Homeಮುಖಪುಟರಾಮನ ಅಪಹಾಸ್ಯ ಆರೋಪದಲ್ಲಿ ವಿದ್ಯಾರ್ಥಿಗಳಿಗೆ 1.2 ಲಕ್ಷ ದಂಡ ವಿಧಿಸಿದ ಬಾಂಬೆ ಐಐಟಿ

ರಾಮನ ಅಪಹಾಸ್ಯ ಆರೋಪದಲ್ಲಿ ವಿದ್ಯಾರ್ಥಿಗಳಿಗೆ 1.2 ಲಕ್ಷ ದಂಡ ವಿಧಿಸಿದ ಬಾಂಬೆ ಐಐಟಿ

- Advertisement -
- Advertisement -

ನಾಟಕದಲ್ಲಿ ರಾಮನನ್ನು ಅಪಹಾಸ್ಯ ಮಾಡಲಾಗಿದೆ ಮತ್ತು ರಾಮಾಯಣವನ್ನು ನಕಾರಾತ್ಮಕವಾಗಿ ಚಿತ್ರಿಸಿ ನಾಟಕ ಪ್ರದರ್ಶಿಸಲಾಗಿದೆ ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ) ಬಾಂಬೆಯು 8 ವಿದ್ಯಾರ್ಥಿಗಳಿಗೆ ತಲಾ 1.2 ಲಕ್ಷದವರೆಗೆ ದಂಡ ವಿಧಿಸಿದೆ.

ಪರ್ಫಾರ್ಮಿಂಗ್ ಆರ್ಟ್ಸ್ ಫೆಸ್ಟಿವಲ್(ಪಿಎಎಫ್) ಅಂಗವಾಗಿ ಮಾರ್ಚ್ 31ರಂದು ‘ರಾಹೋವನ’ ಶೀರ್ಷಿಕೆಯ ನಾಟಕವನ್ನು ಕಲಾ ಉತ್ಸವದಲ್ಲಿ ಪ್ರದರ್ಶಿಸಲಾಗಿತ್ತು. ನಾಟಕದಲ್ಲಿ ಭಗವಾನ್ ರಾಮನನ್ನು ಕೆಟ್ಟದಾಗಿ ಚಿತ್ರಿಸಲಾಗಿತ್ತು ಮತ್ತು ರಾಮಾಯಣವನ್ನು ಅಸಭ್ಯವಾಗಿ ಮತ್ತು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂದು ಸಂಸ್ಥೆಯ ಸ್ನಾತಕೋತ್ತರ ವಿದ್ಯಾರ್ಥಿಗಳ ಗುಂಪೊಂದು ಆರೋಪಿಸಿತ್ತು. ನಾಟಕದ ವಿರುದ್ಧ ಆಡಳಿತ ಮಂಡಳಿಗೆ ವಿದ್ಯಾರ್ಥಿಗಳ ಗುಂಪು ದೂರನ್ನು ಕೂಡ ನೀಡಿತ್ತು.

ಐಐಟಿ ಬಾಂಬೆ ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ (APPSC)ಗೆ ಸಂಯೋಜಿತವಾಗಿರುವ ಮತ್ತೋರ್ವ ವಿದ್ಯಾರ್ಥಿ ಕೂಡ ನಾಟಕವನ್ನು ಪ್ರಸ್ತುತಪಡಿಸಿದ್ದಕ್ಕಾಗಿ ವಿದ್ಯಾರ್ಥಿಗಳಿಗೆ ದಂಡ ವಿಧಿಸಲಾಗಿದೆ ಎಂದು ಹೇಳಿದ್ದಾರೆ. ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ ಎಡಪಂಥೀಯ ವಿದ್ಯಾರ್ಥಿಗಳ ಒಕ್ಕೂಟವಾಗಿದೆ.

8 ವಿದ್ಯಾರ್ಥಿಗಳಲ್ಲಿ ತಲಾ 40,000 ರೂ.ನಿಂದ 1,20,000ರೂ.ಗಳವರೆಗೆ ದಂಡವನ್ನು ವಸೂಲಿ ಮಾಡಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಜೂನ್ 4ರಂದು ಐಐಟಿ ಬಾಂಬೆ ರಿಜಿಸ್ಟ್ರಾರ್ ಕಚೇರಿ ಹೊರಡಿಸಿದ ನೋಟಿಸ್‌ನಲ್ಲಿ ವಿದ್ಯಾರ್ಥಿಗಳು ಜುಲೈ 30ರೊಳಗೆ ದಂಡವನ್ನು ಪಾವತಿಸಬೇಕು ಎಂದು ತಿಳಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಲು ಐಐಟಿ ಬಾಂಬೆ ನಿರಾಕರಿಸಿದೆ.

ಈ ಕುರಿತು ಐಐಟಿ ಬಾಂಬೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ರಾಮಾಯಣವನ್ನು ಅವಹೇಳನಕಾರಿಯಾಗಿ ಚಿತ್ರಿಸಿದ ‘ರಾಹೋವನ’ ನಾಟಕದಲ್ಲಿ ಭಾಗಿಯಾಗಿರುವವರ ವಿರುದ್ಧ ಆಡಳಿತವು ಶಿಸ್ತು ಕ್ರಮ ಕೈಗೊಂಡಿರುವುದನ್ನು ನಾವು ಸ್ವಾಗತಿಸುತ್ತೇವೆ. ಈ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸ್ವಾತಂತ್ರ್ಯವನ್ನು ಭಗವಾನ್ ರಾಮ, ಮಾತಾ ಸೀತೆ ಮತ್ತು ಭಗವಾನ್ ಲಕ್ಷ್ಮಣರನ್ನು ಅಪಹಾಸ್ಯ ಮಾಡಲು ದುರುಪಯೋಗಪಡಿಸಿಕೊಂಡಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಜಾಗತಿಕ ಕ್ಯೂಎಸ್ ರ್ಯಾಂಕಿಂಗ್-2025ರಲ್ಲಿ ಭಾರತದಲ್ಲೇ ಅಗ್ರಸ್ಥಾನದಲ್ಲಿರುವ ಮುಂಬೈ ಐಐಟಿ ಜೂನ್ 4ರಂದು ಈ ರೀತಿ ನೋಟಿಸ್ ನೀಡಿದೆ. ಇದಕ್ಕೂ ಮುನ್ನ ಒಂದು ಶಿಸ್ತುಸಮಿತಿ ಸಭೆಯನ್ನು ಮೇ 8ರಂದು ನಡೆಸಲಾಗಿದ್ದು, ಈ ನಾಟಕದ ಬಗೆಗಿನ ದೂರಿನ ಬಗ್ಗೆ ಪರಿಶೀಲಿಸಲಾಗಿತ್ತು ಎನ್ನಲಾಗಿದೆ.

ಇದನ್ನು ಓದಿ: ಬಿಹಾರ: ಎಸ್ಸಿ, ಎಸ್ಟಿ, ಒಬಿಸಿಗಳ ಮೀಸಲಾತಿಯಲ್ಲಿ 65% ಹೆಚ್ಚಳ ರದ್ದುಗೊಳಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...