Homeಮುಖಪುಟಐಐಟಿ ಬಾಂಬೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಸಹಪಾಠಿಯ ಬಂಧನ

ಐಐಟಿ ಬಾಂಬೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಸಹಪಾಠಿಯ ಬಂಧನ

- Advertisement -
- Advertisement -

ಐಐಟಿ ಬಾಂಬೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ದರ್ಶನ್ ಸೋಲಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಸಹಪಾಠಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ದರ್ಶನ್ ಸೋಲಂಕಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 19 ವರ್ಷದ ಅರ್ಮಾನ್ ಖತ್ರಿಯನ್ನು ಬಂಧಿಸಲಾಗಿದೆ.

ಐಐಟಿ ಬಾಂಬೆಯಲ್ಲಿ ದರ್ಶನ್‌ ಸೋಲಂಕಿ ಬ್ಯಾಚುಲರ್ ಇನ್ ಟೆಕ್ನಾಲಜಿ (ಕೆಮಿಕಲ್) ಕೋರ್ಸ್‌ನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದರು. ಇಲ್ಲಿ ದರ್ಶನ್‌ ಜಾತಿ ತಾರತಮ್ಯ ಎದುರಿಸಿದ್ದರು ಎಂದು ಅವರ ಕುಟುಂಬದವರು ಹೇಳಿಕೊಂಡಿದ್ದರು. ಆದಾಗ್ಯೂ, ಐಐಟಿ-ಬಾಂಬೆ ರಚಿಸಿದ ತನಿಖಾ ಸಮಿತಿಯು ಇದನ್ನು ನಿರಾಕರಿಸಿತ್ತು. ಸೋಲಂಕಿ ಅವರ ಸಾವಿಗೆ ಕಾರಣ ‘ಶೈಕ್ಷಣಿಕ ಹಿಂದುಳಿದಿರುವಿಕೆ’ ಎಂದು ಹೇಳಿಕೊಂಡಿತ್ತು.

ಸೋಲಂಕಿ ಅವರ ಕೊಠಡಿಯಲ್ಲಿ ಪತ್ತೆಯಾಗಿದ್ದ ಸೂಸೈಡ್ ನೋಟ್‌ನಲ್ಲಿ ‘ಅರ್ಮಾನ್‌ ಖತ್ರಿ’ ಹೆಸರು ಉಲ್ಲೇಖಗೊಂಡಿದೆ. ಈ ಟಿಪ್ಪಣಿಯನ್ನು ಸೋಲಂಕಿ ಅವರೇ ಬರೆದಿದ್ದಾರೆ ಎಂಬುದು ಕೈಬರಹದ ವಿಶ್ಲೇಷಣೆಯಿಂದ ದೃಢಪಟ್ಟ ನಂತರ ಖತ್ರಿಯನ್ನು ಬಂಧಿಸಲಾಗಿದೆ.

“ಕೋಮುವಾದಿ ಆಯಾಮದ ಕೆಲವು ಟೀಕೆಗಳನ್ನು ದರ್ಶನ್‌ ಮಾಡಿದ ನಂತರ ಖತ್ರಿ, ಆತನಿಗೆ ಕಟರ್‌ನಿಂದ ಬೆದರಿಕೆ ಹಾಕಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

“ಅಂದಿನಿಂದ, ಸೋಲಂಕಿ ಭಯಭೀತರಾಗಿದ್ದರು, ಒಂದೆರಡು ಸಂದರ್ಭಗಳಲ್ಲಿ ಖತ್ರಿಯಲ್ಲಿ ಕ್ಷಮೆಯಾಚಿಸಿದ್ದನು ಮತ್ತು ಇಬ್ಬರೂ ತಬ್ಬಿಕೊಂಡಿದ್ದರು. ಆದಾಗ್ಯೂ, ಸೋಲಂಕಿ ಹೆದರುತ್ತಲೇ ಇದ್ದಂತೆ ತೋರುತ್ತಿದೆ” ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಖತ್ರಿ ಮತ್ತು ಸೋಲಂಕಿ ನಡುವಿನ ಜಗಳಕ್ಕೆ ಕಾರಣವೇನು ಎಂದು ಕೇಳಿದಾಗ ಖತ್ರಿ ಸಹಕರಿಸುತ್ತಿಲ್ಲ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. “ನಾವು ಅವನನ್ನು ಬಂಧಿಸಿದ್ದೇವೆ. ಆದ್ದರಿಂದ ನಾವು ಆತನನ್ನು ಪ್ರಶ್ನಿಸಬಹುದು ಮತ್ತು ಘಟನೆಗಳ ನಿಖರವಾದ ವಿವರಗಳನ್ನು ಪಡೆಯಬಹುದು” ಎಂದು ಹೇಳಿದ್ದಾರೆ.

ಪ್ರಕರಣದಲ್ಲಿ ಜಾತಿ ತಾರತಮ್ಯದ ಬಗ್ಗೆ ತನಿಖಾಧಿಕಾರಿಗಳಿಗೆ ಇದುವರೆಗೆ ಪುರಾವೆಗಳು ಸಿಕ್ಕಿಲ್ಲ ಎಂದು ಹೆಸರು ಹೇಳಲಿಚ್ಛಿಸದ ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.

ಮೃತ ವಿದ್ಯಾರ್ಥಿಯ ತಂದೆ ರಮೇಶಭಾಯ್ ಸೋಲಂಕಿ ಪ್ರತಿಕ್ರಿಯಿಸಿ, “ಕುಟುಂಬವು ನ್ಯಾಯಯುತವಾದ ವಿಚಾರಣೆಯನ್ನು ಮಾತ್ರ ಬಯಸುತ್ತಿದೆ” ಎಂದು ಹೇಳಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

“ಅರ್ಮಾನ್ ನನ್ನನ್ನು ಕೊಂದಿದ್ದಾನೆ” ಎಂದು ಪಶ್ನೆ ಪತ್ರಿಕೆಯೊಂದರ ಹಿಂಭಾಗದಲ್ಲಿ ಬರೆದಿರುವುದನ್ನು ಪೊಲೀಸರು ನಮಗೆ ತೋರಿಸಿದ್ದಾರೆ ಎಂದು ಸೋಲಂಕಿ ತಂದೆ ತಿಳಿಸಿದ್ದಾರೆ. “ನಾವು ಕೈಬರಹವನ್ನು ಇಟ್ಟುಕೊಳ್ಳಲು ಸಾಧ್ಯವಾಗಲಿಲ್ಲ. ಈಗ ವಿಧಿವಿಜ್ಞಾನ ತಜ್ಞರು ಅದನ್ನು ದೃಢಪಡಿಸಿದ್ದಾರೆ” ಎಂದಿದ್ದಾರೆ.

“ಮುಂಬೈ ನಗರ ಪೊಲೀಸರು ನಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ; ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಕುಟುಂಬ ಇತ್ತೀಚೆಗೆ ಆರೋಪಿಸಿತ್ತು.

18 ವರ್ಷ ವಯಸ್ಸಿನ ದರ್ಶನ್ ಸೋಲಂಕಿಯವರು ಫೆಬ್ರವರಿ 12 ರಂದು ತಮ್ಮ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದಿದ್ದರು. ಅಹಮದಾಬಾದ್‌ ಮೂಲದವರಾದ ದರ್ಶನ್‌, ಐಐಟಿ-ಬಾಂಬೆಯಲ್ಲಿ ಬ್ಯಾಚುಲರ್ಸ್ ಇನ್ ಟೆಕ್ನಾಲಜಿ (ಕೆಮಿಕಲ್) ಕೋರ್ಸ್‌ನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಬರೆದ ಪತ್ರದಲ್ಲಿ ದರ್ಶನ್‌ ಸೋಲಂಕಿಯವರ ತಂದೆ ರಮೇಶಭಾಯ್ ಸೋಲಂಕಿ ತಮ್ಮ ಅಳಲು ತೋಡಿಕೊಂಡಿದ್ದರು. “ನಮ್ಮ ಕುಟುಂಬವು ಪೊಲೀಸರು ಮತ್ತು ವಿಶೇಷ ತನಿಖಾ ತಂಡದ ಸದಸ್ಯರ ವರ್ತನೆಯಿಂದ ಸಂಪೂರ್ಣವಾಗಿ ಆಘಾತಕ್ಕೊಳಗಾಗಿದೆ ಮತ್ತು ನಿರಾಶೆಗೊಂಡಿದೆ. ಸುಮಾರು ಎರಡು ವಾರಗಳಿಂದ ಎಫ್‌ಐಆರ್ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

“ತಾವು ಹೇಳಿದಂತೆ ದೂರಿನಲ್ಲಿ ಬರೆದುಕೊಡಬೇಕೆಂದು ಪೊಲೀಸರು ಮತ್ತು ವಿಶೇಷ ತನಿಖಾ ತಂಡ ಒತ್ತಾಯಿಸುತ್ತಿದೆ” ಎಂದು ರಮೇಶ್‌ಭಾಯ್‌ ಆರೋಪಿಸಿದ್ದರು.

“ಪೊಲೀಸರ ವರ್ತನೆಯು ನಮ್ಮಲ್ಲಿ ಯಾವುದೇ ವಿಶ್ವಾಸವನ್ನು ತರುತ್ತಿಲ್ಲ. ದರ್ಶನ್ ಎದುರಿಸುತ್ತಿದ್ದ ಜಾತಿ ತಾರತಮ್ಯದ ದೃಷ್ಟಿಕೋನದಲ್ಲಿ ತನಿಖೆಯನ್ನು ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಕರಣವನ್ನು ಬೇರೆಡೆಗೆ ತಿರುಗಿಸಲು ಎಸ್‌ಐಟಿ ಪ್ರಯತ್ನಿಸುತ್ತಿದೆ ಎಂದು ನಾವು ಆತಂಕಗೊಂಡಿದ್ದೇವೆ” ಎಂದಿದ್ದರು.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರಿಗೂ ಪತ್ರ ಬರೆದಿದ್ದರು. “ಸ್ವತಂತ್ರ ತನಿಖೆ ನಡೆಸಬೇಕು; ಸೋಲಂಕಿ ಅವರ ಕುಟುಂಬದವರು ಸಲ್ಲಿಸಿದ ಪ್ರಾಥಮಿಕ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಬೇಕು” ಎಂದು ಕೋರಲಾಗಿದೆ.

“ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಜಾತಿ ತಾರತಮ್ಯದಿಂದ ಅಕಾಲಿಕ ಮರಣ ಹೊಂದಿದ ನಮ್ಮ ಮಗನಿಗೆ ನ್ಯಾಯ ದೊರಕಿಸಿಕೊಡಲು, ಸತ್ಯವನ್ನು ಎತ್ತಿಹಿಡಿಯಲು ದಯವಿಟ್ಟು ಈ ವಿಷಯದಲ್ಲಿ ತುರ್ತಾಗಿ ಕಾರ್ಯನಿರ್ವಹಿಸಿ” ಎಂದು ಪತ್ರದಲ್ಲಿ ಒತ್ತಾಯಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...