Homeಮುಖಪುಟಕ್ಯಾಂಪಸ್ ನೇಮಕಾತಿಗಳಲ್ಲಿ ಜಾತಿ ತಾರತಮ್ಯ : ಐಐಟಿಗಳು, ಕೇಂದ್ರ ಸರ್ಕಾರಕ್ಕೆ ಎಸ್‌ಸಿ ಆಯೋಗದಿಂದ ನೋಟಿಸ್

ಕ್ಯಾಂಪಸ್ ನೇಮಕಾತಿಗಳಲ್ಲಿ ಜಾತಿ ತಾರತಮ್ಯ : ಐಐಟಿಗಳು, ಕೇಂದ್ರ ಸರ್ಕಾರಕ್ಕೆ ಎಸ್‌ಸಿ ಆಯೋಗದಿಂದ ನೋಟಿಸ್

- Advertisement -
- Advertisement -

ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಗಳಲ್ಲಿ ಜಾತಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪಗಳ ಕುರಿತು ಕ್ರಮ ಕೈಗೊಂಡ ಬಗ್ಗೆ ವರದಿ ನೀಡುವಂತೆ ಸೂಚಿಸಿ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ (ಎನ್‌ಸಿಎಸ್‌ಸಿ) ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ, ಐಐಟಿ-ದೆಹಲಿ ಮತ್ತು ಐಐಟಿ-ಬಾಂಬೆ ನಿರ್ದೇಶಕರಿಗೆ ನೋಟಿಸ್ ನೀಡಿದೆ.

ಶಿಕ್ಷಣ ಹೋರಾಟಗಾರ ಮತ್ತು ಐಐಟಿ ಬಾಂಬೆಯ ಹಳೆ ವಿದ್ಯಾರ್ಥಿ ಧೀರಜ್ ಸಿಂಗ್ ಅವರು ನವೆಂಬರ್ 2023ರಲ್ಲಿ ನೀಡಿದ್ದ ದೂರಿನಲ್ಲಿ, ಕ್ಯಾಂಪಸ್‌ ನೇಮಕಾತಿ ವೇಳೆ ಪರಿಶಿಷ್ಟ ಜಾತಿ (ಎಸ್‌ಸಿ) ವಿದ್ಯಾರ್ಥಿಗಳ ವಿರುದ್ಧ ವ್ಯವಸ್ಥಿತ ಪಕ್ಷಪಾತ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವರದಿಯಾಗುತ್ತಿರುವ ಜಾತಿ ತಾರತಮ್ಯವನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಇತ್ತೀಚೆಗೆ ಮಧ್ಯಪ್ರವೇಶಿಸಿದ ನಂತರ ಜನವರಿ 15 ರಂದು ಎನ್‌ಸಿಎಸ್‌ಸಿ ನೋಟಿಸ್ ನೀಡಿದೆ. ದೇಶದಾದ್ಯಂತದ ಉನ್ನತ ಶಿಕ್ಷಣ ಸಂಸ್ಥಗಳಲ್ಲಿ ಕೇಳಿ ಬರುತ್ತಿರುವ ಜಾತಿ ತಾರತಮ್ಯದ ದೂರುಗಳ ಕುರಿತು ಸುಪ್ರೀಂ ಕೋರ್ಟ್ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ವಿವರವಾದ ವರದಿಯನ್ನು ಕೋರಿದೆ.

ವರದಿಗಳ ಪ್ರಕಾರ, 2023-24ರ ಉದ್ಯೋಗ ನೇಮಕಾತಿ ವೇಳೆ 300ಕ್ಕೂ ಹೆಚ್ಚು ಎಸ್‌ಸಿ ವಿದ್ಯಾರ್ಥಿಗಳು ತಾರತಮ್ಯಕ್ಕೆ ಒಳಗಾಗಿರುವುದನ್ನು ಧೀರಜ್ ಸಿಂಗ್ ಅವರ ದೂರಿನಲ್ಲಿ ವಿವರಿಸಿದ್ದಾರೆ. ಎರಡೂ ಐಐಟಿಗಳಲ್ಲಿನ ಉದ್ಯೋಗ ಅರ್ಜಿಗಳು ವಿದ್ಯಾರ್ಥಿಗಳು ತಮ್ಮ ಜಾತಿ ವರ್ಗ ಮತ್ತು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ರ್ಯಾಂಕ್ ತಿಳಿಸುವಂತೆ ಸೂಚಿಸಿತ್ತು. ಇದು ವಿದ್ಯಾರ್ಥಿಗಳ ಸಾಮಾಜಿಕ ಆರ್ಥಿಕ ಹಿನ್ನೆಲೆ ಬಹಿರಂಗಪಡಿಸುವ ವಿವರಗಳಾಗಿವೆ ಎಂದು ಧೀರಜ್ ಸಿಂಗ್ ದೂರಿನಲ್ಲಿ ಆರೋಪಿಸಿದ್ದಾರೆ.

ಅರ್ಜಿ ನಮೂನೆಗಳ ಸ್ಕ್ರೀನ್‌ಶಾಟ್‌ಗಳನ್ನು ಸಾಕ್ಷಿಯಾಗಿ ಧೀರಜ್ ಸಿಂಗ್ ತನ್ನ ದೂರಿನಲ್ಲಿ ಸಲ್ಲಿಸಿದ್ದಾರೆ. ಐಐಟಿ-ಬಾಂಬೆ ಮತ್ತು ಐಐಟಿ-ದೆಹಲಿಯಲ್ಲಿ ಎಸ್‌ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಘಟನೆಗಳ ಬೆನ್ನಲ್ಲೇ ಧೀರಜ್ ಸಿಂಗ್ ಈ ಆರೋಪಗಳನ್ನು ಮಾಡಿದ್ದಾರೆ.

ಹಲವಾರು ಪ್ರಕರಣಗಳನ್ನು ಹಸ್ತಚಾಲಿತವಾಗಿ ನಿರ್ವಹಿಸುವ ತಾಂತ್ರಿಕ ದೋಷಗಳನ್ನು ಉಲ್ಲೇಖಿಸಿ, ದೂರನ್ನು ಪ್ರಕ್ರಿಯೆಗೊಳಿಸುವಲ್ಲಿ ವಿಳಂಬವಾಗಿದೆ ಎಂದು ಎನ್‌ಸಿಎಸ್‌ಸಿ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಆಯೋಗದ ಸೂಚನೆಗೆ ಪ್ರತಿಕ್ರಿಯಿಸಲು ಐಐಟಿಗಳು ಮತ್ತು ಶಿಕ್ಷಣ ಸಚಿವಾಲಯಕ್ಕೆ 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಕೊನೆಗೂ ‘ಪಾಶ್ ಸಮಿತಿ’ ರಚಿಸಿದ ಕರ್ನಾಟಕ ಫಿಲಂ ಚೇಂಬರ್ : ಆದರೆ ಬಹುಪಾಲು ಸದಸ್ಯರು ಪುರುಷರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...