Homeಕರ್ನಾಟಕಐಐಎಂ ಬೆಂಗಳೂರು | ಜಾತಿ ಆಧಾರಿತ ತಾರತಮ್ಯದ ವಿರುದ್ಧ ಪ್ರತಿಭಟನೆ

ಐಐಎಂ ಬೆಂಗಳೂರು | ಜಾತಿ ಆಧಾರಿತ ತಾರತಮ್ಯದ ವಿರುದ್ಧ ಪ್ರತಿಭಟನೆ

- Advertisement -
- Advertisement -

ಪ್ರತಿಷ್ಠಿತ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು(IIM-B)ನಲ್ಲಿ ಜಾತಿ ಆಧಾರಿತ ತಾರತಮ್ಯದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಗಿದೆ. ಸಂಸ್ಥೆಯ ನಿರ್ದೇಶಕರ ರಾಜೀನಾಮೆಗೆ ಒತ್ತಾಯಿಸಿದ ಪ್ರತಿಭಟನಾಕಾರರು, ಸಂಸ್ಥೆಯು ಇಕ್ವಿಟಿ ಮತ್ತು ಸೇರ್ಪಡೆಯ ಸಾಂವಿಧಾನಿಕ ಆದೇಶಗಳನ್ನು ಎತ್ತಿಹಿಡಿಯಲು ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಐಐಎಂ ಬೆಂಗಳೂರು

ಅಖಿಲ ಭಾರತ OBC ಸ್ಟೂಡೆಂಟ್ಸ್ ಅಸೋಸಿಯೇಷನ್ ​​(AIOBCSA), ಡಾ ಬಿಆರ್ ಅಂಬೇಡ್ಕರ್ ಅಸೋಸಿಯೇಷನ್ ​​ಆಫ್ ಇಂಜಿನಿಯರ್ಸ್ (BANAE), ಮತ್ತು OBC ಫೆಡರೇಶನ್ ಆಫ್ ಇಂಡಿಯಾದಿಂದ ಆಯೋಜಿಸಲಾದ ಪ್ರತಿಭಟನೆಯು ತಳಮಟ್ಟದ ಸಮುದಾಯಗಳು ಮತ್ತು ಪ್ರಗತಿಪರ ಸಂಘಟನೆಗಳ ಪ್ರತಿನಿಧಿಗಳನ್ನು ಒಟ್ಟುಗೂಡಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಭಾರತದ ಉನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ದಲಿತ ಮತ್ತು ಹಿಂದುಳಿದ ವರ್ಗದವರನ್ನು ವ್ಯವಸ್ಥಿತವಾದ ಹೊರಗಿಡಲಾಗುತ್ತಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ಶಿಕ್ಷಣ ಕೇಂದ್ರದಲ್ಲಿ ರಚನಾತ್ಮಕ ಸುಧಾರಣೆಗಳನ್ನು ತರಬೇಕು ಎಂದು ಆಗ್ರಹಿಸಿದ್ದಾರೆ.

ಐಐಎಂ ಬೆಂಗಳೂರು ನಿರ್ದೇಶಕ ರಿಷಿಕೇಶ ಟಿ ಕೃಷ್ಣನ್ ಅವರು ಮೀಸಲಾತಿ ನೀತಿಗಳನ್ನು ಉಲ್ಲಂಘಿಸಿದ್ದಾರೆ ಮತ್ತು ಕ್ಯಾಂಪಸ್‌ನಲ್ಲಿ ವೈವಿಧ್ಯತೆ ಮತ್ತು ದಾಖಲಾತಿ ಸಮಸ್ಯೆಗಳನ್ನು ಪರಿಹರಿಸಲು ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. IIM-B ನಿರಂತರವಾಗಿ ಮೀಸಲಾತಿಯ ಸಾಂವಿಧಾನಿಕ ಆದೇಶಗಳನ್ನು ಕಡೆಗಣಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಐಐಎಂ ಬೆಂಗಳೂರಿನಲ್ಲಿ ಮಂಜೂರಾದ 120 ಹುದ್ದೆಗಳಿಗೆ ಭರ್ತಿಯಾಗಿರುವ 110 ಅಧ್ಯಾಪಕರ ಹುದ್ದೆಗಳಲ್ಲಿ ಕೇವಲ 16 ಮಂದಿ ಮಾತ್ರ ಹಿಂದುಳಿದ ಸಮುದಾಯಗಳ ಜನರು ಇದ್ದಾರೆ ಎಂದು ಆರ್‌ಟಿಐ ಮಾಹಿತಿ ಬಹಿರಂಗಪಡಿಸಿದ್ದಾರೆ. ಇದರಲ್ಲಿ ಐದು ಜನರು ಪರಿಶಿಷ್ಟ ಜಾತಿಯಿಂದ (ಎಸ್‌ಸಿ), ಒಬ್ಬರು ಪರಿಶಿಷ್ಟ ಪಂಗಡದಿಂದ (ಎಸ್‌ಟಿ) ಮತ್ತು ಹತ್ತು ಜನರು ಇತರ ಹಿಂದುಳಿದ ವರ್ಗ (ಒಬಿಸಿ) ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದು ಆರ್‌ಟಿಐ ಮಾಹಿತಿ ಹೇಳಿದೆ.

ಉನ್ನತ ಶಿಕ್ಷಣದಲ್ಲಿ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಾಂವಿಧಾನಿಕ ಆದೇಶಗಳನ್ನು ಎತ್ತಿಹಿಡಿಯುವಲ್ಲಿ ಸಂಸ್ಥೆಯು ವಿಫಲವಾಗಿದ್ದು, ತಳಸಮುದಾಯಕ್ಕೆ ಕಡಿಮೆ ಪ್ರಾತಿನಿಧ್ಯವನ್ನು ನೀಡಲಾಗಿದೆ ಎಂದು ಪ್ರತಿಭಟನಾಕಾರರು ಎತ್ತಿ ತೋರಿಸಿದ್ದಾರೆ. ಎಲ್ಲಾ ಅಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿ ವರ್ಗಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾತಿ ನೀತಿಗಳನ್ನು ತಕ್ಷಣವೇ ಜಾರಿಗೆ ತರಬೇಕೆಂದು ಅವರು ಒತ್ತಾಯಿಸಿದ್ದಾರೆ.

ಎಐಒಬಿಸಿಎಸ್‌ಎ ರಾಷ್ಟ್ರೀಯ ಅಧ್ಯಕ್ಷ ಕಿರಣ್ ಕುಮಾರ್ ಗೌಡ ಮಾತನಾಡಿ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆ ಇರಬೇಕು ಎಂದು ಪ್ರತಿಪಾದಿಸುವ ಅಧ್ಯಾಪಕರು ಆಡಳಿತದಿಂದ ಕಿರುಕುಳವನ್ನು ಎದುರಿಸುತ್ತಿದ್ದಾರೆ. ಅಂತಹ ನಿದರ್ಶನಗಳು, ಹಿಂದುಳಿದ ಸಮುದಾಯಗಳಿಗೆ ಪ್ರತಿಕೂಲ ವಾತಾವರಣವನ್ನು ಸೃಷ್ಟಿಸುತ್ತವೆ. ಜೊತೆಗೆ ಅದು ಅವರ ಹೊರಗಿಡುವಿಕೆ ಮತ್ತು ತಾರತಮ್ಯವನ್ನು ಮತ್ತಷ್ಟು ಶಾಶ್ವತಗೊಳಿಸುತ್ತವೆ ಎಂದು ಅವರು ಹೇಳಿದ್ದಾರೆ.

ಅಷ್ಟೆ ಅಲ್ಲದೆ, ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಅನೇಕ ಅಧ್ಯಾಪಕರು ಸಂಸ್ಥೆಯಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. “ಆದರೆ ಅವರು ಗುರಿಯಾಗುವ ಭಯದಿಂದ ಮುಂದೆ ಬರಲು ಹಿಂಜರಿಯುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ ಪತ್ರ

ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...