Homeಮುಖಪುಟ‘ತಪ್ಪು ಗ್ರಹಿಕೆ, ಅಶಾಂತಿ’ ನೆಪದಲ್ಲಿ ಉಮರ್ ಖಾಲಿದ್ ಅವರ ಸಂಶೋಧನಾ ಕೃತಿಯನ್ನು ಗ್ರಂಥಾಲಯದಿಂದ ತೆಗೆದ ಐಐಎಸ್‌ಇಆರ್...

‘ತಪ್ಪು ಗ್ರಹಿಕೆ, ಅಶಾಂತಿ’ ನೆಪದಲ್ಲಿ ಉಮರ್ ಖಾಲಿದ್ ಅವರ ಸಂಶೋಧನಾ ಕೃತಿಯನ್ನು ಗ್ರಂಥಾಲಯದಿಂದ ತೆಗೆದ ಐಐಎಸ್‌ಇಆರ್ ಪುಣೆ

- Advertisement -
- Advertisement -

ಪುಣೆ: ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರು ಬರೆದ ಪುಸ್ತಕವೊಂದನ್ನು ಗ್ರಂಥಾಲಯಕ್ಕೆ ಹೊಸದಾಗಿ ಸೇರ್ಪಡೆ ಮಾಡಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ (ಐಐಎಸ್‌ಇಆರ್) ಆ ಪುಸ್ತಕವನ್ನು ಗ್ರಂಥಾಲಯದಿಂದ ತೆಗೆದುಹಾಕಿದೆ. ಯಾವುದೇ ‘ತಪ್ಪು ಗ್ರಹಿಕೆ ಅಥವಾ ಅಶಾಂತಿ’ ಉಂಟಾಗುವುದನ್ನು ತಪ್ಪಿಸುವ ಉದ್ದೇಶದಿಂದ ಈ ಕ್ರಮ ಕೈಗೊಂಡಿರುವುದಾಗಿ ಸಂಸ್ಥೆ ಸೋಮವಾರ ತಿಳಿಸಿದೆ. ಕೇಂದ್ರ ಶಿಕ್ಷಣ ಸಚಿವಾಲಯದ ಅಧೀನದಲ್ಲಿರುವ ಸ್ವಾಯತ್ತ ಸಂಸ್ಥೆಯ ಈ ನಿರ್ಧಾರವು, ಪುಸ್ತಕಗಳ ಆಯ್ಕೆ ಮತ್ತು ಶೈಕ್ಷಣಿಕ ಸ್ವಾತಂತ್ರ್ಯದ ಕುರಿತ ಚರ್ಚೆಗೆ ಕಾರಣವಾಗಿದೆ.

‘ಡಿವೈಡೆಡ್ ಕಮ್ಯುನಿಟೀಸ್: ಟ್ರೈಬಲ್ ಹಿಸ್ಟರೀಸ್ ಅಂಡ್ ದಿ ಪಾಲಿಟಿಕ್ಸ್ ಆಫ್ ಪವರ್’ (ವಿಭಜಿತ ಸಮುದಾಯಗಳು: ಆದಿವಾಸಿ ಇತಿಹಾಸಗಳು ಮತ್ತು ಅಧಿಕಾರದ ರಾಜಕೀಯ) ಎಂಬುದು ಉಮರ್ ಖಾಲಿದ್ ಅವರ ಪಿಎಚ್‌ಡಿ ಸಂಶೋಧನೆಯನ್ನು ಆಧರಿಸಿದ ಕೃತಿಯಾಗಿದೆ. ಇಂದಿನ ಜಾರ್ಖಂಡ್ ರಾಜ್ಯದ ಸಿಂಗ್‌ಭೂಮ್ ಪ್ರದೇಶದಲ್ಲಿ ಕಳೆದ ಎರಡು ಶತಮಾನಗಳಲ್ಲಿ ನಡೆದ ರಾಜ್ಯ ರಚನೆ, ವಸಾಹತುಶಾಹಿ ಆಡಳಿತ ಮತ್ತು ಬುಡಕಟ್ಟು ಸಮುದಾಯಗಳು ಹಾಗೂ ರಾಜ್ಯದ ನಡುವಿನ ಅಧಿಕಾರ ಸಂಬಂಧಗಳನ್ನು ಈ ಕೃತಿ ಪರಿಶೀಲಿಸುತ್ತದೆ. ವಿಶೇಷವಾಗಿ ಹೋ ಬುಡಕಟ್ಟು ಸಮುದಾಯದ ಇತಿಹಾಸ ಮತ್ತು ಅದರ ಮೇಲಿನ ಅಧಿಕಾರದ ಪ್ರಭಾವವನ್ನು ಅಧ್ಯಯನ ಮಾಡುತ್ತದೆ.

ಐಐಎಸ್‌ಇಆರ್ ತನ್ನ ಹೇಳಿಕೆಯಲ್ಲಿ, ಸಂಸ್ಥೆಯ ಸದಸ್ಯರು ಮತ್ತು ಗ್ರಂಥಾಲಯದ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡುವ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಪುಸ್ತಕಗಳನ್ನು ಸಂಗ್ರಹಿಸಲಾಗುತ್ತದೆ ಎಂದು ತಿಳಿಸಿದೆ. ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿ ತಿಂಗಳು ಸರಾಸರಿ 50ಕ್ಕೂ ಹೆಚ್ಚು ಪುಸ್ತಕಗಳನ್ನು ಗ್ರಂಥಾಲಯಕ್ಕೆ ಸೇರ್ಪಡೆ ಮಾಡಲಾಗುತ್ತದೆ ಎಂದೂ ಹೇಳಿದೆ. ಉಮರ್ ಖಾಲಿದ್ ಅವರ ಪುಸ್ತಕದ ಕುರಿತು ಸಂಸ್ಥೆಯ ಅಧಿಕಾರಿಗಳ ಗಮನಕ್ಕೆ ವಿಷಯ ಬಂದ ತಕ್ಷಣ, ಯಾವುದೇ ತಪ್ಪು ತಿಳುವಳಿಕೆ ಅಥವಾ ಅಶಾಂತಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪುಸ್ತಕವನ್ನು ಹಿಂಪಡೆಯಲು ನಿರ್ಧರಿಸಲಾಯಿತು. ಈ ಕುರಿತು ಮುಂದಿನ ಕ್ರಮಗಳ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ಪುಣೆಯ ಐಐಎಸ್‌ಇಆರ್‌ನಲ್ಲಿ ಖಾಲಿದ್ ಅವರ ಸಂಶೋಧನಾ ಪ್ರಬಂಧವನ್ನು ಪುಸ್ತಕದ ರೂಪದಲ್ಲಿ ಗ್ರಂಥಾಲಯಕ್ಕೆ ಸೇರಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮದ ಎಕ್ಸ್‌ನಲ್ಲಿ ವ್ಯಕ್ತಿಯೊಬ್ಬರು ಪೋಸ್ಟ್ ಮಾಡಿದ ಬಳಿಕ ಈ ಬೆಳವಣಿಗೆ ನಡೆದಿದೆ. ವಿಜ್ಞಾನ ಸಂಶೋಧನೆಗಾಗಿ ಸ್ಥಾಪಿಸಲಾದ ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ಖಾಲಿದ್ ಅವರ ಕೃತಿ ಸೇರ್ಪಡೆಯಾಗಿರುವುದನ್ನು ಆ ಪೋಸ್ಟ್ ಆಕ್ಷೇಪಿಸಿತ್ತು.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿಯಾದ ಉಮರ್ ಖಾಲಿದ್ ಅವರನ್ನು ಸೆಪ್ಟೆಂಬರ್ 2020ರಲ್ಲಿ ಬಂಧಿಸಲಾಗಿತ್ತು. 2020ರ ಫೆಬ್ರವರಿಯಲ್ಲಿ ದೆಹಲಿಯಲ್ಲಿ ನಡೆದ ಗಲಭೆಗಳಿಗೆ ಸಂಬಂಧಿಸಿದಂತೆ, 53 ಮಂದಿ ಸಾವನ್ನಪ್ಪಿ 700ಕ್ಕೂ ಹೆಚ್ಚು ಜನರು ಗಾಯಗೊಂಡ ಪ್ರಕರಣದಲ್ಲಿ ಅವರು ಪ್ರಮುಖ ಸಂಚುಕೋರರಲ್ಲಿ ಒಬ್ಬರೆಂದು ಆರೋಪಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆದರೆ, ಪುಸ್ತಕವು ಶೈಕ್ಷಣಿಕ ಸಂಶೋಧನೆಯನ್ನು ಆಧರಿಸಿರುವುದರ ಬದಲು ಅದರ ಲೇಖಕರ ವಿರುದ್ಧದ ಆರೋಪಗಳ ಹಿನ್ನೆಲೆಯಲ್ಲಿ ಗ್ರಂಥಾಲಯದಿಂದ ತೆಗೆದುಹಾಕಿರುವ ಕ್ರಮವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸಾಮಾಜಿಕ ಮಾಧ್ಯಮದಲ್ಲಿ ವ್ಯಕ್ತವಾದ ಆಕ್ಷೇಪದ ಬೆನ್ನಲ್ಲೇ ಸಂಸ್ಥೆ ಪುಸ್ತಕವನ್ನು ಹಿಂಪಡೆದಿರುವುದು, ಶೈಕ್ಷಣಿಕ ಸಂಸ್ಥೆಗಳು ವಿವಾದದ ಭೀತಿಗೆ ಮಣಿಯಬೇಕೇ ಮತ್ತು ಸಂಶೋಧನಾ ಕೃತಿಗಳ ಆಯ್ಕೆಯಲ್ಲಿ ಲೇಖಕರ ವಿರುದ್ಧದ ಆರೋಪಗಳು ನಿರ್ಣಾಯಕವಾಗಬೇಕೇ ಎಂಬ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Declaration not a part of Form-6’ : ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ ಚುನಾವಣಾ ಆಯೋಗ?

ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಸೋಮವಾರ (ಅ.26) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹೊಸ ಮತದಾರರನ್ನು ಸೇರಿಸುವ 'ಫಾರಂ-6ರ' ಜೊತೆ ಸಲ್ಲಿಸುವಂತೆ ಸೂಚಿಸಲಾಗಿದ್ದ 'ಘೋಷಣಾ ಪತ್ರ' ಫಾರಂ-6ರ ಭಾಗವಾಗಿರಲಿಲ್ಲ (Declaration not a part of...

ಗ್ಯಾನೇಶ್ ಕುಮಾರ್ ಕಾರ್ಯವೈಖರಿ ಪ್ರಶ್ನಿಸಿ ಅರ್ಜಿ : ಚುನಾವಣಾ ಆಯೋಗದ ಉತ್ತರಕ್ಕೆ ಪ್ರತಿಕ್ರಿಯಿಸಲು 10 ದಿನಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಅ.27) ಮುಂದೂಡಿದೆ. ನಿನ್ನೆ ಇಸಿಐ ಸಲ್ಲಿಸಿರುವ ಆಕ್ಷೇಪಣಾ ಅಫಿಡವಿಟ್‌ಗೆ (ಕೌಂಟರ್ ಅಫಿಡವಿಟ್) ಪ್ರತ್ಯುತ್ತರ (ರಿಜಾಯಿಂಡರ್) ಸಲ್ಲಿಸಲು...

ತಮಿಳುನಾಡು: ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ; ನಾಲ್ವರು ಪುನಃ ಬಂಧನ

ತಮಿಳುನಾಡಿನ ಆಂಡಿಪಟ್ಟಿ ಸಮೀಪದ ತೆಕ್ಕಂಪಟ್ಟಿ ಉಪಜೈಲಿನಲ್ಲಿ ಜೈಲು ಸಿಬ್ಬಂದಿಯನ್ನು ಥಳಿಸಿ 17 ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಂಗಳವಾರ (ಅ.27) ಪೊಲೀಸರು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಜೈಲಿನಿಂದ ಪರಾರಿಯಾದವರ ಪೈಕಿ...

ಕರ್ನಾಟಕ ಎಸ್ಐಆರ್: ಅಂತಿಮ ಮತದಾರರ ಪಟ್ಟಿಯಿಂದ 99.32 ಲಕ್ಷ ಹೆಸರುಗಳು ಹೊರಕ್ಕೆ; ಮತದಾರರ ಸಂಖ್ಯೆ 4.55 ಕೋಟಿಗೆ ಕುಸಿತ: ವರದಿ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಿಂದ ಬರೋಬ್ಬರಿ 99.32 ಲಕ್ಷ ಮತದಾರರ ಹೆಸರುಗಳು ಹೊರಗುಳಿದಿವೆ. ಮಂಗಳವಾರ ಪ್ರಕಟವಾಗಲಿರುವ ಅಂತಿಮ ಪಟ್ಟಿಯಲ್ಲಿ ರಾಜ್ಯದ...

‘ನ್ಯೂಸ್‌ರೂಮ್‌ಗಳೇ ಮುಚ್ಚಿಹೋಗಲಿವೆ’ : ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿಎನ್‌ಪಿಎ; ಕೇಂದ್ರ ಸರ್ಕಾರಕ್ಕೆ ನೋಟಿಸ್

ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ, 2023ರ (DPDP Act) ನಿಬಂಧನೆಗಳನ್ನು ಪ್ರಶ್ನಿಸಿ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA) ಸಲ್ಲಿಸಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಅ.27) ನೋಟಿಸ್...

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು : ಪ್ರಶಾಂತ್ ಭೂಷಣ್

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಕೈಗೊಂಡ...

SIR ವಿವಾದ: ಎಲ್ಲಾ ಆದೇಶಗಳು ಒಮ್ಮತದಿಂದಲೇ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಅಫಿಡವಿಟ್!

ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR)ಗೆ ಸಂಬಂಧಿಸಿದ ಎಲ್ಲಾ ಆದೇಶಗಳು ಸಂಪೂರ್ಣ ಒಮ್ಮತದಿಂದಲೇ ಹೊರಬಂದಿವೆ ಎಂದು ಭಾರತೀಯ...

ಎಸ್‌ಸಿ-ಎಸ್‌ಟಿ ಮತ್ತು ಮುಸ್ಲಿಮರ ಇತಿಹಾಸ, ಸಂಕಟ ಒಂದೇ, ಸಮಸಮಾಜ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಶೋಷಿತ ಸಮುದಾಯಗಳು ಒಂದಾಗಬೇಕಿದೆ: ರಿಜ್ವಾನ್ ಅರ್ಷದ್

ಸಮಾಜದಲ್ಲಿ ತಾರತಮ್ಯ ಮತ್ತು ಶೋಷಣೆಗೆ ಒಳಗಾದ ಸಮುದಾಯಗಳು ಒಗ್ಗಟ್ಟಾಗಿ ನಿಂತಾಗ ಮಾತ್ರ ಸಾಮಾಜಿಕ ನ್ಯಾಯ ಮತ್ತು ಸಮಾನ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್...

ಮಹಾರಾಷ್ಟ್ರ ಎಸ್‌ಐಆರ್‌ನಲ್ಲಿ ಹೆಸರು ಅಳಿಸಿದ ಬಳಿಕ ಮರು ನೋಂದಣಿ: ಮತದಾರರ ವಿರುದ್ಧ ಕ್ರಮವಿಲ್ಲ ಎಂದ ಸುಪ್ರೀಂ ಕೋರ್ಟ್ 

ನವದೆಹಲಿ: ಮಹಾರಾಷ್ಟ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವೇಳೆ ಹೆಸರುಗಳನ್ನು ಅಳಿಸಿರುವ ಪ್ರಕರಣದಲ್ಲಿ, ಮರು ನೋಂದಣಿಗೆ ಅರ್ಜಿ ಸಲ್ಲಿಸುವ ಮತದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಸುಪ್ರೀಂ...

ಖಾಸಗಿ ಶಾಲೆಗಳಿಗೆ ಸಂಬಂಧಿಸಿದ 100 ಕೋಟಿ ರೂಪಾಯಿ ಹಗರಣ: ತಮಿಳುನಾಡು ಮಾಜಿ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಬಂಧನ

ಖಾಸಗಿ ಶಾಲೆಗಳಿಗೆ ಸಂಬಂಧಿಸಿದ 100 ಕೋಟಿ ರೂಪಾಯಿ ಮೌಲ್ಯದ ಹಗರಣವೊಂದಕ್ಕೆ ಸಂಬಂಧಿಸಿದಂತೆ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಹಾಗೂ ತಮಿಳುನಾಡಿನ ಮಾಜಿ ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರನ್ನು...