Homeಮುಖಪುಟಅಂತರ್ಧರ್ಮೀಯ ದಂಪತಿಯ ಅಕ್ರಮ ಬಂಧನ : ಪೊಲೀಸರಿಗೆ ಛೀಮಾರಿ ಹಾಕಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಆದೇಶ

ಅಂತರ್ಧರ್ಮೀಯ ದಂಪತಿಯ ಅಕ್ರಮ ಬಂಧನ : ಪೊಲೀಸರಿಗೆ ಛೀಮಾರಿ ಹಾಕಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಆದೇಶ

ಸಾಮಾಜಿಕ ಒತ್ತಡಕ್ಕೆ ಬಂಧಿಸಿದ್ದೇವೆ ಎಂದ ಪೊಲೀಸರಿಗೆ ಹೈಕೋರ್ಟ್ ತರಾಟೆ

- Advertisement -
- Advertisement -

ಹಿಂದೂ-ಮುಸ್ಲಿಂ ದಂಪತಿಯನ್ನು ಅಕ್ರಮವಾಗಿ ಬಂಧಿಸಿದ ಪೊಲೀಸರಿಗೆ ಶನಿವಾರ (ಅ.19) ಛೀಮಾರಿ ಹಾಕಿದ ಅಲಹಾಬಾದ್ ಹೈಕೋರ್ಟ್, ಪೊಲೀಸರ ನಡೆ ಕಾನೂನುಬಾಹಿರ ಮತ್ತು ಸಂವಿಧಾನದ 21ನೇ ವಿಧಿಯಡಿ ಖಾತ್ರಿ ಪಡಿಸಲಾದ ದಂಪತಿಯ ಮೂಲಭೂತ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎಂದು ಹೇಳಿದೆ.

ದಂಪತಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಪೊಲೀಸರಿಗೆ ಆದೇಶಿಸಿದ್ದು, ಅವರಿಗೆ ಯಾವುದೇ ಕಿರುಕುಳ ನೀಡದೆ ಅಲೀಗಢ ತಲುಪುವವರೆಗೆ ರಕ್ಷಣೆ ಒದಗಿಸುವಂತೆ ಸೂಚಿಸಿದೆ.

ಶೇನ್ ಅಲೀ ಮತ್ತು ರಶ್ಮಿ ಈ ಪ್ರಕರಣದ ದಂಪತಿ. ನನ್ನ ಮಗಳನ್ನು ಶೇನ್ ಅಲೀ ಅಪಹರಿಸಿದ್ದಾನೆ ಎಂದು ಸೆಪ್ಟೆಂಬರ್ 27ರಂದು ಅಲೀಗಢದ ಅಕ್ರಬಾದ್ ಪೊಲೀಸ್ ಠಾಣೆಯಲ್ಲಿ ರಶ್ಮಿಯ ತಂದೆ ದೂರು ದಾಖಲಿಸಿದ್ದರು.

ಅಕ್ಟೋಬರ್ 15ರಂದು ಹೈಕೋರ್ಟ್‌ ಮುಂದೆ ಹಾಜರಾದ ದಂಪತಿ, ನಾವು ಇಬ್ಬರೂ ವಯಸ್ಕರು, ಪರಸ್ಪರ ಇಷ್ಟಪಟ್ಟು ಮದುವೆ ಮಾಡಿಕೊಂಡಿದ್ದೇವೆ ಎಂದಿದ್ದರು. ತನ್ನ ವಿರುದ್ದ ರಶ್ಮಿಯ ತಂದೆ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಶೇನ್ ಅಲೀ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ದಂಪತಿ ಹೈಕೋರ್ಟ್‌ನಿಂದ ಹೊರ ಬಂದ ಕೂಡಲೇ ರಶ್ಮಿಯ ತಂದೆ ಸ್ಥಳೀಯ ಪೊಲೀಸರ ಸಹಾಯದಿಂದ ಇಬ್ಬರನ್ನೂ ಅಪಹರಿಸಿದ್ದರು. ಅವರನ್ನು ಅಲೀಗಢಕ್ಕೆ ಕರೆದೊಯ್ದು, ರಶ್ಮಿಯನ್ನು ‘ಒನ್ ಸ್ಟಾಪ್ ಸೆಂಟರ್’ ಅಥವಾ ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದರು. ಶೇನ್ ಅಲೀಯನ್ನು ಪೊಲೀಸರು ಬಂಧಿಸಿ ಲಾಕ್‌ ಅಪ್‌ನಲ್ಲಿ ಇಟ್ಟಿದ್ದರು.

ಅಕ್ಟೋಬರ್ 17ರಂದು ದಂಪತಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಸೆಕ್ಷನ್ 183ರ ಅಡಿ ರಶ್ಮಿ ಹೇಳಿಕೆ ನೀಡಿದ್ದರು.

ಈ ನಡುವೆ ಶೇನ್ ಅಲೀಯ ಸಹೋದರ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಶನಿವಾರ ರಜಾ ದಿನವಾದರೂ ನ್ಯಾಯಮೂರ್ತಿಗಳಾದ ಸಲೀಲ್ ಕುಮಾರ್ ರೈ ಮತ್ತು ದಿವೇಶ್ ಚಂದ್ರ ಸಮಂತ್ ಅವರ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆ ನಡೆಸಿದೆ.

ವಿಚಾರಣೆ ವೇಳೆ, “ಅಕ್ಟೋಬರ್ 17 ರಂದು ರಶ್ಮಿಯನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ. ಅಲ್ಲಿ ಆಕೆ ವಯಸ್ಕಳೆಂದು ಕಂಡುಬಂದಿದೆ. ಅಲ್ಲದೆ, ಶೇನ್ ಅಲೀಯನ್ನು ಸ್ವಇಚ್ಛೆಯಿಂದ ಮದುವೆಯಾಗಿರುವುದಾಗಿ ಸ್ಪಷ್ಟವಾಗಿ ಹೇಳಿದ್ದಾರೆ” ಎಂದು ಸರ್ಕಾರಿ ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

“ವಿಡಿಯೋ ಕಾನ್ಫರೆನ್ಸ್‌ನಲ್ಲಿ ನ್ಯಾಯಾಧೀಶರ ಮುಂದೆ ಹಾಜರಾದ ರಶ್ಮಿ, “ತನಗೆ 21 ವರ್ಷ ವಯಸ್ಸಾಗಿದ್ದು, ಶೇನ್ ಅಲಿಯನ್ನು ಸ್ವಇಚ್ಛೆಯಿಂದ ಮದುವೆಯಾಗಿದ್ದೇನೆ. ಆತನೊಂದಿಗೆ ಜೀವಿಸಲು ಬಯಸಿದ್ದೇನೆ ಎಂದಿದ್ದಾರೆ. ತನ್ನ ಹಿಂದಿನ ಹೇಳಿಕೆಯನ್ನು ಯಾವುದೇ ಒತ್ತಡವಿಲ್ಲದೆ ನೀಡಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಮಹಿಳೆ ಮೇಜರ್ ಆಗಿರುವುದರಿಂದ ಆಕೆ ಬಯಸಿದ ಯಾರೊಂದಿಗಾದರೂ ಹೋಗಿ ಜೀವಿಸಲು ಸ್ವತಂತ್ರಳು ಎಂದಿರುವ ಹೈಕೋರ್ಟ್ ಪೀಠ, ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನಿರ್ಧರಿಸಲು ಅವರ ವಿವಾಹದ ಸಿಂಧುತ್ವವು ಪ್ರಸ್ತುತವಲ್ಲ ಎಂದಿದೆ.

ಅಕ್ಟೋಬರ್ 15ರಂದು ಹೈಕೋರ್ಟ್ ಆವರಣದಿಂದ ಅಪಹರಿಸಿ ಅಲಿಗಢಕ್ಕೆ ಕರೆದೊಯ್ದಿದ್ದಾರೆ ಎಂಬ ದಂಪತಿಯ ಹೇಳಿಕೆಯನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.

“ಅಕ್ರಬಾದ್ ಠಾಣೆಯಲ್ಲಿ ರಶ್ಮಿಯ ತಂದೆ ದಾಖಲಿಸಿರುವ ಎಫ್‌ಐಆರ್‌ನ ತನಿಖಾಧಿಕಾರಿ, ದಂಪತಿಯ ಧಾರ್ಮಿಕ ಭಿನ್ನಾಭಿಪ್ರಾಯಗಳು ಮತ್ತು ಅವರ ವಿವಾಹದ ಕಾನೂನುಬದ್ಧತೆಯ ಬಗ್ಗೆ ತನಿಖೆ ಮುಂದುವರೆಸಿದ್ದಾರೆ. ಅಂತಹ ಯಾವುದೇ ತನಿಖೆಯ ಅಗತ್ಯವಿರಲಿಲ್ಲ. ಮ್ಯಾಜಿಸ್ಟ್ರೇಟ್ ಆಕೆಯನ್ನು ಬಿಡುಗಡೆ ಮಾಡಿದ ನಂತರ ಪೊಲೀಸರ ಏಕೈಕ ಕೆಲಸವೆಂದರೆ ದಂಪತಿ ಹೇಳಿದ ಜಾಗಕ್ಕೆ ಸೂಕ್ತ ರಕ್ಷಣೆಯೊಂದಿಗೆ ಅವರನ್ನು ಕಳುಹಿಸಿ ಕೊಡುವುದಾಗಿದೆ ಹೈಕೋರ್ಟ್ ತಿಳಿಸಿದೆ.

ವಿಚಾರಣೆ ವೇಳೆ ಅಂತರ್ಧರ್ಮೀಯ ವಿವಾಹ ಹಿನ್ನೆಲೆ ಸಾಮಾಜಿಕ ಒತ್ತಡದಿಂದ ದಂಪತಿಯನ್ನು ಬಂಧಿಸಲಾಗಿದೆ ಎಂಬ ಪೊಲೀಸರ ಅಥವಾ ಸರ್ಕಾರದ ಸಮರ್ಥನೆಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಒಬ್ಬರು ವ್ಯಕ್ತಿಯನ್ನು ಸೂಕ್ತ ಕಾನೂನಿನಡಿ ಮಾತ್ರ ಬಂಧಿಸಬಹುದು, ಸಾಮಾಜಿಕ ಒತ್ತಡ ಹಿನ್ನೆಲೆ ಬಂಧಿಸಲು ಸಾಧ್ಯವಿಲ್ಲ ಎಂದಿದೆ.

ಪೊಲೀಸರ ಕ್ರಮ ವಿಧಿ 21 ರ ಉಲ್ಲಂಘನೆ ಎಂದು ಹೇಳಿದ ನ್ಯಾಯಪೀಠ, ಸರ್ಕಾರದ ಕರ್ತವ್ಯ ನಾಗರಿಕರ ಸ್ವಾತಂತ್ರ್ಯವನ್ನು ರಕ್ಷಿಸುವುದು, ಸಾಮಾಜಿಕ ಒತ್ತಡಕ್ಕೆ ಶರಣಾಗುವುದು ಅಲ್ಲ ಎಂದು ಸ್ಪಷ್ಟಪಡಿಸಿದೆ.

ದಂಪತಿಗೆ ರಕ್ಷಣೆ ಒದಗಿಸಲು ಮತ್ತು ಅವರ ಸ್ವತಂತ್ರ ಜೀವನಕ್ಕೆ ಯಾರೂ ಅಡ್ಡಿಪಡಿಸದಂತೆ ನೋಡಿಕೊಳ್ಳಲು
ಪ್ರಯಾಗ್‌ರಾಜ್ ಪೊಲೀಸ್ ಆಯುಕ್ತರು, ಅಲಿಗಢ ಮತ್ತು ಬರೇಲಿಯ ಎಸ್‌ಎಸ್‌ಪಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ಘಟನೆಯ ಬಗ್ಗೆ ತನಿಖೆ ನಡೆಸಿ ನವೆಂಬರ್ 28, 2025ರೊಳಗೆ ವರದಿ ಸಲ್ಲಿಸುವಂತೆ ಅಲಿಗಢದ ಎಸ್‌ಎಸ್‌ಪಿಗೆ ಆದೇಶಿಸಿದೆ.

ಕೇರಳ ಹಿಜಾಬ್ ವಿವಾದ: ವರ್ಗಾವಣೆ ಪ್ರಮಾಣಪತ್ರ ಕೇಳಿದ ಇಬ್ಬರು ವಿದ್ಯಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...