೋ ಮೂಲಕ ಪ್ರತಿಕ್ರಿಯಿಸಿದ ನಟ ವಿಜಯ್

- Advertisement -
- Advertisement -

ಕರೂರು ಕಾಲ್ತುಳಿತ ದುರಂತದ ಬಳಿಕ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಮೊದಲ ಬಾರಿಗೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿದ್ದು, ಘಟನೆಯ ಕುರಿತು ತೀವ್ರ ದುಖಃ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದ್ದಾರೆ.

“ನನ್ನ ಜೀವನದಲ್ಲಿ ಇದುವರೆಗೆ ಇಂತಹ ನೋವಿನ ಪರಿಸ್ಥಿತಿಯನ್ನು ನಾನು ಎದುರಿಸಿಲ್ಲ. ನನ್ನ ಹೃದಯದಲ್ಲಿ ನೋವು ಮಾತ್ರ ಇದೆ. ಜನರು ರ‍್ಯಾಲಿಯಲ್ಲಿ ನನ್ನನ್ನು ನೋಡಲು ಬಂದಿದ್ದರು. ನನ್ನ ಮೇಲೆ ಅವರು ಇಟ್ಟಿರುವ ಪ್ರೀತಿ ಮತ್ತು ವಾತ್ಸಲ್ಯಕ್ಕೆ ಯಾವಾಗಲೂ ಕೃತಜ್ಞನಾಗಿದ್ದೇನೆ. ಜನರ ಸುರಕ್ಷತೆ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು, ರಾಜಕೀಯ ಬದಿಗಿಟ್ಟು ನಾನು ಸುರಕ್ಷಿತವಾದ ಸ್ಥಳವನ್ನು ಆರಿಸಿಕೊಂಡಿದ್ದೆ. ಆದರೆ, ಏನಾಗಬಾರದೋ ಅದು ಸಂಭವಿಸಿತು” ಎಂದು ವಿಜಯ್ ವಿಡಿಯೋದಲ್ಲಿ ಹೇಳಿದ್ದಾರೆ.

“ನಾನೂ ಒಬ್ಬ ಮನುಷ್ಯ. ಅಷ್ಟೊಂದು ಜನರು ಸಂಕಷ್ಟಕ್ಕೆ ಸಿಲುಕಿದಾಗ, ನಾನು ಅವರನ್ನು ಬಿಟ್ಟು ಹೇಗೆ ಹೋಗಲಿ? ಆದರೆ, ಮತ್ತೆ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ನಾನು ದುರಂತ ಸ್ಥಳಕ್ಕೆ ವಾಪಸ್ ಹೋಗಲಿಲ್ಲ” ಎಂದು ತಿಳಿಸಿದ್ದಾರೆ.

ಮುಂದುವರಿದು, “ನಾವು ಯಾವುದೇ ತಪ್ಪು ಮಾಡಿಲ್ಲ. ಆದರೆ, ನಮ್ಮ ಪಕ್ಷದ ನಾಯಕರು, ಸ್ನೇಹಿತರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರ ವಿರುದ್ಧ ಎಫ್‌ಐಆರ್ ದಾಖಲಿಸುತ್ತಿದ್ದಾರೆ. ಸಿಎಂ ಸರ್, ನೀವು ಸೇಡು ತೀರಿಸಿಕೊಳ್ಳುವ ಉದ್ದೇಶ ಹೊಂದಿದ್ದರೆ, ನನಗೆ ಏನು ಬೇಕಾದರು ಮಾಡಿ. ಆದರೆ, ಅವರನ್ನು ಮುಟ್ಟಬೇಡಿ. ನಾನು ಮನೆಯಲ್ಲಿಯೇ ಇರುತ್ತೇನೆ ಅಥವಾ ನನ್ನ ಕಚೇರಿಯಲ್ಲಿಯೇ ಇರುತ್ತೇನೆ. ನೀವು ನನಗೆ ಏನು ಬೇಕಾದರೂ ಮಾಡಿ”ಎಂದು ವಿಜಯ್ ಹೇಳಿದ್ದಾರೆ.

“ರಾಜಕೀಯ ಪಿತೂರಿಯ ಬಗ್ಗೆ ಉಲ್ಲೇಖಿಸಿದ ಅವರು, “ನಾವು ಐದು ಜಿಲ್ಲೆಗಳಲ್ಲಿ ಪ್ರಚಾರ ಮಾಡಿದ್ದೇವೆ. ಕರೂರಿನಲ್ಲಿ ಮಾತ್ರ ಏಕೆ ಹೀಗಾಯಿತು? ಇದು ಹೇಗೆ ಸಂಭವಿಸಿತು? ಜನರಿಗೆ ಸತ್ಯ ತಿಳಿದಿದೆ ಮತ್ತು ಅವರು ಎಲ್ಲವನ್ನೂ ಗಮನಿಸುತ್ತಿದ್ದಾರೆ” ಎಂದಿದ್ದಾರೆ.

“ನಮಗೆ ನೀಡಲಾದ ಸ್ಥಳದಿಂದಲೇ ನಾವು ಮಾತನಾಡಿದ್ದೇವೆ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಕರೂರಿನ ಜನರು ಸತ್ಯ ಹೇಳುವುದನ್ನು ನೋಡುವಾಗ (ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು) ದೇವರೇ ಸತ್ಯ ಮಾತನಾಡಲು ಭೂಮಿಗೆ ಇಳಿದಂತೆ ಭಾಸವಾಗುತ್ತಿದೆ. ಸತ್ಯವು ಶೀಘ್ರದಲ್ಲೇ ಹೊರಬರುತ್ತದೆ” ಎಂದು ನನಗೆ ವಿಶ್ವಾಸವಿದೆ” ಎಂದು ವಿಜಯ್ ಹೇಳಿದ್ದಾರೆ.

ಕಾಲ್ತುಳಿತ ದುರಂತದ ಸಂತ್ರಸ್ತ ಕುಟುಂಬಗಳ ನೋವಿನ ಬಗ್ಗೆ ಉಲ್ಲೇಖಿಸಿದ ವಿಜಯ್, “ಈ ಸಂದರ್ಭದಲ್ಲಿ ನಾವೆಲ್ಲರೂ ನೋವಿನಲ್ಲಿದ್ದೇವೆ. ಅನೇಕ ಕುಟುಂಬಗಳು ನೋವಿನಿಂದ ಬಳಲುತ್ತಿವೆ ಎಂದು ನನಗೆ ತಿಳಿದಿದೆ. ಗಾಯಗೊಂಡ ಎಲ್ಲರೂ ಬೇಗ ಗುಣಮುಖರಾಗಲಿ. ಸಾಧ್ಯವಾದಷ್ಟು ಬೇಗ ನಿಮ್ಮೆಲ್ಲರನ್ನೂ ನಾನು ಭೇಟಿಯಾಗುತ್ತೇನೆ” ಎಂದು ತಿಳಿಸಿದ್ದಾರೆ.

“ನಮ್ಮ ರಾಜಕೀಯ ಪ್ರಯಾಣವು ಹೆಚ್ಚಿನ ಶಕ್ತಿ ಮತ್ತು ನಿರ್ಭಯತೆಯಿಂದ ಮುಂದುವರಿಯುತ್ತದೆ. ಈ ಸಮಯದಲ್ಲಿ, ರಾಜಕಾರಣಿಗಳು, ಪಕ್ಷದ ಸದಸ್ಯರು, ನಾಯಕರು ಮತ್ತು ನನ್ನ ಪರವಾಗಿ ಮಾತನಾಡಿದ ಎಲ್ಲರಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಹೇಳುವ ಮೂಲಕ ವಿಜಯ್ ತಮ್ಮ ವಿಡಿಯೋ ಕೊನೆಗೊಳಿಸಿದ್ದಾರೆ.

ಕರೂರು ಕಾಲ್ತುಳಿತದ ಬಗ್ಗೆ ವದಂತಿ ಹರಡಿದ ಆರೋಪ: ಯೂಟ್ಯೂಬರ್ ಸೇರಿ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...